Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 29:10 - ಕನ್ನಡ ಸತ್ಯವೇದವು J.V. (BSI)

10 ಯೆಹೋವನು ಇಂತೆನ್ನುತ್ತಾನೆ - ಬಾಬೆಲ್ ರಾಜ್ಯವು ಎಪ್ಪತ್ತು ವರುಷ ಪ್ರಬಲಿಸಿದ ಮೇಲೆ ನಾನು ನಿಮ್ಮನ್ನು ಕಟಾಕ್ಷಿಸಿ ಈ ಸ್ಥಳಕ್ಕೆ ತಿರಿಗಿ ಬರಮಾಡುವೆನೆಂಬ ನನ್ನ ಶುಭವಾಕ್ಯವನ್ನು ನಿಮಗಾಗಿ ನೆರವೇರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಯೆಹೋವನು ಇಂತೆನ್ನುತ್ತಾನೆ, “ಬಾಬೆಲ್ ರಾಜ್ಯವು ಎಪ್ಪತ್ತು ವರ್ಷ ಪ್ರಬಲಿಸಿದ ಮೇಲೆ ನಾನು ನಿಮ್ಮನ್ನು ಕಟಾಕ್ಷಿಸಿ, ಈ ಸ್ಥಳಕ್ಕೆ ತಿರುಗಿ ಬರಮಾಡುವೆನೆಂಬ ನನ್ನ ಶುಭವಾಕ್ಯವನ್ನು ನಿಮಗಾಗಿ ನೆರವೇರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 “ಸರ್ವೇಶ್ವರ ಹೀಗೆನ್ನುತ್ತಾರೆ: ‘ಬಾಬಿಲೋನಿನ ರಾಜ್ಯ ಎಪ್ಪತ್ತು ವರ್ಷ ಪ್ರಬಲಿಸಿದ ಮೇಲೆ ನಾನು ನಿಮ್ಮನ್ನು ಸಂಧಿಸಿ ಈ ಸ್ಥಳಕ್ಕೆ ಮರಳಿ ಬರಮಾಡುವೆನು. ಈ ಶುಭವಾಕ್ಯವನ್ನು ನಿಮ್ಮ ಮೇಲ್ಮೆಗಾಗಿ ನೆರವೇರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಯೆಹೋವನು ಹೀಗೆನ್ನುತ್ತಾನೆ: “ಬಾಬಿಲೋನ್ ಎಪ್ಪತ್ತು ವರ್ಷಗಳವರೆಗೆ ಬಲಿಷ್ಠವಾಗಿರುವುದು. ಅನಂತರ ನಾನು ಬಾಬಿಲೋನಿನಲ್ಲಿ ವಾಸಮಾಡುತ್ತಿರುವ ನಿಮ್ಮ ಬಳಿಗೆ ಬಂದು ನನ್ನ ವಾಗ್ದಾನದಂತೆ ನಿಮ್ಮನ್ನು ಜೆರುಸಲೇಮಿಗೆ ಮತ್ತೆ ಕರೆದುಕೊಂಡು ಬರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಯೆಹೋವ ದೇವರು ಹೀಗೆ ಹೇಳುತ್ತಾರೆ: “ಬಾಬಿಲೋನಿನಲ್ಲಿ ಎಪ್ಪತ್ತು ವರ್ಷ ತುಂಬಿದ ಮೇಲೆ ನಿಮ್ಮನ್ನು ಪರಾಮರಿಸುವೆನು. ನನ್ನ ಒಳ್ಳೆಯ ವಾಕ್ಯವನ್ನು ನಿಮ್ಮ ವಿಷಯದಲ್ಲಿ ಸ್ಥಾಪಿಸಿ, ನಿಮ್ಮನ್ನು ತಿರುಗಿ ಈ ಸ್ಥಳಕ್ಕೆ ಬರಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 29:10
22 ತಿಳಿವುಗಳ ಹೋಲಿಕೆ  

ನೀನು ಯಾಜಕರಿಗೂ ದೇಶದ ಸಕಲ ಜನರಿಗೂ ಹೀಗೆ ನುಡಿ - ನೀವು ಈ ಎಪ್ಪತ್ತು ವರುಷಗಳಿಂದಲೂ ಐದನೆಯ ಮತ್ತು ಏಳನೆಯ ತಿಂಗಳುಗಳಲ್ಲಿ ಉಪವಾಸಮಾಡಿ ಗೋಳಾಡುತ್ತಿದ್ದಾಗ ಆ ನಿಮ್ಮ ಉಪವಾಸವು ನನಗಾಗಿಯೇ ಮಾಡಿದ್ದೋ?


ದಾನಿಯೇಲನಾದ ನಾನು ಶಾಸ್ತ್ರಗಳನ್ನು ಪರೀಕ್ಷಿಸಿ ಯೆಹೋವನು ಪ್ರವಾದಿಯಾದ ಯೆರೆಮೀಯನಿಗೆ ದಯಪಾಲಿಸಿದ ವಾಕ್ಯಾನುಸಾರ ಯೆರೂಸಲೇಮು ಹಾಳುಬಿದ್ದಿರಬೇಕಾದ ಪೂರ್ಣಕಾಲದ ವರುಷಗಳ ಸಂಖ್ಯೆ ಎಪ್ಪತ್ತೆಂದು ತಿಳಿದು


ಅವು ಬಾಬೆಲಿಗೆ ಒಯ್ಯಲ್ಪಟ್ಟು ನಾನು ಅವುಗಳನ್ನು ಉದ್ಧರಿಸುವ ದಿನದ ತನಕ ಅಲ್ಲೇ ಇರುವವು; ಆಗ ನಾನು ಅವುಗಳನ್ನು ಪುನಃ ತಂದು ಈ ಸ್ಥಳಕ್ಕೆ ಸೇರಿಸುವೆನು. ಇದು ಯೆಹೋವನ ನುಡಿ.


ಎಪ್ಪತ್ತು ವರುಷಗಳ ತರುವಾಯ ನಾನು ಬಾಬೆಲಿನ ಅರಸನನ್ನೂ ಕಸ್ದೀಯರ ದೇಶವನ್ನೂ ಆ ಜನಾಂಗದವರನ್ನೂ ಅವರ ದ್ರೋಹಕ್ಕಾಗಿ ದಂಡಿಸಿ ಆ ದೇಶವನ್ನು ನಿತ್ಯನಾಶನಕ್ಕೆ ಗುರಿಮಾಡುವೆನು. ಇದು ಯೆಹೋವನ ನುಡಿ.


ಆ ಕರಾವಳಿಯು ಯೆಹೂದವಂಶಶೇಷದವರ ಪಾಲಾಗುವದು; ದನಕುರಿಗಳನ್ನು ಅಲ್ಲೇ ಮೇಯಿಸುವರು; ಸಂಜೆಗೆ ಅಷ್ಕೆಲೋನಿನ ಮನೆಗಳಲ್ಲಿ ಮಲಗಿಕೊಳ್ಳುವರು; ಅವರ ದೇವರಾದ ಯೆಹೋವನು ಅವರನ್ನು ಪರಾಂಬರಿಸಿ ಅವರ ದುರವಸ್ಥೆಯನ್ನು ತಪ್ಪಿಸುವನು.


ಅವನ ದೇಶಕ್ಕೆ ಕಾಲವು ಹತ್ತರಿಸುವ ತನಕ ಸಕಲ ಜನಾಂಗಗಳು ಅವನಿಗೂ ಅವನ ಮಗನಿಗೂ ಮೊಮ್ಮಗನಿಗೂ ಅಡಿಯಾಳಾಗಿ ಬಿದ್ದಿರುವವು; ಆಮೇಲೆ ಅನೇಕ ಜನಾಂಗಗಳೂ ಮಹಾರಾಜರೂ ಅವನನ್ನೇ ಅಡಿಯಾಳನ್ನಾಗಿ ಮಾಡಿಕೊಳ್ಳುವರು.


ಈ ಪ್ರಕಾರ ಯೆಹೋವನು ಯೆರೆಮೀಯನ ಮುಖಾಂತರ ಹೇಳಿಸಿದ ಮಾತು ನೆರವೇರಿ ದೇಶವು ತನ್ನ ಸಬ್ಬತ್‍ಕಾಲವನ್ನು ಅನುಭವಿಸುವದಕ್ಕೆ ಮಾರ್ಗವಾಯಿತು. ದೇಶವು ಎಪ್ಪತ್ತು ವರುಷ ಹಾಳುಬಿದ್ದು ಆ ಕಾಲದಲ್ಲೆಲ್ಲಾ ವಿಶ್ರಾಂತಿಯನ್ನು ಅನುಭವಿಸುತ್ತಿತ್ತು.


ಯೆಹೋವನು ತನ್ನ ಜನರನ್ನು ಕಟಾಕ್ಷಿಸಿ ಅವರಿಗೆ ಆಹಾರವನ್ನು ಅನುಗ್ರಹಿಸಿದ್ದಾನೆಂಬ ವರ್ತಮಾನವನ್ನು ಕೇಳಿದ ನೊವೊವಿುಯು ಮೋವಾಬ್ ದೇಶದಿಂದ ಸ್ವದೇಶಕ್ಕೆ ಹೋಗಬೇಕೆಂದು ಸೊಸೆಯರೊಡನೆ ಹೊರಟಳು.


ಪಾರಸಿಯ ಅರಸನಾದ ಕೋರೆಷನ ಮೊದಲನೆಯ ವರುಷದಲ್ಲಿ ಯೆಹೋವನು ತಾನು ಯೆರೆಮೀಯನ ಮುಖಾಂತರ ಹೇಳಿಸಿದ ವಾಕ್ಯವನ್ನು ನೆರವೇರಿಸುವದಕ್ಕಾಗಿ ಆ ಪಾರಸಿಯ ರಾಜನಾದ ಕೋರೆಷನ ಮನಸ್ಸನ್ನು ಪ್ರೇರಿಸಿದ್ದರಿಂದ ಅವನು ತನ್ನ ರಾಜ್ಯದಲ್ಲೆಲ್ಲಾ ಡಂಗುರದಿಂದಲೂ ಪತ್ರಗಳಿಂದಲೂ -


ಪಾರಸಿಯ ಅರಸನಾದ ಕೋರೆಷನ ಮೊದಲನೆಯ ವರುಷದಲ್ಲಿ ಯೆಹೋವನು ತಾನು ಯೆರೆಮೀಯನ ಮುಖಾಂತರ ಹೇಳಿಸಿದ ವಾಕ್ಯವನ್ನು ನೆರವೇರಿಸುವದಕ್ಕಾಗಿ ಆ ಪಾರಸಿಯ ರಾಜನಾದ ಕೋರೆಷನ ಮನಸ್ಸನ್ನು ಪ್ರೇರಿಸಿದ್ದರಿಂದ ಅವನು ತನ್ನ ರಾಜ್ಯದಲ್ಲೆಲ್ಲಾ ಡಂಗುರದಿಂದಲೂ ಪತ್ರಗಳಿಂದಲೂ -


ಈ ದೇಶವೆಲ್ಲಾ ಹಾಳಾಗಿ ಬೆರಗಿಗೆ ಈಡಾಗುವದು; ಮತ್ತು ಈ ಜನಾಂಗಗಳು ಎಪ್ಪತ್ತು ವರುಷ ಬಾಬೆಲಿನ ಅರಸನ ಅಡಿಯಾಳಾಗಿ ಬಿದ್ದಿರುವವು.


ಇವನು - ಪರದೇಶ ವಾಸವು ನಿಮಗೆ ದೀರ್ಘವಾಗುವದು, ನೀವು ಮನೆಗಳನ್ನು ಕಟ್ಟಿಕೊಂಡು ಅವುಗಳಲ್ಲಿ ವಾಸಿಸಿರಿ, ತೋಟಗಳನ್ನು ಮಾಡಿಕೊಂಡು ಫಲವನ್ನು ಅನುಭವಿಸಿರಿ ಎಂದು ಬಾಬೆಲಿನಲ್ಲಿರುವ ನಮಗೆ ಹೇಳಿ ಕಳುಹಿಸಿದ್ದಾನೆ ನೋಡು ಎಂಬದಾಗಿ ಬರೆದ ಕಾರಣ [ನಾನು ನಿನ್ನನ್ನು ದಂಡಿಸುವದು ಖಂಡಿತ].


ಇಗೋ, ನಾನು ನೆಹೆಲಾಮ್ಯನಾದ ಶೆಮಾಯನನ್ನೂ ಅವನ ಸಂತತಿಯವರನ್ನೂ ದಂಡಿಸುವೆನು; ಅವನು ಯೆಹೋವನಾದ ನನಗೆ ವಿರುದ್ಧವಾಗಿ ದ್ರೋಹದ ಮಾತನ್ನು ಆಡಿದ್ದರಿಂದ ಈ ಜನರ ಮಧ್ಯದಲ್ಲಿ ವಾಸಿಸಲು ಅವನಿಗೆ ಯಾವ ಸಂತಾನವೂ ಇರದು; ನಾನು ನನ್ನ ಜನರಿಗೆ ಉಂಟುಮಾಡಬೇಕೆಂದಿರುವ ಮೇಲನ್ನು ಅವನು ನೋಡದೆ ಹೋಗುವನು; ಇದು ಯೆಹೋವನ ನುಡಿ.


ಇಗೋ ನಾನು ನನ್ನ ಜನರಾದ ಇಸ್ರಾಯೇಲ್ಯರನ್ನೂ ಯೆಹೂದ್ಯರನ್ನೂ ಅವರ ದುರವಸ್ಥೆಯಿಂದ ತಪ್ಪಿಸುವ ದಿನಗಳು ಬರುವವು. ಆಗ ನಾನು ಅವರನ್ನು ಅವರ ಪಿತೃಗಳಿಗೆ ಅನುಗ್ರಹಿಸಿದ ದೇಶಕ್ಕೆ ಪುನಃ ಬರಮಾಡುವೆನು. ಅವರು ಅದನ್ನು ಅನುಭವಿಸುವರು. ಇದು ಯೆಹೋವನ ನುಡಿ.


ಯೆಹೋವನು ಇಂತೆನ್ನುತ್ತಾನೆ - ಆಹಾ, ನಾನು ಇಸ್ರಾಯೇಲ್ ಯೆಹೂದ ವಂಶಗಳ ವಿಷಯವಾಗಿ ನುಡಿದಿರುವ ಶುಭವಾಕ್ಯವನ್ನು ನೆರವೇರಿಸುವ ದಿನಗಳು ಬರುವವು.


ಇದನ್ನು ಕೇಳಿ ಯೆಹೋವನ ದೂತನು - ಸೇನಾಧೀಶ್ವರ ಯೆಹೋವನೇ, ನೀನು ಎಪ್ಪತ್ತು ವರುಷಗಳಿಂದ ರೋಷಗೊಂಡಿರುವ ಯೆರೂಸಲೇಮು ಮೊದಲಾದ ಯೆಹೂದದ ಪಟ್ಟಣಗಳನ್ನು ಎಷ್ಟು ಕಾಲ ಕರುಣಿಸದೆ ಇರುವಿ ಎಂದು ಬಿನ್ನವಿಸಲು


ಪಾರಸಿಯ ರಾಜನಾದ ಕೋರೆಷನೆಂಬ ನನ್ನ ಮಾತನ್ನು ಕೇಳಿರಿ - ಪರಲೋಕದೇವರಾದ ಯೆಹೋವನು ನನಗೆ ಭೂಲೋಕದ ಎಲ್ಲಾ ರಾಜ್ಯಗಳನ್ನೂ ಕೊಟ್ಟು ತನಗೋಸ್ಕರ ಯೆಹೂದ ದೇಶದ ಯೆರೂಸಲೇವಿುನಲ್ಲಿ ಆಲಯವನ್ನು ಕಟ್ಟಿಸಬೇಕು ಎಂದು ಆಜ್ಞಾಪಿಸಿದ್ದಾನೆ.


ಅದು ಕಲ್ಲುಕುಪ್ಪೆಯಾಗಿ ಹೋಗಿದ್ದರೂ ನಿನ್ನ ಸೇವಕರಿಗೆ ಅತಿಪ್ರಿಯವಾಗಿದೆ; ಅದರ ಧೂಳಿಗೆ ಅವರು ಮರಗುತ್ತಾರೆ.


ಆಮೇಲೆ ಅವರನ್ನು ಜನಾಂಗಗಳೊಳಗಿಂದ ಕೂಡಿಸುವೆನು, ಚದರಿರುವ ದೇಶಗಳಿಂದ ಅವರನ್ನು ಒಟ್ಟಿಗೆ ಬರಮಾಡಿ ಇಸ್ರಾಯೇಲ್ ದೇಶವನ್ನು ಅವರಿಗೆ ದಯಪಾಲಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು