Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 27:6 - ಕನ್ನಡ ಸತ್ಯವೇದವು J.V. (BSI)

6 ಈ ನನ್ನ ಸೃಷ್ಟಿಯನ್ನು ನನಗೆ ಸರಿತೋಚಿದವನಿಗೆ ಕೊಡಬಲ್ಲೆನು; ಈಗ ಈ ದೇಶಗಳನ್ನೆಲ್ಲಾ ಬಾಬೆಲಿನ ಅರಸನೂ ನನ್ನ ಸೇವಕನೂ ಆದ ನೆಬೂಕದ್ನೆಚ್ಚರನ ಕೈವಶ ಮಾಡಿದ್ದೇನೆ; ಅವನ ಸೇವೆಗಾಗಿ ಭೂಜಂತುಗಳನ್ನೂ ಕೊಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಈಗ ಈ ದೇಶಗಳನ್ನೆಲ್ಲಾ ಬಾಬೆಲಿನ ಅರಸನೂ ನನ್ನ ಸೇವಕನೂ ಆದ ನೆಬೂಕದ್ನೆಚ್ಚರನ ಕೈವಶಮಾಡಿದ್ದೇನೆ; ಅವನ ಸೇವೆಗಾಗಿ ಭೂಜಂತುಗಳನ್ನೂ ಕೊಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಈಗ ಈ ನಾಡುಗಳನ್ನೆಲ್ಲ ಬಾಬಿಲೋನಿಯದ ಅರಸ ಹಾಗೂ ನನ್ನ ಸೇವಕನಾದ ನೆಬೂಕದ್ನೆಚ್ಚರನ ಕೈವಶಮಾಡಿದ್ದೇನೆ. ಅವನ ಸೇವೆಗಾಗಿ ಕಾಡುಮೃಗಗಳನ್ನೂ ಕೊಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಈಗ ನಾನು ನಿಮ್ಮೆಲ್ಲ ದೇಶಗಳನ್ನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನಿಗೆ ಒಪ್ಪಿಸಿದ್ದೇನೆ. ಅವನು ನನ್ನ ಸೇವಕನಾಗಿದ್ದಾನೆ. ಕಾಡುಪ್ರಾಣಿಗಳು ಸಹ ಅವನ ಆಜ್ಞೆಯನ್ನು ಪಾಲಿಸುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಈಗ ಈ ನಾಡುಗಳನ್ನೆಲ್ಲಾ ಬಾಬಿಲೋನಿಯದ ಅರಸ ಹಾಗು ನನ್ನ ಸೇವಕನಾದ ನೆಬೂಕದ್ನೆಚ್ಚರನ ಕೈವಶ ಮಾಡಿದ್ದೇನೆ. ಅವನ ಸೇವೆಗಾಗಿ ಕಾಡುಮೃಗಗಳನ್ನೂ ಕೊಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 27:6
19 ತಿಳಿವುಗಳ ಹೋಲಿಕೆ  

ಏಕಂದರೆ ಇಸ್ರಾಯೇಲ್ಯರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ - ಈ ಎಲ್ಲಾ ಜನಾಂಗಗಳು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನನ್ನು ಸೇವಿಸಲೆಂದು ನಾವು ಅವುಗಳ ಹೆಗಲಿಗೆ ಕಬ್ಬಿಣದ ನೊಗವನ್ನು ಹೇರಿದ್ದೇನೆ, ಅವು ಅವನನ್ನು ಸೇವಿಸೇ ಸೇವಿಸುವವು; ಇದಲ್ಲದೆ ಭೂಜಂತುಗಳನ್ನೂ ಅವನಿಗೆ ಕೊಟ್ಟಿದ್ದೇನೆ ಎಂದು ಹೇಳು.


ಇಗೋ, ನಾನು ಬಡಗಣ ಜನಾಂಗಗಳನ್ನೆಲ್ಲಾ ಕರೆಯಿಸಿ ಬಾಬೆಲಿನ ಅರಸನೂ ನನ್ನ ಸೇವಕನೂ ಆದ ನೆಬೂಕದ್ನೆಚ್ಚರನನ್ನು ಬರಮಾಡಿ ಇವರೆಲ್ಲರನ್ನು ಈ ದೇಶದ ಮೇಲೂ ಇದರ ನಿವಾಸಿಗಳ ಮೇಲೂ ಸುತ್ತಲಿನ ಸಕಲ ಜನಾಂಗಗಳ ಮೇಲೂ ಬೀಳಿಸಿ ಅವುಗಳನ್ನು ತುಂಬಾ ಹಾಳುಗೈದು ಬೆರಗಿನ ಸಿಳ್ಳಿಗೆ ಗುರಿಪಡಿಸಿ ನಿತ್ಯನಾಶನಕ್ಕೆ ಈಡುಮಾಡುವೆನು.


ಇಸ್ರಾಯೇಲ್ಯರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ - ಇಗೋ, ನಾನು ಬಾಬೆಲಿನ ಅರಸನೂ ನನ್ನ ಸೇವಕನೂ ಆದ ನೆಬೂಕದ್ನೆಚ್ಚರನನ್ನು ಕರೆಯಿಸಿ ನಾನು ಮರೆಮಾಡಿಸಿರುವ ಈ ಕಲ್ಲುಗಳ ಮೇಲೆ ಅವನ ಸಿಂಹಾಸನವನ್ನು ಹಾಕಿಸುವೆನು; ಅವನು ಈ ಕಲ್ಲುಗಳ ಮೇಲೆಯೇ ತನ್ನ ರತ್ನಗಂಬಳಿಯನ್ನು ಹಾಸಿಸುವನು.


ಮತ್ತು ಕೋರೆಷನ ವಿಷಯವಾಗಿ - ಅವನು ನನ್ನ ಮಂದೆ ಕಾಯುವವನು, ಯೆರೂಸಲೇಮು ಕಟ್ಟಲ್ಪಡಲಿ, ದೇವಸ್ಥಾನದ ಅಸ್ತಿವಾರವು ಹಾಕಲ್ಪಡಲಿ ಎಂದು ಹೇಳಿ ನನ್ನ ಇಷ್ಟಾರ್ಥವನ್ನೆಲ್ಲಾ ನೆರವೇರಿಸತಕ್ಕವನು ಎಂಬದಾಗಿ ಮಾತಾಡುವವನಾಗಿದ್ದೇನೆ.


ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆಹೋಯಾಕೀಮನ ಮಗನೂ ಯೆಹೂದದ ಅರಸನೂ ಆದ ಯೆಕೊನ್ಯನನ್ನೂ ಯೆಹೂದದ ಪ್ರಧಾನರನ್ನೂ ಶಿಲ್ಪಿಗಳನ್ನೂ ಕಮ್ಮಾರರನ್ನೂ ಯೆರೂಸಲೇವಿುನಿಂದ ಬಾಬೆಲಿಗೆ ಸೆರೆ ಒಯ್ದ ಮೇಲೆ ಯೆಹೋವನ ಆಲಯದ ಮುಂದೆ ಇಟ್ಟಿರುವ ಅಂಜೂರದ ಹಣ್ಣು ತುಂಬಿದ ಎರಡು ಪುಟ್ಟಿಗಳನ್ನು ಯೆಹೋವನು ನನಗೆ ಕಾಣಮಾಡಿದನು.


ತರುವಾಯ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ ಅವನ ಸೇವಕರನ್ನೂ ವ್ಯಾಧಿಖಡ್ಗಕ್ಷಾಮಗಳಿಂದ ಹತಶೇಷರಾದ ಪ್ರಜೆಗಳನ್ನೂ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೂ ಅವರ ಪ್ರಾಣವನ್ನು ಹುಡುಕುತ್ತಿರುವ ಅವರ ಶತ್ರುಗಳ ಕೈಗೂ ಕೊಟ್ಟುಬಿಡುವೆನು; ಅವನು ಅವರನ್ನು ಕರುಣಿಸದೆ ಕನಿಕರಪಡದೆ ಉಳಿಸದೆ ಕತ್ತಿಯಿಂದ ಸಂಹರಿಸುವನು.


ನಿನ್ನ ಪ್ರಾಣವನ್ನು ಹುಡುಕಿ ನಿನ್ನಲ್ಲಿ ಭಯವನ್ನು ಹುಟ್ಟಿಸುವವರ ಕೈಗೆ ಅಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಮತ್ತು ಕಸ್ದೀಯರ ಕೈಗೆ ಕೊಟ್ಟು ಬಿಡುವೆನು.


ಯೆಹೋವನು ಇಂತೆನ್ನುತ್ತಾನೆ - ಹಾಚೋರಿನವರೇ, ಓಡಿಹೋಗಿರಿ, ದೂರ ಅಲೆದಾಡಿರಿ, ಒಳಪ್ರಾಂತ್ಯದಲ್ಲಿ ವಾಸಿಸಿರಿ, ಏಕಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನಿಮಗೆ ಕೇಡನ್ನು ಬಗೆದು ನಿಮ್ಮ ನಾಶನಕ್ಕೆ ಉಪಾಯವನ್ನು ಕಲ್ಪಿಸಿಕೊಂಡಿದ್ದಾನೆ.


ಹಾಳುಬಿದ್ದಿರುವ ದೇಶಗಳೊಳಗೆ ಐಗುಪ್ತದೇಶವನ್ನೂ ಹಾಳುಬೀಳಿಸುವೆನು; ಪಾಳುಬಿದ್ದಿರುವ ಪಟ್ಟಣಗಳೊಳಗೆ ಅದರ ಪಟ್ಟಣಗಳನ್ನೂ ಪಾಳುಬೀಳಿಸುವೆನು; ನಾಲ್ವತ್ತು ವರುಷ ಹಾಗೆಯೇ ಇರುವವು; ನಾನು ಐಗುಪ್ತ್ಯರನ್ನು ಜನಾಂಗಗಳಲ್ಲಿ ಚದರಿಸಿ ದೇಶದೇಶಗಳಿಗೆ ತೂರಿಬಿಡುವೆನು.


ಅದರ ಎಲೆಗಳು ಅಂದ, ಹಣ್ಣುಗಳು ಬಹಳ, ಅದರಿಂದ ಎಲ್ಲಕ್ಕೂ ಆಹಾರ, ನೆರಳು ಭೂಜಂತುಗಳಿಗೆ ಆಶ್ರಯ, ಕೊಂಬೆಗಳು ಆಕಾಶಪಕ್ಷಿಗಳಿಗೆ ನೆಲೆ, ಅದು ಸಕಲ ಜೀವಿಗಳಿಗೂ ಜೀವನ.


ರಾಜಾ, ನೀನು ಬೆಳೆದು ಬಲಗೊಂಡಿದ್ದೀ, ನಿನ್ನ ಮಹಿಮೆಯು ವೃದ್ಧಿಯಾಗಿ ಆಕಾಶಕ್ಕೆ ಮುಟ್ಟಿದೆ, ನಿನ್ನ ಆಳಿಕೆಯು ಲೋಕದ ಕಟ್ಟಕಡೆಗೂ ವ್ಯಾಪಿಸಿದೆ.


ಅವನೊಡನೆ ಪ್ರೀತಿಯಿಂದ ಮಾತಾಡಿ ತನ್ನ ಸಂಗಡ ಬಾಬೆಲಿನಲ್ಲಿದ್ದ ಎಲ್ಲಾ ಅರಸುಗಳಲ್ಲಿ ಅವನಿಗೆ ಉನ್ನತಸ್ಥಾನವನ್ನು ಕೊಟ್ಟನು.


ಪಾರಸಿಯ ರಾಜನಾದ ಕೋರೆಷನೆಂಬ ನನ್ನ ಮಾತನ್ನು ಕೇಳಿರಿ - ಪರಲೋಕದೇವರಾದ ಯೆಹೋವನು ನನಗೆ ಭೂಲೋಕದ ಎಲ್ಲಾ ರಾಜ್ಯಗಳನ್ನು ಒಪ್ಪಿಸಿ ತನಗೋಸ್ಕರ ಯೆಹೂದದೇಶದ ಯೆರೂಸಲೇವಿುನಲ್ಲಿ ಆಲಯವನ್ನು ಕಟ್ಟಬೇಕೆಂದು ಆಜ್ಞಾಪಿಸಿದ್ದಾನೆ. ನಿಮ್ಮಲ್ಲಿ ಯಾರು ಆತನ ಪ್ರಜೆಗಳಾಗಿರುತ್ತಾರೋ ಅವರು ಸ್ವದೇಶಕ್ಕೆ ಹೋಗಲಿ; ಅವರ ದೇವರಾದ ಯೆಹೋವನು ಅವರ ಸಂಗಡ ಇರುವನು ಎಂದು ಪ್ರಕಟಿಸಿದನು.


ನಾನು ಬಾಬೆಲಿನ ಅರಸನ ಕೈಗಳನ್ನು ಬಲಪಡಿಸಿ ನನ್ನ ಖಡ್ಗವನ್ನು ಅವನ ಕೈಗೆ ಕೊಟ್ಟು ಫರೋಹನ ಕೈಗಳನ್ನು ಮುರಿಸಲು ಗಾಯದಿಂದ ಪ್ರಾಣಸಂಕಟಪಡುವವನಂತೆ ಫರೋಹನು ಆ ಅರಸನ ಮುಂದೆ ನರಳಾಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು