Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 27:20 - ಕನ್ನಡ ಸತ್ಯವೇದವು J.V. (BSI)

20 ಆ ಕಂಬಗಳು, ಸಮುದ್ರವೆನಿಸಿಕೊಂಡ ಪಾತ್ರೆಯು, ಪೀಠಗಳು, ಈ ಪಟ್ಟಣದಲ್ಲಿ ನಿಂತಿರುವ ಉಪಕರಣಗಳು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆ ಕಂಬಗಳು, ಸಮುದ್ರವೆನಿಸಿಕೊಂಡ ಪಾತ್ರೆಯು, ಪೀಠಗಳು, ಈ ಪಟ್ಟಣದಲ್ಲಿ ನಿಂತಿರುವ ಉಪಕರಣಗಳು, ಇವುಗಳ ವಿಷಯವಾಗಿ, ಅಂದರೆ ಯೆಹೋವನ ಆಲಯದಲ್ಲಿಯೂ ಯೆಹೂದದ ಅರಸನ ಮನೆಯಲ್ಲಿಯೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ನೆಬೂಕದ್ನೆಚ್ಚರನು ಯೆಹೂದದ ರಾಜನಾದ ಯೆಹೋಯಾಕೀನನನ್ನು ಸೆರೆಯಾಳಾಗಿ ತೆಗೆದುಕೊಂಡು ಹೋಗುವಾಗ ಆ ವಸ್ತುಗಳನ್ನು ತೆಗೆದುಕೊಂಡು ಹೋಗಲಿಲ್ಲ. ಯೆಹೋಯಾಕೀನನು ಯೆಹೋಯಾಕೀಮನ ಮಗನಾಗಿದ್ದನು. ನೆಬೂಕದ್ನೆಚ್ಚರನು ಯೆಹೂದ ಮತ್ತು ಜೆರುಸಲೇಮಿನಿಂದ ಬೇರೆ ಪ್ರಮುಖ ಜನರನ್ನು ಸಹ ತೆಗೆದುಕೊಂಡು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 27:20
14 ತಿಳಿವುಗಳ ಹೋಲಿಕೆ  

ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆಹೋಯಾಕೀಮನ ಮಗನೂ ಯೆಹೂದದ ಅರಸನೂ ಆದ ಯೆಕೊನ್ಯನನ್ನೂ ಯೆಹೂದದ ಪ್ರಧಾನರನ್ನೂ ಶಿಲ್ಪಿಗಳನ್ನೂ ಕಮ್ಮಾರರನ್ನೂ ಯೆರೂಸಲೇವಿುನಿಂದ ಬಾಬೆಲಿಗೆ ಸೆರೆ ಒಯ್ದ ಮೇಲೆ ಯೆಹೋವನ ಆಲಯದ ಮುಂದೆ ಇಟ್ಟಿರುವ ಅಂಜೂರದ ಹಣ್ಣು ತುಂಬಿದ ಎರಡು ಪುಟ್ಟಿಗಳನ್ನು ಯೆಹೋವನು ನನಗೆ ಕಾಣಮಾಡಿದನು.


ನೆಬೂಕದ್ನೆಚ್ಚರನು ವರ್ಷಾರಂಭದಲ್ಲಿ ಅವನನ್ನೂ ದೇವಾಲಯದ ಬೆಲೆಯುಳ್ಳಸಾಮಾನುಗಳನ್ನೂ ಬಾಬೆಲಿಗೆ ತರಿಸಿಕೊಂಡು ಅವನ ಸಹೋದರನಾದ ಚಿದ್ಕೀಯನನ್ನು ಯೆಹೂದದ ಮತ್ತು ಯೆರೂಸಲೇವಿುನ ಮೇಲೆ ಅರಸನನ್ನಾಗಿ ಮಾಡಿದನು.


ಕೊನ್ಯನೆಂಬ ಈ ಮನುಷ್ಯನು ಅಸಡ್ಡೆಗೀಡಾದ ಒಡಕು ಗಡಿಗೆಯೋ? ಯಾರಿಗೂ ಇಷ್ಟವಲ್ಲದ ಮಡಿಕೆಯೋ? ಅವನೂ ಅವನ ಸಂತತಿಯವರೂ ಏಕೆ ಬಿಸಾಡಲ್ಪಟ್ಟಿದ್ದಾರೆ? ನೋಡದ ದೇಶಕ್ಕೆ ಏಕೆ ಎಸೆಯಲ್ಪಟ್ಟಿದ್ದಾರೆ?


ದೇವಾಲಯದ ಎಲ್ಲಾ ಚಿಕ್ಕ ದೊಡ್ಡ ಸಾಮಾನುಗಳನ್ನೂ ಯೆಹೋವನ ಮಂದಿರದ ಭಂಡಾರ, ಅರಸನ ಮತ್ತು ಅವನ ಸರದಾರರ ಭಂಡಾರ ಇವುಗಳ ದ್ರವ್ಯವನ್ನೂ ಬಾಬೆಲಿಗೆ ಒಯ್ದನು.


ಆಮೋನನು ಯೋಷೀಯನನ್ನು ಪಡೆದನು. ಪ್ರಜೆಯು ಬಾಬೆಲಿಗೆ ಸೆರೆಹೋದ ಸಮಯದಲ್ಲಿ ಯೋಷೀಯನು ಯೆಕೊನ್ಯನನ್ನೂ ಅವನ ಅಣ್ಣತಮ್ಮಂದಿರನ್ನೂ ಪಡೆದನು.


ಬಾಬೆಲಿಗೆ ಸೆರೆಹೋದ ಮೇಲೆ ಯೆಕೊನ್ಯನು ಶೆಯಲ್ತಿಯೇಲನನ್ನು ಪಡೆದನು. ಶೆಯಲ್ತಿಯೇಲನು ಜೆರುಬ್ಬಾಬೆಲನನ್ನು ಪಡೆದನು.


ಹೀಗೆ ಅಬ್ರಹಾಮನಿಂದ ದಾವೀದನವರೆಗೂ ಒಟ್ಟು ಹದಿನಾಲ್ಕು ತಲೆಗಳು. ದಾವೀದ ಮೊದಲುಗೊಂಡು ಬಾಬೆಲಿಗೆ ಸೆರೆಹೋಗುವವರೆಗೂ ಹದಿನಾಲ್ಕು ತಲೆಗಳು. ಬಾಬೆಲಿಗೆ ಸೆರೆಹೋದಂದಿನಿಂದ ಕ್ರಿಸ್ತನವರೆಗೂ ಹದಿನಾಲ್ಕು ತಲೆಗಳು.


ಆಗ ಯೆಹೂದದ ಅರಸನಾದ ಯೆಹೋಯಾಖೀನನು ತನ್ನ ತಾಯಿ ಪರಿವಾರದವರು ಸೇನಾಪತಿಗಳು ಕಂಚುಕಿಗಳು ಇವರೊಡನೆ ಅವನ ಬಳಿಗೆ ಹೋದನು; ಅವನು ಇವನನ್ನು ತನ್ನ ಆಳಿಕೆಯ ಎಂಟನೆಯ ವರುಷದಲ್ಲಿ ಸೆರೆಹಿಡಿದನು.


ಅಲ್ಲಿ ಪಟ್ಟಕ್ಕೆ ಕರೆಯಲು ಪ್ರಮುಖರಲ್ಲಿ ಯಾರೂ ಸಿಕ್ಕರು; ದೇಶದಲ್ಲಿ ಪ್ರಧಾನರೇ ಇಲ್ಲ.


ಇವುಗಳ ವಿಷಯವಾಗಿ, ಅಂದರೆ ಯೆಹೋವನ ಆಲಯದಲ್ಲಿಯೂ ಯೆಹೂದದ ಅರಸನ ಮನೆಯಲ್ಲಿಯೂ ಯೆರೂಸಲೇವಿುನಲ್ಲಿಯೂ ಉಳಿದಿರುವ ಉಪಕರಣಗಳ ವಿಷಯವಾಗಿ ಇಸ್ರಾಯೇಲ್ಯರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ -


ಪ್ರವಾದಿಯಾದ ಯೆರೆಮೀಯನು ಸೆರೆಹೋಗಿದ್ದ ಹಿರಿಯರಲ್ಲಿ ಉಳಿದವರಿಗೂ ಯಾಜಕರಿಗೂ ಪ್ರವಾದಿಗಳಿಗೂ ಅಂತು ನೆಬೂಕದ್ನೆಚ್ಚರನು ಯೆರೂಸಲೇವಿುನಿಂದ ಬಾಬೆಲಿಗೆ ಸೆರೆ ಒಯ್ದಿದ್ದ ಸಕಲಜನರಿಗೂ


ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಕಾಲದಲ್ಲಿ ಯೆಹೋವನು ಯೆರೆಮೀಯನಿಗೆ ದಯಪಾಲಿಸಿದ ವಾಕ್ಯ -


ಆಗ ಕರ್ತನು ಯೆಹೂದದ ಅರಸನಾದ ಯೆಹೋಯಾಕೀಮನನ್ನೂ ದೇವಾಲಯದ ಅನೇಕ ಪಾತ್ರೆಗಳನ್ನೂ ಅವನ ವಶಕ್ಕೆ ಕೊಡಲು ಅವನು ಅವುಗಳನ್ನು ಶಿನಾರ್ ದೇಶಕ್ಕೆ ಸಾಗಿಸಿ ತನ್ನ ದೇವರ ಮಂದಿರಕ್ಕೆ ತಂದು ಆ ದೇವರ ಭಂಡಾರದಲ್ಲಿ ಸೇರಿಸಿಬಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು