ಯೆರೆಮೀಯ 26:4 - ಕನ್ನಡ ಸತ್ಯವೇದವು J.V. (BSI)4 ನೀನು ಅವರಿಗೆ ಹೀಗೆ ಹೇಳು - ಯೆಹೋವನು ಇಂತೆನ್ನುತ್ತಾನೆ - ನೀವು ನನ್ನ ಕಡೆಗೆ ಕಿವಿಗೊಡದೆ ನಾನು ನಿಮ್ಮ ಮುಂದೆ ಇಟ್ಟಿರುವ ಧರ್ಮಶಾಸ್ತ್ರಕ್ಕೆ ಅನುಸಾರವಾಗಿ ನಡೆಯದೆ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ನೀನು ಅವರಿಗೆ, ‘ಯೆಹೋವನು ಇಂತೆನ್ನುತ್ತಾನೆ, ನೀವು ನನ್ನ ಕಡೆಗೆ ಕಿವಿಗೊಡದೆ ನಾನು ನಿಮ್ಮ ಮುಂದೆ ಇಟ್ಟಿರುವ ಧರ್ಮಶಾಸ್ತ್ರಕ್ಕೆ ಅನುಸಾರವಾಗಿ ನಡೆಯಬೇಕೆಂಬ ಮಾತನ್ನು ಕೇಳದೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 “ಅವರಿಗೆ ನೀನು ಹೇಳಬೇಕಾದುದು ಇದು: ‘ಸರ್ವೇಶ್ವರ ಹೀಗೆನ್ನುತ್ತಾರೆ - ನೀವು ನನಗೆ ಕಿವಿಗೊಡದೆ ಹೋದರೆ, ನಾನು ನಿಮ್ಮ ಮುಂದಿಟ್ಟಿರುವ ಧರ್ಮಶಾಸ್ತ್ರದ ಪ್ರಕಾರ ನಡೆಯದೆಹೋದರೆ, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ನೀನು ಅವರಿಗೆ ಹೀಗೆ ಹೇಳು: ‘ಯೆಹೋವನು ಹೀಗೆನ್ನುತ್ತಾನೆ: ನಾನು ನಿಮಗೆ ನನ್ನ ಧರ್ಮೋಪದೇಶಗಳನ್ನು ಕೊಟ್ಟಿದ್ದೇನೆ. ನೀವು ಅವುಗಳನ್ನು ಪಾಲಿಸಬೇಕು; ಅನುಸರಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ನೀನು ಅವರಿಗೆ ಹೇಳಬೇಕಾದದ್ದೇನೆಂದರೆ, ‘ಯೆಹೋವ ದೇವರು ಹೀಗೆ ಹೇಳುತ್ತಾನೆ, ನೀವು ನನಗೆ ಕಿವಿಗೊಡದೆ, ನಾನು ನಿಮ್ಮ ಮುಂದೆ ಇಟ್ಟ ನನ್ನ ನಿಯಮದಲ್ಲಿ ನಡೆದುಕೊಳ್ಳದೆ, ಅಧ್ಯಾಯವನ್ನು ನೋಡಿ |
ನಾನು ಪ್ರಮಾಣಮಾಡಿಕೊಟ್ಟ ದೇಶದಲ್ಲಿ ಇವರು ಸೇರುವದಕ್ಕಿಂತ ಮುಂಚಿತವಾಗಿಯೇ ಇವರು ಈಗಲೂ ಮಾಡುವ ದುರಾಲೋಚನೆಗಳನ್ನು ನಾನು ಬಲ್ಲೆ. ನಾನು ಇವರ ಪಿತೃಗಳಿಗೆ ಪ್ರಮಾಣಮಾಡಿದಂತೆ ಹಾಲೂ ಜೇನೂ ಹರಿಯುವ ದೇಶಕ್ಕೆ ಇವರನ್ನು ಸೇರಿಸಿದ ಮೇಲೆ ಇವರು ಚೆನ್ನಾಗಿ ಉಂಡು ಕೊಬ್ಬಿದವರಾದಾಗ ಇತರ ದೇವರುಗಳನ್ನು ಅವಲಂಬಿಸಿ ಸೇವಿಸಿ ನನ್ನನ್ನು ತಾತ್ಸಾರಮಾಡಿ ನನ್ನ ನಿಬಂಧನೆಯನ್ನು ಮೀರುವರು. ಅನಂತರ ಅನೇಕ ಕಷ್ಟಗಳೂ ವಿಪತ್ತುಗಳೂ ಸಂಭವಿಸಿದಾಗ ಈ ಪದ್ಯವು ಇವರ ಸಂತತಿಯವರ ಬಾಯಲ್ಲಿ ಇದ್ದುಕೊಂಡು ಅವರ ಮುಂದೆ ಸಾಕ್ಷಿಕೊಡುವದು ಎಂದು ಹೇಳಿದನು.