Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 29:4 - ಕನ್ನಡ ಸತ್ಯವೇದವು J.V. (BSI)

4 ಇಸ್ರಾಯೇಲ್ಯರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ತಾನು ಯೆರೂಸಲೇವಿುನಿಂದ ಬಾಬೆಲಿಗೆ ಸಾಗಿಸಿದ ಸೆರೆಯವರೆಲ್ಲರಿಗೂ ಹೀಗೆ ಹೇಳುತ್ತಾನೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅದರಲ್ಲಿ, “ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ತಾನು ಯೆರೂಸಲೇಮಿನಿಂದ ಬಾಬಿಲೋನಿಗೆ ಸಾಗಿಸಿದ ಸೆರೆಯವರೆಲ್ಲರಿಗೂ ಹೀಗೆ ಹೇಳುತ್ತಾನೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 “ಇಸ್ರಯೇಲರ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರ ಸ್ವಾಮಿ ಜೆರುಸಲೇಮಿನಿಂದ ಬಾಬಿಲೋನಿಗೆ ಸಾಗಿಸಲಾಗಿರುವ ಸೆರೆಯವರೆಲ್ಲರಿಗೆ ಹೀಗೆಂದು ತಿಳಿಸುತ್ತಾರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಇಸ್ರೇಲರ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ತಾನು ಜೆರುಸಲೇಮಿನಿಂದ ಬಾಬಿಲೋನಿಗೆ ಬಂಧಿಗಳನ್ನಾಗಿ ಕಳುಹಿಸಿದ ಎಲ್ಲಾ ಜನರಿಗೆ ಈ ಮಾತುಗಳನ್ನು ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಯೆರೂಸಲೇಮಿನಿಂದ ಬಾಬಿಲೋನಿಗೆ ನಾನು ಕರೆದೊಯ್ದ ಸೆರೆಯವರೆಲ್ಲರಿಗೆ ಹೇಳುವುದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 29:4
7 ತಿಳಿವುಗಳ ಹೋಲಿಕೆ  

ಇಸ್ರಾಯೇಲ್ಯರ ದೇವರಾದ ಯೆಹೋವನು ಇಂತೆನ್ನುತ್ತಾನೆ - ನಾನು ಈ ಸ್ಥಳದೊಳಗಿಂದ ಕಸ್ದೀಯರ ದೇಶಕ್ಕೆ ಕಳುಹಿಸಿಬಿಟ್ಟ ಸೆರೆಯವರಾದ ಯೆಹೂದ್ಯರನ್ನು ಈ ಉತ್ತಮವಾದ ಅಂಜೂರದ ಫಲಗಳಂತೆ ಲಕ್ಷಿಸಿ ಅವರಿಗೆ ಮೇಲನ್ನುಂಟುಮಾಡುವೆನು.


ಊರಲ್ಲಿ ಕೊಂಬೂದಿದರೆ ಜನರು ಅಂಜರೋ? ಯೆಹೋವನಿಂದಲ್ಲದೆ ಊರಿಗೆ ವಿಪತ್ತು ಸಂಭವಿಸುವದೋ?


ಇನ್ನು ಯಾವನೂ ಅಲ್ಲ, ನಾನು ಬೆಳಕಿಗೂ ಕತ್ತಲಿಗೂ ಸೃಷ್ಟಿಕರ್ತನು, ಮೇಲನ್ನೂ ಕೇಡನ್ನೂ ಬರಮಾಡುವವನು, ಈ ಸಮಸ್ತ ಕಾರ್ಯಗಳನ್ನು ನಡೆಯಿಸುವ ಯೆಹೋವನು ನಾನೇ ಎಂದು ತಿಳಿದುಕೊಳ್ಳುವರು.


ನನ್ನ ತೋಟವನ್ನು ಏನು ಮಾಡುವೆನೋ ಈಗ ನಿಮಗೆ ತಿಳಿಸುವೆನು, ಕೇಳಿರಿ; ಅದರ ಬೇಲಿಯನ್ನು ಕೀಳುವೆನು, ದನವು ಅದನ್ನು ಮೇಯ್ದುಬಿಡುವದು; ಅದರ ಗೋಡೆಯನ್ನು ಕೆಡವಿಹಾಕುವೆನು, ಅದು ತುಳಿದಾಟಕ್ಕೆ ಈಡಾಗುವದು.


ನೀವು ಮನೆಗಳನ್ನು ಕಟ್ಟಿಕೊಂಡು ಅವುಗಳಲ್ಲಿ ವಾಸಿಸಿರಿ, ತೋಟಗಳನ್ನು ಮಾಡಿಕೊಂಡು ಅವುಗಳ ಫಲವನ್ನು ಅನುಭವಿಸಿರಿ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು