ಯೆರೆಮೀಯ 25:28 - ಕನ್ನಡ ಸತ್ಯವೇದವು J.V. (BSI)28 ಅವರು ಒಂದು ವೇಳೆ ಪಾತ್ರೆಯನ್ನು ನಿನ್ನ ಕೈಯಿಂದ ತೆಗೆದುಕೊಳ್ಳಲಿಕ್ಕೂ ಕುಡಿಯಲಿಕ್ಕೂ ಒಲ್ಲದಿದ್ದರೆ ನೀನು ಅವರಿಗೆ ಹೀಗೆ ಹೇಳು - ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ - ನೀವು ಕುಡಿಯಲೇಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಅವರು ಒಂದು ವೇಳೆ ಪಾತ್ರೆಯನ್ನು ನಿನ್ನ ಕೈಯಿಂದ ತೆಗೆದುಕೊಳ್ಳಲಿಕ್ಕೂ, ಕುಡಿಯಲಿಕ್ಕೂ ಕೇಳದಿದ್ದರೆ ನೀನು ಅವರಿಗೆ ಹೀಗೆ ಹೇಳು, “ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ನೀವು ಕುಡಿಯಲೇ ಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಒಂದು ವೇಳೆ ಅವರು ಆ ಪಾತ್ರೆಯನ್ನು ನಿನ್ನ ಕೈಯಿಂದ ತೆಗೆದುಕೊಳ್ಳಲಿಕ್ಕೂ ಕುಡಿಯಲಿಕ್ಕೂ ಒಪ್ಪದಿದ್ದರೆ ಅವರಿಗೆ ಹೀಗೆಂದು ಹೇಳು - ‘ಸರ್ವಶಕ್ತ ಸರ್ವೇಶ್ವರನ ನುಡಿ ಇವು: ನೀವು ಕುಡಿಯಲೇಬೇಕು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 “ಅವರು ನಿನ್ನ ಕೈಯಿಂದ ಪಾನಪಾತ್ರೆಯನ್ನು ತೆಗೆದುಕೊಳ್ಳಲು ಒಪ್ಪುವದಿಲ್ಲ. ಅವರು ಅದನ್ನು ಕುಡಿಯಲು ಒಪ್ಪುವದಿಲ್ಲ. ಆದರೆ ನೀನು ಅವರಿಗೆ ಹೀಗೆ ಹೇಳು: ‘ನೀವು ಈ ಪಾತ್ರೆಯಿಂದ ಕುಡಿಯಲೇಬೇಕಾಗುವುದೆಂದು ಸರ್ವಶಕ್ತನಾದ ದೇವರು ಹೇಳುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಅವರು ಪಾತ್ರೆಯನ್ನು ನಿನ್ನ ಕೈಯಿಂದ ತೆಗೆದುಕೊಂಡು ಕುಡಿಯಲು ತಿರಸ್ಕರಿಸಿದರೆ, ನೀನು ಅವರಿಗೆ ಹೇಳಬೇಕಾದದ್ದೇನೆಂದರೆ: ‘ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ, ನೀವು ನಿಶ್ಚಯವಾಗಿ ಕುಡಿಯಬೇಕು. ಅಧ್ಯಾಯವನ್ನು ನೋಡಿ |