Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 25:25 - ಕನ್ನಡ ಸತ್ಯವೇದವು J.V. (BSI)

25 ಜಿಮ್ರಿಯ ಎಲ್ಲಾ ಅರಸರು, ಏಲಾವಿುನ ಎಲ್ಲಾ ಅರಸರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಜಿಮ್ರಿಯ ಎಲ್ಲಾ ಅರಸರು, ಏಲಾಮಿನ ಎಲ್ಲಾ ಅರಸರು, ಮೇದ್ಯರ ಎಲ್ಲಾ ಅರಸರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಏಲಾಮಿನ ಎಲ್ಲ ಅರಸರು, ಮೇದ್ಯರ ಎಲ್ಲ ಅರಸರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ನಾನು ಜಿಮ್ರಿಯ ಎಲ್ಲಾ ರಾಜರು, ಏಲಾಮಿನ ಎಲ್ಲಾ ರಾಜರು, ಮೇದ್ಯರ ಎಲ್ಲಾ ರಾಜರು ಈ ಪಾತ್ರೆಯಿಂದ ಕುಡಿಯುವಂತೆ ಮಾಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಜಿಮ್ರಿಯ ಅರಸರೆಲ್ಲರಿಗೂ, ಏಲಾಮಿನ ಅರಸರೆಲ್ಲರಿಗೂ, ಮೇದ್ಯದ ಅರಸರೆಲ್ಲರಿಗೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 25:25
14 ತಿಳಿವುಗಳ ಹೋಲಿಕೆ  

ಆ ದಿನದಲ್ಲಿ ಕರ್ತನು ತನ್ನ ಜನಶೇಷವನ್ನು ಬಿಡಿಸಿಕೊಳ್ಳುವದಕ್ಕೆ ಎರಡನೆಯ ಸಾರಿ ಕೈಹಾಕಿ ಅಶ್ಶೂರ, ಐಗುಪ್ತ, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾಥ್, ಸಮುದ್ರದ ಕರಾವಳಿ, ಈ ಸ್ಥಳಗಳಲ್ಲಿ ಉಳಿದವರನ್ನು ಬರಮಾಡಿಕೊಳ್ಳುವನು.


ಶೇಮನ ಸಂತಾನದವರು - ಏಲಾಮ್, ಅಶ್ಶೂರ್, ಅರ್ಪಕ್ಷದ್, ಲೂದ್, ಅರಾಮ್ ಎಂಬವರೇ.


ಜನಾಂಗಗಳು, ಮೇದ್ಯರ ಅರಸರು, ಅಧಿಪತಿಗಳು, ಅಧಿಕಾರಿಗಳು, ಅವರ ಅಧೀನದಲ್ಲಿರುವ ಸಂಪೂರ್ಣ ದೇಶದವರು, ಇವರೆಲ್ಲರನ್ನೂ ಅದಕ್ಕೆ ವಿರುದ್ಧವಾಗಿ ಸನ್ನಾಹಮಾಡಿರಿ.


ಯೆಹೋವನು ಬಾಬೆಲನ್ನು ಹಾಳುಮಾಡಬೇಕೆಂದು ಉದ್ದೇಶಿಸಿ ಮೇದ್ಯರ ಅರಸರು ಅದನ್ನು ನಾಶಮಾಡುವಂತೆ ಅವರ ಮನಸ್ಸನ್ನು ಪ್ರೇರಿಸಿದ್ದಾನೆ; ಆ ನಾಶನವು ಯೆಹೋವನು ತನ್ನ ಆಲಯವನ್ನು ಕೆಡವಿದವರಿಗೆ ಮಾಡಬೇಕೆಂದಿದ್ದ ಪ್ರತೀಕಾರವೇ; [ಮೇದ್ಯರೇ,] ಬಾಣಗಳನ್ನು ಮಸೆಯಿರಿ, ಸನ್ನದ್ಧರಾಗಿರಿ!


ಇಗೋ, ಅವರಿಗೆ ವಿರುದ್ಧವಾಗಿ ಮೇದ್ಯರನ್ನು ಎಬ್ಬಿಸುವೆನು; ಇವರು ಬೆಳ್ಳಿಯನ್ನು ಲಕ್ಷಿಸರು, ಬಂಗಾರವನ್ನು ಪ್ರೀತಿಸರು.


ನಾನು ಕಂಡ ಕನಸಿನಲ್ಲಿ ಏಲಾಮ್ ಸಂಸ್ಥಾನದ ಶೂಷನ್ ಕೋಟೆಯಲ್ಲಿದ್ದೆನು; ಕನಸಿನಲ್ಲಿ ಊಲಾ ಕಾಲುವೆಯ ದಡದ ಮೇಲೆ ನಿಂತುಕೊಂಡಿದ್ದ ಹಾಗೆ ತೋರಿತು.


ಫೆರೇಸ್ ಅಂದರೆ ನಿನ್ನ ರಾಜ್ಯವು ಭಿನ್ನವಾಗಿ ಮೇದ್ಯಯರಿಗೂ ಪಾರಸಿಯರಿಗೂ ಕೊಡಲ್ಪಟ್ಟಿದೆ ಎಂದು ಅರಿಕೆಮಾಡಿದನು.


ಏಲಾಮು ಅಲ್ಲಿದೆ; ಅದರ ಪ್ರಜೆಯೆಲ್ಲಾ ಅದರ ಗೋರಿಯನ್ನು ಸುತ್ತಿಕೊಂಡಿದೆ; ಅವರೆಲ್ಲರೂ ಸಂಹೃತರು, ಖಡ್ಗಹತರು; ಜೀವಲೋಕದಲ್ಲಿ ಭೀಕರರಾಗಿದ್ದ ಆ ಸುನ್ನತಿಹೀನರು ಅಧೋಲೋಕಕ್ಕೆ ಇಳಿದು ಪ್ರೇತಗಳ ನಡುವೆ ಅವಮಾನಪಟ್ಟಿದ್ದಾರೆ.


ಏಲಾಮು ರಥಾಶ್ವಪದಾತಿಗಳಿಂದ ಬತ್ತಳಿಕೆಯನ್ನು ಧರಿಸಿತು; ಕೀರಿನವರು ಗುರಾಣಿಯ ಗೌಸಣಿಗೆಯನ್ನು ತೆರೆದರು.


ಆಕೆ ಅವನಿಗೆ ಜಿಮ್ರಾನ್, ಯೊಕ್ಷಾನ್, ಮೆದಾನ್, ವಿುದ್ಯಾನ್, ಇಷ್ಬಾಕ್, ಶೂಹ ಇವರನ್ನು ಹೆತ್ತಳು.


ಆ ದಿವಸಗಳಲ್ಲಿ ಶಿನಾರಿನ ಅರಸನಾದ ಅಮ್ರಾಫೆಲನು, ಎಲ್ಲಸಾರಿನ ಅರಸನಾದ ಅರಿಯೋಕನು. ಏಲಾವಿುನ ಅರಸನಾದ ಕೆದೊರ್ಲಗೋಮರನು, ಗೋಯಿಮದ ಅರಸನಾದ ತಿದ್ಗಾಲನು ಈ ನಾಲ್ವರು


ಪಾರ್ಥ್ಯರೂ ಮೇದ್ಯರೂ ಏಲಾಮ್ಯರೂ ಮೆಸೊಪೊತಾಮ್ಯ, ಯೂದಾಯ, ಕಪ್ಪದೋಕ್ಯ, ಪೊಂತ, ಆಸ್ಯ, ಫ್ರುಗ್ಯ,


ಘೋರದರ್ಶನವು ನನಗೆ ತಿಳಿಯ ಬಂದಿದೆ; ಬಾಧಕನು ಬಾಧಿಸುತ್ತಿದ್ದಾನೆ; ಸೂರೆಗಾರನು ಸೂರೆಮಾಡುತ್ತಿದ್ದಾನೆ. ಏಲಾಮೇ, ಏಳು! ಮೇದ್ಯವೇ, ಮುತ್ತು! ನಿಮ್ಮ ನಿಟ್ಟುಸುರನ್ನು ನಿಲ್ಲಿಸಿಬಿಟ್ಟಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು