Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 28:9 - ಕನ್ನಡ ಸತ್ಯವೇದವು J.V. (BSI)

9 ಹಿತ ಸಮಾಚಾರವನ್ನು ಸಾರುವ ಪ್ರವಾದಿಯೋ ಯೆಹೋವನಿಂದ ನಿಜವಾಗಿ ಕಳುಹಿಸಲ್ಪಟ್ಟವನೆಂದು ಅವನ ಮಾತು ಕೈಗೂಡಿದ ಮೇಲೇ ತಿಳಿಯತಕ್ಕದ್ದು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಹಿತ ಸಮಾಚಾರವನ್ನು ಸಾರುವ ಪ್ರವಾದಿಯೋ ಯೆಹೋವನಿಂದ ನಿಜವಾಗಿ ಕಳುಹಿಸಲ್ಪಟ್ಟವನೆಂದು ಅವನ ಮಾತು ಕೈಗೂಡಿದ ಮೇಲೇ ತಿಳಿಯತಕ್ಕದ್ದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಹಿತಸಮಾಚಾರವನ್ನು ಸಾರುವ ಪ್ರವಾದಿಯೇ ಸರ್ವೇಶ್ವರನಿಂದ ನಿಜವಾಗಿ ಕಳುಹಿಸಲ್ಪಟ್ಟವನೆಂದು ಅವನ ಮಾತು ಕೈಗೂಡಿದ ಮೇಲೆ ತಿಳಿಯತಕ್ಕದ್ದು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆದರೆ ನಾವು ನೆಮ್ಮದಿಯಿಂದ ಇರುವೆವು ಎಂದು ಪ್ರವಾದಿಸುವ ಪ್ರವಾದಿಯು ನಿಜವಾಗಿಯೂ ಯೆಹೋವನಿಂದ ಕಳುಹಿಸಲ್ಪಟ್ಟಿರುವನೇ ಎಂಬುದನ್ನು ನಾವು ಪರೀಕ್ಷಿಸಬೇಕು. ಆ ಪ್ರವಾದಿಯ ಸಂದೇಶವು ಸತ್ಯವಾಗಿ ಪರಿಣಮಿಸಿದರೆ ಅವನು ನಿಜವಾಗಿ ಯೆಹೋವನಿಂದ ಕಳುಹಿಸಲ್ಪಟ್ಟವನೆಂದು ಜನರು ತಿಳಿದುಕೊಳ್ಳಬಹುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಸಮಾಧಾನವನ್ನು ಕುರಿತು ಪ್ರವಾದಿಸುವ ಪ್ರವಾದಿಯಾದರೆ, ಆ ಪ್ರವಾದಿಯ ವಾಕ್ಯವು ಉಂಟಾಗುವಾಗ, ಅವನು ಯೆಹೋವ ದೇವರಿಂದ ನಿಜವಾಗಿ ಕಳುಹಿಸಲಾದ ಪ್ರವಾದಿ, ಎಂದು ತಿಳಿಯತಕ್ಕದ್ದು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 28:9
9 ತಿಳಿವುಗಳ ಹೋಲಿಕೆ  

ಪ್ರವಾದಿಯು ಯೆಹೋವನ ಮಾತೆಂದು ಹೇಳಿ ಮುಂತಿಳಿಸಿದ ಸಂಗತಿ ನಡೆಯದೆ ಹೋದರೆ ಅವನ ಮಾತು ಯೆಹೋವನದಲ್ಲವೆಂದು ನೀವು ತಿಳಿದುಕೊಳ್ಳಬೇಕು. ಅವನು ಅಧಿಕಾರವಿಲ್ಲದೆ ಮಾತಾಡಿದವನು; ಅವನಿಗೆ ಹೆದರಬಾರದು.


ಮೇಲಾಗದಿದ್ದರೂ ಮೇಲು ಮೇಲು ಎಂದು ಹೇಳಿ ನನ್ನ ಜನರ ಗಾಯವನ್ನು ಮೇಲೆ ಮೇಲೆ ವಾಸಿಮಾಡಿದ್ದಾರೆ.


ಅದಕ್ಕೆ ನಾನು - ಅಯ್ಯೋ, ಕರ್ತನಾದ ಯೆಹೋವನೇ, ಇಗೋ ಪ್ರವಾದಿಗಳು ಈ ಜನರಿಗೆ - ಖಡ್ಗವು ನಿಮ್ಮ ಕಣ್ಣಿಗೆ ಕಾಣದು, ಕ್ಷಾಮವು ನಿಮಗೆ ಸಂಭವಿಸದು; ಯೆಹೋವನು ಈ ಸ್ಥಳದಲ್ಲಿ ಸ್ಥಿರಸಮಾಧಾನವನ್ನು ನಿಮಗೆ ಕೊಡುವನು ಎಂದು ನುಡಿಯುತ್ತಾರೆ ಎಂಬದಾಗಿ ಹೇಳಿದೆನು.


ಮೇಲಾಗದಿದ್ದರೂ ಮೇಲು ಮೇಲು ಎಂದು ಹೇಳಿ ನನ್ನ ಪ್ರಜೆಯೆಂಬಾಕೆಯ ಗಾಯವನ್ನು ಮೇಲೆ ಮೇಲೆ ವಾಸಿಮಾಡಿದ್ದಾರೆ.


ಆಗ ನಾನು - ಅಯ್ಯೋ, ಕರ್ತನಾದ ಯೆಹೋವನೇ, ನೀನು ಈ ಜನರಿಗೂ ಯೆರೂಸಲೇವಿುಗೂ ನಿಮಗೆ ಸಮಾಧಾನವಾಗುವದೆಂದು ಹೇಳಿ ನಿಶ್ಚಯವಾಗಿ ಇವರನ್ನು ಬಹಳ ಮೋಸಗೊಳಿಸಿದ್ದೀ; ಖಡ್ಗವು ಪ್ರಾಣದ ಮಟ್ಟಿಗೂ ಇಳಿಯುತ್ತದಲ್ಲಾ ಅಂದೆನು.


ನೀನು ಮುಂತಿಳಿಸಿದ್ದು ಸಂಭವಿಸುವಾಗ [ಆಹಾ, ಸಂಭವಿಸಿತು] ತಮ್ಮ ಮಧ್ಯದಲ್ಲಿದ್ದವನು ಪ್ರವಾದಿಯೇ ಎಂದು ಅವರಿಗೆ ನಿಶ್ಚಿತವಾಗುವದು.


ಪ್ರವಾದಿಯು ಹೇಳಿದ ಮಾತು ಯೆಹೋವನ ಮಾತಲ್ಲವೆಂದು ತಿಳಿದುಕೊಳ್ಳುವದು ಹೇಗೆ ಅಂದುಕೊಳ್ಳುತ್ತೀರೋ?


ನನ್ನ ಸೇವಕನ ಮಾತನ್ನು ಸ್ಥಾಪಿಸಿ ನನ್ನ ದೂತರ ಮಂತ್ರಾಲೋಚನೆಯನ್ನು ನೆರವೇರಿಸುವವನಾಗಿದ್ದೇನೆ; ಯೆರೂಸಲೇಮು ಜನನಿವಾಸವಾಗುವದು, ಯೆಹೂದದ ಪಟ್ಟಣಗಳು ತಿರಿಗಿ ಕಟ್ಟಲ್ಪಡುವವು, ಅಲ್ಲಿನ ಹಾಳನ್ನು ಹಸನುಮಾಡುವೆನು ಎಂದು ನಾನು ಮುಂತಿಳಿಸಿ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು