Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 26:19 - ಕನ್ನಡ ಸತ್ಯವೇದವು J.V. (BSI)

19 ಯೆಹೂದದ ಅರಸನಾದ ಹಿಜ್ಕೀಯನೂ ಎಲ್ಲಾ ಯೆಹೂದ್ಯರೂ ಅವನನ್ನು ಕೊಂದುಹಾಕಿದರೋ? ಇಲ್ಲವೇ ಇಲ್ಲ. ಆ ಅರಸನು ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ ಆತನ ದಯೆಯನ್ನು ಬೇಡಿಕೊಳ್ಳಲು ಯೆಹೋವನು ಅವರ ವಿಷಯವಾಗಿ ನುಡಿದಿದ್ದ ಕೇಡನ್ನು ಮನಮರುಗಿ ಮಾಡದೆ ಬಿಟ್ಟನಲ್ಲಾ. ನಾವಾದರೋ [ಇವನನ್ನು ಕೊಂದುಹಾಕಿ] ನಮಗೆ ದೊಡ್ಡ ಕೇಡನ್ನು ಉಂಟುಮಾಡಿಕೊಳ್ಳುವವರಾಗಿದ್ದೇವೆ ಎಂಬದಾಗಿ ಸಕಲಜನ ಸಮೂಹಕ್ಕೆ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಯೆಹೂದದ ಅರಸನಾದ ಹಿಜ್ಕೀಯನೂ ಎಲ್ಲಾ ಯೆಹೂದ್ಯರೂ ಅವನನ್ನು ಕೊಂದುಹಾಕಿದರೋ? ಇಲ್ಲವೇ ಇಲ್ಲ. ಆ ಅರಸನು ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ ಆತನ ದಯೆಯನ್ನು ಬೇಡಿಕೊಳ್ಳಲು ಯೆಹೋವನು ಅವರ ವಿಷಯವಾಗಿ ನುಡಿದಿದ್ದ ಕೇಡನ್ನು ಮನಮರುಗಿ ಮಾಡದೆ ಬಿಟ್ಟನಲ್ಲಾ. ನಾವಾದರೋ ಇವನನ್ನು ಕೊಂದು ಹಾಕಿ ನಮಗೆ ದೊಡ್ಡ ಕೇಡನ್ನು ಉಂಟು ಮಾಡಿಕೊಳ್ಳುವವರಾಗಿದ್ದೇವೆ” ಎಂಬುದಾಗಿ ಸಕಲಜನ ಸಮೂಹಕ್ಕೆ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಆಗ ಜುದೇಯದ ಅರಸ ಹಿಜ್ಕೀಯನು ಮತ್ತು ಯೆಹೂದ್ಯರೆಲ್ಲರು, “ಅವನನ್ನು ಕೊಂದುಹಾಕಿದರೋ? ಇಲ್ಲವೇ ಇಲ್ಲ. ಬದಲಿಗೆ ಆ ಅರಸ ಭಯಭಕ್ತಿಯಿಂದ ಸರ್ವೇಶ್ವರನ ದಯೆಯನ್ನು ಬೇಡಿಕೊಂಡ. ಆಗ ಸರ್ವೇಶ್ವರ ವಿಧಿಸಬೇಕೆಂದಿದ್ದ ದಂಡನೆಯನ್ನು ವಿಧಿಸದೆ ಮನಸ್ಸನ್ನು ಬದಲಾಯಿಸಿಕೊಂಡರಲ್ಲವೆ? ಇವನನ್ನು ಕೊಂದುಹಾಕುವುದರಿಂದ ನಾವು ನಮ್ಮ ಮೇಲೆ ದೊಡ್ಡ ಕೇಡನ್ನು ಬರಮಾಡಿಕೊಳ್ಳುತ್ತೇವೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 “ಹಿಜ್ಕೀಯನು ಯೆಹೂದದ ರಾಜನಾಗಿದ್ದನು. ಹಿಜ್ಕೀಯನು ಮೀಕಾಯನ ಕೊಲೆ ಮಾಡಲಿಲ್ಲ. ಯೆಹೂದದ ಯಾರೂ ಮೀಕಾಯನನ್ನು ಕೊಲೆಮಾಡಲಿಲ್ಲ. ಹಿಜ್ಕೀಯನು ಯೆಹೋವನನ್ನು ಗೌರವಿಸುತ್ತಿದ್ದನೆಂಬುದು ನಿಮಗೆ ಗೊತ್ತು. ಅವನು ಯೆಹೋವನನ್ನು ಸಂತೋಷಪಡಿಸಲು ಬಯಸಿದನು. ಯೆಹೂದಕ್ಕೆ ಕೇಡನ್ನು ತರುವೆನೆಂದು ಯೆಹೋವನು ಹೇಳಿದ್ದನು. ಆದರೆ ಹಿಜ್ಕೀಯನು ಯೆಹೋವನನ್ನು ಪ್ರಾರ್ಥಿಸಿದನು. ಯೆಹೋವನು ತನ್ನ ಮನಸ್ಸನ್ನು ಬದಲಾಯಿಸಿ ಕೇಡನ್ನು ಬರಮಾಡಲಿಲ್ಲ. ನಾವು ಯೆರೆಮೀಯನನ್ನು ಕೊಂದರೆ ಅನೇಕ ಕಷ್ಟಗಳನ್ನು ತಂದುಕೊಳ್ಳುವೆವು. ಆ ಕಷ್ಟಗಳಿಗೆ ನಮ್ಮ ತಪ್ಪೇ ಕಾರಣವಾಗುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಯೆಹೂದದ ಅರಸನಾದ ಹಿಜ್ಕೀಯನೂ, ಎಲ್ಲಾ ಯೆಹೂದ್ಯರೂ ಅವನನ್ನು ಕೊಂದು ಹಾಕಿದರೋ? ಇಲ್ಲವೇ ಇಲ್ಲ. ಅವನು ಯೆಹೋವ ದೇವರಿಗೆ ಭಯಪಟ್ಟು, ಯೆಹೋವ ದೇವರ ಸಮ್ಮುಖದಲ್ಲಿ ಮೊರೆಯಿಟ್ಟನಲ್ಲವೋ? ಆಮೇಲೆ ಯೆಹೋವ ದೇವರು ಅವರಿಗೆ ವಿರೋಧವಾಗಿ ಮಾತನಾಡಿದ ಕೇಡಿನ ವಿಷಯದಲ್ಲಿ ಪಶ್ಚಾತ್ತಾಪ ಪಡಲಿಲ್ಲವೋ? ಆದರೆ ನಾವು ದೊಡ್ಡ ಕೇಡನ್ನು ನಮ್ಮ ಪ್ರಾಣಗಳ ಮೇಲೆ ತಂದುಕೊಳ್ಳಬಹುದು!” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 26:19
26 ತಿಳಿವುಗಳ ಹೋಲಿಕೆ  

ದೇವದೂತನು ಯೆರೂಸಲೇಮನ್ನೂ ಸಂಹರಿಸುವದಕ್ಕೆ ಕೈಚಾಚಿದಾಗ ಯೆಹೋವನು ಆ ಕೇಡಿನ ವಿಷಯದಲ್ಲಿ ಪಶ್ಚಾತ್ತಾಪಪಟ್ಟು ಸಂಹಾರಕದೂತನಿಗೆ - ಈಗ ಸಾಕು, ನಿನ್ನ ಕೈಯನ್ನು ಹಿಂದೆಗೆ ಎಂದು ಆಜ್ಞಾಪಿಸಿದನು. ಆಗ ಆ ದೂತನು ಯೆಬೂಸಿಯನಾದ ಅರೌನನ ಕಣದಲ್ಲಿದ್ದನು.


ಆಗ ಯೆಹೋವನು ತನ್ನ ಪ್ರಜೆಗಳಿಗೆ ಮಾಡುವೆನೆಂದು ತಾನು ಹೇಳಿದ ಕೇಡಿನ ವಿಷಯದಲ್ಲಿ ಮನಸ್ಸನ್ನು ಬೇರೆ ಮಾಡಿಕೊಂಡನು.


ಅದು ದೇವರಿಂದಾಗಿದ್ದರೆ ಅದನ್ನು ಕೆಡಿಸುವದಕ್ಕೆ ನಿಮ್ಮಿಂದ ಆಗುವದಿಲ್ಲ. ನೀವು ಒಂದು ವೇಳೆ ದೇವರ ಮೇಲೆ ಯುದ್ಧಮಾಡುವವರಾಗಿ ಕಾಣಿಸಿಕೊಂಡೀರಿ ಎಂದು ಹೇಳಿದನು.


ನಿನ್ನ ದೇವರಾದ ಯೆಹೋವನು ಅಶ್ಶೂರದ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ನಿಂದಾವಾಕ್ಯಗಳನ್ನು ಕೇಳಿರುವನು; ಅವನು ತನ್ನ ಯಜಮಾನನ ಹೆಸರಿನಲ್ಲಿ ಜೀವಸ್ವರೂಪನಾದ ದೇವರನ್ನು ದೂಷಿಸಿದ್ದರಿಂದ ಆತನು ಅವನಿಗೆ ಮುಯ್ಯಿತೀರಿಸಾನು. ಆದದರಿಂದ ಉಳಿದಿರುವ ಸ್ವಲ್ಪ ಜನರಿಗೋಸ್ಕರ ಆತನನ್ನು ಪ್ರಾರ್ಥಿಸು ಎಂಬದಾಗಿ ಹಿಜ್ಕೀಯನು ಅನ್ನುತ್ತಾನೆ ಎಂದು ಹೇಳಿದರು.


ಆಗ ಹಿಜ್ಕೀಯನು ಬಟ್ಟೆಗಳನ್ನು ಹರಿದುಕೊಂಡು ಗೋಣೀತಟ್ಟನ್ನು ಕಟ್ಟಿಕೊಂಡು ಯೆಹೋವನ ಆಲಯಕ್ಕೆ ಹೋದನು.


ಅವರು ದೇವಜನರ ಮತ್ತು ಪ್ರವಾದಿಗಳ ರಕ್ತವನ್ನು ಸುರಿಸಿದರು; ನೀನು ಅವರಿಗೆ ರಕ್ತವನ್ನೇ ಕುಡಿಯುವದಕ್ಕೆ ಕೊಟ್ಟಿದ್ದೀ; ಇದಕ್ಕೆ ಅವರು ಪಾತ್ರರು ಎಂದು ಹೇಳುವದನ್ನು ಕೇಳಿದೆನು.


ಹೀಗೆ ನೀತಿವಂತನಾದ ಹೇಬೆಲನ ರಕ್ತವು ಮೊದಲುಗೊಂಡು ನೀವು ದೇವಾಲಯಕ್ಕೂ ಯಜ್ಞವೇದಿಗೂ ನಡುವೆ ಕೊಂದುಹಾಕಿದ ಬರಕೀಯನ ಮಗನಾದ ಜಕರೀಯನ ರಕ್ತದವರೆಗೂ ಭೂವಿುಯ ಮೇಲೆ ಸುರಿಸಲ್ಪಟ್ಟ ಎಲ್ಲಾ ನೀತಿವಂತರ ರಕ್ತದಿಂದುಂಟಾಗುವ ಅಪರಾಧವು ನಿಮ್ಮ ತಲೆಯ ಮೇಲೆ ಬರುವದು.


ನೀನು ಬಹುಜನಾಂಗಗಳನ್ನು ನಿರ್ಮೂಲಮಾಡಿದ್ದು ನಿನ್ನ ಕುಲಕ್ಕೆ ಅವಮಾನವನ್ನೇ ಆಲೋಚಿಸಿಕೊಂಡ ಹಾಗಾಯಿತು, ನಿನಗೇ ಕೆಡುಕುಮಾಡಿಕೊಂಡಿದ್ದೀ.


ಹೀಗಿರಲು ಸೇನಾಧೀಶ್ವರಸ್ವಾವಿುಯೂ ಇಸ್ರಾಯೇಲಿನ ದೇವರೂ ಆದ ಯೆಹೋವನು ಈಗ ಇಂತೆನ್ನುತ್ತಾನೆ - ಈ ದೊಡ್ಡ ಕೇಡನ್ನು ನಿಮಗೆ ನೀವೇ ಉಂಟುಮಾಡಿಕೊಳ್ಳುವದೇಕೆ? ಈ ದುರಾಚಾರದ ನಿವಿುತ್ತ ಯೆಹೂದದಲ್ಲಿರುವ ಗಂಡಸರು, ಹೆಂಗಸರು, ಮಕ್ಕಳು, ಮೊಲೆಕೂಸುಗಳು ನಿರ್ಮೂಲವಾಗುವರು, ನಿಮ್ಮಲ್ಲಿ ಯಾರೂ ಉಳಿಯರು.


ಆದರೆ ನೀವು ನನ್ನನ್ನು ಕೊಂದುಹಾಕಿದ ಪಕ್ಷಕ್ಕೆ ನೀವೂ ಈ ಪಟ್ಟಣವೂ ಇದರ ನಿವಾಸಿಗಳೂ ನಿರ್ದೋಷಿಯ ರಕ್ತವನ್ನು ಸುರಿಸಿದ ಅಪರಾಧಕ್ಕೆ ಪಾತ್ರರಾಗುವಿರಿ ಎಂದು ನಿಶ್ಚಯವಾಗಿ ತಿಳಿದುಕೊಳ್ಳಿರಿ. ಈ ಮಾತುಗಳನ್ನೆಲ್ಲಾ ನಿಮ್ಮ ಕಿವಿಗೆ ಮುಟ್ಟಿಸುವಂತೆ ಯೆಹೋವನು ನನ್ನನ್ನು ಕಳುಹಿಸಿರುವದು ಖಂಡಿತ.


ಅವರು ಒಂದು ವೇಳೆ ಕಿವಿಗೊಟ್ಟು ತಮ್ಮ ತಮ್ಮ ದುರ್ಮಾರ್ಗಗಳಿಂದ ಹಿಂದಿರುಗಿಯಾರು; ಹಾಗಾದರೆ ಅವರ ದುಷ್ಕೃತ್ಯಗಳ ನಿವಿುತ್ತ ನಾನು ಅವರಿಗೆ ಮಾಡಬೇಕೆಂದಿದ್ದ ಕೇಡನ್ನು ಮನಮರುಗಿ ಮಾಡದಿರುವೆನು.


ಇಗೋ, ಯೆಹೋವನು ಭೂನಿವಾಸಿಗಳಿಗೆ ಅವರ ಪಾಪಫಲವನ್ನು ತಿನ್ನಿಸಬೇಕೆಂದು ತನ್ನ ಸ್ಥಳದಿಂದ ಹೊರಡುತ್ತಾನೆ; ಭೂವಿುಯು ತನ್ನಲ್ಲಿ ಇಂಗಿದ್ದ ರಕ್ತವನ್ನು ವ್ಯಕ್ತಗೊಳಿಸುವದು, ತನ್ನ ನಿವಾಸಿಗಳಲ್ಲಿ ಹತರಾಗಿದ್ದವರನ್ನು ಇನ್ನು ಮರೆಮಾಜದು.


ನಮ್ಮ ಪೂರ್ವಿಕರು ಈ ಗ್ರಂಥದಲ್ಲಿ ಬರೆದಿರುವ ಯೆಹೋವನ ಆಜ್ಞೆಗಳನ್ನೆಲ್ಲಾ ಕೈಕೊಳ್ಳದೆ ಹೋದದರಿಂದ ಯೆಹೋವನು ತನ್ನ ಮಹಾರೌದ್ರವನ್ನು ನಮ್ಮ ಮೇಲೆ ಸುರಿದಿದ್ದಾನೆ; ಆದದರಿಂದ ನೀವು ನನಗೋಸ್ಕರವೂ ಇಸ್ರಾಯೇಲ್ಯರಲ್ಲಿ ಮತ್ತು ಯೆಹೂದ್ಯರಲ್ಲಿ ಉಳಿದಿರುವವರಿಗೋಸ್ಕರವೂ ಯೆಹೋವನ ಬಳಿಗೆ ಹೋಗಿ ನಮಗೆ ಸಿಕ್ಕಿರುವ ಈ ಗ್ರಂಥದ ವಾಕ್ಯಗಳ ವಿಷಯವಾಗಿ ವಿಚಾರಿಸಿರಿ ಎಂದು ಆಜ್ಞಾಪಿಸಿದನು.


ಈ ಕಾರಣದಿಂದ ಅರಸನಾದ ಹಿಜ್ಕೀಯನೂ ಆಮೋಚನ ಮಗನಾದ ಯೆಶಾಯನೆಂಬ ಪ್ರವಾದಿಯೂ ಪರಲೋಕಕ್ಕೆ ಮೊರೆಯಿಟ್ಟು ಪ್ರಾರ್ಥಿಸಲು


ಪ್ರಾಣವನ್ನು ಹೋಗಲಾಡಿಸಿಕೊಂಡ ಆ ದೋಷಿಗಳ ಧೂಪಾರತಿಗಳು ಯೆಹೋವನ ಸನ್ನಿಧಿಗೆ ತರಲ್ಪಟ್ಟ ಕಾರಣ ಪರಿಶುದ್ಧವಾದವು; ಆದದರಿಂದ ಅವುಗಳನ್ನು ತಗಡುಗಳಾಗಿ ಹೊಡೆದು ಯಜ್ಞವೇದಿಗೆ ಮುಚ್ಚಳವನ್ನು ಮಾಡಿಸಬೇಕು; ಹಾಗೆ ಅವು ಇಸ್ರಾಯೇಲ್ಯರಿಗೆ ನೆನಪುಹುಟ್ಟಿಸುವವು ಎಂದು ಹೇಳಿದನು.


ಯೆಹೋವನು ಮನಮರುಗಿ ಈ ದರ್ಶನವು ನೆರವೇರದು ಅಂದನು.


ಅಷ್ಟರೊಳಗೆ ಬೇತೇಲಿನವರು ಸರೆಚರನನ್ನೂ ರೆಗೆಮ್ ಮೆಲೆಕನನ್ನೂ ಅವನ ಪರಿಜನರನ್ನೂ ಯೆಹೋವನ ಪ್ರಸನ್ನತೆಯ ಪ್ರಾರ್ಥನೆಗಾಗಿ ಕಳುಹಿಸಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು