Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 25:32 - ಕನ್ನಡ ಸತ್ಯವೇದವು J.V. (BSI)

32 ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ - ಆಹಾ, ಕೇಡು ಜನಾಂಗದಿಂದ ಜನಾಂಗಕ್ಕೆ ಹರಡುವದು; ದೊಡ್ಡ ಬಿರುಗಾಳಿಯು ಲೋಕದ ಕಟ್ಟಕಡೆಯಿಂದ ಎದ್ದುಬರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಸೇನಾಧೀಶ್ವರನಾದ ಯೆಹೋವನು, “ಆಹಾ, ಕೇಡು ಜನಾಂಗದಿಂದ ಜನಾಂಗಕ್ಕೆ ಹರಡುವುದು; ದೊಡ್ಡ ಬಿರುಗಾಳಿಯು ಲೋಕದ ಕಟ್ಟಕಡೆಯಿಂದ ಎದ್ದು ಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಸೇನಾಧೀಶ್ವರ ಸರ್ವೇಶ್ವರ ಹೀಗೆನ್ನುತ್ತಾರೆ: ‘ಹರಡುವುದು ಕೇಡು ಜನಾಂಗದಿಂದ ಜನಾಂಗಕ್ಕೆ ಏಳುವುದು ಚಂಡಮಾರುತ ಲೋಕದ ಕಟ್ಟಕಡೆಯಿಂದ’.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 “ವಿಪತ್ತುಗಳು ಬಹುಬೇಗ ದೇಶದಿಂದ ದೇಶಕ್ಕೆ ಹರಡುವವು. ಅವು ಭೂಲೋಕದ ಎಲ್ಲಾ ದೂರದೂರದ ದೇಶಗಳಲ್ಲಿ ಭಯಂಕರವಾದ ಬಿರುಗಾಳಿಯಂತೆ ಬರುವವು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ಜನಾಂಗದಿಂದ ಜನಾಂಗಕ್ಕೆ ಕೇಡು ಹೊರಡುವುದು. ಭೂಮಿಯ ಮೇರೆಗಳಿಂದ ಮಹಾ ಬಿರುಗಾಳಿ ಏಳುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 25:32
12 ತಿಳಿವುಗಳ ಹೋಲಿಕೆ  

ಆಹಾ, ಯೆಹೋವನ ರೋಷವೆಂಬ ಬಿರುಗಾಳಿಯು, ಸುಂಟರಗಾಳಿಯು, ಹೊರಟಿದೆ; ಅದು ದುಷ್ಟರ ತಲೆಯ ಮೇಲೆ ಹೊಡೆಯುವದು.


ಯೆಹೋವನು ಸಕಲ ಜನಾಂಗಗಳಲ್ಲಿ ಕೋಪಮಾಡಿ ಅವುಗಳ ಸೈನ್ಯದ ಮೇಲೆ ರೋಷಗೊಂಡು ಅವರನ್ನು ಕೊಲೆಗೆ ಈಡುಮಾಡಿ ನಿಶ್ಶೇಷವಾಗಿ ಸಂಹರಿಸಿದ್ದಾನಷ್ಟೆ.


ಒಂದು ಜನಾಂಗವು ಇನ್ನೊಂದು ಜನಾಂಗವನ್ನೂ ಒಂದು ಪಟ್ಟಣದವರು ಇನ್ನೊಂದು ಪಟ್ಟಣದವರನ್ನೂ ಹಾಳು ಮಾಡುತ್ತಿದ್ದರು. ದೇವರು ಎಲ್ಲಾ ತರದ ಕಷ್ಟದಿಂದಲೂ ಅವರನ್ನು ತಳಮಳಗೊಳಿಸಿದನು. ನೀವಾದರೋ ಸ್ಥಿರಚಿತ್ತರಾಗಿರಿ;


ಆಹಾ, ಯೆಹೋವನ ರೋಷವೆಂಬ ಬಿರುಗಾಳಿಯು, ಬಡಿದುಕೊಂಡು ಹೋಗುವ ಗಾಳಿಯು, ಹೊರಟಿದೆ; ಅದು ದುಷ್ಟರ ತಲೆಯ ಮೇಲೆ ಹೊಡೆಯುವದು.


ಆಗ ಯೆಹೋವನು ತನ್ನ ಗಂಭೀರವಾದ ಧ್ವನಿಯನ್ನು ಕೇಳಮಾಡಿ ತೀವ್ರಕೋಪ, ಕಬಳಿಸುವ ಅಗ್ನಿಜ್ವಾಲೆ, ಬಿರಿದ ಮೋಡ, ಅತಿವೃಷ್ಟಿ, ಕಲ್ಮಳೆ ಇವುಗಳಿಂದ ತನ್ನ ಶಿಕ್ಷಾಹಸ್ತವನ್ನು ತೋರ್ಪಡಿಸುವನು.


ಇದಲ್ಲದೆ ಸೂರ್ಯ ಚಂದ್ರ ನಕ್ಷತ್ರಗಳಲ್ಲಿ ಸೂಚನೆಗಳು ತೋರುವವು. ಭೂವಿುಯ ಮೇಲೆ ಸಮುದ್ರದ ಮತ್ತು ತೆರೆಗಳ ಘೋಷದ ನಿವಿುತ್ತವಾಗಿ ಜನಗಳಿಗೆ ದಿಕ್ಕು ಕಾಣದೆ ಸಂಕಟವು ಉಂಟಾಗುವದು.


ಆಗ ಆತನು ಅವರಿಗೆ ಹೇಳಿದ್ದೇನಂದರೆ - ಜನಕ್ಕೆ ವಿರೋಧವಾಗಿ ಜನವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು;


ಯೆಹೋವನು ಇಂತೆನ್ನುತ್ತಾನೆ - ಹೀಗಿರಲು ನನ್ನನ್ನು ಕಾದುಕೊಂಡಿರ್ರಿ, ನಾನು ಬೇಟೆಹಿಡಿಯಲಿಕ್ಕೆ ಏಳುವ ದಿನವನ್ನು ಎದುರುನೋಡಿರಿ; ಜನಾಂಗರಾಜ್ಯಗಳ ಮೇಲೆ ನನ್ನ ರೌದ್ರವನ್ನು, ಹೌದು, ನನ್ನ ಉಗ್ರಕೋಪವನ್ನೆಲ್ಲಾ ಹೊಯ್ದುಬಿಡುವದಕ್ಕಾಗಿ ಆ ಜನಾಂಗಗಳನ್ನು ಸೇರಿಸಿ ಆ ರಾಜ್ಯಗಳನ್ನು ಕೂಡಿಸಬೇಕೆಂದು ತೀರ್ಮಾನಿಸಿಕೊಂಡಿದ್ದೇನೆ; ಲೋಕವೆಲ್ಲಾ ನನ್ನ ರೋಷಾಗ್ನಿಗೆ ತುತ್ತಾಗುವದಷ್ಟೆ.


ಅವರ ಕೃತ್ಯಗಳಿಗೂ ಆಲೋಚನೆಗಳಿಗೂ [ತಕ್ಕದ್ದನ್ನು ಮಾಡುವೆನು]; ನಾನು ಇನ್ನು ಮುಂದೆ ಸಮಸ್ತಜನಾಂಗಗಳನ್ನೂ ಸಕಲಭಾಷೆಯವರನ್ನೂ ಒಟ್ಟಿಗೆ ಬರಮಾಡುವೆನು; ಅವರು ಬಂದು ನನ್ನ ಮಹಿಮೆಯನ್ನು ನೋಡುವರು.


ಅವರ ಅಂಬುಗಳು ಮೊನೆಯಾಗಿವೆ, ಬಿಲ್ಲುಗಳು ಬಿಗಿದಿವೆ; ಕುದುರೆಗಳ ಗೊರಸೆಗಳು ಕಲ್ಲಿನಂತಿವೆ; ಚಕ್ರಗಳು ಬಿರುಗಾಳಿಯಂತೆ ರಭಸವಾಗಿವೆ;


ಆಹಾ, ಬಡಗಲಿಂದ ಒಂದು ಜನಾಂಗವು ಬರುತ್ತದೆ, ಮಹಾ ಜನವು ಎಬ್ಬಿಸಲ್ಪಟ್ಟು ಲೋಕದ ಕಟ್ಟಕಡೆಯಿಂದ ಹೊರಡುತ್ತದೆ.


ಬಿಲ್ಲನ್ನೂ ಈಟಿಯನ್ನೂ ಹಿಡಿದುಕೊಂಡಿದ್ದಾರೆ, ಅವರು ಕ್ರೂರರು, ನಿಷ್ಕರುಣಿಗಳು; ಅವರ ಧ್ವನಿಯು ಸಮುದ್ರದಂತೆ ಮೊರೆಯುತ್ತದೆ, ಕುದುರೆ ಹತ್ತಿದ್ದಾರೆ; ಚೀಯೋನ್ ನಗರಿಯೇ, ಆ ಸೈನ್ಯವು ಶೂರನಂತೆ ನಿನ್ನ ಮೇಲೆ ಯುದ್ಧಸನ್ನದ್ಧವಾಗಿದೆ ಎಂದು ಯೆಹೋವನು ಅನ್ನುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು