Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 28:16 - ಕನ್ನಡ ಸತ್ಯವೇದವು J.V. (BSI)

16 ಆದಕಾರಣ ಯೆಹೋವನು ಇಂತೆನ್ನುತ್ತಾನೆ - ಇಗೋ, ನಾನು ನಿನ್ನನ್ನು ಭೂವಿುಯ ಮೇಲಿಂದ ತೊಲಗಿಸುವೆನು; ನೀನು ಯೆಹೋವನಾದ ನನಗೆ ವಿರುದ್ಧವಾಗಿ ದ್ರೋಹದ ಮಾತನ್ನು ಆಡಿದ್ದರಿಂದ ಇದೇ ವರುಷ ಸಾಯುವಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆದಕಾರಣ ಯೆಹೋವನು ಇಂತೆನ್ನುತ್ತಾನೆ, ಇಗೋ, ನಾನು ನಿನ್ನನ್ನು ಭೂಮಿಯ ಮೇಲಿಂದ ತೊಲಗಿಸುವೆನು; ನೀನು ಯೆಹೋವನಾದ ನನ್ನ ವಿರುದ್ಧವಾಗಿ ದ್ರೋಹದ ಮಾತನ್ನು ಆಡಿದ್ದರಿಂದ ಇದೇ ವರ್ಷ ಸಾಯುವಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಆದಕಾರಣ ಸರ್ವೇಶ್ವರ ಇಂತೆನ್ನುತ್ತಾರೆ: ಇಗೋ, ನಾನು ನಿನ್ನನ್ನು ಈ ಜಗತ್ತಿನಿಂದ ತೊಲಗಿಸುವೆನು. ನೀನು ಸರ್ವೇಶ್ವರನಾದ ನನಗೆ ವಿರುದ್ಧವಾಗಿ ದ್ರೋಹದ ಮಾತುಗಳನ್ನು ಆಡಿದ್ದರಿಂದ ಇದೇ ವರ್ಷ ಸಾಯುವೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಅದಕ್ಕಾಗಿ ಯೆಹೋವನು ಹೀಗೆ ಹೇಳುತ್ತಾನೆ: ‘ಹನನ್ಯನೇ, ನಾನು ನಿನ್ನನ್ನು ಶೀಘ್ರದಲ್ಲಿ ಈ ಜಗತ್ತಿನಿಂದ ತೆಗೆದುಬಿಡುತ್ತೇನೆ. ನೀನು ಈ ವರ್ಷ ಮರಣಹೊಂದುವೆ. ಏಕೆಂದರೆ ನೀನು ಜನರನ್ನು ಯೆಹೋವನ ವಿರುದ್ಧ ತಿರುಗುವಂತೆ ಮಾಡಿದೆ.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆದ್ದರಿಂದ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ಇಗೋ, ನಾನು ನಿನ್ನನ್ನು ಭೂಮಿಯ ಮೇಲಿನಿಂದ ಬಿಸಾಡಿಬಿಡುತ್ತೇನೆ. ಈ ವರ್ಷವೇ ನೀನು ಸಾಯುವೆ. ಏಕೆಂದರೆ ನೀನು ಯೆಹೋವ ದೇವರಿಗೆ ವಿರೋಧವಾಗಿ ದ್ರೋಹ ಬಗೆದಿದ್ದೀ,’ ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 28:16
16 ತಿಳಿವುಗಳ ಹೋಲಿಕೆ  

ಇಗೋ, ನಾನು ನೆಹೆಲಾಮ್ಯನಾದ ಶೆಮಾಯನನ್ನೂ ಅವನ ಸಂತತಿಯವರನ್ನೂ ದಂಡಿಸುವೆನು; ಅವನು ಯೆಹೋವನಾದ ನನಗೆ ವಿರುದ್ಧವಾಗಿ ದ್ರೋಹದ ಮಾತನ್ನು ಆಡಿದ್ದರಿಂದ ಈ ಜನರ ಮಧ್ಯದಲ್ಲಿ ವಾಸಿಸಲು ಅವನಿಗೆ ಯಾವ ಸಂತಾನವೂ ಇರದು; ನಾನು ನನ್ನ ಜನರಿಗೆ ಉಂಟುಮಾಡಬೇಕೆಂದಿರುವ ಮೇಲನ್ನು ಅವನು ನೋಡದೆ ಹೋಗುವನು; ಇದು ಯೆಹೋವನ ನುಡಿ.


ಏಳುದಿನಗಳ ನಂತರ ನಾನು ಭೂವಿುಯ ಮೇಲೆ ನಾಲ್ವತ್ತು ದಿವಸ ಹಗಲಿರುಳು ಮಳೆಯನ್ನು ಸುರಿಸಿ ನನ್ನಿಂದಾದ ಜೀವರಾಶಿಗಳನ್ನೆಲ್ಲಾ ಭೂವಿುಯ ಮೇಲಿನಿಂದ ಅಳಿಸಿಬಿಡುತ್ತೇನೆ ಎಂದು ಹೇಳಿದನು.


ಪಷ್ಹೂರನೇ, ನೀನೋ ನಿನ್ನ ಮನೆಯವರೆಲ್ಲರೊಡನೆ ಸೆರೆಗೆ ಹೋಗುವಿ; ನೀನೂ ನಿನ್ನ ವಿುಥ್ಯಾ ಪ್ರವಾದನೆಯನ್ನು ಕೇಳಿದ ನಿನ್ನ ಸಕಲ ಸ್ನೇಹಿತರೂ ಬಾಬೆಲಿಗೆ ಸೇರಿ ಅಲ್ಲೇ ಸತ್ತು ಮಣ್ಣಾಗುವಿರಿ ಎಂದು ನುಡಿದಿದ್ದಾನೆ.


ಈ ಕಾರಣದಿಂದ ಯಾರೊಬ್ಬಾಮನ ಕುಟುಂಬದವರು ಪಾಪಿಗಳಾಗಿ ಭೂಲೋಕದಿಂದ ತೆಗೆದುಹಾಕಲ್ಪಟ್ಟು ನಿರ್ನಾಮವಾದರು.


ನಿಮ್ಮ ಮಧ್ಯದಲ್ಲಿರುವ ನಿಮ್ಮ ದೇವರಾದ ಯೆಹೋವನು ತನಗೆ ಸಲ್ಲಬೇಕಾದ ಗೌರವವನ್ನು ಇನ್ನೊಬ್ಬನಿಗೆ ಸಲ್ಲಗೊಡಿಸದ ದೇವರು; ಆತನು ನಿಮ್ಮ ಮೇಲೆ ಕೋಪಗೊಂಡರೆ ನಿಮ್ಮನ್ನು ಭೂವಿುಯ ಮೇಲೆ ಉಳಿಯದಂತೆ ನಾಶಮಾಡಾನು.


ಐಗುಪ್ತ್ಯರು ನಿನ್ನ ವಿಷಯದಲ್ಲಿ - ಯೆಹೋವನು ಕೇಡುಮಾಡಬೇಕೆಂಬ ಅಭಿಪ್ರಾಯದಿಂದಲೇ ಇಸ್ರಾಯೇಲ್ಯರನ್ನು ಇಲ್ಲಿಂದ ಕರಕೊಂಡು ಹೋದನಲ್ಲಾ; ಅವರನ್ನು ಬೆಟ್ಟಗಳಲ್ಲಿ ಸಾಯಿಸಿ ಭೂವಿುಯಲ್ಲಿ ಉಳಿಯದಂತೆ ನಿರ್ಮೂಲ ಮಾಡುವದಕ್ಕೇನೇ ಅವರನ್ನು ಕರಕೊಂಡು ಹೋದನೆಂದು ಹೇಳುವದಕ್ಕೆ ಆಸ್ಪದವಾಗಬೇಕೇ? ನೀನು ರೋಷಾಗ್ನಿಯನ್ನು ಬಿಟ್ಟು ನಿನ್ನ ಪ್ರಜೆಗಳಿಗೆ ಕೆಡುಕನ್ನು ಮಾಡದೆ ಮನಸ್ಸನ್ನು ಬೇರೆ ಮಾಡಿಕೋ.


ಆಹಾ, ಕರ್ತನಾದ ಯೆಹೋವನೆಂಬ ನಾನು ಪಾಪಮಯರಾಜ್ಯದ ಮೇಲೆ ದೃಷ್ಟಿಯಿಟ್ಟಿದ್ದೇನೆ; ಅದನ್ನು ಭೂಮಂಡಲದೊಳಗಿಂದ ನಾಶಮಾಡುವೆನು; ಆದರೆ ಯಾಕೋಬಿನ ಮನೆತನವನ್ನು ಸಂಪೂರ್ಣವಾಗಿ ನಾಶಮಾಡೆನು. ಇದು ಯೆಹೋವನ ನುಡಿ.


ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಈ ಸ್ಥಳದಿಂದ ತೆಗೆದು ಬಾಬೆಲಿಗೆ ಒಯ್ದ ಯೆಹೋವನ ಆಲಯದ ಸಕಲ ಉಪಕರಣಗಳನ್ನು ಎರಡು ವರುಷಗಳೊಳಗಾಗಿ ನಾನು ಪುನಃ ಈ ಸ್ಥಳಕ್ಕೆ ಸೇರಿಸುವೆನು.


ಏಳನೆಯ ದಿನದಲ್ಲಿ ನೀವು ನಿತ್ಯಸರ್ವಾಂಗಹೋಮವನ್ನೂ ಅದಕ್ಕೆ ನೇಮಕವಾದ ಧಾನ್ಯದ್ರವ್ಯಪಾನದ್ರವ್ಯಗಳನ್ನೂ ಮಾತ್ರವಲ್ಲದೆ ಏಳು ಹೋರಿ, ಎರಡು ಟಗರು, ಹದಿನಾಲ್ಕು ಪೂರ್ಣಾಂಗವಾದ ವರುಷದ ಕುರಿ ಇವುಗಳನ್ನೂ ;


ಅದರಂತೆ ಪ್ರವಾದಿಯಾದ ಹನನ್ಯನು ಅದೇ ವರುಷ ಏಳನೆಯ ತಿಂಗಳಲ್ಲಿ ಸತ್ತನು.


ಯೆಹೋವನು ಇಂತೆನ್ನುತ್ತಾನೆ - ನಿನ್ನ ಹೆಂಡತಿಯು ಈ ಪಟ್ಟಣದಲ್ಲಿ ಸೂಳೆಯಾಗುವಳು, ನಿನ್ನ ಗಂಡುಹೆಣ್ಣುಮಕ್ಕಳು ಖಡ್ಗದಿಂದ ಹತರಾಗುವರು, ನಿನ್ನ ದೇಶವನ್ನು [ಶತ್ರುಗಳು] ನೂಲೆಳೆದು ಭಾಗಿಸಿಕೊಳ್ಳುವರು, ನೀನಂತು ಅಪವಿತ್ರ ದೇಶದಲ್ಲಿ ಸಾಯುವಿ, ಇಸ್ರಾಯೇಲು ಸ್ವದೇಶದಿಂದ ಸೆರೆಯಾಗಿ ಒಯ್ಯಲ್ಪಡುವದು ಖಂಡಿತ ಎಂಬದಾಗಿ ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು