ಯೆರೆಮೀಯ 29:6 - ಕನ್ನಡ ಸತ್ಯವೇದವು J.V. (BSI)6 ಸಂಸಾರಿಗಳಾಗಿ ಗಂಡುಹೆಣ್ಣು ಮಕ್ಕಳನ್ನು ಪಡೆಯಿರಿ; ನಿಮ್ಮ ಗಂಡುಗಳಿಗೆ ಹೆಣ್ಣುಗಳನ್ನು ತೆಗೆದುಕೊಳ್ಳಿರಿ, ನಿಮ್ಮ ಹೆಣ್ಣುಗಳನ್ನು ಗಂಡುಗಳಿಗೆ ಕೊಡಿರಿ; ಅವರೂ ಗಂಡು ಹೆಣ್ಣು ಮಕ್ಕಳನ್ನು ಪಡೆಯಲಿ; ನೀವು ಇರುವಲ್ಲಿಯೇ ವೃದ್ಧಿಯಾಗಿರಿ, ಕಡಿಮೆಯಾಗದಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಸಂಸಾರಿಗಳಾಗಿ ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆಯಿರಿ. ನಿಮ್ಮ ಗಂಡುಮಕ್ಕಳಿಗೆ ಹೆಣ್ಣುಮಕ್ಕಳನ್ನು ತೆಗೆದುಕೊಳ್ಳಿರಿ, ನಿಮ್ಮ ಹೆಣ್ಣುಮಕ್ಕಳಿಗೆ ಗಂಡುಮಕ್ಕಳನ್ನು ಕೊಡಿರಿ; ಅವರೂ ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆಯಲಿ; ನೀವು ಇರುವಲ್ಲಿಯೇ ವೃದ್ಧಿಯಾಗಿರಿ, ಕೊರತೆ ಅನುಭವಿಸದಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಸಂಸಾರಿಗಳಾಗಿ ಗಂಡು ಹೆಣ್ಣು ಮಕ್ಕಳನ್ನು ಪಡೆಯಿರಿ. ನಿಮ್ಮ ಗಂಡುಮಕ್ಕಳಿಗೆ ಹೆಣ್ಣುಗಳನ್ನು ತೆಗೆದುಕೊಳ್ಳಿ. ನಿಮ್ಮ ಹೆಣ್ಣುಗಳನ್ನು ಗಂಡುಗಳಿಗೆ ಕೊಡಿ. ಅವರೂ ಗಂಡುಹೆಣ್ಣು ಮಕ್ಕಳನ್ನು ಪಡೆಯಲಿ. ನೀವು ಇರುವಲ್ಲಿಯೇ ವೃದ್ಧಿಯಾಗಿರಿ, ಕಡಿಮೆಯಾಗದಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಮದುವೆ ಮಾಡಿಕೊಳ್ಳಿರಿ; ಗಂಡು ಮತ್ತು ಹೆಣ್ಣುಮಕ್ಕಳನ್ನು ಪಡೆಯಿರಿ. ನಿಮ್ಮ ಗಂಡುಮಕ್ಕಳಿಗೂ ನಿಮ್ಮ ಹೆಣ್ಣುಮಕ್ಕಳಿಗೂ ಮದುವೆ ಮಾಡಿರಿ. ಅವರಿಗೂ ಗಂಡು ಮತ್ತು ಹೆಣ್ಣು ಮಕ್ಕಳಾಗಲಿ. ಅನೇಕ ಮಕ್ಕಳನ್ನು ಹೆತ್ತು ಬಾಬಿಲೋನಿನಲ್ಲಿ ಬಹುಸಂಖ್ಯಾತರಾಗಿ. ಅಲ್ಪಸಂಖ್ಯಾತರಾಗಬೇಡಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಮದುವೆಮಾಡಿಕೊಂಡು, ಪುತ್ರಪುತ್ರಿಯರನ್ನು ಪಡೆಯಿರಿ. ನಿಮ್ಮ ಪುತ್ರರಿಗೆ ಹೆಂಡತಿಯರನ್ನು ಹುಡುಕಿರಿ. ನಿಮ್ಮ ಪುತ್ರಿಯರನ್ನು ಮದುವೆಮಾಡಿಕೊಡಿರಿ; ಅವರು ಪುತ್ರಪುತ್ರಿಯರನ್ನು ಹೆರಲಿ. ಹೀಗೆ ನೀವು ಕಡಿಮೆಯಾಗದೆ, ಅಲ್ಲಿ ಹೆಚ್ಚಿರಿ. ಅಧ್ಯಾಯವನ್ನು ನೋಡಿ |