ಯೆರೆಮೀಯ 29:28 - ಕನ್ನಡ ಸತ್ಯವೇದವು J.V. (BSI)28 ಇವನು - ಪರದೇಶ ವಾಸವು ನಿಮಗೆ ದೀರ್ಘವಾಗುವದು, ನೀವು ಮನೆಗಳನ್ನು ಕಟ್ಟಿಕೊಂಡು ಅವುಗಳಲ್ಲಿ ವಾಸಿಸಿರಿ, ತೋಟಗಳನ್ನು ಮಾಡಿಕೊಂಡು ಫಲವನ್ನು ಅನುಭವಿಸಿರಿ ಎಂದು ಬಾಬೆಲಿನಲ್ಲಿರುವ ನಮಗೆ ಹೇಳಿ ಕಳುಹಿಸಿದ್ದಾನೆ ನೋಡು ಎಂಬದಾಗಿ ಬರೆದ ಕಾರಣ [ನಾನು ನಿನ್ನನ್ನು ದಂಡಿಸುವದು ಖಂಡಿತ]. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಇವನು, ‘ಪರದೇಶ ವಾಸವು ನಿಮಗೆ ದೀರ್ಘವಾಗುವುದು, ನೀವು ಮನೆಗಳನ್ನು ಕಟ್ಟಿಕೊಂಡು ಅವುಗಳಲ್ಲಿ ವಾಸಿಸಿರಿ, ತೋಟಗಳನ್ನು ಮಾಡಿಕೊಂಡು ಫಲವನ್ನು ಅನುಭವಿಸಿರಿ’ ಎಂದು ಬಾಬೆಲಿನಲ್ಲಿರುವ ನಮಗೆ ಹೇಳಿ ಕಳುಹಿಸಿದ್ದಾನೆ ನೋಡು ಎಂಬುದಾಗಿ ಬರೆದ ಕಾರಣ ನಾನು ನಿನ್ನನ್ನು ದಂಡಿಸುವುದು ಖಂಡಿತ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಅವನು ಬಾಬಿಲೋನಿನಲ್ಲಿರುವ ನಮಗೆ ಪತ್ರ ಕಳಿಸಿ, ‘ಪರದೇಶವಾಸವು ನಿಮಗೆ ದೀರ್ಘವಾಗುವುದು, ನೀವು ಮನೆಗಳನ್ನು ಕಟ್ಟಿಕೊಂಡು ಅವುಗಳಲ್ಲಿ ವಾಸಿಸಿರಿ, ತೋಟಗಳನ್ನು ಮಾಡಿಕೊಂಡು ಫಲವನ್ನು ಅನುಭವಿಸಿರಿ’ ಎಂದು ತಿಳಿಸಿದ್ದಾನೆ.” ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಯೆರೆಮೀಯನು ಬಾಬಿಲೋನಿನಲ್ಲಿದ್ದ ನಮಗೆ ಈ ಸಂದೇಶವನ್ನು ಕಳುಹಿಸಿದ್ದಾನೆ: ಬಾಬಿಲೋನಿನಲ್ಲಿರುವ ನೀವು ಅಲ್ಲಿ ಬಹಳ ಕಾಲದವರೆಗೆ ಇರುವಿರಿ. ಆದ್ದರಿಂದ ಮನೆಗಳನ್ನು ಕಟ್ಟಿಕೊಂಡು ಅಲ್ಲಿ ನೆಲೆಸಿರಿ; ತೋಟಗಳನ್ನು ಬೆಳೆಸಿರಿ; ಮತ್ತು ನೀವು ಬೆಳೆದದ್ದನ್ನು ಆಹಾರವನ್ನಾಗಿ ಬಳಸಿರಿ.’” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಏಕೆಂದರೆ, ಅವನು ಸೆರೆಯು ಬಹಳ ದೀರ್ಘವಾಗುವುದು, ಮನೆಗಳನ್ನು ಕಟ್ಟಿ ವಾಸಮಾಡಿರಿ; ತೋಟಗಳನ್ನು ನೆಟ್ಟು, ಅವುಗಳ ಫಲವನ್ನು ತಿನ್ನಿರಿ; ಎಂದು ನಮಗೆ ಬಾಬಿಲೋನಿಗೆ ಹೇಳಿ ಕಳುಹಿಸಿದ್ದಾನೆ.’ ” ಅಧ್ಯಾಯವನ್ನು ನೋಡಿ |