ಯೆರೆಮೀಯ 25:33 - ಕನ್ನಡ ಸತ್ಯವೇದವು J.V. (BSI)33 ಆ ದಿನದಲ್ಲಿ ಯೆಹೋವನಿಂದ ಹತರಾದವರು ಲೋಕದ ಒಂದು ಕಡೆಯಿಂದ ಇನ್ನೊಂದು ಕಡೆಯವರೆಗೂ ಬಿದ್ದಿರುವರು; ಅವರಿಗಾಗಿ ಯಾರೂ ಗೋಳಾಡರು, ಅವರನ್ನು ಯಾರೂ ಒಟ್ಟುಗೂಡಿಸರು, ಯಾರೂ ಹೂಣಿಡರು, ಭೂವಿುಯ ಮೇಲೆ ಗೊಬ್ಬರವಾಗುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಆ ದಿನದಲ್ಲಿ ಯೆಹೋವನಿಂದ ಹತರಾದವರು ಲೋಕದ ಒಂದು ಕಡೆಯಿಂದ ಇನ್ನೊಂದು ಕಡೆಯವರೆಗೂ ಬಿದ್ದಿರುವರು; ಅವರಿಗಾಗಿ ಯಾರೂ ಗೋಳಾಡುವುದಿಲ್ಲ, ಅವರನ್ನು ಯಾರೂ ಒಟ್ಟುಗೂಡಿಸುವುದಿಲ್ಲ, ಯಾರು ಹೂಣಿಡುವುದಿಲ್ಲ, ಅವರು ಭೂಮಿಯ ಮೇಲೆ ಗೊಬ್ಬರವಾಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಆ ದಿನದಲ್ಲಿ ಸರ್ವೇಶ್ವರನಿಂದ ಹತರಾದವರು ಲೋಕದ ಒಂದು ಕಡೆಯಿಂದ ಇನ್ನೊಂದು ಕಡೆಯವರೆಗೆ ಬಿದ್ದಿರುವರು. ಅವರಿಗಾಗಿ ಯಾರೂ ಗೋಳಾಡರು, ಅವರನ್ನು ಯಾರೂ ಒಟ್ಟುಗೂಡಿಸರು, ಯಾರೂ ಹೂಣರು. ಭೂಮಿಯ ಮೇಲೆ ಗೊಬ್ಬರವಾಗಿ ಬಿದ್ದಿರುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ಆ ಜನರ ಮೃತ ಶರೀರಗಳು ದೇಶದ ಒಂದು ಕೊನೆಯಿಂದ ಇನ್ನೊಂದು ಕೊನೆಯವರೆಗೆ ಬಿದ್ದಿರುವವು. ಆ ಸತ್ತಜನರಿಗಾಗಿ ಯಾರೂ ಅಳುವದಿಲ್ಲ. ಯಾರೂ ಅವರ ಶವಗಳನ್ನು ಒಟ್ಟುಗೂಡಿಸಿ ಹೂಳುವದಿಲ್ಲ. ಅವುಗಳು ಭೂಮಿಯ ಮೇಲೆ ಗೊಬ್ಬರದಂತೆ ಬಿದ್ದಿರುವವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಆ ದಿವಸದಲ್ಲಿ ಭೂಮಿಯ ಈ ಮೇರೆಯಿಂದ ಭೂಮಿಯ ಆ ಮೇರೆಯವರೆಗೆ ಯೆಹೋವ ದೇವರಿಂದ ಹತರಾದವರು ಇರುವರು. ಅವರಿಗೋಸ್ಕರ ಗೋಳಾಡುವುದಿಲ್ಲ. ಅವರನ್ನು ಕೂಡಿಸುವುದಿಲ್ಲ. ಅವರನ್ನು ಹೂಳಿಡುವುದಿಲ್ಲ. ಅವರು ಭೂಮಿಯ ಮೇಲೆ ಗೊಬ್ಬರದಂತಿರುವರು. ಅಧ್ಯಾಯವನ್ನು ನೋಡಿ |