Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 29:7 - ಕನ್ನಡ ಸತ್ಯವೇದವು J.V. (BSI)

7 ನಾನು ಯಾವ ಪಟ್ಟಣಕ್ಕೆ ನಿಮ್ಮನ್ನು ಸಾಗಿಸಿದೆನೋ ಅದರ ಕ್ಷೇಮವನ್ನು ಹಾರೈಸಿ ಅದಕ್ಕಾಗಿ ಯೆಹೋವನನ್ನು ಪ್ರಾರ್ಥಿಸಿರಿ; ಅದರ ಕ್ಷೇಮವೇ ನಿಮ್ಮ ಕ್ಷೇಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಾನು ಯಾವ ಪಟ್ಟಣಕ್ಕೆ ನಿಮ್ಮನ್ನು ಸಾಗಿಸಿದೆನೋ, ಅದರ ಕ್ಷೇಮವನ್ನು ಹಾರೈಸಿ ಅದಕ್ಕಾಗಿ ಯೆಹೋವನನ್ನು ಪ್ರಾರ್ಥಿಸಿರಿ; ಅದರ ಕ್ಷೇಮವೇ ನಿಮ್ಮ ಕ್ಷೇಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನಾನು ಯಾವ ನಗರಕ್ಕೆ ನಿಮ್ಮನ್ನು ಸಾಗಿಸಿದ್ದೇನೋ ಅದರ ಕ್ಷೇಮವನ್ನು ಹಾರೈಸಿ, ಅದಕ್ಕಾಗಿ ಸರ್ವೇಶ್ವರನಾದ ನನ್ನನ್ನು ಪ್ರಾರ್ಥಿಸಿರಿ. ಅದರ ಕ್ಷೇಮವೇ ನಿಮ್ಮ ಕ್ಷೇಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಅಂತೆಯೇ, ನಾನು ನಿಮ್ಮನ್ನು ಕಳುಹಿಸಿದ ನಗರಕ್ಕೆ ಒಳ್ಳೆಯದನ್ನು ಮಾಡಿರಿ. ನೀವು ವಾಸಮಾಡುತ್ತಿರುವ ನಗರಕ್ಕಾಗಿ ಯೆಹೋವನಿಗೆ ಪ್ರಾರ್ಥಿಸಿರಿ. ಏಕೆಂದರೆ ಆ ನಗರದಲ್ಲಿ ನೆಮ್ಮದಿಯಿದ್ದರೆ ನಿಮಗೂ ನೆಮ್ಮದಿ ಸಿಗುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನಾನು ನಿಮ್ಮನ್ನು ಸೆರೆಯಾಗಿ ಒಯ್ದ ಪಟ್ಟಣದ ಸಮಾಧಾನ ಮತ್ತು ಸಮೃದ್ಧಿಯನ್ನು ಹುಡುಕಿರಿ. ಅದಕ್ಕೋಸ್ಕರ ಯೆಹೋವ ದೇವರಿಗೆ ಪ್ರಾರ್ಥನೆಮಾಡಿರಿ. ಏಕೆಂದರೆ ಅದರ ಸಮಾಧಾನದಿಂದ ನಿಮಗೆ ಸಮಾಧಾನವಾಗುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 29:7
12 ತಿಳಿವುಗಳ ಹೋಲಿಕೆ  

ಅವರಾದರೋ ಪರಲೋಕದೇವರಿಗೆ ಸುಗಂಧಹೋಮಗಳನ್ನು ಸಮರ್ಪಿಸಿ ರಾಜನ ಮತ್ತು ರಾಜಪುತ್ರರ ದೀರ್ಘಾಯುಷ್ಯಕ್ಕಾಗಿ ಪ್ರಾರ್ಥನೆ ಮಾಡಲಿ.


ಆದಕಾರಣ, ಅರಸೇ, ಈ ನನ್ನ ಬುದ್ಧಿವಾದವು ನಿನಗೆ ಒಪ್ಪಿಗೆಯಾಗಲಿ - ನೀನು ಧರ್ಮವನ್ನು ಆಚರಿಸಿ ನಿನ್ನ ಪಾಪಗಳನ್ನು ನಾಶಗೊಳಿಸು, ಬಡವರಿಗೆ ಕರುಣೆಯನ್ನು ತೋರಿಸಿ ನಿನ್ನ ಅಪರಾಧಗಳನ್ನು ಧ್ವಂಸಮಾಡು; ಇದರಿಂದ ನಿನ್ನ ನೆಮ್ಮದಿಯ ಕಾಲವು ಹೆಚ್ಚಾದೀತು ಎಂದರಿಕೆ ಮಾಡಿದನು.


ಅರಸನ ಮತ್ತು ಅವನ ಸಂತಾನದವರ ರಾಜ್ಯದ ಮೇಲೆ ದೇವಕೋಪವುಂಟಾಗದ ಹಾಗೆ ನೀವು ಪರಲೋಕ ದೇವರ ಆಜ್ಞಾನುಸಾರ ಬೇಕಾದದ್ದನ್ನೆಲ್ಲಾ ಯಾವ ಕೊರತೆಯೂ ಇಲ್ಲದೆ ಒದಗಿಸಿಕೊಡಬೇಕು.


ಪ್ರತಿ ಮನುಷ್ಯನು ತನ್ನ ಮೇಲಿರುವ ಅಧಿಕಾರಿಗಳಿಗೆ ಅಧೀನನಾಗಿರಲಿ; ಯಾಕಂದರೆ ದೇವರಿಂದ ಹೊರತು ಒಬ್ಬರಿಗೂ ಅಧಿಕಾರವಿರುವದಿಲ್ಲ; ಇರುವ ಅಧಿಕಾರಿಗಳು ದೇವರಿಂದ ನೇವಿುಸಲ್ಪಟ್ಟವರು.


ಆಗ ಬೇಲ್ತೆಶಚ್ಚರನೆಂಬ ಅಡ್ಡಹೆಸರಿನ ದಾನಿಯೇಲನು ತನ್ನ ಬುದ್ಧಿಗೆ ತೋರಿದ್ದಕ್ಕೆ ದಿಗಿಲುಪಟ್ಟು ತುಸುಹೊತ್ತು ಸ್ತಬ್ಧನಾದನು. ರಾಜನು ಇದನ್ನು ನೋಡಿ - ಬೇಲ್ತೆಶಚ್ಚರನೇ, ನನ್ನ ಕನಸಾಗಲಿ ಅದರ ಅರ್ಥವಾಗಲಿ ನಿನ್ನನ್ನು ಹೆದರಿಸದಿರಲಿ ಎಂದು ಹೇಳಲು ಬೇಲ್ತೆಶಚ್ಚರನು - ಎನ್ನೊಡೆಯನೇ, ಆ ಕನಸು ನಿನ್ನ ಹಗೆಗಳಿಗೆ ಫಲಿಸಲಿ, ಅದರ ಅರ್ಥವು ನಿನ್ನ ವಿರೋಧಿಗಳ ಅನುಭವಕ್ಕೆ ಬರಲಿ!


ಆದಕಾರಣ ದಂಡನೆಯಾದೀತೆಂದು ಮಾತ್ರವಲ್ಲದೆ ಮನಸ್ಸಿಗೆ ನ್ಯಾಯವಾಗಿ ತೋರುವದರಿಂದಲೂ ಅವನಿಗೆ ಅಧೀನನಾಗುವದು ಅವಶ್ಯ.


ಯೆರೂಸಲೇವಿುನ ಶುಭಕ್ಕೋಸ್ಕರ ಪ್ರಾರ್ಥಿಸಿರಿ. [ಯೆರೂಸಲೇಮೇ,] ನಿನ್ನನ್ನು ಪ್ರೀತಿಸುವವರಿಗೆ ಸೌಭಾಗ್ಯವುಂಟಾಗಲಿ.


ಆಮೇಲೆ ಆ ಪ್ರಧಾನರು ಅರಸನಿಗೆ - ಒಡೆಯಾ, ಇವನಿಗೆ ಮರಣದಂಡನೆಯಾಗಬೇಕು. ಇವನು ಪಟ್ಟಣದಲ್ಲಿ ಉಳಿದಿರುವ ಯೋಧರಿಗೂ ಸಕಲ ಜನರಿಗೂ ಇಂಥಾ ಮಾತುಗಳನ್ನು ನುಡಿಯುತ್ತಾ ಅವರನ್ನು ಜೋಲುಗೈಯವರನ್ನಾಗಿ ಮಾಡುತ್ತಾನೆ; ಈ ಜನರ ಕ್ಷೇಮವನ್ನಲ್ಲ, ಹಾನಿಯನ್ನೇ ಹಾರೈಸುತ್ತಾನೆ ಎಂದು ಹೇಳಿದರು.


ಆದಕಾರಣ ನೀನು ಹೀಗೆ ಸಾರು - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಾನು ಅವರನ್ನು ದೂರವಾಗಿ ತೊಲಗಿಸಿ ಜನಾಂಗಗಳಲ್ಲಿ ಅನ್ಯದೇಶಗಳೊಳಗೆ ಚದರಿಸಿದರೂ ಅವರು ಸೇರಿರುವ ದೇಶಗಳಲ್ಲಿಯೇ ನಾನು ಕೊಂಚ ಕಾಲದ ಮಟ್ಟಿಗೆ ಅವರಿಗೆ ಪವಿತ್ರಾಲಯವಾಗಿರುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು