ಯೆರೆಮೀಯ 29:1 - ಕನ್ನಡ ಸತ್ಯವೇದವು J.V. (BSI)1 ಅರಸನಾದ ಯೆಕೊನ್ಯನು, ರಾಜಮಾತೆಯು, ಕಂಚುಕಿಗಳು, ಯೆಹೂದದ ಮತ್ತು ಯೆರೂಸಲೇವಿುನ ಸರದಾರರು, ಶಿಲ್ಪಿಗಳು, ಕಮ್ಮಾರರು, ಇವರು ಯೆರೂಸಲೇವಿುನಿಂದ ತೊಲಗಿದ ಮೇಲೆ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಪ್ರವಾದಿಯಾದ ಯೆರೆಮೀಯನು ಸೆರೆಹೋಗಿದ್ದ ಹಿರಿಯರಲ್ಲಿ ಉಳಿದವರಿಗೂ, ಯಾಜಕರಿಗೂ, ಪ್ರವಾದಿಗಳಿಗೂ ಅಂತು ನೆಬೂಕದ್ನೆಚ್ಚರನು ಯೆರೂಸಲೇಮಿನಿಂದ ಬಾಬಿಲೋನಿಗೆ ಸೆರೆ ಒಯ್ದಿದ್ದ ಸಕಲ ಜನರಿಗೂ ಯೆರೂಸಲೇಮಿನಿಂದ ಬರೆದು ರವಾನಿಸಿದ ಕಾಗದದ ಮಾತುಗಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಜೆರುಸಲೇಮಿನಿಂದ ಬಾಬಿಲೋನಿಗೆ ನೆಬೂಕದ್ನೆಚ್ಚರನು ಸೆರೆ ಒಯ್ದಿದ್ದ ಹಿರಿಯರಿಗೂ ಯಾಜಕರಿಗೂ ಪ್ರವಾದಿಗಳಿಗೂ ಸಕಲ ಜನರಿಗೂ ಪ್ರವಾದಿ ಯೆರೆಮೀಯನು ಜೆರುಸಲೇಮಿನಿಂದ ಒಂದು ಪತ್ರವನ್ನು ಬರೆದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಯೆರೆಮೀಯನು ಬಾಬಿಲೋನಿನಲ್ಲಿದ್ದ ಯೆಹೂದ್ಯ ಸೆರೆಯಾಳುಗಳಿಗೆ, ಅಂದರೆ ಹಿರಿಯನಾಯಕರಿಗೆ, ಯಾಜಕರಿಗೆ, ಪ್ರವಾದಿಗಳಿಗೆ ಮತ್ತು ಇನ್ನುಳಿದ ಸಮಸ್ತ ಜನರಿಗೆ ಪತ್ರವನ್ನು ಕಳುಹಿಸಿದನು. ಇವರನ್ನು ನೆಬೂಕದ್ನೆಚ್ಚರನು ಜೆರುಸಲೇಮಿನಿಂದ ಬಾಬಿಲೋನಿಗೆ ಸೆರೆಯಾಳುಗಳಾಗಿ ಕೊಂಡೊಯ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಪ್ರವಾದಿಯಾದ ಯೆರೆಮೀಯನು ಸೆರೆಯಲ್ಲಿರುವ ಹಿರಿಯರಲ್ಲಿ ಉಳಿದವರಿಗೂ ಯಾಜಕರಿಗೂ ಪ್ರವಾದಿಗಳಿಗೂ ನೆಬೂಕದ್ನೆಚ್ಚರನು ಯೆರೂಸಲೇಮಿನಿಂದ ಬಾಬಿಲೋನಿಗೆ ಒಯ್ದ ಜನರೆಲ್ಲರಿಗೂ ಅಧ್ಯಾಯವನ್ನು ನೋಡಿ |