Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 29:14 - ಕನ್ನಡ ಸತ್ಯವೇದವು J.V. (BSI)

14 ನಾನು ನಿಮಗೆ ದೊರೆಯುವೆನು, ನಿಮ್ಮನ್ನು ನಿಮ್ಮ ದುರವಸ್ಥೆಯಿಂದ ತಪ್ಪಿಸಿ ನಾನು ನಿಮ್ಮನ್ನು ಅಟ್ಟಿಬಿಟ್ಟಿದ್ದ ಸಮಸ್ತದೇಶಗಳಿಂದಲೂ ಸಕಲಜನಾಂಗಗಳ ಮಧ್ಯದಿಂದಲೂ ಒಟ್ಟುಗೂಡಿಸಿ ನಿಮ್ಮನ್ನು ಯಾವ ಸ್ಥಳದಿಂದ ಸೆರೆಗೆ ಸಾಗಿಸಿದನೋ ಅಲ್ಲಿಗೆ ತಿರಿಗಿ ಬರಮಾಡುವೆನು. ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಾನು ನಿಮಗೆ ದೊರೆಯುವೆನು, ನಿಮ್ಮನ್ನು ನಿಮ್ಮ ದುರವಸ್ಥೆಯಿಂದ ತಪ್ಪಿಸಿ, ನಾನು ನಿಮ್ಮನ್ನು ಅಟ್ಟಿಬಿಟ್ಟಿದ್ದ ಸಮಸ್ತ ದೇಶಗಳಿಂದಲೂ, ಸಕಲಜನಾಂಗಗಳ ಮಧ್ಯದಿಂದಲೂ ಒಟ್ಟುಗೂಡಿಸಿ ನಿಮ್ಮನ್ನು ಯಾವ ಸ್ಥಳದಿಂದ ಸೆರೆಗೆ ಸಾಗಿಸಿದೆನೋ ಅಲ್ಲಿಗೆ ತಿರುಗಿ ಬರಮಾಡುವೆನು, ಇದು ಯೆಹೋವನ ನುಡಿ” ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಹೌದು, ನಾನು ನಿಮಗೆ ದೊರೆಯುವೆನು. ನಿಮ್ಮನ್ನು ನಿಮ್ಮ ದುರವಸ್ಥೆಯಿಂದ ತಪ್ಪಿಸಿ, ನಿಮ್ಮನ್ನು ಅಟ್ಟಲಾಗಿದ್ದ ಸಮಸ್ತ ದೇಶಗಳಿಂದಲೂ ಸಕಲ ರಾಷ್ಟ್ರಗಳ ಮಧ್ಯೆಯಿಂದಲೂ ಒಟ್ಟುಗೂಡಿಸಿ, ನಿಮ್ಮನ್ನು ಯಾವ ಸ್ಥಳದಿಂದ ಸೆರೆಗೆ ಸಾಗಿಸಿದೆನೋ ಅಲ್ಲಿಗೆ ಮರಳಿ ಬರಮಾಡುವೆನು. ಇದು ಸರ್ವೇಶ್ವರನಾದ ನನ್ನ ನುಡಿ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನಾನು ನಿಮಗೆ ದೊರೆಯುವೆನು.” ಇದು ಯೆಹೋವನ ನುಡಿ. “ನಾನು ನಿಮ್ಮನ್ನು ನಿಮ್ಮ ಬಂಧನದಿಂದ ಬಿಡಿಸಿ ಕರೆದುತರುವೆನು. ನಾನು ಈ ಸ್ಥಳವನ್ನು ಬಿಡಲು ನಿಮಗೆ ಒತ್ತಾಯಿಸಿದೆ. ಆದರೆ ನಾನು ನಿಮ್ಮನ್ನು ಕಳುಹಿಸಿದ್ದ ಎಲ್ಲಾ ಜನಾಂಗಗಳಿಂದ ಮತ್ತು ಎಲ್ಲಾ ಸ್ಥಳಗಳಿಂದ ನಿಮ್ಮನ್ನು ಒಟ್ಟುಗೂಡಿಸಿ ಈ ಸ್ಥಳಕ್ಕೆ ಕರೆದು ತರುವೆನು.” ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನಿಮಗೆ ದೊರೆಯುವೆನು. ನಿಮ್ಮ ಸೆರೆಯನ್ನು ತಿರುಗಿಸಿ ನಾನು ನಿಮ್ಮನ್ನು ಓಡಿಸಿಬಿಟ್ಟ ಎಲ್ಲಾ ಜನಾಂಗಗಳಿಂದಲೂ, ಎಲ್ಲಾ ಸ್ಥಳಗಳಿಂದಲೂ ನಿಮ್ಮನ್ನು ಕೂಡಿಸುವೆನು. ನಾನು ಯಾವ ಸ್ಥಳದಿಂದ ನಿಮ್ಮನ್ನು ಸೆರೆಯಾಗಿ ಕಳುಹಿಸಿದೆನೋ, ಆ ಸ್ಥಳಕ್ಕೆ ನಿಮ್ಮನ್ನು ತಿರುಗಿ ಬರಮಾಡುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 29:14
44 ತಿಳಿವುಗಳ ಹೋಲಿಕೆ  

ಇಗೋ ನಾನು ನನ್ನ ಜನರಾದ ಇಸ್ರಾಯೇಲ್ಯರನ್ನೂ ಯೆಹೂದ್ಯರನ್ನೂ ಅವರ ದುರವಸ್ಥೆಯಿಂದ ತಪ್ಪಿಸುವ ದಿನಗಳು ಬರುವವು. ಆಗ ನಾನು ಅವರನ್ನು ಅವರ ಪಿತೃಗಳಿಗೆ ಅನುಗ್ರಹಿಸಿದ ದೇಶಕ್ಕೆ ಪುನಃ ಬರಮಾಡುವೆನು. ಅವರು ಅದನ್ನು ಅನುಭವಿಸುವರು. ಇದು ಯೆಹೋವನ ನುಡಿ.


ನನ್ನ ಮಗನಾದ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಸಂಪೂರ್ಣಹೃದಯದಿಂದಲೂ ಮನಸ್ಸಂತೋಷದಿಂದಲೂ ಆತನನ್ನೇ ಸೇವಿಸು; ಯೆಹೋವನು ಎಲ್ಲಾ ಹೃದಯಗಳನ್ನು ವಿಚಾರಿಸುವವನೂ ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವನೂ ಆಗಿರುತ್ತಾನಲ್ಲಾ. ನೀನು ಆತನನ್ನು ಹುಡುಕುವದಾದರೆ ಆತನು ನಿನಗೆ ಸಿಕ್ಕುವನು. ಆತನನ್ನು ಬಿಟ್ಟರೆ ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವನು.


ಇದಲ್ಲದೆ ಯೆಶಾಯನು ಧೈರ್ಯವಾಗಿ ಮಾತಾಡಿ - ನನ್ನನ್ನು ಹುಡುಕದವರಿಗೂ ಸಿಕ್ಕಿದೆನು, ನನ್ನ ವಿಷಯ ವಿಚಾರಮಾಡದವರಿಗೂ ಪ್ರತ್ಯಕ್ಷನಾದೆನು ಎಂದು ಹೇಳುತ್ತಾನೆ.


ಯೆಹೋವನು ಇಂತೆನ್ನುತ್ತಾನೆ - ನನ್ನ ಸೇವಕ ಯಾಕೋಬೇ, ಭಯಪಡಬೇಡ! ಇಸ್ರಾಯೇಲೇ, ಅಂಜಬೇಡ! ಇಗೋ ನಾನು ನಿನ್ನನ್ನು ದೂರದೇಶದಿಂದ ಉದ್ಧರಿಸುವೆನು, ನಿನ್ನ ಸಂತಾನವನ್ನು ಸೆರೆಹೋದ ಸೀಮೆಯಿಂದ ರಕ್ಷಿಸುವೆನು; ಯಾಕೋಬು ಹಿಂದಿರುಗಿ ನೆಮ್ಮದಿಯಾಗಿಯೂ ಹಾಯಾಗಿಯೂ ಇರುವದು;


ನಾನು ರಹಸ್ಯದಲ್ಲಿ ನುಡಿದವನಲ್ಲ, ತಮೋಲೋಕದೊಳಗಿಂದ ಮಾತಾಡಿದವನಲ್ಲ, ಶೂನ್ಯವನ್ನೋ ಎಂಬಂತೆ ನನ್ನನ್ನು ಹುಡುಕಿರಿ ಎಂದು ಯಾಕೋಬ ವಂಶದವರಿಗೆ ನಾನು ಅಪ್ಪಣೆಕೊಡಲಿಲ್ಲ. ಯೆಹೋವನೆಂಬ ನಾನು ಸತ್ಯಾನುಸಾರ ನುಡಿಯುವವನು, ನೆಟ್ಟನೆಯ ಮಾತುಗಳನ್ನೇ ಆಡುತ್ತೇನೆ.


ಯೆಹೋವನೇ, ನೀನು ದಕ್ಷಿಣದೇಶದ ಹಳ್ಳಗಳನ್ನೋ ಎಂಬಂತೆ ಸೆರೆಯಲ್ಲಿ ಉಳಿದಿರುವ ನಮ್ಮವರನ್ನೂ ತಿರಿಗಿ ಬರಮಾಡು


ಸೆರೆಯಲ್ಲಿದ್ದ ನಮ್ಮನ್ನು ಯೆಹೋವನು ತಿರಿಗಿ ಚೀಯೋನಿಗೆ ಬರಮಾಡಿದಾಗ ನಾವು ಕನಸುಕಂಡವರಂತಿದ್ದೆವು.


ದೇವರು ನಮಗೆ ಆಶ್ರಯದುರ್ಗವಾಗಿದ್ದಾನೆ; ಆತನು ಇಕ್ಕಟ್ಟಿನಲ್ಲಿ ನಮಗೆ ವಿಶೇಷ ಸಹಾಯಕನು.


ಇದರಿಂದ ಭಕ್ತರೆಲ್ಲರು ಸಕಾಲದಲ್ಲಿ ನಿನ್ನನ್ನು ಪ್ರಾರ್ಥಿಸಲಿ; ಮಹಾಪ್ರವಾಹವು ಅಂಥವರನ್ನು ಮುಟ್ಟುವದೇ ಇಲ್ಲ.


ನಿಮ್ಮ ದೇವರಾದ ಯೆಹೋವನು ದುರವಸ್ಥೆಯಿಂದ ನಿಮ್ಮನ್ನು ತಪ್ಪಿಸಿ ನಿಮ್ಮನ್ನು ಕನಿಕರಿಸಿ ತಾನು ನಿಮ್ಮನ್ನು ಚದರಿಸಿರುವ ಎಲ್ಲಾ ದೇಶಗಳಿಂದ ತಿರಿಗಿ ಕೂಡಿಸುವನು.


ನಾವು ನಮ್ಮ ದೇವರಾದ ಯೆಹೋವನಿಗೆ ಮೊರೆಯಿಡುವಾಗೆಲ್ಲಾ ಆತನು ಸಮೀಪವಾಗಿಯೇ ಇದ್ದಾನಲ್ಲಾ; ಬೇರೆ ಎಷ್ಟು ದೊಡ್ಡ ಜನಾಂಗಕ್ಕಾದರೂ ಯಾವ ದೇವರು ಹೀಗೆ ಸಮೀಪವಾಗಿರುವನು?


ಆ ಕಾಲದಲ್ಲಿ ನಿಮ್ಮನ್ನು ಕರತರುವೆನು, ಹೌದು, ಆ ಕಾಲದಲ್ಲಿ ನಿಮ್ಮನ್ನು ಒಟ್ಟುಗೂಡಿಸುವೆನು; ನಾನು ನಿಮ್ಮ ದುರವಸ್ಥೆಯನ್ನು ನಿಮ್ಮ ಕಣ್ಣೆದುರಿಗೆ ತಪ್ಪಿಸುವಾಗ ನಿಮ್ಮನ್ನು ಲೋಕದ ಸಕಲ ಜನಾಂಗಗಳಲ್ಲಿ ಕೀರ್ತಿಸ್ತೋತ್ರಗಳಿಗೆ ಗುರಿಮಾಡುವೆನು. ಇದು ಯೆಹೋವನ ನುಡಿ.


ಆಹಾ, ಅವು ಯೆಹೋವನ ಆಲೋಚನೆಗಳನ್ನು ತಿಳಿದಿಲ್ಲ, ಆತನ ಸಂಕಲ್ಪವನ್ನು ಗ್ರಹಿಸಿಲ್ಲ; ಕಣಕ್ಕೆ ಹಾಕಿದ ಸಿವುಡುಗಳ ಹಾಗೆ ಅವುಗಳನ್ನು ಕೂಡಿಸಿದ್ದಾನಲ್ಲಾ.


ಯೆಹೋವನು ನಮ್ಮ ನ್ಯಾಯವನ್ನು ವ್ಯಕ್ತಪಡಿಸಿದ್ದಾನೆ; ನಮ್ಮ ದೇವರಾದ ಯೆಹೋವನು ನಡಿಸಿದ ಕಾರ್ಯವನ್ನು ಚೀಯೋನಿನಲ್ಲಿ ಪ್ರಕಟಿಸೋಣ ಬನ್ನಿರಿ!


ಯೆಹೋವನು ಸಿಕ್ಕುವ ಕಾಲದಲ್ಲಿ ಆತನನ್ನು ಆಶ್ರಯಿಸಿರಿ, ಆತನು ಸಮೀಪದಲ್ಲಿರುವಾಗ ಆತನಿಗೆ ಬಿನ್ನಹಮಾಡಿರಿ.


ನಾನು ನನ್ನ ಜನರಾದ ಇಸ್ರಾಯೇಲ್ಯರ ದುರವಸ್ಥೆಯನ್ನು ತಪ್ಪಿಸುವೆನು; ಅವರು ಹಾಳುಬಿದ್ದ ಪಟ್ಟಣಗಳನ್ನು ಪುನಃ ಕಟ್ಟಿ ಅವುಗಳಲ್ಲಿ ವಾಸಿಸುವರು; ದ್ರಾಕ್ಷೆಯ ತೋಟಗಳನ್ನು ಮಾಡಿಕೊಂಡು ಅವುಗಳ ದ್ರಾಕ್ಷಾರಸವನ್ನು ಕುಡಿಯುವರು; ಫಲವೃಕ್ಷಗಳನ್ನು ಬೆಳೆಯಿಸಿ ಅವುಗಳ ಹಣ್ಣುಗಳನ್ನು ತಿನ್ನುವರು.


ನಾನು ನಿಮ್ಮ ಮುಂದೆ ಇಟ್ಟಿರುವ ಆಶೀರ್ವಾದವೂ ಶಾಪವೂ ನಿಮ್ಮ ಅನುಭವಕ್ಕೆ ಬಂದಾಗ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಚದರಿಸಿರುವ ದೇಶಗಳಲ್ಲಿ ನೀವು ಇವುಗಳನ್ನು ನೆನಪಿಗೆ ತಂದುಕೊಂಡು


ನಿಮ್ಮ ಪಿತೃಗಳಿಗೆ ಸ್ವಾಸ್ತ್ಯವಾಗಿದ್ದ ದೇಶದಲ್ಲಿ ಸೇರಿಸಿ ಅದು ನಿಮಗೂ ಸ್ವದೇಶವಾಗುವಂತೆ ಮಾಡಿ ನಿಮಗೆ ಮೇಲನ್ನುಂಟುಮಾಡಿ ಪಿತೃಗಳಿಗಿಂತಲೂ ಅಧಿಕವಾಗಿ ನಿಮ್ಮನ್ನು ಹೆಚ್ಚಿಸುವನು.


ಭಯಪಡಬೇಡ, ನಾನು ನಿನ್ನ ಸಂಗಡ ಇದ್ದೇನೆ; ನಿನ್ನ ಸಂತತಿಯವರನ್ನು ಮೂಡಲಿಂದ ತರುವೆನು; ನಿನ್ನವರನ್ನು ಪಡುವಲಿಂದ ಕೂಡಿಸುವೆನು;


ನಾನು ಒಪ್ಪಿಸಿಬಿಡು ಎಂದು ಬಡಗಲಿಗೂ ತಡೆಯಬೇಡ ಎಂದು ತೆಂಕಲಿಗೂ ಹೇಳಿ ದೂರದಲ್ಲಿರುವ ನನ್ನ ಕುಮಾರರನ್ನೂ, ದಿಗಂತಗಳಲ್ಲಿರುವ ನನ್ನ ಕುಮಾರಿಯರನ್ನೂ


ಇದೇ ಯೆಹೋವನ ನುಡಿ - ಭ್ರಷ್ಟರಾದ ಮಕ್ಕಳೇ, ತಿರುಗಿಕೊಳ್ಳಿರಿ, ನಾನು ನಿಮಗೆ ಪತಿ; ಒಂದು ಪಟ್ಟಣಕ್ಕೆ ಒಬ್ಬನಂತೆಯೂ ಗೋತ್ರಕ್ಕೆ ಇಬ್ಬರಂತೆಯೂ ಆರಿಸಿ ಚೀಯೋನಿಗೆ ಕರತರುವೆನು.


ನಾನು ಯಾವಾವ ಸ್ಥಳಗಳಿಗೆ ಈ ದುರ್ವಂಶದವರನ್ನು ಅಟ್ಟಿಬಿಟ್ಟಿದ್ದೇನೋ ಅಲ್ಲೆಲ್ಲಾ ಉಳಿದವರೆಲ್ಲರೂ ಜೀವಿಸುವದಕ್ಕಿಂತ ಮರಣವು ಲೇಸೆಂದು ಅದನ್ನು ಬಯಸುವರು. ಇದು ಯೆಹೋವನ ನುಡಿ.


ನೋಡಿರಿ, ನಾನು ಅವರನ್ನು ಕಿತ್ತುಹಾಕಿದ ಮೇಲೆ ತಿರಿಗಿ ಅವರ ಮೇಲೆ ಕನಿಕರಪಟ್ಟು ಪ್ರತಿಯೊಬ್ಬನನ್ನೂ ಅವನವನ ಸ್ವಾಸ್ತ್ಯಕ್ಕೂ ಅವನವನ ದೇಶಕ್ಕೂ ಪುನಃ ಬರಮಾಡುವೆನು.


ಇದನ್ನೂ ಅವರಿಗೆ ನುಡಿ - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಇಗೋ, ಇಸ್ರಾಯೇಲ್ಯರು ವಶವಾಗಿರುವ ಜನಾಂಗಗಳೊಳಗಿಂದ ನಾನು ಅವರನ್ನು ಉದ್ಧರಿಸಿ ಎಲ್ಲಾ ಕಡೆಯಿಂದಲೂ ಒಟ್ಟುಗೂಡಿಸಿ ಸ್ವದೇಶಕ್ಕೆ ಕರತಂದು


ಯೆಹೋವನು ಯಾಕೋಬ್ಯರನ್ನು ಕನಿಕರಿಸಿ ಮತ್ತೆ ಇಸ್ರಾಯೇಲ್ಯರನ್ನು ಆರಿಸಿಕೊಂಡು ಸ್ವದೇಶದಲ್ಲಿ ತಂಗಿಸಬೇಕೆಂದಿದ್ದಾನಷ್ಟೆ; ಪರದೇಶಿಗಳು ಅವರೊಂದಿಗೆ ಕೂಡಿ ಬಂದು ಯಾಕೋಬನ ಮನೆತನಕ್ಕೆ ಸೇರಿಕೊಳ್ಳುವರು.


ಯೆಹೋವನು ಹೀಗನ್ನುತ್ತಾನೆ - ಆಹಾ, ನಾನು ಯಾಕೋಬಿನ ಮನೆಗಳ ದುರವಸ್ಥೆಯನ್ನು ತಪ್ಪಿಸಿ ಅದರ ನಿವಾಸಗಳನ್ನು ಕರುಣಿಸುವೆನು; ಪಟ್ಟಣವು ತನ್ನ ಹಾಳುದಿಬ್ಬದ ಮೇಲೆ ಪುನಃ ಕಟ್ಟಲ್ಪಡುವದು, ಅರಮನೆಯು ತಾನಿದ್ದ ಸ್ಥಳದಲ್ಲೇ ನೆಲೆಯಾಗಿರುವದು.


ಯೆಹೋವನು ಇಂತೆನ್ನುತ್ತಾನೆ - ನಿನ್ನ ಧ್ವನಿಯು ಗೋಳಾಗದಿರಲಿ, ನಿನ್ನ ಕಣ್ಣು ನೀರು ಸುರಿಸದಿರಲಿ; ನಿನ್ನ ಪ್ರಯಾಸವು ಸಾರ್ಥಕವಾಗುವದು; ಇದು ಯೆಹೋವನ ನುಡಿ; ನಿನ್ನ ಮಕ್ಕಳು ಶತ್ರುವಿನ ದೇಶದಿಂದ ಹಿಂದಿರುಗುವರು;


ಯೆಹೋವನು ಇಂತೆನ್ನುತ್ತಾನೆ - ನಿನಗೆ ಮುಂದೆ ಒಳ್ಳೆಯ ಗತಿಯಾಗುವದೆಂದು ನಿರೀಕ್ಷೆಯಿದೆ. ನಿನ್ನ ಮಕ್ಕಳು ಹಿಂದಿರುಗಿ ಸ್ವಂತ ಸೀಮೆಯನ್ನು ಸೇರುವರು.


ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ - ನಾನು ನನ್ನ ಜನರ ದುರವಸ್ಥೆಯನ್ನು ತಪ್ಪಿಸುವಾಗ ಯೆಹೂದ ದೇಶದಲ್ಲಿಯೂ ಅವರ ಪಟ್ಟಣಗಳಲ್ಲಿಯೂ - ನ್ಯಾಯದ ನಿವಾಸವೇ, ಪರಿಶುದ್ಧ ಪರ್ವತವೇ, ಯೆಹೋವನು ನಿನ್ನನ್ನು ಆಶೀರ್ವದಿಸಲಿ ಎಂದು ಮತ್ತೆ ಮಾತಾಡುವರು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನನ್ನ ಪವಿತ್ರನಾಮಕ್ಕೆ ಇನ್ನು ಅಪಕೀರ್ತಿ ಬಾರದಂತೆ ನಾನು ಈಗ ಆಗ್ರಹವುಳ್ಳವನಾಗಿ ಯಾಕೋಬ್ಯರ ದುರವಸ್ಥೆಯನ್ನು ತಪ್ಪಿಸಿ ಇಸ್ರಾಯೇಲ್ ವಂಶದವರಿಗೆಲ್ಲಾ ಕೃಪೆತೋರಿಸುವೆನು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು