Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 29:20 - ಕನ್ನಡ ಸತ್ಯವೇದವು J.V. (BSI)

20 ನಾನು ಯೆರೂಸಲೇವಿುನಿಂದ ಬಾಬೆಲಿಗೆ ಸಾಗಿಸಿದ ಸೆರೆಯವರೇ, ನೀವೆಲ್ಲರೂ ಯೆಹೋವನ ವಾಕ್ಯವನ್ನು ಕೇಳಿರಿ-

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನಾನು ಯೆರೂಸಲೇಮಿನಿಂದ ಬಾಬಿಲೋನಿಗೆ ಸಾಗಿಸಿದ ಸೆರೆಯವರೇ, ನೀವೆಲ್ಲರೂ ಯೆಹೋವನ ವಾಕ್ಯವನ್ನು ಕೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಜೆರುಸಲೇಮಿನಿಂದ ಬಾಬಿಲೋನಿಗೆ ಸಾಗಿಸಲಾಗಿರುವ ಸೆರೆಯವರೇ, ನೀವೆಲ್ಲರು ಸರ್ವೇಶ್ವರನಾದ ನನ್ನ ವಾಕ್ಯಕ್ಕೆ ಕಿವಿಗೊಡಿ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 “ನೀವು ಬಂಧಿಗಳು. ನಾನು ನಿಮ್ಮನ್ನು ಜೆರುಸಲೇಮ್ ಬಿಟ್ಟು ಬಾಬಿಲೋನಿಗೆ ಹೋಗುವಂತೆ ಒತ್ತಾಯಿಸಿದೆ. ಆದ್ದರಿಂದ ಯೆಹೋವನ ಸಂದೇಶವನ್ನು ಕೇಳಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆದ್ದರಿಂದ ನಾನು ಯೆರೂಸಲೇಮಿನಿಂದ ಬಾಬಿಲೋನಿಗೆ ಕಳುಹಿಸಿದ ಸೆರೆಯವರೆಲ್ಲರೇ, ಯೆಹೋವ ದೇವರ ವಾಕ್ಯವನ್ನು ಕೇಳಿರಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 29:20
8 ತಿಳಿವುಗಳ ಹೋಲಿಕೆ  

ಇಸ್ರಾಯೇಲ್ಯರ ದೇವರಾದ ಯೆಹೋವನು ಇಂತೆನ್ನುತ್ತಾನೆ - ನಾನು ಈ ಸ್ಥಳದೊಳಗಿಂದ ಕಸ್ದೀಯರ ದೇಶಕ್ಕೆ ಕಳುಹಿಸಿಬಿಟ್ಟ ಸೆರೆಯವರಾದ ಯೆಹೂದ್ಯರನ್ನು ಈ ಉತ್ತಮವಾದ ಅಂಜೂರದ ಫಲಗಳಂತೆ ಲಕ್ಷಿಸಿ ಅವರಿಗೆ ಮೇಲನ್ನುಂಟುಮಾಡುವೆನು.


ಚೀಯೋನ್ ಯುವತಿಯೇ, ಹೆರುವವಳಂತೆ ವೇದನೆಗೆ ಒಳಗಾಗು, ಯಾತನೆಪಡು; ನೀನೀಗ ಪಟ್ಟಣದೊಳಗಿಂದ ಹೊರಟು ಕಾಡಿನಲ್ಲಿ ವಾಸಿಸುತ್ತಾ ಬಾಬೆಲಿಗೆ ಸೇರುವಿ; ಅಲ್ಲೇ ನಿನಗೆ ಉದ್ಧಾರವಾಗುವದು, ಅಲ್ಲೇ ಯೆಹೋವನು ಶತ್ರುಗಳ ಕೈಯಿಂದ ನಿನ್ನನ್ನು ಬಿಡಿಸುವನು.


ಆಗ ಸೆರೆಯಾಗಿ ಒಯ್ಯಲ್ಪಟ್ಟು ಕೆಬಾರ್ ನದಿಯ ಹತ್ತಿರ ತೇಲ್ ಆಬೀಬಿನಲ್ಲಿ ವಾಸವಾಗಿದ್ದವರ ಬಳಿಗೆ ಬಂದು ಅವರು ಕೂತಿದ್ದ ಸ್ಥಳದಲ್ಲಿಯೇ ಕೂತುಕೊಂಡೆನು; ಏಳು ದಿವಸ ಅಲ್ಲೇ ಅವರ ಮಧ್ಯದಲ್ಲಿ ಸ್ತಬ್ಧನಾಗಿ ಇದ್ದುಬಿಟ್ಟೆನು.


ಸೆರೆಯಾಗಿರುವ ನಿನ್ನ ಸ್ವಜನರ ಬಳಿಗೆ ಹೋಗಿ ಅವರು ಕೇಳಿದರೂ ಕೇಳದೆಹೋದರೂ ಅವರನ್ನು ಪ್ರಬೋಧಿಸಿ - ಕರ್ತನಾದ ಯೆಹೋವನು ಇಂತೆನ್ನುತ್ತಾನೆ ಎಂದು ಅವರಿಗೆ ಸಾರು.


ಸೆರೆಯವರೆಲ್ಲರಿಗೆ ಹೀಗೆ ಹೇಳಿ ಕಳುಹಿಸು - ನೆಹೆಲಾಮ್ಯನಾದ ಶೆಮಾಯನ ವಿಷಯದಲ್ಲಿ ಯೆಹೋವನು ಇಂತೆನ್ನುತ್ತಾನೆ - ನಾನು ಕಳುಹಿಸದೆ ಹೋದರೂ ಶೆಮಾಯನು ನಿಮಗೆ ಪ್ರವಾದನೆಮಾಡಿ ಸುಳ್ಳಿನಲ್ಲಿ ನಂಬಿಕೆಯನ್ನು ಹುಟ್ಟಿಸಿದ ಕಾರಣ


ನಾನು ಪಟ್ಟಣದೊಳಗಿಂದ ನಿಮ್ಮನ್ನು ಕಿತ್ತು ಅನ್ಯರ ಕೈಗೆ ಕೊಟ್ಟು ದಂಡಿಸುವೆನು. ನೀವು ಖಡ್ಗಕ್ಕೆ ತುತ್ತಾಗುವಿರಿ.


ಅರಸನಾದ ಯೆಕೊನ್ಯನು, ರಾಜಮಾತೆಯು, ಕಂಚುಕಿಗಳು, ಯೆಹೂದದ ಮತ್ತು ಯೆರೂಸಲೇವಿುನ ಸರದಾರರು, ಶಿಲ್ಪಿಗಳು, ಕಮ್ಮಾರರು, ಇವರು ಯೆರೂಸಲೇವಿುನಿಂದ ತೊಲಗಿದ ಮೇಲೆ


ಪ್ರವಾದಿಯಾದ ಯೆರೆಮೀಯನು ಸೆರೆಹೋಗಿದ್ದ ಹಿರಿಯರಲ್ಲಿ ಉಳಿದವರಿಗೂ ಯಾಜಕರಿಗೂ ಪ್ರವಾದಿಗಳಿಗೂ ಅಂತು ನೆಬೂಕದ್ನೆಚ್ಚರನು ಯೆರೂಸಲೇವಿುನಿಂದ ಬಾಬೆಲಿಗೆ ಸೆರೆ ಒಯ್ದಿದ್ದ ಸಕಲಜನರಿಗೂ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು