ಯೆರೆಮೀಯ 29:8 - ಕನ್ನಡ ಸತ್ಯವೇದವು J.V. (BSI)8 ಇಸ್ರಾಯೇಲ್ಯರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ - ನಿಮ್ಮ ಮಧ್ಯದಲ್ಲಿರುವ ನಿಮ್ಮ ಪ್ರವಾದಿಗಳಿಂದಲೂ ಶಕುನದವರಿಂದಲೂ ಮೋಸಹೋಗಬೇಡಿರಿ; ನಿಮಗಾಗಿ ಕನಸುಕಂಡು ಹೇಳುವವರಿಗೆ ಕಿವಿಗೊಡದಿರಿ; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನಿಮ್ಮ ಮಧ್ಯದಲ್ಲಿರುವ ನಿಮ್ಮ ಪ್ರವಾದಿಗಳಿಂದಲೂ, ಶಕುನದವರಿಂದಲೂ ಮೋಸಹೋಗಬೇಡಿರಿ; ನಿಮಗಾಗಿ ಕನಸುಕಂಡು ಹೇಳುವವರಿಗೆ ಕಿವಿಗೊಡಬೇಡಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಇಸ್ರಯೇಲರ ದೇವರೂ ಸೇನಾಧೀಶ್ವರ ಸರ್ವೇಶ್ವರನೂ ಆದ ನಾನು ನಿಮಗೆ ಹೇಳುತ್ತೇನೆ: ನಿಮ್ಮ ಮಧ್ಯೆ ಇರುವ ಪ್ರವಾದಿಗಳಿಗೂ ಶಕುನದವರಿಗೂ ಕಿವಿಗೊಟ್ಟು ಮೋಸಹೋಗದಿರಿ. ನಿಮಗಾಗಿ ಕನಸುಕಂಡು ಹೇಳುವವರನ್ನು ನಂಬಬೇಡಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಇಸ್ರೇಲರ ದೇವರೂ, ಸರ್ವಶಕ್ತನೂ ಆಗಿರುವ ಯೆಹೋವನು, ಹೀಗೆನ್ನುತ್ತಾನೆ: “ನಿಮ್ಮ ಪ್ರವಾದಿಗಳು ಮತ್ತು ಮಾಟಮಂತ್ರಗಾರರು ನಿಮ್ಮನ್ನು ಮರುಳುಗೊಳಿಸದಿರಲಿ. ಅವರು ನೋಡುವ ಕನಸುಗಳಿಗೆ ಕಿವಿಗೊಡಬೇಡಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ನಿಮ್ಮ ಮಧ್ಯದಲ್ಲಿರುವ ನಿಮ್ಮ ಪ್ರವಾದಿಗಳೂ ನಿಮ್ಮ ಶಕುನದವರೂ ನಿಮಗೆ ಮೋಸಮಾಡದಿರಲಿ. ನೀವು ಕೇಳುವ ನಿಮ್ಮ ಕನಸುಗಳಿಗೆ ಕಿವಿಗೊಡಬೇಡಿರಿ. ಅಧ್ಯಾಯವನ್ನು ನೋಡಿ |