Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 27:14 - ಕನ್ನಡ ಸತ್ಯವೇದವು J.V. (BSI)

14 ನೀವು ಬಾಬೆಲಿನ ಅರಸನ ಅಡಿಯಾಳಾಗುವದಿಲ್ಲ ಎಂದು ನಿಮಗೆ ನುಡಿಯುವ ಪ್ರವಾದಿಗಳ ಮಾತುಗಳಿಗೆ ಕಿವಿಗೊಡಬೇಡಿರಿ; ಅವರು ನಿಮಗೆ ಸುಳ್ಳನ್ನು ಸಾರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ‘ನೀವು ಬಾಬೆಲಿನ ಅರಸನ ಅಡಿಯಾಳಾಗುವುದಿಲ್ಲ’ ಎಂದು ನಿಮಗೆ ನುಡಿಯುವ ಪ್ರವಾದಿಗಳ ಮಾತುಗಳಿಗೆ ಕಿವಿಗೊಡಬೇಡಿರಿ; ಅವರು ನಿಮಗೆ ಸುಳ್ಳನ್ನು ಸಾರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ‘ನೀವು ಬಾಬಿಲೋನಿಯದ ಅರಸನ ಅಡಿಯಾಳಾಗುವುದಿಲ್ಲ’ ಎಂದು ನಿಮಗೆ ನುಡಿಯುವ ಪ್ರವಾದಿಗಳ ಮಾತುಗಳಿಗೆ ಕಿವಿಗೊಡಬೇಡಿ; ಅವರು ನಿಮಗೆ ಸುಳ್ಳನ್ನು ಸಾರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆದರೆ ನೀವೆಂದಿಗೂ ಬಾಬಿಲೋನ್ ರಾಜನಿಗೆ ಗುಲಾಮರಾಗುವದಿಲ್ಲ ಎಂದು ಈ ಸುಳ್ಳುಪ್ರವಾದಿಗಳು ಹೇಳುತ್ತಿದ್ದಾರೆ. “‘ಆ ಪ್ರವಾದಿಗಳ ಮಾತುಗಳನ್ನು ಕಿವಿಗೆ ಹಾಕಿಕೊಳ್ಳಬೇಡಿ. ಅವರು ನಿಮಗೆ ಸುಳ್ಳುಪ್ರವಾದನೆ ಮಾಡುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ‘ನೀವು ಬಾಬಿಲೋನಿಯದ ಅರಸನ ಅಡಿಯಾಳಾಗುವುದಿಲ್ಲ,’ ಎಂದು ನಿಮಗೆ ನುಡಿಯುವ ಪ್ರವಾದಿಗಳ ಮಾತುಗಳಿಗೆ ಕಿವಿಗೊಡಬೇಡಿ, ಅವರು ನಿಮಗೆ ಸುಳ್ಳನ್ನು ಸಾರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 27:14
20 ತಿಳಿವುಗಳ ಹೋಲಿಕೆ  

ಆಗ ಯೆಹೋವನು ನನಗೆ ಹೀಗೆ ನುಡಿದನು - ಪ್ರವಾದಿಗಳು ನನ್ನ ಹೆಸರಿನಿಂದ ಸುಳ್ಳಾಗಿ ಪ್ರವಾದಿಸುತ್ತಾರೆ; ನಾನು ಅವರನ್ನು ಕಳುಹಿಸಲಿಲ್ಲ; ಅವರಿಗೆ ಅಪ್ಪಣೆಕೊಡಲಿಲ್ಲ, ಏನೂ ಹೇಳಲಿಲ್ಲ; ಅವರು ಸುಳ್ಳಾದ ದಿವ್ಯದರ್ಶನವನ್ನೂ ಕಣಿಯನ್ನೂ ಮಾಯಾತಂತ್ರವನ್ನೂ ಸ್ವಕಲ್ಪಿತಮೋಸವನ್ನೂ ನಿಮಗೆ ಪ್ರಕಟಿಸುತ್ತಾರೆ.


ನಾನು ಈ ಪ್ರವಾದಿಗಳನ್ನು ಕಳುಹಿಸಲಿಲ್ಲ, ತಾವೇ ಆತುರಗೊಂಡರು; ನಾನು ಇವರಿಗೆ ಏನೂ ಹೇಳಲಿಲ್ಲ, ತಾವೇ ಪ್ರವಾದಿಸಿದರು.


ಪ್ರಿಯರೇ, ಅನೇಕ ಮಂದಿ ಸುಳ್ಳು ಪ್ರವಾದಿಗಳು ಲೋಕದೊಳಗೆ ಬಂದಿರುವದರಿಂದ ನೀವು ಆತ್ಮದ ಎಲ್ಲಾ ನುಡಿಗಳನ್ನು ನಂಬದೆ ಆಯಾ ನುಡಿಗಳು ದೇವರಿಂದ ಪ್ರೇರಿತವಾದವುಗಳೋ ಅಲ್ಲವೋ ಎಂದು ಅವುಗಳನ್ನು ಪರೀಕ್ಷಿಸಬೇಕು.


ಆ ನಾಯಿಗಳಿಗೆ ಎಚ್ಚರಿಕೆಯಾಗಿರಿ; ದುರ್ಮನಸ್ಸಿನಿಂದ ಕೆಲಸಮಾಡುವವರಿಗೆ ಎಚ್ಚರಿಕೆಯಾಗಿರಿ. ಸುನ್ನತಿಯೆಂದು ಹೇಳಿಕೊಂಡು ಅಂಗಚ್ಫೇದನ ಮಾಡುವವರಿಗೆ ಎಚ್ಚರಿಕೆಯಾಗಿರಿ.


ಸುಳ್ಳುಪ್ರವಾದಿಗಳ ವಿಷಯದಲ್ಲಿ ಎಚ್ಚರವಾಗಿರ್ರಿ. ಅವರು ಕುರೀವೇಷ ಹಾಕಿಕೊಂಡು ನಿಮ್ಮ ಬಳಿಗೆ ಬರುತ್ತಾರೆ; ಆದರೆ ಒಳಗೆ ನೋಡಿದರೆ ಅವರು ಹಿಡುಕೊಂಡು ಹೋಗುವ ತೋಳಗಳೇ.


ಗಾಳಿಯನ್ನೂ ಮೋಸವನ್ನೂ ಹಿಂಬಾಲಿಸುವ ಸುಳ್ಳುಗಾರನೊಬ್ಬನು - ನಾನು ದ್ರಾಕ್ಷಾರಸಮದ್ಯಗಳ ವಿಷಯವಾಗಿ ನಿನಗೆ ಪ್ರವಾದನೆಮಾಡುವೆನು ಎಂದು ಹೇಳಿದರೆ ಈ ಜನರು ಅಂಥವನನ್ನು ಪ್ರವಾದಿಯನ್ನಾಗಿ ಸ್ವೀಕರಿಸಿಕೊಳ್ಳುವರು.


ಆಗ ಪ್ರವಾದಿಯಾದ ಯೆರೆಮೀಯನು ಪ್ರವಾದಿಯಾದ ಹನನ್ಯನಿಗೆ - ಹನನ್ಯನೇ, ಕೇಳು, ಯೆಹೋವನು ನಿನ್ನನ್ನು ಕಳುಹಿಸಲಿಲ್ಲ; ಈ ಜನರು ಸುಳ್ಳನ್ನು ನಂಬುವಂತೆ ಮಾಡುತ್ತೀ.


ನನಗೆ ಕನಸು ಬಿತ್ತು, ಕನಸು ಬಿತ್ತು ಎಂದು ನನ್ನ ಹೆಸರಿನಿಂದ ಸುಳ್ಳಾಗಿ ಪ್ರವಾದಿಸುವ ಪ್ರವಾದಿಗಳ ನುಡಿಯನ್ನು ಕೇಳಿದ್ದೇನೆ.


ಬಾಬೆಲಿನ ಅರಸನು ನಿಮಗೂ ಈ ದೇಶಕ್ಕೂ ವಿರುದ್ಧವಾಗಿ ಬಾರನು ಎಂದು ನಿಮಗೆ ಸಾರಿದ ನಿಮ್ಮ ಪ್ರವಾದಿಗಳು ಈಗ ಎಲ್ಲಿ?


ಯೆಹೂದದ ಅರಸನ ಮನೆಯಲ್ಲಿ ಉಳಿದಿರುವ ಸಕಲ ಸ್ತ್ರೀಯರು ಬಾಬೆಲಿನ ಅರಸನ ಸರದಾರರ ಬಳಿಗೆ ತರಲ್ಪಟ್ಟವರಾಗಿ ನಿನ್ನನ್ನು ಪ್ರೇರಿಸಿ ಒಳಪಡಿಸಿಕೊಂಡಿದ್ದ ನಿನ್ನ ಆಪ್ತವಿುತ್ರರು ನಿನ್ನ ಕಾಲುಗಳು ಬದಿಯಲ್ಲಿ ಹೂತದ್ದನ್ನು ನೋಡಿ ಹಿಂದಿರುಗಿದ್ದಾರೆ ಎಂದು ನಿಂದಿಸುವರು.


ನಿನ್ನ ಪ್ರವಾದಿಗಳು ಕಂಡುಹೇಳಿದ ಕಣಿಗಳು ವ್ಯರ್ಥ, ನಿಸ್ಸಾರ; ಅವರು ನಿನ್ನ ದೋಷವನ್ನು ಬೈಲಿಗೆ ತಾರದಕಾರಣ ನಿನ್ನ ದುರವಸ್ಥೆಯು ನೀಗಲಿಲ್ಲ; ನಿನ್ನ ವಿಷಯವಾಗಿ ಅವರಿಗೆ ಕಂಡುಬಂದ ವ್ಯರ್ಥ ದೈವೋಕ್ತಿಗಳು ನೀನು ಗಡೀಪಾರಾಗಿ ಒಯ್ಯಲ್ಪಡುವದಕ್ಕೆ ಆಸ್ಪದವಾದವು.


ವಿಗ್ರಹಗಳು ನುಡಿಯುವದು ಜೊಳ್ಳು; ಕಣಿಯವರು ಕಾಣುವದು ಸುಳ್ಳು, ತಿಳಿಸುವ ಕನಸುಗಳು ಕಲ್ಪಿತ, ಹೇಳುವ ಸಮಾಧಾನವು ವ್ಯರ್ಥ, ಆದದರಿಂದ ನನ್ನ ಜನರು ದಿಕ್ಕಾಪಾಲಾಗಿದ್ದಾರೆ; ಕುರುಬನು ಇಲ್ಲದ ಕಾರಣ ಬಾಧೆಗೆ ಒಳಗಾಗಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು