ಯೆರೆಮೀಯ 25:38 - ಕನ್ನಡ ಸತ್ಯವೇದವು J.V. (BSI)38 ಆತನು ಸಿಂಹದಂತೆ ತನ್ನ ಹಕ್ಕೆಯನ್ನು ಬಿಟ್ಟುಬಂದಿದ್ದಾನೆ; ಹಿಂಸಿಸುವ ಖಡ್ಗದಿಂದಲೂ ಆತನ ರೋಷಾಗ್ನಿಯಿಂದಲೂ ಅವರ ದೇಶವು ಬೆರಗಿಗೆ ಈಡಾಗಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201938 ಆತನು ಸಿಂಹದಂತೆ ತನ್ನ ಗವಿಯನ್ನು ಬಿಟ್ಟು ಬಂದಿದ್ದಾನೆ. ಹಿಂಸಿಸುವ ಖಡ್ಗದಿಂದಲೂ ಆತನ ರೋಷಾಗ್ನಿಯಿಂದಲೂ ಅವರ ದೇಶವು ಬೆರಗಿಗೆ ಈಡಾಗಿದೆ” ಎಂದು ನುಡಿಯುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)38 ಗುಹೆಬಿಟ್ಟು ಬಂದ ಸಿಂಹದಂತೆ ಬಂದಿರುವನಾತ. ಆತನ ಕೋಪಾಗ್ನಿಯ ನಿಮಿತ್ತ ತುಂಡರಿಸುವಾ ಖಡ್ಗದ ಪ್ರಯುಕ್ತ ಅವರ ನಾಡಾಗಿದೆ ಬೆಂಗಾಡು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್38 ಯೆಹೋವನು, ತನ್ನ ಗುಹೆಯಿಂದ ಹೊರಬರುತ್ತಿರುವ ಭಯಂಕರವಾದ ಸಿಂಹದಂತಿದ್ದಾನೆ. ಯೆಹೋವನು ಕೋಪಗೊಂಡಿದ್ದಾನೆ. ಯೆಹೋವನ ಕೋಪವು ಆ ಜನರನ್ನು ಪೀಡಿಸುವುದು. ಅವರ ದೇಶವು ಬರಿದಾದ ಮರುಭೂಮಿಯಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ38 ಅವರು ಸಿಂಹದಂತೆ ತಮ್ಮ ಗವಿಯನ್ನು ತೊರೆದುಬಿಟ್ಟಿದ್ದಾರೆ. ಏಕೆಂದರೆ ಉಪದ್ರವ ಪಡಿಸುವವನ ಉರಿಯ ನಿಮಿತ್ತವೂ, ಅವರ ಕೋಪದ ಉರಿಯ ನಿಮಿತ್ತವೂ ಅವರ ದೇಶವು ಹಾಳಾಯಿತು. ಅಧ್ಯಾಯವನ್ನು ನೋಡಿ |
ಆಹಾ, ಒಬ್ಬನು ಸಿಂಹದೋಪಾದಿಯಲ್ಲಿ ಯೋರ್ದನಿನ ದಟ್ಟಡವಿಯಿಂದ [ಕಸ್ದೀಯರಿಗೆ] ನಿತ್ಯನೆಲೆಯಾದ ಗೋಮಾಳಕ್ಕೆ ಏರಿ ಬರುವನು; ಕ್ಷಣಮಾತ್ರದಲ್ಲಿ ನಾನು ಅವರನ್ನು ಅಲ್ಲಿಂದ ಓಡಿಸಿಬಿಡುವೆನು; ನಾನು ಆರಿಸಿಕೊಂಡವನನ್ನೇ ಅದನ್ನು ಕಾಯುವದಕ್ಕೆ ನೇವಿುಸುವೆನು; ನನ್ನ ಸಮಾನನು ಯಾವನು? ನನ್ನನ್ನು ನ್ಯಾಯವಿಚಾರಣೆಗೆ ಯಾವನು ಕರೆದಾನು? ಮಂದೆಯನ್ನು ಕಾಯುವ ಯಾವನು ನನ್ನೆದುರಿಗೆ ನಿಲ್ಲಬಲ್ಲನು?
ಆಹಾ, ಒಬ್ಬನು ಸಿಂಹದೋಪಾದಿಯಲ್ಲಿ ಯೊರ್ದನಿನ ದಟ್ಟಡವಿಯಿಂದ [ಎದೋಮ್ಯರಿಗೆ] ನಿತ್ಯನೆಲೆಯಾದ ಗೋಮಾಳಕ್ಕೆ ಏರಿಬರುವನು; ಕ್ಷಣಮಾತ್ರದಲ್ಲಿ ನಾನು ಅವರನ್ನು ಅಲ್ಲಿಂದ ಓಡಿಸಿಬಿಡುವೆನು; ನಾನು ಆರಿಸಿಕೊಂಡವನನ್ನೇ ಅದನ್ನು ಕಾಯುವದಕ್ಕೆ ನೇವಿುಸುವೆನು; ನನ್ನ ಸಮಾನನು ಯಾವನು? ನನ್ನನ್ನು ನ್ಯಾಯವಿಚಾರಣೆಗೆ ಯಾವನು ಕರೆದಾನು? ಮಂದೆಯನ್ನು ಕಾಯುವ ಯಾವನು ನನ್ನೆದುರಿಗೆ ನಿಲ್ಲಬಲ್ಲನು?