ಯೆರೆಮೀಯ 25:6 - ಕನ್ನಡ ಸತ್ಯವೇದವು J.V. (BSI)6 ಅನ್ಯದೇವತೆಗಳನ್ನು ಹಿಂಬಾಲಿಸಿ ಸೇವಿಸಿ ಪೂಜಿಸಬೇಡಿರಿ; ನಿಮ್ಮ ಕೈಕೆಲಸದ ಬೊಂಬೆಗಳಿಂದ ನನ್ನನ್ನು ರೇಗಿಸದಿರಿ; ಹೀಗಾದರೆ ನಾನು ನಿಮಗೆ ಯಾವ ಕೇಡನ್ನೂ ಮಾಡೆನು ಎಂಬದೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಅನ್ಯದೇವತೆಗಳನ್ನು ಹಿಂಬಾಲಿಸಿ, ಸೇವಿಸಿ ಪೂಜಿಸಬೇಡಿರಿ; ನಿಮ್ಮ ಕೈಕೆಲಸದ ಬೊಂಬೆಗಳಿಂದ ನನ್ನನ್ನು ರೇಗಿಸಬೇಡಿರಿ; ಹೀಗಾದರೆ ನಾನು ನಿಮಗೆ ಯಾವ ಕೇಡನ್ನೂ ಮಾಡುವುದಿಲ್ಲ’ ಎಂಬುದೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಬೇರೆ ದೇವರುಗಳನ್ನು ಹಿಂಬಾಲಿಸಿ, ಅವರನ್ನು ಸೇವಿಸಿ ಪೂಜಿಸಬೇಡಿ. ನಿಮ್ಮ ಕೈ ಕೃತಿಗಳಾದ ವಿಗ್ರಹಗಳನ್ನು ಆರಾಧಿಸಿ, ನನ್ನನ್ನು ರೇಗಿಸಬೇಡಿ. ಆಗ ನಾನು ನಿಮಗೆ ಯಾವ ಕೇಡನ್ನೂ ಮಾಡೆನು.’ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಬೇರೆ ದೇವರುಗಳನ್ನು ಅನುಸರಿಸಬೇಡಿರಿ; ಅವುಗಳ ಸೇವೆ ಮಾಡಬೇಡಿರಿ; ಅವುಗಳನ್ನು ಪೂಜಿಸಬೇಡಿರಿ. ಮನುಷ್ಯ ನಿರ್ಮಿತವಾದ ವಿಗ್ರಹಗಳನ್ನು ಪೂಜಿಸಬೇಡಿ. ನೀವು ಪೂಜಿಸಿದರೆ ನಿಮ್ಮ ಮೇಲೆ ನಾನು ಕೋಪಗೊಂಡು ನಿಮಗೆ ಕೇಡುಮಾಡುವೆನು” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಬೇರೆ ದೇವರುಗಳನ್ನು ಸೇವಿಸುವುದಕ್ಕೂ, ಆರಾಧಿಸುವುದಕ್ಕೂ ಹಿಂಬಾಲಿಸಬೇಡಿರಿ. ನಿಮ್ಮ ಕೈಕೆಲಸಗಳಿಂದ ನನಗೆ ಕೋಪವನ್ನು ಎಬ್ಬಿಸಬೇಡಿರಿ. ಆಗ ನಿಮಗೆ ಯಾವ ಕೇಡೂ ಮಾಡೆನು.” ಅಧ್ಯಾಯವನ್ನು ನೋಡಿ |
ಇದಲ್ಲದೆ ನಾನು ನನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ನಿತ್ಯವೂ ಕಳುಹಿಸುತ್ತಾ - ನೀವೆಲ್ಲರೂ ನಿಮ್ಮ ನಿಮ್ಮ ದುರ್ಮಾರ್ಗಗಳಿಂದ ಹಿಂದಿರುಗಿ ನಿಮ್ಮ ನಡತೆಗಳನ್ನು ಸರಿಪಡಿಸಿಕೊಳ್ಳಿರಿ, ಅನ್ಯದೇವತೆಗಳನ್ನು ಹಿಂಬಾಲಿಸಿ ಸೇವಿಸದಿರಿ; ಹೀಗೆ ಮಾಡಿದರೆ ನಾನು ನಿಮಗೂ ನಿಮ್ಮ ಪಿತೃಗಳಿಗೂ ದಯಪಾಲಿಸಿದ ದೇಶದಲ್ಲಿ ನೀವು ಸುಖವಾಸಿಗಳಾಗಿರುವಿರಿ ಎಂದು ಹೇಳಿಸಿದರೂ ನೀವು ನನ್ನ ಮಾತನ್ನು ಕೇಳಲಿಲ್ಲ, ಕಿವಿಗೊಡಲೂ ಇಲ್ಲ.