ಯೆರೆಮೀಯ 29:21 - ಕನ್ನಡ ಸತ್ಯವೇದವು J.V. (BSI)21 ಇಸ್ರಾಯೇಲ್ಯರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ತನ್ನ ಹೆಸರೆತ್ತಿ ಸುಳ್ಳನ್ನು ಸಾರುವ ಕೊಲಾಯನ ಮಗನಾದ ಅಹಾಬ, ಮಾಸೇಯನ ಮಗನಾದ ಚಿದ್ಕೀಯ ಇವರ ವಿಷಯವಾಗಿ ಇಂತೆನ್ನುತ್ತಾನೆ - ಇಗೋ, ನಾನು ಇವರನ್ನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೆ ಕೊಡುವೆನು; ಅವನು ನಿಮ್ಮ ಕಣ್ಣೆದುರಿಗೆ ಇವರನ್ನು ಕೊಲ್ಲಿಸುವನು; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ತನ್ನ ಹೆಸರೆತ್ತಿ ಸುಳ್ಳನ್ನು ಸಾರುವ ಕೊಲಾಯನ ಮಗನಾದ ಅಹಾಬ, ಮಾಸೇಯನ ಮಗನಾದ ಚಿದ್ಕೀಯ ಇವರ ವಿಷಯವಾಗಿ ಇಂತೆನ್ನುತ್ತಾನೆ, “ಇಗೋ, ನಾನು ಇವರನ್ನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೆ ಕೊಡುವೆನು; ಅವನು ನಿಮ್ಮ ಕಣ್ಣೆದುರಿಗೆ ಇವರನ್ನು ಕೊಲ್ಲಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 “ಇಸ್ರಯೇಲರ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರ ತಮ್ಮ ಹೆಸರೆತ್ತಿ ಸುಳ್ಳನ್ನು ಸಾರುವ ಕೊಲಾಯನ ಮಗ ಅಹಾಬ ಮತ್ತು ಮಾಸೇಯನ ಮಗ ಚಿದ್ಕೀಯ ಇವರ ವಿಷಯವಾಗಿ ಹೀಗೆನ್ನುತ್ತಾರೆ: ‘ಇಗೋ ನಾನು ಇವರನ್ನು ಬಾಬಿಲೋನಿಯದ ಅರಸ ನೆಬೂಕದ್ನೆಚ್ಚರನ ಕೈಗೆ ಬಿಡುವೆನು. ಅವನು ನಿಮ್ಮ ಕಣ್ಣೆದುರಿಗೆ ಇವರನ್ನು ಕೊಲ್ಲಿಸುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಕೊಲಾಯನ ಮಗನಾದ ಅಹಾಬ ಮತ್ತು ಮಾಸೇಯನ ಮಗನಾದ ಚಿದ್ಕೀಯ ಇವರ ವಿಷಯವಾಗಿ ಸರ್ವಶಕ್ತನಾದ ಯೆಹೋವನು ಹೀಗೆಂದನು: “ಇವರಿಬ್ಬರು ನಿಮಗೆ ಸುಳ್ಳುಪ್ರವಾದನೆ ಮಾಡಿದ್ದಾರೆ. ಅವರ ಸಂದೇಶವು ನನ್ನಿಂದ ಬಂದದ್ದು ಎಂದು ಅವರು ಹೇಳಿದ್ದಾರೆ. ಆದರೆ ಅವರು ಹೇಳಿದ್ದು ಸುಳ್ಳು. ನಾನು ಆ ಇಬ್ಬರು ಪ್ರವಾದಿಗಳನ್ನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನಿಗೆ ಒಪ್ಪಿಸುವೆನು. ನೆಬೂಕದ್ನೆಚ್ಚರನು ಬಾಬಿಲೋನಿನಲ್ಲಿ ಬಂಧಿಯಾಗಿರುವ ನಿಮ್ಮೆಲ್ಲರ ಸಮ್ಮುಖದಲ್ಲಿ ಆ ಇಬ್ಬರು ಪ್ರವಾದಿಗಳನ್ನು ಕೊಲ್ಲುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ನನ್ನ ಹೆಸರಿನಲ್ಲಿ ನಿಮಗೆ ಸುಳ್ಳನ್ನು ಪ್ರವಾದಿಸುವ ಕೊಲಾಯನ ಮಗ ಅಹಾಬನ ವಿಷಯವೂ, ಮಾಸೇಯನ ಮಗ ಚಿದ್ಕೀಯನ ವಿಷಯವೂ, ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ನಾನು ಅವರನ್ನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಕೈಯಲ್ಲಿ ಒಪ್ಪಿಸುತ್ತೇನೆ. ಅವನು ಅವರನ್ನು ನಿಮ್ಮ ಕಣ್ಣುಗಳ ಮುಂದೆ ಕೊಂದುಹಾಕುವನು. ಅಧ್ಯಾಯವನ್ನು ನೋಡಿ |