Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 29:11 - ಕನ್ನಡ ಸತ್ಯವೇದವು J.V. (BSI)

11 ಇವರಿಗೆ ಗತಿಯಾಗಲಿ, ನಿರೀಕ್ಷೆಯಿರಲಿ ಎಂದು ನಾನು ನಿಮ್ಮ ವಿಷಯದಲ್ಲಿ ಮಾಡಿಕೊಳ್ಳುತ್ತಿರುವ ಆಲೋಚನೆಗಳನ್ನು ನಾನೇ ಬಲ್ಲೆನು; ಅವು ಅಹಿತದ ಯೋಚನೆಗಳಲ್ಲ, ಹಿತದ ಯೋಚನೆಗಳೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಇವರಿಗೆ ಒಳ್ಳೆಯದಾಗಲಿ, ನಿರೀಕ್ಷೆಯಿರಲಿ ಎಂದು ನಾನು ನಿಮ್ಮ ವಿಷಯದಲ್ಲಿ ಮಾಡಿಕೊಳ್ಳುತ್ತಿರುವ ಆಲೋಚನೆಗಳನ್ನು ನಾನೇ ಬಲ್ಲೆನು; ಅವು ಅಹಿತದ ಯೋಚನೆಗಳಲ್ಲ, ಹಿತದ ಯೋಚನೆಗಳೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ನಿಮಗೆ ಇಂಥ ಗತಿ ಬರಲಿ ಎಂದಲ್ಲ, ನಿರೀಕ್ಷೆ ಇರಲಿ ಎಂದೇ ನಾನು ನಿಮ್ಮ ವಿಷಯದಲ್ಲಿ ಮಾಡಿಕೊಂಡ ಆಲೋಚನೆಗಳನ್ನು ನಾನು ಮಾತ್ರ ಬಲ್ಲೆ. ಅವು ಅಹಿತ ಯೋಜನೆಗಳೇನೂ ಅಲ್ಲ, ಹಿತಕರವಾದ ಯೋಜನೆಗಳೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನಾನು ನಿಮಗಾಗಿ ಹಾಕಿದ ಯೋಜನೆಗಳು ನನಗೆ ಗೊತ್ತಿರುವುದರಿಂದ ನಾನು ಹೀಗೆ ಹೇಳುತ್ತಿದ್ದೇನೆ.” ಇದು ಯೆಹೋವನ ಸಂದೇಶ. “ನಾನು ನಿಮಗಾಗಿ ಒಳ್ಳೆಯ ಯೋಜನೆಗಳನ್ನು ಹಾಕಿದ್ದೇನೆ. ನಿಮಗೆ ಕೆಟ್ಟದ್ದನ್ನು ಮಾಡುವ ವಿಚಾರ ನನಗಿಲ್ಲ. ನಾನು ನಿಮಗಾಗಿ ಆಶಾದಾಯಕವಾದ ಮತ್ತು ಒಳ್ಳೆಯ ಭವಿಷ್ಯದ ವಿಚಾರಗಳನ್ನಿಟ್ಟುಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನಾನು ನಿಮ್ಮನ್ನು ಕುರಿತು ಮಾಡುವ ಯೋಜನೆಗಳನ್ನು ಬಲ್ಲೆನು. ಅವು ಕೇಡಿಗಲ್ಲ, ಹಿತಕ್ಕಾಗಿರುವ ಯೋಜನೆಗಳು. ನಿಮಗೆ ಭವಿಷ್ಯವನ್ನೂ, ನಿರೀಕ್ಷೆಯನ್ನೂ ಕೊಡುವುದಕ್ಕಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 29:11
38 ತಿಳಿವುಗಳ ಹೋಲಿಕೆ  

ಯೆಹೋವನ ಆಲೋಚನೆಯೋ ಶಾಶ್ವತವಾಗಿಯೇ ನಿಲ್ಲುವದು; ಆತನ ಸಂಕಲ್ಪವು ಎಂದಿಗೂ ಕದಲುವದಿಲ್ಲ.


ಆಹಾ, ಅವು ಯೆಹೋವನ ಆಲೋಚನೆಗಳನ್ನು ತಿಳಿದಿಲ್ಲ, ಆತನ ಸಂಕಲ್ಪವನ್ನು ಗ್ರಹಿಸಿಲ್ಲ; ಕಣಕ್ಕೆ ಹಾಕಿದ ಸಿವುಡುಗಳ ಹಾಗೆ ಅವುಗಳನ್ನು ಕೂಡಿಸಿದ್ದಾನಲ್ಲಾ.


ಯೆಹೋವನೇ, ನನ್ನ ದೇವರೇ, ನಿನಗೆ ಸಮಾನನಾದ ದೇವರು ಯಾರು? ನಮ್ಮ ಹಿತಕ್ಕಾಗಿ ನೀನು ಮಾಡಿದ ಆಲೋಚನೆಗಳೂ ಅದ್ಭುತಕಾರ್ಯಗಳೂ ಎಷ್ಟೋ ವಿಶೇಷವಾಗಿವೆ; ಅವುಗಳನ್ನು ವಿವರಿಸಿ ಹೇಳೋಣವೆಂದರೆ ಅಸಾಧ್ಯವು; ಅವು ಅಸಂಖ್ಯಾತವಾಗಿವೆ.


ಆತನಂತು ಒಂದೇ ಮನಸ್ಸುಳ್ಳವನಾಗಿದ್ದಾನೆ, ತಿರುಗಿಸಬಲ್ಲವರು ಯಾರು? ತಾನು ಬಯಸಿದ್ದನ್ನೇ ಮಾಡುತ್ತಾನೆ.


ಯೆಹೋವನ ರಕ್ಷಣಕಾರ್ಯವನ್ನು ಎದುರುನೋಡುತ್ತಾ ಶಾಂತವಾಗಿ ಕಾದುಕೊಂಡಿರುವದು ಒಳ್ಳೇದು.


ಅನಂತರ ಅವರು ತಮ್ಮ ದೇವರಾದ ಯೆಹೋವನನ್ನೂ ತಮ್ಮ ರಾಜನಾದ ದಾವೀದನನ್ನೂ ಪುನಃ ಆಶ್ರಯಿಸುವರು; ಹೌದು, ಅಂತ್ಯಕಾಲದಲ್ಲಿ ಯೆಹೋವನನ್ನೂ ಆತನ ದಯೆಯನ್ನೂ ಭಯಭಕ್ತಿಯಿಂದ ಮರೆಹೊಗುವರು.


ಆದರೆ ನನ್ನ ಸೇವಕರಾದ ಪ್ರವಾದಿಗಳಿಗೆ ಆಜ್ಞಾಪಿಸಿದ ನನ್ನ ವಾಕ್ಯಗಳೂ ವಿಧಿಗಳೂ ನಿಮ್ಮ ಪಿತೃಗಳನ್ನು ಹಿಂದಟ್ಟಿ ಹಿಡಿದು ನಿತ್ಯವಾಗಿವೆಯಷ್ಟೆ; ಅವರು ತಿರುಗಿಕೊಂಡು - ಸೇನಾಧೀಶ್ವರ ಯೆಹೋವನು ನಮ್ಮ ದುರ್ಮಾರ್ಗ ದುಷ್ಕೃತ್ಯಗಳಿಗೆ ತಕ್ಕ ಹಾಗೆ ನಮಗೆ ಏನು ಮಾಡಬೇಕೆಂದು ಸಂಕಲ್ಪಿಸಿದನೋ ಅದನ್ನು ನಮಗೆ ಮಾಡಿದ್ದಾನಲ್ಲಾ ಅಂದುಕೊಂಡರು.


ಯೆಹೋವನು ಹೀಗನ್ನುತ್ತಾನೆ - ಇಗೋ, ನಾನು ಮುಂದಿನ ಕಾಲದಲ್ಲಿ ದಾವೀದನೆಂಬ ಮೂಲದಿಂದ ಸದ್ಧರ್ಮಿಯಾದ ಮೊಳಿಕೆಯನ್ನು ಚಿಗುರಿಸುವೆನು; ಅವನು ರಾಜನಾಗಿ ಆಳುತ್ತಾ ವಿವೇಕದಿಂದ ಕಾರ್ಯವನ್ನು ಸಾಧಿಸುತ್ತಾ ದೇಶದಲ್ಲಿ ನೀತಿನ್ಯಾಯಗಳನ್ನು ನಿರ್ವಹಿಸುವನು.


ಅವನ ಕಾಲದಲ್ಲಿ ಯೆಹೂದ್ಯರು ಸುರಕ್ಷಿತರಾಗಿರುವರು, ಇಸ್ರಾಯೇಲ್ಯರು ನೆಮ್ಮದಿಯಾಗಿ ವಾಸಿಸುವರು; ಯೆಹೋವ ಚಿದ್ಕೇನು [ಅಂದರೆ ಯೆಹೋವನೇ ನಮ್ಮ ಸದ್ಧರ್ಮ] ಎಂಬ ಹೆಸರು ಅವನಿಗಾಗುವದು.


ಅವರು ತಮ್ಮ ದೇವರಾದ ಯೆಹೋವನೆಂಬ ನನ್ನನ್ನೂ ನಾನು ಅವರಿಗಾಗಿ ಏರ್ಪಡಿಸುವ ರಾಜನಾದ ದಾವೀದನನ್ನೂ ಸೇವಿಸುವರು.


ಯೆಹೋವನು ಇಂತೆನ್ನುತ್ತಾನೆ - ನನ್ನ ಸೇವಕ ಯಾಕೋಬೇ, ಭಯಪಡಬೇಡ! ಇಸ್ರಾಯೇಲೇ, ಅಂಜಬೇಡ! ಇಗೋ ನಾನು ನಿನ್ನನ್ನು ದೂರದೇಶದಿಂದ ಉದ್ಧರಿಸುವೆನು, ನಿನ್ನ ಸಂತಾನವನ್ನು ಸೆರೆಹೋದ ಸೀಮೆಯಿಂದ ರಕ್ಷಿಸುವೆನು; ಯಾಕೋಬು ಹಿಂದಿರುಗಿ ನೆಮ್ಮದಿಯಾಗಿಯೂ ಹಾಯಾಗಿಯೂ ಇರುವದು;


ಆದಕಾರಣ ನೀನು ಹೀಗೆ ಸಾರು - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಾನು ಅವರನ್ನು ದೂರವಾಗಿ ತೊಲಗಿಸಿ ಜನಾಂಗಗಳಲ್ಲಿ ಅನ್ಯದೇಶಗಳೊಳಗೆ ಚದರಿಸಿದರೂ ಅವರು ಸೇರಿರುವ ದೇಶಗಳಲ್ಲಿಯೇ ನಾನು ಕೊಂಚ ಕಾಲದ ಮಟ್ಟಿಗೆ ಅವರಿಗೆ ಪವಿತ್ರಾಲಯವಾಗಿರುವೆನು.


ಆ ಮೂರನೆಯ ಭಾಗದವರನ್ನು ನಾನು ಬೆಂಕಿಗೆ ಹಾಕಿ ಬೆಳ್ಳಿಯಂತೆ ಶೋಧಿಸುವೆನು, ಬಂಗಾರದ ಹಾಗೆ ಶುದ್ಧಿಮಾಡುವೆನು; ಅವರು ನನ್ನ ಹೆಸರೆತ್ತಿ ಪ್ರಾರ್ಥಿಸುವರು, ನಾನು ಆಲಿಸುವೆನು; ನಾನು - ಇವರು ನನ್ನ ಜನರು ಅಂದುಕೊಳ್ಳುವೆನು, ಅವರು - ನಮ್ಮ ದೇವರಾದ ಯೆಹೋವನೇ ಅನ್ನುವರು.


ಭಯಭಕ್ತಿಯುಳ್ಳ ಜನರಿಗೆ ಆತನ ರಕ್ಷಣೆಯು ಹತ್ತಿರವಿರುವದು ಸತ್ಯ. ಇದರಿಂದ ಆತನ ಮಹಿಮೆ ನಮ್ಮ ದೇಶದಲ್ಲಿ ನೆಲೆಗೊಳ್ಳುವದು.


ರೌದ್ರವು ನನ್ನಲಿಲ್ಲ; ಮುಳ್ಳುಗಿಳ್ಳು ನನಗೆ ಎದುರುಬಿದ್ದರೆ ಎಷ್ಟೋ ಒಳ್ಳೇದು! ಅವುಗಳಿಗೆ ವಿರುದ್ಧವಾಗಿ ಯುದ್ಧಕ್ಕೆ ನಡೆದು ಹೋಗಿ ಒಟ್ಟಿಗೆ ಸುಟ್ಟುಬಿಡುವೆನು.


ಇಸ್ರಾಯೇಲ್ಯರ ದೇವರಾದ ಯೆಹೋವನು ಇಂತೆನ್ನುತ್ತಾನೆ - ನಾನು ಈ ಸ್ಥಳದೊಳಗಿಂದ ಕಸ್ದೀಯರ ದೇಶಕ್ಕೆ ಕಳುಹಿಸಿಬಿಟ್ಟ ಸೆರೆಯವರಾದ ಯೆಹೂದ್ಯರನ್ನು ಈ ಉತ್ತಮವಾದ ಅಂಜೂರದ ಫಲಗಳಂತೆ ಲಕ್ಷಿಸಿ ಅವರಿಗೆ ಮೇಲನ್ನುಂಟುಮಾಡುವೆನು.


ಇಗೋ, ನಾನು ಈ ಪಟ್ಟಣವನ್ನು ಜೀರ್ಣೋದ್ಧಾರಮಾಡಿ ಅದಕ್ಕೆ ಸೌಖ್ಯವನ್ನು ಕೊಟ್ಟು ನಿವಾಸಿಗಳನ್ನು ಗುಣಪಡಿಸುವೆನು; ಸ್ಥೈರ್ಯಸಮಾಧಾನಗಳನ್ನು ಸಮೃದ್ಧಿಯಾಗಿ ಅವರ ಅನುಭವಕ್ಕೆ ತರುವೆನು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು