Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 27:18 - ಕನ್ನಡ ಸತ್ಯವೇದವು J.V. (BSI)

18 ಈ ಪಟ್ಟಣವು ಏಕೆ ಹಾಳಾಗಬೇಕು? ಅವರು ಪ್ರವಾದಿಗಳಾಗಿದ್ದು ಯೆಹೋವನ ವಾಕ್ಯಕ್ಕೆ ನೆಲೆಯಾಗಿದ್ದರೆ ಈಗ ಸೇನಾಧೀಶ್ವರನಾದ ಯೆಹೋವನಿಗೆ ವಿಜ್ಞಾಪನೆ ಮಾಡಿ ಯೆಹೋವನ ಆಲಯದಲ್ಲಿಯೂ ಯೆಹೂದದ ಅರಸನ ಮನೆಯಲ್ಲಿಯೂ ಯೆರೂಸಲೇವಿುನಲ್ಲಿಯೂ ಉಳಿದಿರುವ ಉಪಕರಣಗಳು ಬಾಬೆಲಿಗೆ ಹೋಗದಂತೆ ಬೇಡಿಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಈ ಪಟ್ಟಣವು ಏಕೆ ಹಾಳಾಗಬೇಕು? ಅವರು ಪ್ರವಾದಿಗಳಾಗಿದ್ದು ಯೆಹೋವನ ವಾಕ್ಯಕ್ಕೆ ನೆಲೆಯಾಗಿದ್ದರೆ, ಈಗ ಸೇನಾಧೀಶ್ವರನಾದ ಯೆಹೋವನಿಗೆ ವಿಜ್ಞಾಪನೆ ಮಾಡಿ ಯೆಹೋವನ ಆಲಯದಲ್ಲಿಯೂ ಯೆಹೂದದ ಅರಸನ ಮನೆಯಲ್ಲಿಯೂ ಯೆರೂಸಲೇಮಿನಲ್ಲಿಯೂ ಉಳಿದಿರುವ ಉಪಕರಣಗಳು ಬಾಬಿಲೋನಿಗೆ ಹೋಗದಂತೆ ಬೇಡಿಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಅವರು ನಿಜವಾದ ಪ್ರವಾದಿಗಳಾಗಿದ್ದರೆ, ಸರ್ವೇಶ್ವರನ ವಾಕ್ಯ ಅವರಲ್ಲಿ ನೆಲೆಸಿದ್ದರೆ, ದೇವಾಲಯದಲ್ಲೂ ಜುದೇಯದ ಅರಸನ ಮನೆಯಲ್ಲೂ ಜೆರುಸಲೇಮಿನಲ್ಲೂ ಇನ್ನು ಉಳಿದಿರುವ ಉಪಕರಣಗಳು ಬಾಬಿಲೋನಿಗೆ ಹೋಗದಂತೆ ಸರ್ವಶಕ್ತ ಸರ್ವೇಶ್ವರನಿಗೆ ವಿಜ್ಞಾಪನೆಮಾಡಿ ಬೇಡಿಕೊಳ್ಳಲಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆ ಜನರು ಯೆಹೋವನ ಸಂದೇಶವನ್ನು ತಂದ ಪ್ರವಾದಿಗಳಾಗಿದ್ದರೆ, ಅವರು ಪ್ರಾರ್ಥನೆ ಸಲ್ಲಿಸಲಿ. ಇನ್ನೂ ಯೆಹೋವನ ಆಲಯದಲ್ಲಿರುವ ವಸ್ತುಗಳ ಬಗ್ಗೆ ಅವರು ಪ್ರಾರ್ಥನೆ ಸಲ್ಲಿಸಲಿ. ಇನ್ನೂ ರಾಜನ ಅರಮನೆಯಲ್ಲಿರುವ ವಸ್ತುಗಳ ಬಗ್ಗೆ ಅವರು ಪ್ರಾರ್ಥನೆ ಸಲ್ಲಿಸಲಿ. ಇನ್ನೂ ಜೆರುಸಲೇಮಿನಲ್ಲಿರುವ ಪದಾರ್ಥಗಳ ಬಗ್ಗೆ ಅವರು ಪ್ರಾರ್ಥನೆ ಸಲ್ಲಿಸಲಿ. ಆ ವಸ್ತುಗಳನ್ನೆಲ್ಲ ಬಾಬಿಲೋನಿಗೆ ತೆಗೆದುಕೊಂಡು ಹೋಗಬಾರದೆಂದು ಅವರು ಪ್ರಾರ್ಥನೆ ಸಲ್ಲಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅವರು ನಿಜವಾದ ಪ್ರವಾದಿಗಳಾಗಿದ್ದರೆ, ಯೆಹೋವ ದೇವರ ವಾಕ್ಯ ಅವರಲ್ಲಿ ನೆಲಸಿದ್ದರೆ, ದೇವಾಲಯದಲ್ಲೂ, ಯೆಹೂದದ ಅರಸನ ಅರಮನೆಯಲ್ಲೂ, ಯೆರೂಸಲೇಮಿನಲ್ಲೂ, ಇನ್ನು ಉಳಿದಿರುವ ಉಪಕರಣಗಳು ಬಾಬಿಲೋನಿಗೆ ಹೋಗದಂತೆ ಸೇನಾಧೀಶ್ವರ ಯೆಹೋವ ದೇವರಿಗೆ ವಿಜ್ಞಾಪನೆಮಾಡಿ ಬೇಡಿಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 27:18
18 ತಿಳಿವುಗಳ ಹೋಲಿಕೆ  

ನಮ್ಮ ದೇವರಾದ ಯೆಹೋವನು ನಮ್ಮನ್ನು ಫಿಲಿಷ್ಟಿಯರ ಕೈಯಿಂದ ತಪ್ಪಿಸಿ ರಕ್ಷಿಸುವ ಹಾಗೆ ನೀನು ನಮಗೋಸ್ಕರ ಆತನಿಗೆ ಮೊರೆಯಿಡು, ಸುಮ್ಮನಿರಬೇಡ ಅಂದರು.


ಮೇಲಿಗೆ ಮುಯ್ಯಾಗಿ ಕೇಡು ಆಗ ತಕ್ಕದ್ದೋ? ನನ್ನ ಪ್ರಾಣವನ್ನು ಹಿಡಿಯಬೇಕೆಂದು ಗುಂಡಿಯನ್ನು ತೋಡಿದ್ದಾರಲ್ಲಾ. ಅವರ ಮೇಲಣ ನಿನ್ನ ರೋಷವನ್ನು ತಪ್ಪಿಸಲು ನಾನು ನಿನ್ನ ಮುಂದೆ ನಿಂತುಕೊಂಡು ಅವರ ಹಿತಕ್ಕಾಗಿ ವಿಜ್ಞಾಪಿಸಿಕೊಂಡದ್ದನ್ನು ಚಿತ್ತವಿಸು.


ನೀವು ನಿಮ್ಮ ದೇವರ ಹೆಸರು ಹೇಳಿ ಪ್ರಾರ್ಥಿಸಿರಿ. ಅನಂತರ ನಾನು ಯೆಹೋವನ ಹೆಸರು ಹೇಳಿ ಪ್ರಾರ್ಥಿಸುವೆನು. ಆ ಇಬ್ಬರಲ್ಲಿ ಯಾವನು ಲಾಲಿಸಿ ಬೆಂಕಿಯನ್ನು ಕಳುಹಿಸುವನೋ ಅವನೇ ದೇವರೆಂದು ನಿಶ್ಚಯಿಸೋಣ ಅಂದನು. ಎಲ್ಲಾ ಜನರೂ - ಸರಿ, ನೀನು ಹೇಳಿದಂತೆಯೇ ಆಗಲಿ ಎಂದು ಉತ್ತರಕೊಟ್ಟರು.


ನಾನಾದರೋ ನಿಮಗೋಸ್ಕರವಾಗಿ ಯೆಹೋವನನ್ನು ಪ್ರಾರ್ಥಿಸುತ್ತಾ ಆತನ ಉತ್ತಮ ನೀತಿಮಾರ್ಗವನ್ನು ನಿಮಗೆ ತೋರಿಸಿಕೊಡುವದನ್ನು ಬಿಡುವದೇ ಇಲ್ಲ; ಬಿಟ್ಟರೆ ಆತನ ದೃಷ್ಟಿಯಲ್ಲಿ ಪಾಪಿಯಾಗಿರುವೆನು.


ನಮಗೊಬ್ಬ ಅರಸನು ಬೇಕೆಂದು ನಾವು ಬೇಡಿಕೊಂಡದರಿಂದ ನಮ್ಮ ಪಾಪಗಳಿಗೆ ಮತ್ತೊಂದು ಪಾಪವು ಕೂಡಿತು; ಆದದರಿಂದ ನಿನ್ನ ಸೇವಕರಾದ ನಾವು ಸಾಯದಂತೆ ನಿನ್ನ ದೇವರಾದ ಯೆಹೋವನನ್ನು ಬೇಡಿಕೋ ಎಂದು ವಿಜ್ಞಾಪಿಸಲು ಅವನು -


ನಿನಗೆ ಮೆಚ್ಚುವನೋ? ಪ್ರಸನ್ನನಾಗುವನೋ? ಹಾಗಾದರೆ ದೇವರ ದಯೆ ದೊರೆಯುವ ಹಾಗೆ ದೇವರನ್ನು ಒಲಿಸಿಕೊಳ್ಳಿರಿ; ಆಹಾ, ಇದೇ ನಿಮ್ಮ ಕೈಯ ಕಾಣಿಕೆ; ನಿಮ್ಮಲ್ಲಿ ಯಾರಿಗಾದರೂ ಆತನು ಪ್ರಸನ್ನನಾಗುವನೋ? ಇದು ಸೇನಾಧೀಶ್ವರ ಯೆಹೋವನ ನುಡಿ.


ನಾನು ದೇಶವನ್ನು ಹಾಳುಮಾಡದಂತೆ ನನ್ನೆದುರಿಗೆ ದೇಶರಕ್ಷಣೆಗಾಗಿ ಪೌಳಿಯ ಒಡಕಿನಲ್ಲಿ ನಿಲ್ಲುವದಕ್ಕೂ ಗೋಡೆಯನ್ನು ಗಟ್ಟಿಮಾಡುವದಕ್ಕೂ ತಕ್ಕವನನ್ನು ನಾನು ಹುಡುಕಲು ಯಾರೂ ಸಿಕ್ಕಲಿಲ್ಲ.


ನೋಹ ದಾನಿಯೇಲ ಯೋಬ ಎಂಬೀ ಮೂವರು ಪುರುಷರು ಅದರಲ್ಲಿದ್ದರೂ ತಮ್ಮ ಸದಾಚಾರದಿಂದ ಸ್ವಂತಪ್ರಾಣಗಳನ್ನು ಮಾತ್ರ ಉಳಿಸಿಕೊಳ್ಳುತ್ತಿದ್ದರು; ಇದು ಕರ್ತನಾದ ಯೆಹೋವನ ನುಡಿ.


ಎಲ್ಲಾ ಜನರೂ ಪ್ರವಾದಿಯಾದ ಯೆರೆಮೀಯನ ಬಳಿಗೆ ಬಂದು ಅವನಿಗೆ - ದಯಮಾಡು, ನಮ್ಮ ಬಿನ್ನಹವನ್ನು ಲಾಲಿಸು;


ಯೆಹೋವನು ನನಗೆ ಹೀಗೆ ಹೇಳಿದನು - ಮೋಶೆಯೂ ಸಮುವೇಲನೂ ನನಗೆ ವಿಜ್ಞಾಪಿಸಿದರೂ ನನ್ನ ಮನಸ್ಸು ಈ ಜನರ ಕಡೆಗೆ ತಿರುಗದು; ನನ್ನ ಕಣ್ಣೆದುರಿನಿಂದ ಇವರನ್ನು ನೂಕಿಬಿಡು, ತೊಲಗಿಹೋಗಲಿ! ಅವರು - ನಾವು ಎಲ್ಲಿಗೆ ಹೋಗೋಣ ಎಂದು ಕೇಳಲು


ನೀನಂತು ಈ ಜನರಿಗೋಸ್ಕರ ಬೇಡಿಕೊಳ್ಳಬೇಡ, ಇವರಿಗಾಗಿ ಮೊರೆಯಿಡಬೇಡ, ಪ್ರಾರ್ಥಿಸಬೇಡ, ನನಗೆ ವಿಜ್ಞಾಪಿಸಲೂಬೇಡ, ನಾನು ಕೇಳಲೊಲ್ಲೆ.


ಈ ಕಾರಣದಿಂದ ಅರಸನಾದ ಹಿಜ್ಕೀಯನೂ ಆಮೋಚನ ಮಗನಾದ ಯೆಶಾಯನೆಂಬ ಪ್ರವಾದಿಯೂ ಪರಲೋಕಕ್ಕೆ ಮೊರೆಯಿಟ್ಟು ಪ್ರಾರ್ಥಿಸಲು


ಅವರು ತರಲ್ಪಟ್ಟ ಹೋರಿಗಳಲ್ಲೊಂದನ್ನು ತೆಗೆದುಕೊಂಡು ಸಿದ್ಧಪಡಿಸಿ ತಮ್ಮ ದೇವರಾದ ಬಾಳನ ಹೆಸರು ಹೇಳಿ - ಬಾಳನೇ, ನಮಗೆ ಕಿವಿಗೊಡು ಎಂದು ಹೊತ್ತಾರೆಯಿಂದ ಮಧ್ಯಾಹ್ನದವರೆಗೆ ಕೂಗಿದರೂ ಆಕಾಶವಾಣಿಯಾಗಲಿಲ್ಲ; ಅವರು ವೇದಿಯ ಸುತ್ತಲು ಕುಣಿದಾಡಿದರೂ ಯಾರೂ ಉತ್ತರ ದಯಪಾಲಿಸಲಿಲ್ಲ.


ತರುವಾಯ ಅಬ್ರಹಾಮನು ದೇವರನ್ನು ಬೇಡಿಕೊಳ್ಳಲು ದೇವರು ಅಬೀಮೆಲೆಕನನ್ನೂ ಅವನ ಪತ್ನಿಯನ್ನೂ ದಾಸಿಯರನ್ನೂ ವಾಸಿಮಾಡಿದ್ದರಿಂದ ಅವರಿಗೆ ಮಕ್ಕಳಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು