Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 28:11 - ಕನ್ನಡ ಸತ್ಯವೇದವು J.V. (BSI)

11 ನಾನು ಹೀಗೆಯೇ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ನೊಗವನ್ನು ಎರಡು ವರುಷದೊಳಗಾಗಿ ಸಮಸ್ತ ಜನಾಂಗಗಳ ಹೆಗಲಿನಿಂದ ತೆಗೆದು ಮುರಿದುಹಾಕುವೆನು ಎಂದು ಹೇಳಿದನು. ಇದನ್ನು ಕೇಳಿ ಪ್ರವಾದಿಯಾದ ಯೆರೆಮೀಯನು ಅಲ್ಲಿಂದ ಹೊರಟು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 “ಯೆಹೋವನು ಹೇಳಿರುವುದೇನೆಂದರೆ, ನಾನು ಹೀಗೆಯೇ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ನೊಗವನ್ನು ಎರಡು ವರ್ಷದೊಳಗಾಗಿ ಸಮಸ್ತ ಜನಾಂಗಗಳ ಹೆಗಲಿನಿಂದ ತೆಗೆದು ಮುರಿದು ಹಾಕುವೆನು” ಎಂದು ಹೇಳಿದನು. ಇದನ್ನು ಕೇಳಿ ಪ್ರವಾದಿಯಾದ ಯೆರೆಮೀಯನು ಅಲ್ಲಿಂದ ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ನೆರೆದಿದ್ದ ಜನರೆಲ್ಲರ ಮುಂದೆ, “ಸರ್ವೇಶ್ವರನೇ ಹೇಳಿದ್ದಾರೆ - ಇದೇ ಪ್ರಕಾರ, ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ಹೊರಿಸಿರುವ ನೊಗವನ್ನು ಇನ್ನೆರಡು ವರ್ಷದೊಳಗೆ ಸಮಸ್ತ ರಾಷ್ಟ್ರಗಳ ಹೆಗಲಿನಿಂದ ತೆಗೆದು ಮುರಿದು ಹಾಕಲಾಗುವುದು,” ಎಂದು ಹೇಳಿದನು. ಇದನ್ನು ಕೇಳಿದ ಪ್ರವಾದಿ ಯೆರೆಮೀಯನು ಅಲ್ಲಿಂದ ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆಮೇಲೆ ಹನನ್ಯನು ಗಟ್ಟಿಯಾಗಿ ಎಲ್ಲರೂ ಕೇಳುವಂತೆ ಮಾತನಾಡಿದನು. “ಯೆಹೋವನು ಹೇಳುತ್ತಾನೆ: ‘ಇದೇ ರೀತಿಯಲ್ಲಿ ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ಹೇರಿದ ನೊಗವನ್ನು ನಾನು ಮುರಿದುಹಾಕುವೆನು. ಅವನು ಆ ನೊಗವನ್ನು ಜಗತ್ತಿನ ಸಮಸ್ತ ಜನಾಂಗಗಳ ಮೇಲೆ ಹೇರಿದ್ದಾನೆ. ಆದರೆ ನಾನು ಆ ನೊಗವನ್ನು ಎರಡು ವರ್ಷದೊಳಗಾಗಿ ಮುರಿದುಹಾಕುವೆನು.’” ಹನನ್ಯನು ಹಾಗೆ ಹೇಳಿದ ಮೇಲೆ ಯೆರೆಮೀಯನು ಪವಿತ್ರಾಲಯವನ್ನು ಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಹನನ್ಯನು ಜನರೆಲ್ಲರ ಮುಂದೆ ಹೇಳಿದ್ದೇನೆಂದರೆ, “ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ಇದೇ ಪ್ರಕಾರ ನಾನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ನೊಗವನ್ನು ಎರಡು ವರ್ಷದೊಳಗಾಗಿ ಎಲ್ಲಾ ಜನಾಂಗಗಳ ಕುತ್ತಿಗೆಯ ಮೇಲಿನಿಂದ ಮುರಿದು ಹಾಕುವೆನು,’ ” ಎಂದನು. ಆಗ ಪ್ರವಾದಿಯಾದ ಯೆರೆಮೀಯನು ತನ್ನ ಮಾರ್ಗವಾಗಿ ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 28:11
13 ತಿಳಿವುಗಳ ಹೋಲಿಕೆ  

ಆಗ ಯೆಹೋವನು ನನಗೆ ಹೀಗೆ ನುಡಿದನು - ಪ್ರವಾದಿಗಳು ನನ್ನ ಹೆಸರಿನಿಂದ ಸುಳ್ಳಾಗಿ ಪ್ರವಾದಿಸುತ್ತಾರೆ; ನಾನು ಅವರನ್ನು ಕಳುಹಿಸಲಿಲ್ಲ; ಅವರಿಗೆ ಅಪ್ಪಣೆಕೊಡಲಿಲ್ಲ, ಏನೂ ಹೇಳಲಿಲ್ಲ; ಅವರು ಸುಳ್ಳಾದ ದಿವ್ಯದರ್ಶನವನ್ನೂ ಕಣಿಯನ್ನೂ ಮಾಯಾತಂತ್ರವನ್ನೂ ಸ್ವಕಲ್ಪಿತಮೋಸವನ್ನೂ ನಿಮಗೆ ಪ್ರಕಟಿಸುತ್ತಾರೆ.


ನೀನು ಜ್ಞಾನಹೀನನ ಬಳಿಗೆ ಹೋದರೆ ಅವನ ತುಟಿಗಳಲ್ಲಿ ಯಾವ ತಿಳುವಳಿಕೆಯನ್ನೂ ಕಾಣಲಾರೆ.


ಅವರು ನನ್ನ ಹೆಸರಿನಲ್ಲಿ ನಿಮಗೆ ಸುಳ್ಳನ್ನು ಸಾರುತ್ತಾರೆ; ನಾನು ಅವರನ್ನು ಕಳುಹಿಸಲಿಲ್ಲ. ಇದು ಯೆಹೋವನ ನುಡಿ.


ನನ್ನನ್ನು ಅಸಡ್ಡೆಮಾಡುವವರಿಗೆ - ನಿಮಗೆ ಶುಭವಾಗುವದು ಎಂಬದಾಗಿ ಯೆಹೋವನು ಅಂದಿದ್ದಾನೆ ಎಂದು ಹೇಳುತ್ತಲೇ ಇದ್ದಾರೆ; ಸ್ವಂತ ಹೃದಯದ ಹಟದಂತೆ ನಡೆಯುವವರೆಲ್ಲರಿಗೂ - ನಿಮಗೆ ಯಾವ ಕೇಡೂ ಸಂಭವಿಸದು ಎಂದು ನುಡಿಯುತ್ತಾರೆ.


ಅವರಲ್ಲಿ ಕೆನಾನನ ಮಗನಾದ ಚಿದ್ಕೀಯ ಎಂಬವನು ಕಬ್ಬಿಣದ ಕೊಂಬುಗಳನ್ನು ಮಾಡಿಸಿ [ತಲೆಗೆ ಕಟ್ಟಿಕೊಂಡು] ಬಂದು - ಕೊಂಬುಗಳಿಂದಲೋ ಎಂಬಂತೆ ನೀನು ಅರಾಮ್ಯರನ್ನು ಇರಿದು ಕೊಂದುಹಾಕುವಿ ಎಂಬದಾಗಿ ಯೆಹೋವನು ಹೇಳುತ್ತಾನೆ ಎಂದನು.


ಆಗ ಇಸ್ರಾಯೇಲ್ಯರ ಅರಸನು ತನ್ನ ರಾಜ್ಯದಲ್ಲಿದ್ದ ಸುಮಾರು ನಾನೂರು ಮಂದಿ ಪ್ರವಾದಿಗಳನ್ನು ಕೂಡಿಸಿ ಅವರನ್ನು - ನಾನು ರಾಮೋತ್‍ಗಿಲ್ಯಾದಿನ ಮೇಲೆ ಯುದ್ಧಕ್ಕಾಗಿ ಹೋಗಬಹುದೋ ಬಾರದೋ ಎಂದು ಕೇಳಲು ಅವರು - ಹೋಗಬಹುದು, ಕರ್ತನು ಅದನ್ನು ಅರಸನ ಕೈಗೆ ಒಪ್ಪಿಸುವನು ಅಂದರು.


ಆಗ ಮುದುಕನು - ನಾನೂ ನಿನ್ನಂತೆ ಪ್ರವಾದಿಯಾಗಿದ್ದೇನೆ; ಒಬ್ಬ ದೇವದೂತನು ನನಗೆ ಕಾಣಿಸಿಕೊಂಡು ನಿನ್ನನ್ನು ಕರಕೊಂಡು ಬರಬೇಕೆಂದೂ ನಿನಗೆ ಅನ್ನಪಾನಗಳನ್ನು ಕೊಡಬೇಕೆಂದೂ ಯೆಹೋವನ ಹೆಸರಿನಲ್ಲಿ ಆಜ್ಞಾಪಿಸಿದ್ದಾನೆ ಎಂದು ಹೇಳಿದನು; ಆದರೆ ಈ ಮಾತು ಸುಳ್ಳು.


ನಾನು ಮಾತಾಡದೆಹೋದರೂ ಯೆಹೋವನು ಇಂತೆನ್ನುತ್ತಾನೆ ಎಂದು ನುಡಿಯುತ್ತಿರುವ ನಿಮಗೆ ಆದ ದರ್ಶನವು ವಿುಥ್ಯ, ನೀವು ಹೇಳಿದ ಕಣಿಯು ಸುಳ್ಳು.


ಆಗ ಪ್ರವಾದಿಯಾದ ಯೆರೆಮೀಯನು ಪ್ರವಾದಿಯಾದ ಹನನ್ಯನಿಗೆ - ಹನನ್ಯನೇ, ಕೇಳು, ಯೆಹೋವನು ನಿನ್ನನ್ನು ಕಳುಹಿಸಲಿಲ್ಲ; ಈ ಜನರು ಸುಳ್ಳನ್ನು ನಂಬುವಂತೆ ಮಾಡುತ್ತೀ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು