Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 26:11 - ಕನ್ನಡ ಸತ್ಯವೇದವು J.V. (BSI)

11 ಯಾಜಕರೂ ಪ್ರವಾದಿಗಳೂ ಇವನು ಮರಣ ದಂಡನೆಗೆ ತಕ್ಕವನು; ಇವನು ಈ ಪಟ್ಟಣಕ್ಕೆ ಅಹಿತನುಡಿದದ್ದನ್ನು ನೀವು ಕಿವಿಯಾರೆ ಕೇಳಿದಿರಷ್ಟೆ ಎಂದು ಸರದಾರರಿಗೂ ಎಲ್ಲಾ ಜನರಿಗೂ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆಗ ಯಾಜಕರೂ ಮತ್ತು ಪ್ರವಾದಿಗಳೂ, “ಇವನು ಮರಣದಂಡನೆಗೆ ತಕ್ಕವನು; ಇವನು ಈ ಪಟ್ಟಣಕ್ಕೆ ಅಹಿತ ನುಡಿದದ್ದನ್ನು ನೀವು ಕಿವಿಯಾರೆ ಕೇಳಿದಿರೀ” ಎಂದು ಸರದಾರರಿಗೂ ಎಲ್ಲಾ ಜನರಿಗೂ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಯಾಜಕರೂ ಪ್ರವಾದಿಗಳೂ, “ಇವನು ಮರಣದಂಡನೆಗೆ ಪಾತ್ರನು; ನಗರಕ್ಕೆ ಅಹಿತವಾದುದನ್ನು ನುಡಿದಿದ್ದಾನೆ. ಇದನ್ನು ನೀವೇ ಕೇಳಿದ್ದೀರಿ,” ಎಂದು ನಾಯಕರಿಗೂ ಜನರೆಲ್ಲರಿಗೂ ದೂರು ಇತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆಗ ಯಾಜಕರು ಮತ್ತು ಪ್ರವಾದಿಗಳು ಅಧಿಪತಿಗಳಿಗೂ ಇನ್ನುಳಿದ ಜನರಿಗೂ ಹೀಗೆ ಹೇಳಿದರು: “ಯೆರೆಮೀಯನನ್ನು ಕೊಲ್ಲಬೇಕು. ಅವನು ಜೆರುಸಲೇಮಿನ ಬಗ್ಗೆ ಕೆಟ್ಟ ಮಾತುಗಳನ್ನಾಡಿದ್ದಾನೆ. ಅವನು ಆಡಿದ ಆ ಮಾತುಗಳನ್ನು ನೀವೇ ಕೇಳಿದ್ದೀರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆಗ ಯಾಜಕರೂ, ಪ್ರವಾದಿಗಳೂ, ಅಧಿಕಾರಿಗಳಿಗೂ, ಜನರೆಲ್ಲರಿಗೂ, “ಈ ಮನುಷ್ಯನು ಮರಣಕ್ಕೆ ತಕ್ಕವನು. ಏಕೆಂದರೆ ನಿಮ್ಮ ಕಿವಿಗಳಿಂದಲೇ ನೀವು ಕೇಳಿದ ಪ್ರಕಾರ, ಇವನು ಈ ಪಟ್ಟಣಕ್ಕೆ ವಿರೋಧವಾಗಿ ಪ್ರವಾದಿಸಿದ್ದಾನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 26:11
13 ತಿಳಿವುಗಳ ಹೋಲಿಕೆ  

ಆಮೇಲೆ ಆ ಪ್ರಧಾನರು ಅರಸನಿಗೆ - ಒಡೆಯಾ, ಇವನಿಗೆ ಮರಣದಂಡನೆಯಾಗಬೇಕು. ಇವನು ಪಟ್ಟಣದಲ್ಲಿ ಉಳಿದಿರುವ ಯೋಧರಿಗೂ ಸಕಲ ಜನರಿಗೂ ಇಂಥಾ ಮಾತುಗಳನ್ನು ನುಡಿಯುತ್ತಾ ಅವರನ್ನು ಜೋಲುಗೈಯವರನ್ನಾಗಿ ಮಾಡುತ್ತಾನೆ; ಈ ಜನರ ಕ್ಷೇಮವನ್ನಲ್ಲ, ಹಾನಿಯನ್ನೇ ಹಾರೈಸುತ್ತಾನೆ ಎಂದು ಹೇಳಿದರು.


ನಿಮಗೆ ಹೇಗೆ ತೋರುತ್ತದೆ? ಅನ್ನಲು ಇವನು ಮರಣದಂಡನೆ ಹೊಂದತಕ್ಕವನು ಎಂದು ಉತ್ತರಕೊಟ್ಟರು.


ಆದರೆ ಯಾವ ಪ್ರವಾದಿ ನನ್ನಿಂದ ಅಧಿಕಾರಹೊಂದದೆ ನಾನು ಪ್ರೇರಣೆಮಾಡದ ಮಾತುಗಳನ್ನು ಯೆಹೋವನ ಮಾತೆಂದು ಹೇಳಿ ಜನರಿಗೆ ತಿಳಿಸುವನೋ ಇಲ್ಲವೆ ಇತರ ದೇವರುಗಳ ಹೆಸರಿನಲ್ಲಿ ಮಾತಾಡುವನೋ ಅವನಿಗೆ ಮರಣಶಿಕ್ಷೆಯಾಗಬೇಕೆಂದು ಹೇಳಿದನು.


ಈ ಮಾತಿನ ತನಕ ಅವರು ಕೇಳುತ್ತಿದ್ದರು; ಆಮೇಲೆ - ಇಂಥವನನ್ನು ಭೂವಿುಯಿಂದ ತೆಗೆದುಹಾಕಿಬಿಡು; ಇವನು ಬದುಕುವದು ಯುಕ್ತವಲ್ಲವೆಂದು ಕೂಗಿಹೇಳಿದರು.


ಯೆಹೂದ್ಯರು ಅವನಿಗೆ - ನಮಗೆ ಒಂದು ನೇಮ ಉಂಟು, ಆ ನೇಮದ ಪ್ರಕಾರ ಇವನು ಸಾಯತಕ್ಕವನು; ಯಾಕಂದರೆ ಅವನು ತನ್ನನ್ನು ದೇವರ ಮಗನಾಗಿ ಮಾಡಿಕೊಂಡಿದ್ದಾನೆ ಎಂದು ಉತ್ತರಕೊಟ್ಟರು.


ಅವರು ಅವನಿಗೆ - ಇವನು ದುಷ್ಕರ್ಮಿಯಲ್ಲದಿದ್ದರೆ ನಾವು ಇವನನ್ನು ನಿನಗೆ ಒಪ್ಪಿಸಿಕೊಡುತ್ತಿದ್ದಿಲ್ಲವೆಂದು ಉತ್ತರ ಕೊಟ್ಟರು.


ಯೆಹೋವನೇ, ನನ್ನನ್ನು ಕೊಲ್ಲಬೇಕೆಂದು ಅವರು ಮಾಡಿಕೊಂಡಿರುವ ಆಲೋಚನೆಯನ್ನೆಲ್ಲಾ ನೀನೇ ಬಲ್ಲೆ; ಅವರ ಅಪರಾಧವನ್ನು ಕ್ಷವಿುಸಬೇಡ, ಅವರ ಪಾಪವನ್ನು ಅಳಿಸದಿರು, ಅದು ನಿನ್ನ ಕಣ್ಣೆದುರಿಗಿರಲಿ; ಅವರು ನಿನ್ನ ಮುಂದೆ ಕೆಡವಲ್ಪಡಲಿ; ನಿನ್ನ ಕೋಪವನ್ನು ವ್ಯಕ್ತಪಡಿಸುವಾಗ ಅವರಿಗೆ ತಕ್ಕದ್ದನ್ನು ಮಾಡು.


ಇದನ್ನು ಕೇಳಿ ಸರದಾರರೂ ಸಕಲ ಜನರೂ ಯಾಜಕಪ್ರವಾದಿಗಳಿಗೆ - ಇವನು ಮರಣ ದಂಡನೆಗೆ ತಕ್ಕವನಲ್ಲ; ನಮ್ಮ ದೇವರಾದ ಯೆಹೋವನ ಹೆಸರಿನಲ್ಲಿ ಇದನ್ನು ನಮಗೆ ನುಡಿದಿದ್ದಾನಷ್ಟೆ ಎಂದು ಹೇಳಿದ ತರುವಾಯ ದೇಶದ ಹಿರಿಯರಲ್ಲಿ ಕೆಲವರು ಎದ್ದು -


ಆ ಜನರು ಯೋವಾಷನಿಗೆ - ನಿನ್ನ ಮಗನನ್ನು ಹೊರಗೆ ತೆಗೆದುಕೊಂಡು ಬಾ; ಅವನು ಸಾಯಬೇಕು; ಯಾಕಂದರೆ ಬಾಳನ ಯಜ್ಞವೇದಿಯನ್ನು ಕೆಡವಿ ಅದರ ಬಳಿಯಲ್ಲಿದ್ದ ಅಶೇರವಿಗ್ರಹಸ್ತಂಭವನ್ನು ಕಡಿದು ಹಾಕಿದ್ದಾನೆ ಅಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು