Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 3:11 - ಕನ್ನಡ ಸತ್ಯವೇದವು J.V. (BSI)

11 ಮತ್ತು ಯೆಹೋವನು ನನಗೆ ಹೀಗೆ ಹೇಳಿದನು - ಭ್ರಷ್ಟಳಾದ ಇಸ್ರಾಯೇಲು ದ್ರೋಹಿಯಾದ ಯೆಹೂದಕ್ಕಿಂತಲೂ ಶಿಷ್ಟಳಾಗಿ ಕಂಡುಬಂದಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಮತ್ತು ಯೆಹೋವನು ನನಗೆ ಹೀಗೆ ಹೇಳಿದನು, “ಭ್ರಷ್ಟಳಾದ ಇಸ್ರಾಯೇಲ್ ದ್ರೋಹಿಯಾದ ಯೆಹೂದಕ್ಕಿಂತಲೂ ಶಿಷ್ಟಳಾಗಿ ಕಂಡುಬಂದಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಬಳಿಕ ಸರ್ವೇಶ್ವರ ಸ್ವಾಮಿ ನನಗೆ ಇಂತೆಂದರು - “ಭ್ರಷ್ಟಳಾದ ಇಸ್ರಯೇಲ್ ದ್ರೋಹಿಯಾದ ಜುದೇಯಳಿಗಿಂತ ಶಿಷ್ಟಳಾಗಿ ಕಂಡುಬಂದಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಯೆಹೋವನು ನನಗೆ, “ಇಸ್ರೇಲ್ ಎಂಬಾಕೆಯು ನನಗೆ ನಂಬಿಗಸ್ತಳಾಗಿ ನಡೆದುಕೊಳ್ಳಲಿಲ್ಲ. ಆದರೆ ಅವಳು ಯೆಹೂದ ಎಂಬಾಕೆಗಿಂತ ಒಳ್ಳೆಯವಳಾಗಿ ಕಂಡು ಬಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಯೆಹೋವ ದೇವರು ನನಗೆ ಹೇಳಿದ್ದೇನೆಂದರೆ: “ಭ್ರಷ್ಟಳಾದ ಇಸ್ರಾಯೇಲ್, ದ್ರೋಹಿಯಾದ ಯೆಹೂದಕ್ಕಿಂತಲೂ ಶಿಷ್ಟಳಾಗಿ ಕಂಡುಬಂದಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 3:11
9 ತಿಳಿವುಗಳ ಹೋಲಿಕೆ  

ಅವಳ ತಂಗಿಯಾದ ಒಹೊಲೀಬಳು ಇದನ್ನು ನೋಡಿಯೂ ಅವಳಿಗಿಂತ ಅಧಿಕವಾಗಿ ಮೋಹಗೊಂಡು ಅಕ್ಕನ ಸೂಳೆತನಕ್ಕಿಂತ ಹೆಚ್ಚಾದ ಸೂಳೆತನವನ್ನು ನಡಿಸಿ ಅವಳನ್ನು ಮೀರಿ ಬಲುಕೆಟ್ಟವಳಾದಳು.


ನನ್ನ ಕಡೆಯಿಂದ ತಿರಿಗಿಕೊಳ್ಳುವದು ನನ್ನ ಜನರ ಗುಣವೇ; ಅವರನ್ನು ಮೇಲಕ್ಕೆ ಕರೆಯುವವರು ಇದ್ದರೂ ಮೇಲಕ್ಕೆತ್ತುವವರು ಯಾರೂ ಇಲ್ಲ.


ಇಸ್ರಾಯೇಲು ಅಗಡುಹಸುವಿನಂತೆ ಮೊಂಡುತನದಿಂದ ನಡೆದಿದೆ; ಈಗ ಯೆಹೋವನು ಅದನ್ನು ಕುರಿಯಂತೆ ವಿಶಾಲಸ್ಥಳದಲ್ಲಿ ಮೇಯಿಸುವನೋ?


ಆದರೆ ನೀನು ನಡೆದ ದುರ್ಮಾರ್ಗವು ಅವರು ನಡೆದಂಥದಲ್ಲ, ನಿನ್ನ ಅಸಹ್ಯಕಾರ್ಯಗಳು ಅವರು ನಡಿಸಿದಂಥವುಗಳಲ್ಲ, ಅವರ ದುರ್ನಡತೆಯು ಅತ್ಯಲ್ಪವೆಂದು ಸರ್ವದಾ ಅವರಿಗಿಂತ ಬಹುಕೆಟ್ಟವಳಾಗಿ ನಡೆದುಕೊಂಡಿ.


ಭ್ರಷ್ಟರಾದ ಮಕ್ಕಳೇ, ಹಿಂದಿರುಗಿರಿ, ನಿಮ್ಮ ಭ್ರಷ್ಟತ್ವವನ್ನು ಪರಿಹರಿಸುವೆನು [ಎಂದು ಯೆಹೋವನು ಅನ್ನುತ್ತಾನೆ. ಅದಕ್ಕೆ ಜನರು] - ಇಗೋ, ನಿನ್ನ ಬಳಿಗೆ ಬಂದೆವು. ನೀನು ಯೆಹೋವನು, ನಮ್ಮ ದೇವರು.


ಭ್ರಷ್ಟಳಾದ ಇಸ್ರಾಯೇಲು ಹಾದರಮಾಡಿದ ಕಾರಣದಿಂದಲೇ ನಾನು ಅವಳನ್ನು ನಿರಾಕರಿಸಿ ತ್ಯಾಗಪತ್ರ ಕೊಟ್ಟದ್ದನ್ನು ಯೆಹೂದವೆಂಬ ದ್ರೋಹಿಯಾದ ಅವಳ ತಂಗಿಯು ನೋಡಿಯೂ ಅಂಜದೆ ತಾನೂ ಹೋಗಿ ಸೂಳೆತನವನ್ನು ನಡಿಸಿದಳು.


ಅವಳು ಇವುಗಳನ್ನೆಲ್ಲಾ ನಡಿಸಿದ ಮೇಲೆ ನನ್ನ ಬಳಿಗೆ ಪುನಃ ಬಂದಾಳು ಅಂದುಕೊಂಡೆನು. ಆದರೆ ಬರಲಿಲ್ಲ. ಆಗ ಯೆಹೂದವೆಂಬ ದ್ರೋಹಿಯಾದ ಅವಳ ತಂಗಿಯು ಇದನ್ನು ನೋಡಿದಳು.


ನನ್ನ ಮಾತುಗಳನ್ನು ಕೇಳಲೊಲ್ಲದಿದ್ದ ತಮ್ಮ ಮೂಲ ಪಿತೃಗಳ ದುಷ್ಕೃತ್ಯಗಳ ಕಡೆಗೆ ತಿರುಗಿಕೊಂಡು ಅನ್ಯದೇವತೆಗಳನ್ನು ಹಿಂಬಾಲಿಸಿ ಸೇವಿಸಿದ್ದಾರೆ; ಇಸ್ರಾಯೇಲ್ ವಂಶದವರೂ ಯೆಹೂದ ವಂಶದವರೂ ನಾನು ಅವರ ಪಿತೃಗಳ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ಮೀರಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು