ಯೆರೆಮೀಯ 29:18 - ಕನ್ನಡ ಸತ್ಯವೇದವು J.V. (BSI)18 ನಾನು ಖಡ್ಗಕ್ಷಾಮವ್ಯಾಧಿಗಳಿಂದ ಅವರನ್ನು ಹಿಂದಟ್ಟುತ್ತಾ ಲೋಕದ ಸಮಸ್ತರಾಜ್ಯಗಳಿಗೆ ಭಯಾಸ್ಪದವಾಗುವಂತೆಯೂ ನಾನು ಅವರನ್ನು ಅಟ್ಟಿಬಿಟ್ಟಿರುವ ಸಕಲ ಜನಾಂಗಗಳಲ್ಲಿ ಶಾಪ, ಬೆರಗಿನ ಸಿಳ್ಳು, ದೂಷಣೆ, ಇವುಗಳಿಗೆ ಗುರಿಯಾಗುವಂತೆಯೂ ಮಾಡುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ನಾನು ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಅವರನ್ನು ಹಿಂದಟ್ಟುತ್ತಾ, ಲೋಕದ ಸಮಸ್ತ ರಾಜ್ಯಗಳಿಗೆ ಭಯಾಸ್ಪದವಾಗುವಂತೆಯೂ, ನಾನು ಅವರನ್ನು ಅಟ್ಟಿಬಿಟ್ಟಿರುವ ಸಕಲ ಜನಾಂಗಗಳಲ್ಲಿ ಶಾಪ, ಪರಿಹಾಸ್ಯ, ದೂಷಣೆ, ಇವುಗಳಿಗೆ ಗುರಿಯಾಗುವಂತೆಯೂ ಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಖಡ್ಗ-ಕ್ಷಾಮ-ವ್ಯಾಧಿಗಳಿಂದ ಅವರನ್ನು ಹಿಂದಟ್ಟುತ್ತಾ ಲೋಕದ ಎಲ್ಲ ರಾಜ್ಯಗಳಿಗೆ ಭಯಾಸ್ಪದವಾಗುವಂತೆ ಮಾಡುವೆನು. ಅವರನ್ನು ಅಟ್ಟಲಾಗಿರುವ ಎಲ್ಲ ರಾಷ್ಟ್ರಗಳಲ್ಲಿ ಅವರು ಶಾಪ, ಪರಿಹಾಸ್ಯ, ದೂಷಣೆಗಳಿಗೆ ಗುರಿಯಾಗುವಂತೆ ಮಾಡುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಇನ್ನೂ ಜೆರುಸಲೇಮಿನಲ್ಲಿರುವ ಜನರಿಗೆ ಖಡ್ಗ, ಹಸಿವು ಮತ್ತು ಭಯಂಕರವಾದ ವ್ಯಾಧಿಗಳಿಂದೊಡಗೂಡಿ ಬೆನ್ನಟ್ಟುವೆನು. ಆ ಜನರ ದುರ್ಗತಿಯನ್ನು ನೋಡಿ ಭೂಲೋಕದ ಸಮಸ್ತ ರಾಜ್ಯಗಳಿಗೆ ಭಯ ಉಂಟಾಗುವಂತೆ ಮಾಡುವೆನು. ಆ ಜನರನ್ನು ನಾಶಮಾಡುವೆನು. ನಡೆದ ವಿಷಯಗಳ ಬಗ್ಗೆ ಕೇಳಿ ಜನರು ಬೆರಗಾಗಿ ಸಿಳ್ಳುಹಾಕುವರು. ಯಾರಿಗಾದರೂ, ಕೇಡಾಗಲಿ ಎಂದು ಹೇಳಬೇಕಾದರೆ ಜನರು ಅವರ ಉದಾಹರಣೆಯನ್ನು ಕೊಡುವರು. ನಾನು ಅವರನ್ನು ಅಟ್ಟಿದ ಎಲ್ಲೆಡೆಯಲ್ಲಿಯೂ ಜನರು ಅವರನ್ನು ಅವಮಾನಗೊಳಿಸುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಖಡ್ಗದಿಂದಲೂ ಕ್ಷಾಮದಿಂದಲೂ ವ್ಯಾಧಿಯಿಂದಲೂ ಅವರನ್ನು ಹಿಂಸಿಸಿ, ನಾನು ಅವರನ್ನು ಓಡಿಸಿಬಿಟ್ಟ ಎಲ್ಲಾ ಜನಾಂಗಗಳಲ್ಲಿ ಶಾಪಕ್ಕೂ ಭಯಕ್ಕೂ ಪರಿಹಾಸ್ಯಕ್ಕೂ ನಿಂದೆಗೂ ಗುರಿಯಾಗುವ ಹಾಗೆ ಒಪ್ಪಿಸಿಬಿಡುವೆನು. ಅಧ್ಯಾಯವನ್ನು ನೋಡಿ |
ಆದಕಾರಣ ಯೆಹೋವನು ಇಂತೆನ್ನುತ್ತಾನೆ - ನೀವು ನನ್ನನ್ನು ಕೇಳಲಿಲ್ಲ, ನಿಮ್ಮ ನಿಮ್ಮ ಸಹೋದರರಿಗೂ ನೆರೆಹೊರೆಯವರಿಗೂ ಬಿಡುಗಡೆಯನ್ನು ಪ್ರಕಟಿಸಲಿಲ್ಲ; ಇದೇ ಯೆಹೋವನ ನುಡಿ - ಇಗೋ, ನಾನು ನಿಮಗೆ ಬಿಡುಗಡೆಯನ್ನು ಪ್ರಕಟಿಸುತ್ತೇನೆ; ನಿಮ್ಮನ್ನು ಖಡ್ಗವ್ಯಾಧಿಕ್ಷಾಮಗಳಿಗೆ ಗುರಿಯಾಗುವಂತೆ ಬಿಡುತ್ತೇನೆ; ನಿಮ್ಮನ್ನು ಲೋಕದ ಸಮಸ್ತ ರಾಜ್ಯಗಳಿಗೆ ಭಯಾಸ್ಪದವಾಗುವಂತೆ ಮಾಡುವೆನು.