ಯೆರೆಮೀಯ 26:3 - ಕನ್ನಡ ಸತ್ಯವೇದವು J.V. (BSI)3 ಅವರು ಒಂದು ವೇಳೆ ಕಿವಿಗೊಟ್ಟು ತಮ್ಮ ತಮ್ಮ ದುರ್ಮಾರ್ಗಗಳಿಂದ ಹಿಂದಿರುಗಿಯಾರು; ಹಾಗಾದರೆ ಅವರ ದುಷ್ಕೃತ್ಯಗಳ ನಿವಿುತ್ತ ನಾನು ಅವರಿಗೆ ಮಾಡಬೇಕೆಂದಿದ್ದ ಕೇಡನ್ನು ಮನಮರುಗಿ ಮಾಡದಿರುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಅವರು ಒಂದು ವೇಳೆ ಕಿವಿಗೊಟ್ಟು ತಮ್ಮ ತಮ್ಮ ದುರ್ಮಾರ್ಗಗಳಿಂದ ಹಿಂದಿರುಗಿಯಾರು; ಹಾಗೆ ಮಾಡಿದರೆ ಅವರ ದುಷ್ಕೃತ್ಯಗಳ ನಿಮಿತ್ತ ನಾನು ಅವರಿಗೆ ಮಾಡಬೇಕೆಂದಿದ್ದ ಕೇಡನ್ನು ಮನಮರುಗಿ ಮಾಡದಿರುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಬಹುಶಃ ಅವರು ಕಿವಿಗೊಟ್ಟು ತಮ್ಮ ತಮ್ಮ ದುರ್ಮಾರ್ಗಗಳಿಂದ ಹಿಂದಿರುಗಬಹುದು. ಹಾಗೆ ಮಾಡಿದ್ದೇ ಆದರೆ, ಅವರ ದುಷ್ಕೃತ್ಯಗಳಿಗೆ ದಂಡನೆಯನ್ನು ವಿಧಿಸಬೇಕೆಂದಿದ್ದ ನನ್ನ ಮನಸ್ಸನ್ನು ಬದಲಾಯಿಸಿಕೊಳ್ಳುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಅವರು ನನ್ನ ಸಂದೇಶವನ್ನು ಕೇಳಿ ಅದರಂತೆ ನಡೆಯಬಹುದು; ತಮ್ಮ ಕೆಟ್ಟ ಜೀವನವನ್ನು ತ್ಯಜಿಸಿ ಸನ್ಮಾರ್ಗವನ್ನು ಹಿಡಿಯಬಹುದು. ಅವರು ಪರಿವರ್ತನೆ ಹೊಂದಿದರೆ ನಾನು ಅವರನ್ನು ಶಿಕ್ಷಿಸಬೇಕೆಂದು ಮಾಡಿದ ಯೋಚನೆಗಳನ್ನು ಬದಲಾಯಿಸುವೆನು. ಅವರು ಅನೇಕ ದುಷ್ಕೃತ್ಯಗಳನ್ನು ಮಾಡಿದ್ದರಿಂದ ಅವರನ್ನು ಶಿಕ್ಷಿಸಬೇಕೆಂದು ನಾನು ಯೋಚಿಸುತ್ತಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಒಂದು ವೇಳೆ ಅವರು ಕೇಳಿ, ನಾನು ಅವರ ಕೃತ್ಯಗಳ ಕೆಟ್ಟತನದ ನಿಮಿತ್ತ ಅವರಿಗೆ ಮಾಡುವುದಕ್ಕೆ ಆಲೋಚಿಸಿದ ಕೇಡಿನ ವಿಷಯ ಪಶ್ಚಾತ್ತಾಪ ಪಡುವ ಹಾಗೆ ತಮ್ಮ ತಮ್ಮ ಕೆಟ್ಟ ಮಾರ್ಗವನ್ನು ಬಿಟ್ಟು ತಿರುಗಿಕೊಂಡಾರು. ಅಧ್ಯಾಯವನ್ನು ನೋಡಿ |
ಯೆಹೂದದ ಅರಸನಾದ ಹಿಜ್ಕೀಯನೂ ಎಲ್ಲಾ ಯೆಹೂದ್ಯರೂ ಅವನನ್ನು ಕೊಂದುಹಾಕಿದರೋ? ಇಲ್ಲವೇ ಇಲ್ಲ. ಆ ಅರಸನು ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ ಆತನ ದಯೆಯನ್ನು ಬೇಡಿಕೊಳ್ಳಲು ಯೆಹೋವನು ಅವರ ವಿಷಯವಾಗಿ ನುಡಿದಿದ್ದ ಕೇಡನ್ನು ಮನಮರುಗಿ ಮಾಡದೆ ಬಿಟ್ಟನಲ್ಲಾ. ನಾವಾದರೋ [ಇವನನ್ನು ಕೊಂದುಹಾಕಿ] ನಮಗೆ ದೊಡ್ಡ ಕೇಡನ್ನು ಉಂಟುಮಾಡಿಕೊಳ್ಳುವವರಾಗಿದ್ದೇವೆ ಎಂಬದಾಗಿ ಸಕಲಜನ ಸಮೂಹಕ್ಕೆ ಹೇಳಿದರು.