Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 29:3 - ಕನ್ನಡ ಸತ್ಯವೇದವು J.V. (BSI)

3 ಯೆಹೂದದ ಅರಸನಾದ ಚಿದ್ಕೀಯನಿಂದ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಬಳಿಗೆ ರಾಯಭಾರಿಗಳಾಗಿ ಬಾಬೆಲಿಗೆ ಕಳುಹಿಸಲ್ಪಟ್ಟ ಶಾಫಾನನ ಮಗನಾದ ಎಲ್ಲಾಸ, ಹಿಲ್ಕೀಯನ ಮಗನಾದ ಗೆಮರ್ಯ, ಇವರ ಕೈಯಲ್ಲಿ ಯೆರೂಸಲೇವಿುನಿಂದ ಬರೆದು ರವಾನಿಸಿದ ಕಾಗದದ ಮಾತೇನಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯೆಹೂದದ ಅರಸನಾದ ಚಿದ್ಕೀಯನಿಂದ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಬಳಿಗೆ ರಾಯಭಾರಿಗಳಾಗಿ ಬಾಬಿಲೋನಿಗೆ ಕಳುಹಿಸಲ್ಪಟ್ಟ ಶಾಫಾನನ ಮಗನಾದ ಎಲ್ಲಾಸ, ಹಿಲ್ಕೀಯನ ಮಗನಾದ ಗೆಮರ್ಯ ಇವರ ಕೈಯಲ್ಲಿ ಅದನ್ನು ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅದನ್ನು ಶಾಫಾನನ ಮಗ ಎಲ್ಲಾಸ, ಹಿಲ್ಕೀಯನ ಮಗ ಗೆಮರ್ಯ ಇವರ ಕೈಯಲ್ಲಿ ಕಳಿಸಿದನು. ಇವರು ಜುದೇಯದ ಅರಸ ಚಿದ್ಕೀಯನಿಂದ ಬಾಬಿಲೋನಿಗೆ ಅದರ ಅರಸ ನೆಬೂಕದ್ನೆಚ್ಚರನ ಬಳಿಗೆ ಕಳಿಸಲಾಗಿದ್ದ ರಾಯಭಾರಿಗಳು. ಆ ಪತ್ರದ ಮಾತುಗಳು ಇವು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಚಿದ್ಕೀಯನು ಎಲ್ಲಾಸ ಮತ್ತು ಗೆಮರ್ಯರನ್ನು ರಾಜನಾದ ನೆಬೂಕದ್ನೆಚ್ಚರನ ಬಳಿಗೆ ಕಳಿಸಿದನು. ಚಿದ್ಕೀಯನು ಯೆಹೂದದ ರಾಜನಾಗಿದ್ದನು. ಎಲ್ಲಾಸನು ಶಾಫಾನನ ಮಗನಾಗಿದ್ದನು. ಗೆಮರ್ಯನು ಹಿಲ್ಕೀಯನ ಮಗನಾಗಿದ್ದನು. ಬಾಬಿಲೋನಿಗೆ ಕೊಂಡೊಯ್ಯುವಂತೆ ಯೆರೆಮೀಯನು ಅವರಿಗಾಗಿ ಪತ್ರವನ್ನು ಕೊಟ್ಟನು. ಆ ಪತ್ರದಲ್ಲಿ ಹೀಗೆ ಬರೆಯಲಾಗಿತ್ತು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಯೆಹೂದದ ಅರಸನಾದ ಚಿದ್ಕೀಯನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಬಳಿಗೆ ಕಳುಹಿಸಿದ ಶಾಫಾನನ ಮಗ ಎಲ್ಲಾಸನ ಕೈಯಿಂದಲೂ ಹಿಲ್ಕೀಯನ ಮಗನಾದ ಗೆಮರೀಯನ ಕೈಯಿಂದಲೂ ಕಳುಹಿಸಿದ ಪತ್ರ:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 29:3
11 ತಿಳಿವುಗಳ ಹೋಲಿಕೆ  

ಇಸ್ರಾಯೇಲ್‍ವಂಶದ ಎಪ್ಪತ್ತು ಮಂದಿ ಹಿರಿಯರೂ ಅವರ ಮಧ್ಯದಲ್ಲಿ ಶಾಫಾನನ ಮಗನಾದ ಯಾಜನ್ಯನೂ ತಮ್ಮ ತಮ್ಮ ಕೈಗಳಲ್ಲಿ ಧೂಪಾರತಿಗಳನ್ನು ಹಿಡಿದುಕೊಂಡು ಆ ಚಿತ್ರಗಳ ಮುಂದೆ ನಿಂತಿದ್ದರು; ಧೂಪದ ಸುವಾಸನೆಯ ಧೂಮವು ಮೇಘವಾಗಿ ಏರುತ್ತಿತ್ತು.


ಯೆರೆಮೀಯನನ್ನು ಕಾರಾಗೃಹದ ಅಂಗಳದಿಂದ ಕರತರಿಸಿ ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನ ವಶಕ್ಕೆ ಒಪ್ಪಿಸಿ ಮನೆಗೆ ಕರೆದುಕೊಂಡು ಹೋಗುವಂತೆ ಹೇಳಿದರು. ಅಂದಿನಿಂದ ಯೆರೆಮೀಯನು [ಎಂದಿನಂತೆ] ಜನರ ಮಧ್ಯೆ ವಾಸಿಸಿದನು.


ಎಲ್ನಾಥಾನನೂ ದೆಲಾಯನೂ ಗೆಮರ್ಯನೂ - ದಯಮಾಡಿ ಸುರಳಿಯನ್ನು ಸುಡಬಾರದೆಂದು ಅರಸನಿಗೆ ವಿಜ್ಞಾಪನೆಮಾಡಿದರೂ ಅವನು ಅವರ ಮಾತನ್ನು ಕೇಳಲಿಲ್ಲ.


ಇತ್ತ ಯಾಜಕರೂ ಪ್ರವಾದಿಗಳೂ ಯೆರೆಮೀಯನನ್ನು ಜನರ ಕೈಗೆ ಸಿಕ್ಕಿಸಿ ಕೊಲ್ಲಿಸದ ಹಾಗೆ ಶಾಫಾನನ ಮಗನಾದ ಅಹೀಕಾಮನ ಸಹಾಯವು ಅವನಿಗೆ ಒದಗಿತು.


ಹಿಲ್ಕೀಯ, ಶಾಫಾನನ ಮಗನಾದ ಅಹೀಕಾಮ್, ಮೀಕನ ಮಗನಾದ ಅಬ್ದೋನ್, ಲೇಖಕನಾದ ಶಾಫಾನ್, ಸಹಕಾರಿಯಾದ ಅಸಾಯ ಎಂಬವರಿಗೆ -


ಶಲ್ಲೂಮನು ಹಿಲ್ಕೀಯನನ್ನು ಪಡೆದನು; ಹಿಲ್ಕೀಯನು ಅಜರ್ಯನನ್ನು ಪಡೆದನು;


ಬಟ್ಟೆಗಳನ್ನು ಹರಿದುಕೊಂಡು ಯಾಜಕನಾದ ಹಿಲ್ಕೀಯನು, ಶಾಫಾನನ ಮಗನಾದ ಅಹೀಕಾಮ್, ಮೀಕಾಯನ ಮಗನಾದ ಅಕ್ಬೋರ್, ಲೇಖಕನಾದ ಶಾಫಾನ್, ತನ್ನ ಹಸ್ತಕನಾದ ಅಸಾಯ ಎಂಬವರಿಗೆ -


ಮಹಾಯಾಜಕನಾದ ಹಿಲ್ಕೀಯನು ಲೇಖಕನಾದ ಶಾಫಾನನಿಗೆ - ಯೆಹೋವನ ಆಲಯದಲ್ಲಿ ನನಗೆ ಧರ್ಮೋಪದೇಶ ಗ್ರಂಥವು ಸಿಕ್ಕಿರುತ್ತದೆ ಎಂದು ಹೇಳಿ ಅದನ್ನು ಅವನ ಕೈಯಲ್ಲಿ ಕೊಟ್ಟನು; ಶಾಫಾನನು ಓದಿದನು.


ಆಗ ಹಿಲ್ಕೀಯನ ಮಗನೂ ರಾಜಗೃಹಾಧಿಪತಿಯೂ ಆದ ಎಲ್ಯಾಕೀಮ್, ಲೇಖಕನಾದ ಶೆಬ್ನ, ಆಸಾಫನ ಮಗನೂ ಮಂತ್ರಿಯೂ ಆಗಿದ್ದ ಯೋವ ಎಂಬವರು ಬಂದರು.


ಅಜರ್ಯನು ಹೆಲೆಚನನ್ನು ಪಡೆದನು; ಹೆಲೆಚನು ಎಲ್ಲಾಸನನ್ನು ಪಡೆದನು.


ಆಗ ಅರಸನಾದ ಯೆಹೋಯಾಕೀಮನು ಅಕ್ಬೋರನ ಮಗನಾದ ಎಲ್ನಾಥಾನನನ್ನೂ ಅವನ ಸಂಗಡ ಇನ್ನು ಕೆಲವರನ್ನೂ ಐಗುಪ್ತಕ್ಕೆ ಕಳುಹಿಸಿದನು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು