Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 26:21 - ಕನ್ನಡ ಸತ್ಯವೇದವು J.V. (BSI)

21 ಅರಸನಾದ ಯೆಹೋಯಾಕೀಮನೂ ಅವನ ಎಲ್ಲಾ ಪ್ರಸಿದ್ಧ ಶೂರರೂ ಸರದಾರರೂ ಇವನ ಮಾತುಗಳನ್ನು ಕೇಳಿದಾಗ ಅರಸನು ಇವನನ್ನು ಕೊಂದುಹಾಕಲು ಮನಮಾಡಿದನು; ಆದರೆ ಊರೀಯನು ಆ ಸುದ್ದಿಯನ್ನು ಕೇಳಿ ಭಯಪಟ್ಟು ಓಡಿಹೋಗಿ ಐಗುಪ್ತವನ್ನು ಸೇರಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅರಸನಾದ ಯೆಹೋಯಾಕೀಮನೂ, ಅವನ ಎಲ್ಲಾ ಪ್ರಸಿದ್ಧ ಶೂರರೂ ಮತ್ತು ಸರದಾರರೂ ಇವನ ಮಾತುಗಳನ್ನು ಕೇಳಿದಾಗ ಅರಸನು ಇವನನ್ನು ಕೊಂದುಹಾಕಲು ಮನಸ್ಸು ಮಾಡಿದನು; ಆದರೆ ಊರೀಯನು ಆ ಸುದ್ದಿಯನ್ನು ಕೇಳಿ ಭಯಪಟ್ಟು ಓಡಿಹೋಗಿ ಐಗುಪ್ತವನ್ನು ಸೇರಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಅರಸ ಯೆಹೋಯಾಕೀಮನು ಮತ್ತು ಅವನ ಎಲ್ಲ ವೀರಶೂರರು ಹಾಗು ನಾಯಕರು ಆ ಊರೀಯನ ಮಾತುಗಳನ್ನು ಕೇಳಿಸಿಕೊಂಡರು. ಕೂಡಲೆ ಅರಸ ಅವನನ್ನು ಕೊಂದುಹಾಕಲು ಮನಸ್ಸುಮಾಡಿದ. ಈ ಸುದ್ದಿಯನ್ನು ಕೇಳಿದ ಊರೀಯ ಭಯಪಟ್ಟು ಓಡಿಹೋಗಿ ಈಜಿಪ್ಟನ್ನು ಸೇರಿಕೊಂಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ರಾಜನಾದ ಯೆಹೋಯಾಕೀಮನೂ ಅವನ ಸೇನೆಯ ಅಧಿಕಾರಿಗಳೂ ಯೆಹೂದದ ನಾಯಕರೂ ಊರೀಯನ ಪ್ರವಾದನೆಯನ್ನು ಕೇಳಿದರು. ಅವರಿಗೆ ಕೋಪಬಂದಿತು. ರಾಜನಾದ ಯೆಹೋಯಾಕೀಮನು ಊರೀಯನನ್ನು ಕೊಲ್ಲಬಯಸಿದನು. ಆದರೆ ಯೆಹೋಯಾಕೀಮನು ತನ್ನನ್ನು ಕೊಲ್ಲಬಯಸುತ್ತಾನೆಂದು ಊರೀಯನು ಕೇಳಿದನು. ಊರೀಯನು ಭಯಪಟ್ಟು ತಪ್ಪಿಸಿಕೊಂಡು ಈಜಿಪ್ಟ್ ದೇಶಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆಗ ಅರಸನಾದ ಯೆಹೋಯಾಕೀಮನೂ, ಅವನ ಪರಾಕ್ರಮಶಾಲಿಗಳೆಲ್ಲರೂ, ಪ್ರಧಾನರೆಲ್ಲರೂ ಅವನ ಮಾತುಗಳನ್ನೆಲ್ಲಾ ಕೇಳಿದಾಗ, ಅರಸನು ಅವನನ್ನು ಕೊಂದುಹಾಕಬೇಕೆಂದಿದ್ದನು. ಆದರೆ ಊರೀಯನು ಅದನ್ನು ಕೇಳಿ ಭಯಪಟ್ಟು ಓಡಿಹೋಗಿ, ಈಜಿಪ್ಟಿಗೆ ಸೇರಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 26:21
15 ತಿಳಿವುಗಳ ಹೋಲಿಕೆ  

ಒಂದು ಊರಲ್ಲಿ ನಿಮ್ಮನ್ನು ಹಿಂಸೆಪಡಿಸಿದರೆ ಮತ್ತೊಂದು ಊರಿಗೆ ಓಡಿಹೋಗಿರಿ; ಮನುಷ್ಯಕುಮಾರನು ಬರುವಷ್ಟರಲ್ಲಿ ನೀವು ಇಸ್ರಾಯೇಲ್ ಜನರ ಊರುಗಳ ಸಂಚಾರವನ್ನು ತೀರಿಸಿರುವದಿಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


ಹೆರೋದನು ಅವನನ್ನು ಕೊಲ್ಲಿಸಬೇಕೆಂದಿದ್ದರೂ ಜನರು ಅವನನ್ನು ಪ್ರವಾದಿಯೆಂದು ಎಣಿಸಿದ್ದರಿಂದ ಅವರಿಗೆ ಭಯಪಟ್ಟು [ಕೊಲ್ಲಿಸಲಿಲ್ಲ].


ಮತ್ತು ಅರಸನು ರಾಜವಂಶೀಯನಾದ ಎರಖ್ಮೆಯೇಲ, ಅಜ್ರಿಯೇಲನ ಮಗನಾದ ಸೆರಾಯ, ಅಬ್ದೆಯೇಲನ ಮಗನಾದ ಶಲೆಮ್ಯ, ಇವರಿಗೆ ಲೇಖಕನಾದ ಬಾರೂಕನನ್ನೂ ಪ್ರವಾದಿಯಾದ ಯೆರೆಮೀಯನನ್ನೂ ಹಿಡಿಯಬೇಕೆಂದು ಅಪ್ಪಣೆಕೊಟ್ಟನು; ಆದರೆ ಯೆಹೋವನು ಅವರನ್ನು ಮರೆಯಲ್ಲಿಟ್ಟನು.


ಆಸನು ಈ ಮಾತುಗಳ ದೆಸೆಯಿಂದ ಬೇಸರಗೊಂಡು ದರ್ಶಿಯ ಮೇಲೆ ಕೋಪಗೊಂಡು ಅವನನ್ನು ಸೆರೆಮನೆಯಲ್ಲಿಡಿಸಿ ಕೋಳಹಾಕಿಸಿದನು. ಇದಲ್ಲದೆ ಜನರಲ್ಲಿ ಕೆಲವರನ್ನು ಪೀಡಿಸಿದನು.


ಇದಕ್ಕೆ ಹೆರೋದ್ಯಳು ಅವನ ಮೇಲೆ ದ್ವೇಷವಿಟ್ಟುಕೊಂಡು ಅವನನ್ನು ಕೊಲ್ಲಿಸಬೇಕೆಂದಿದ್ದರೂ ಆಗದೆ ಹೋಯಿತು.


ತನ್ನ ಪ್ರಾಣವನ್ನು ಕಂಡುಕೊಂಡವನು ಅದನ್ನು ಕಳಕೊಳ್ಳುವನು; ನನ್ನ ನಿವಿುತ್ತವಾಗಿ ತನ್ನ ಪ್ರಾಣವನ್ನು ಕಳಕೊಂಡವನು ಅದನ್ನು ಕಂಡುಕೊಳ್ಳುವನು.


ಇದಲ್ಲದೆ ದೇಹವನ್ನು ಕೊಂದು ಆತ್ಮವನ್ನು ಕೊಲ್ಲಲಾರದವರಿಗೆ ಹೆದರಬೇಡಿರಿ, ಆತ್ಮ ದೇಹ ಎರಡನ್ನೂ ಕೂಡ ನರಕದಲ್ಲಿ ಹಾಕಿ ನಾಶಮಾಡಬಲ್ಲಾತನಿಗೇ ಹೆದರಿರಿ.


ಮನುಷ್ಯನ ಭಯ ಉರುಲು; ಯೆಹೋವನ ಭರವಸ ಉದ್ಧಾರ.


ನಾನು ಯಾವಾಗಲೂ ಕೈಯಲ್ಲಿ ಜೀವ ಹಿಡಿದಿದ್ದೇನೆ; ಆದರೂ ನಿನ್ನ ಧರ್ಮಶಾಸ್ತ್ರವನ್ನು ಮರೆಯುವದಿಲ್ಲ.


ಆಗ ಅವರು ಅವನಿಗೆ ವಿರೋಧವಾಗಿ ಒಳಸಂಚುಮಾಡಿ ಯೆಹೋವನ ಆಲಯದ ಪ್ರಾಕಾರದಲ್ಲಿ ಅವನನ್ನು ಕಲ್ಲೆಸೆದು ಕೊಂದರು. ಇದು ಅರಸನಾದ ಯೆಹೋವಾಷನ ಅಪ್ಪಣೆಯಿಂದಲೇ ಆಯಿತು.


ಯೆಹೂದದ ಸರದಾರರು ಈ ವರ್ತಮಾನವನ್ನು ಕೇಳಿ ಅರಮನೆಯಿಂದ ಯೆಹೋವನ ಆಲಯಕ್ಕೆ ಹತ್ತಿಬಂದು ಆ ಮಂದಿರದ ಹೊಸ ಬಾಗಿಲಿನಲ್ಲಿ ಕೂತುಕೊಂಡಿರಲಾಗಿ


ಆಮೇಲೆ ಆ ಪ್ರಧಾನರು ಅರಸನಿಗೆ - ಒಡೆಯಾ, ಇವನಿಗೆ ಮರಣದಂಡನೆಯಾಗಬೇಕು. ಇವನು ಪಟ್ಟಣದಲ್ಲಿ ಉಳಿದಿರುವ ಯೋಧರಿಗೂ ಸಕಲ ಜನರಿಗೂ ಇಂಥಾ ಮಾತುಗಳನ್ನು ನುಡಿಯುತ್ತಾ ಅವರನ್ನು ಜೋಲುಗೈಯವರನ್ನಾಗಿ ಮಾಡುತ್ತಾನೆ; ಈ ಜನರ ಕ್ಷೇಮವನ್ನಲ್ಲ, ಹಾನಿಯನ್ನೇ ಹಾರೈಸುತ್ತಾನೆ ಎಂದು ಹೇಳಿದರು.


ನಿನ್ನ ದೇವರಾದ ಯೆಹೋವನಾಣೆ, ನನ್ನ ಒಡೆಯನು ಸೇವಕರನ್ನು ಅಟ್ಟಿ ನಿನ್ನನ್ನು ಹುಡುಕದ ಜನಾಂಗವೂ ರಾಜ್ಯವೂ ಒಂದೂ ಇರುವದಿಲ್ಲ. ಆ ಜನಾಂಗರಾಜ್ಯಗಳವರು ಎಲೀಯನು ನಮ್ಮಲ್ಲಿರುವದಿಲ್ಲವೆಂದು ಹೇಳಿದಾಗ ಅವನು ಅವರಿಂದ ಪ್ರಮಾಣಮಾಡಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು