ಯೆರೆಮೀಯ 27:5 - ಕನ್ನಡ ಸತ್ಯವೇದವು J.V. (BSI)5 ನಾನೇ ಕೈ ನೀಡಿ ನನ್ನ ಮಹಾ ಶಕ್ತಿಯಿಂದ ಲೋಕವನ್ನೂ ಭೂವಿುಯನ್ನೂ ಅದರ ಮಾನವರನ್ನೂ ಪಶುಗಳನ್ನೂ ಸೃಷ್ಟಿಸಿದ್ದೇನೆ; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ‘ನಾನೇ ಕೈ ನೀಡಿ ನನ್ನ ಮಹಾ ಶಕ್ತಿಯಿಂದ ಲೋಕವನ್ನೂ ಭೂಮಿಯ ಮೇಲಣ ಮಾನವರನ್ನೂ ಪಶುಗಳನ್ನೂ ಸೃಷ್ಟಿಸಿದ್ದೇನೆ; ಈ ನನ್ನ ಸೃಷ್ಟಿಯನ್ನು ನನಗೆ ಸರಿತೋಚಿದವನಿಗೇ ಕೊಡಬಲ್ಲೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ನನ್ನ ಮಹಾಶಕ್ತಿಯಿಂದಲೂ ನೀಡುಗೈಯಿಂದಲೂ ಲೋಕವನ್ನೂ ಭೂಮಿಯನ್ನೂ ಅದರ ಮಾನವರನ್ನು ಮತ್ತು ಪ್ರಾಣಿಗಳನ್ನೂ ಸೃಷ್ಟಿಸಿದವನೂ ನಾನೇ. ಈ ನನ್ನ ಸೃಷ್ಟಿಯನ್ನು ನನಗೆ ಸರಿ ತೋಚಿದವನಿಗೆ ಕೊಡಬಲ್ಲೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ನಾನು ಭೂಮಿಯನ್ನೂ ಮತ್ತು ಅದರ ಮೇಲಿರುವ ಎಲ್ಲಾ ಜನರನ್ನೂ ಸೃಷ್ಟಿಸಿದೆ. ನಾನು ಭೂಮಿಯ ಮೇಲಿನ ಎಲ್ಲಾ ಪ್ರಾಣಿಗಳನ್ನು ಸೃಷ್ಟಿಸಿದೆ. ನಾನು ಇದನ್ನು ನನ್ನ ಮಹಾಶಕ್ತಿಯಿಂದಲೂ ಬಲವಾದ ತೋಳುಗಳಿಂದಲೂ ಸೃಷ್ಟಿಸಿದೆ. ನಾನು ಆ ಭೂಮಿಯನ್ನು ನನ್ನ ಮನಸ್ಸಿಗೆ ಬಂದವರಿಗೆ ಕೊಡಬಹುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ನಾನೇ ಭೂಮಿಯನ್ನೂ, ಭೂಮಿಯ ಮೇಲಿರುವ ಮನುಷ್ಯರನ್ನೂ, ಮೃಗಗಳನ್ನೂ ನನ್ನ ಮಹಾ ಬಲದಿಂದಲೂ, ನನ್ನ ಚಾಚಿದ ಕೈಯಿಂದಲೂ ಉಂಟುಮಾಡಿ, ನನಗೆ ಸರಿ ತೋಚಿದವರಿಗೆ ಅದನ್ನು ಕೊಟ್ಟಿದ್ದೇನೆ. ಅಧ್ಯಾಯವನ್ನು ನೋಡಿ |