Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 29:9 - ಕನ್ನಡ ಸತ್ಯವೇದವು J.V. (BSI)

9 ಅವರು ನನ್ನ ಹೆಸರಿನಲ್ಲಿ ನಿಮಗೆ ಸುಳ್ಳನ್ನು ಸಾರುತ್ತಾರೆ; ನಾನು ಅವರನ್ನು ಕಳುಹಿಸಲಿಲ್ಲ. ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅವರು ನನ್ನ ಹೆಸರಿನಲ್ಲಿ ನಿಮಗೆ ಸುಳ್ಳನ್ನು ಸಾರುತ್ತಾರೆ; ನಾನು ಅವರನ್ನು ಕಳುಹಿಸಲಿಲ್ಲ. ಇದು ಯೆಹೋವನ ನುಡಿ” ಎಂದು ಬರೆಯಲ್ಪಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅವರು ನನ್ನ ಹೆಸರಿನಲ್ಲಿ ನಿಮಗೆ ಸುಳ್ಳನ್ನೇ ಸಾರುತ್ತಾರೆ. ಅವರು ನನ್ನಿಂದ ಕಳಿಸಿದವರಲ್ಲ. ಇದು ಸರ್ವೇಶ್ವರನಾದ ನನ್ನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಅವರು ಸುಳ್ಳುಗಳನ್ನು ಬೋಧಿಸುತ್ತಿರುವರು. ಅವರ ಸಂದೇಶವು ನನ್ನಿಂದ ಬಂದಿದೆ ಎಂದು ಅವರು ಹೇಳುತ್ತಿರುವರು. ಆದರೆ ನಾನು ಅದನ್ನು ಕಳುಹಿಸಲಿಲ್ಲ.” ಈ ಸಂದೇಶವು ಯೆಹೋವನಿಂದ ಬಂದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಏಕೆಂದರೆ ಅವರು ನಿಮಗೆ ನನ್ನ ಹೆಸರಿನಲ್ಲಿ ಸುಳ್ಳಾಗಿ ಪ್ರವಾದಿಸುತ್ತಾರೆ. ನಾನು ಅವರನ್ನು ಕಳುಹಿಸಲಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 29:9
7 ತಿಳಿವುಗಳ ಹೋಲಿಕೆ  

ಯೆಹೋವನು ಇಂತೆನ್ನುತ್ತಾನೆ - ನಾನು ಅವರನ್ನು ಕಳುಹಿಸಲಿಲ್ಲ; ನನ್ನ ಹೆಸರೆತ್ತಿ ಸುಳ್ಳನ್ನು ಸಾರುತ್ತಾರೆ; ನೀವೂ ನಿಮಗೆ ಪ್ರವಾದಿಸುವ ಪ್ರವಾದಿಗಳೂ ನನ್ನಿಂದ ಅಟ್ಟಲ್ಪಟ್ಟು ಅಳಿದುಹೋಗುವದಕ್ಕೆ ಅವರ ದುರ್ಬೋಧನೆಯು ಆಸ್ಪದವಾಗುವದು.


ಸೆರೆಯವರೆಲ್ಲರಿಗೆ ಹೀಗೆ ಹೇಳಿ ಕಳುಹಿಸು - ನೆಹೆಲಾಮ್ಯನಾದ ಶೆಮಾಯನ ವಿಷಯದಲ್ಲಿ ಯೆಹೋವನು ಇಂತೆನ್ನುತ್ತಾನೆ - ನಾನು ಕಳುಹಿಸದೆ ಹೋದರೂ ಶೆಮಾಯನು ನಿಮಗೆ ಪ್ರವಾದನೆಮಾಡಿ ಸುಳ್ಳಿನಲ್ಲಿ ನಂಬಿಕೆಯನ್ನು ಹುಟ್ಟಿಸಿದ ಕಾರಣ


ಇವರು ಇಸ್ರಾಯೇಲಿನಲ್ಲಿ ದುರಾಚಾರವನ್ನು ನಡಿಸಿ ನೆರೆಯವರ ಹೆಂಡಿರಲ್ಲಿ ವ್ಯಭಿಚಾರಮಾಡಿ ನಾನು ಆಜ್ಞಾಪಿಸಿದ ಮಾತುಗಳನ್ನು ನನ್ನ ಹೆಸರಿನ ಮೇಲೆ ಸುಳ್ಳಾಗಿ ಸಾರಿದರಲ್ಲಾ; ನಾನೇ ಬಲ್ಲೆ, ನಾನೇ ಸಾಕ್ಷಿ ಎಂದು ಯೆಹೋವನು ಅನ್ನುತ್ತಾನೆ ಎಂಬದೇ.


ನೀವು ಬಾಬೆಲಿನ ಅರಸನ ಅಡಿಯಾಳಾಗುವದಿಲ್ಲ ಎಂದು ನಿಮಗೆ ನುಡಿಯುವ ಪ್ರವಾದಿಗಳ ಮಾತುಗಳಿಗೆ ಕಿವಿಗೊಡಬೇಡಿರಿ; ಅವರು ನಿಮಗೆ ಸುಳ್ಳನ್ನು ಸಾರುತ್ತಾರೆ.


ಇಸ್ರಾಯೇಲ್ಯರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ತನ್ನ ಹೆಸರೆತ್ತಿ ಸುಳ್ಳನ್ನು ಸಾರುವ ಕೊಲಾಯನ ಮಗನಾದ ಅಹಾಬ, ಮಾಸೇಯನ ಮಗನಾದ ಚಿದ್ಕೀಯ ಇವರ ವಿಷಯವಾಗಿ ಇಂತೆನ್ನುತ್ತಾನೆ - ಇಗೋ, ನಾನು ಇವರನ್ನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೆ ಕೊಡುವೆನು; ಅವನು ನಿಮ್ಮ ಕಣ್ಣೆದುರಿಗೆ ಇವರನ್ನು ಕೊಲ್ಲಿಸುವನು;


ನಿನ್ನ ಪ್ರವಾದಿಗಳು ಕಂಡುಹೇಳಿದ ಕಣಿಗಳು ವ್ಯರ್ಥ, ನಿಸ್ಸಾರ; ಅವರು ನಿನ್ನ ದೋಷವನ್ನು ಬೈಲಿಗೆ ತಾರದಕಾರಣ ನಿನ್ನ ದುರವಸ್ಥೆಯು ನೀಗಲಿಲ್ಲ; ನಿನ್ನ ವಿಷಯವಾಗಿ ಅವರಿಗೆ ಕಂಡುಬಂದ ವ್ಯರ್ಥ ದೈವೋಕ್ತಿಗಳು ನೀನು ಗಡೀಪಾರಾಗಿ ಒಯ್ಯಲ್ಪಡುವದಕ್ಕೆ ಆಸ್ಪದವಾದವು.


ನಾನು ಈ ಪ್ರವಾದಿಗಳನ್ನು ಕಳುಹಿಸಲಿಲ್ಲ, ತಾವೇ ಆತುರಗೊಂಡರು; ನಾನು ಇವರಿಗೆ ಏನೂ ಹೇಳಲಿಲ್ಲ, ತಾವೇ ಪ್ರವಾದಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು