Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 3:13 - ಕನ್ನಡ ಸತ್ಯವೇದವು J.V. (BSI)

13 ಇದೊಂದನ್ನು ಮಾಡು, ನೀನು ಕಂಡಕಡೆಯೆಲ್ಲ ತಿರುಗುತ್ತಾ ಸೊಂಪಾಗಿ ಬೆಳೆದಿರುವ ಪ್ರತಿಯೊಂದು ಮರದ ಕೆಳಗೆ ಅನ್ಯರನ್ನು ಸೇರಿ ನನ್ನ ಮಾತನ್ನು ಕೇಳದೆ ನಿನ್ನ ದೇವರಾದ ಯೆಹೋವನೆಂಬ ನನಗೆ ದ್ರೋಹಮಾಡಿದ್ದೀ ಎಂಬದಕ್ಕೆ ಒಪ್ಪಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಇದೊಂದನ್ನು ಮಾಡು, ನೀನು ನೋಡಿದ ಕಡೆಯೆಲ್ಲಾ ತಿರುಗುತ್ತಾ, ಸೊಂಪಾಗಿ ಬೆಳೆದಿರುವ ಪ್ರತಿಯೊಂದು ಮರದ ಕೆಳಗೆ ಅನ್ಯರನ್ನು ಸೇರಿ, ನನ್ನ ಮಾತನ್ನು ಕೇಳದೆ, ನಿನ್ನ ದೇವರಾದ ಯೆಹೋವನೆಂಬ ನನಗೆ ದ್ರೋಹ ಮಾಡಿದ್ದಿ ಎಂಬುವುದನ್ನು ಒಪ್ಪಿಕೋ’ ಇದೇ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ನೀನು ನಿನ್ನ ತಪ್ಪನ್ನು ಮಾತ್ರ ಒಪ್ಪಿಕೊ. ಕಂಡ ಕಡೆಯೆಲ್ಲ ಅಲೆದಾಡಿ, ಹುಲುಸಾಗಿ ಬೆಳೆದ ಪ್ರತಿಯೊಂದು ಮರದ ಕೆಳಗೆ ಅನ್ಯದೇವರುಗಳನ್ನು ಸೇರಿ, ನನ್ನ ಮಾತುಗಳನ್ನು ಕೇಳದೆ, ನಿನ್ನ ದೇವರಾದ ಸರ್ವೇಶ್ವರ ಎಂಬ ನನಗೇ ದ್ರೋಹಮಾಡಿರುವೆ ಎಂಬುದನ್ನು ಒಪ್ಪಿಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ‘ನೀವು ನಿಮ್ಮ ಪಾಪವನ್ನು ಅರಿತುಕೊಂಡರೆ ಸಾಕು. ನೀವು ನಿಮ್ಮ ದೇವರಾದ ಯೆಹೋವನಿಗೆ ವಿರುದ್ಧ ತಿರುಗಿದಿರಿ, ಅದೇ ನಿಮ್ಮ ಪಾಪ. ನೀವು ಬೇರೆ ರಾಷ್ಟ್ರದವರ ವಿಗ್ರಹಗಳನ್ನು ಆರಾಧಿಸಿದಿರಿ. ನೀವು ಪ್ರತಿಯೊಂದು ಹಸಿರು ಮರದ ಕೆಳಗೆ ವಿಗ್ರಹಗಳನ್ನು ಆರಾಧಿಸಿದಿರಿ. ನೀವು ನನ್ನ ಆಜ್ಞೆಯನ್ನು ಪರಿಪಾಲಿಸಲಿಲ್ಲ’” ಇದು ಯೆಹೋವನ ನುಡಿಯಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನಿನ್ನ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ದ್ರೋಹ ಮಾಡಿ, ಒಂದೊಂದು ಹಸುರು ಮರದ ಕೆಳಗೆ ನಿನ್ನ ಮಾರ್ಗಗಳನ್ನು ಅನ್ಯ ದೇವರುಗಳಿಗೆ ಚದರಿಸಿ, ನನ್ನ ಶಬ್ದಕ್ಕೆ ಕಿವಿಗೊಡಲಿಲ್ಲವೆಂಬ ನಿನ್ನ ಅಕ್ರಮವನ್ನು ಮಾತ್ರ ಅರಿಕೆ ಮಾಡು,’ ” ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 3:13
22 ತಿಳಿವುಗಳ ಹೋಲಿಕೆ  

ನಾವು ತಂದುಕೊಂಡ ಅವಮಾನದಲ್ಲಿ ಬಿದ್ದಿರೋಣ, ನಮ್ಮ ನಾಚಿಕೆಯು ನಮ್ಮನ್ನು ಮುಚ್ಚಿಬಿಡಲಿ; ನಮ್ಮ ದೇವರಾದ ಯೆಹೋವನಿಗೆ ನಾವೂ ನಮ್ಮ ಪಿತೃಗಳೂ ನಮ್ಮ ಚಿಕ್ಕತನದಿಂದ ಈಗಿನವರೆಗೆ ಪಾಪಮಾಡುತ್ತಾ ಬಂದಿದ್ದೇವಷ್ಟೆ; ನಮ್ಮ ದೇವರಾದ ಯೆಹೋವನ ಮಾತನ್ನು ನಾವು ಕೇಳಲೇ ಇಲ್ಲ ಎಂದು ಮೊರೆಯಿಡುತ್ತಾರೆ.


ಮತ್ತೆ ಅರಸನಾದ ಯೋಷೀಯನ ಕಾಲದಲ್ಲಿ ಯೆಹೋವನು ನನಗೆ ಹೀಗೆ ಹೇಳಿದನು - ಭ್ರಷ್ಟಳಾದ ಇಸ್ರಾಯೇಲು ಮಾಡಿದ್ದನ್ನು ನೋಡಿದಿಯಾ? ಅವಳು ಎತ್ತರವಾದ ಎಲ್ಲಾ ಗುಡ್ಡಗಳನ್ನು ಹತ್ತಿ ಸೊಂಪಾಗಿ ಬೆಳೆದಿರುವ ಎಲ್ಲಾ ಮರಗಳ ಕೆಳಗೆ ಹೋಗಿ ಸೂಳೆಯಾಗಿ ನಡೆದಳಷ್ಟೆ.


ನಿನ್ನ ಕಾಲು ಸವೆಯದಂತೆಯೂ ನಿನ್ನ ಗಂಟಲು ಆರದಂತೆಯೂ ತಡೆದುಕೋ; ಆದರೆ ನೀನು - ನಿರೀಕ್ಷೆಯಿಲ್ಲ, ಆಗಲಾರದು, ಅನ್ಯರ ಮೇಲೆ ಮೋಹಗೊಂಡಿದ್ದೇನೆ. ಅವರ ಹಿಂದೆಯೇ ಹೋಗುವೆನು ಅಂದುಕೊಂಡಿದ್ದೀ.


ನೀವು ಸ್ವಾಧೀನಮಾಡಿಕೊಳ್ಳುವ ದೇಶದ ಜನಾಂಗಗಳು ದೊಡ್ಡ ಬೆಟ್ಟಗಳ ಮೇಲೆಯೂ ದಿನ್ನೆಗಳ ಮೇಲೆಯೂ ಹರಡಿಕೊಂಡ ಮರಗಳ ಕೆಳಗೆಯೂ ತಮ್ಮ ದೇವರುಗಳನ್ನು ಆರಾಧಿಸುತ್ತಾರಷ್ಟೆ; ಆ ಸ್ಥಳಗಳನ್ನೆಲ್ಲಾ ನೀವು ಅಗತ್ಯವಾಗಿ ನಾಶಮಾಡಬೇಕು.


ಕಣ್ಣೆತ್ತಿ ಬೋಳುಗುಡ್ಡಗಳನ್ನು ನೋಡು, ಯಾವದರಲ್ಲಿ ನಿನ್ನನ್ನು ಕೆಡಿಸಲಿಲ್ಲ? ಅರಬಿಯನು ಅಡವಿಯಲ್ಲಿ ಹೊಂಚುಹಾಕುವ ಹಾಗೆ ನೀನು ದಾರಿಯ ಮಗ್ಗುಲಲ್ಲಿ ಅವರಿಗಾಗಿ ಹೊಂಚುತ್ತಾ ಕೂತಿದ್ದೀ; ನಿನ್ನ ಸೂಳೆತನದಿಂದಲೂ ನಿನ್ನ ಕೆಟ್ಟತನದಿಂದಲೂ ದೇಶವನ್ನು ಅಪವಿತ್ರಮಾಡಿದ್ದೀ.


ಬಹುಕಾಲದಿಂದ ನೀನು ನಿನ್ನ ನೊಗವನ್ನು ಮುರಿದು ಕಣ್ಣಿಗಳನ್ನು ಕಿತ್ತು ನಾನು ಸೇವೆ ಮಾಡುವದಿಲ್ಲವೆಂದು ಅಂದುಕೊಳ್ಳುತ್ತಿದ್ದೀ; ಎತ್ತರವಾದ ಎಲ್ಲಾ ಗುಡ್ಡಗಳ ಮೇಲೂ ಸೊಂಪಾಗಿ ಬೆಳೆದಿರುವ ಎಲ್ಲಾ ಮರಗಳ ಕೆಳಗೂ ನೀನು ಅಡ್ಡಬಿದ್ದು ಸೂಳೆಯಾಗಿ ನಡೆದಿದ್ದೀ.


ಆದರೆ ನೀನು ನಿನ್ನ ಸೌಂದರ್ಯದಲ್ಲಿಯೇ ನಂಬಿಕೆಯಿಟ್ಟು ನಾನು ಪ್ರಸಿದ್ಧಳಾಗಿದ್ದೇನಲ್ಲಾ ಎಂದು ಉಬ್ಬಿಕೊಂಡು ಸೂಳೆತನಮಾಡಿದಿ; ಹಾದುಹೋಗುವ ಪ್ರತಿಯೊಬ್ಬನ ಸಂಗಡ ವಿುತಿಮೀರಿ ಹಾದರಮಾಡಿದಿ, ಒಬ್ಬೊಬ್ಬನಿಗೂ ಒಳಗಾದಿ.


ಯೆಹೋವನೇ, ನಮ್ಮ ದುಷ್ಟತನವನ್ನೂ ನಮ್ಮ ಪಿತೃಗಳ ದುರಾಚಾರವನ್ನೂ ತಿಳಿದುಕೊಂಡಿದ್ದೇವೆ; ನಿನಗೇ ಪಾಪಮಾಡಿದ್ದೇವಲ್ಲ.


ದೋಷಗಳನ್ನು ಮುಚ್ಚಿಕೊಳ್ಳುವವನಿಗೆ ಶುಭವಾಗದು; ಅವುಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನಿಗೆ ಕರುಣೆ ದೊರೆಯುವದು.


ಇಸ್ರಾಯೇಲ್‍ಸಂತಾನದವರು ಎಲ್ಲಾ ಅನ್ಯಕುಲದವರಿಂದ ತಮ್ಮನ್ನು ಬೇರ್ಪಡಿಸಿಕೊಂಡು ನಿಂತು ತಮ್ಮ ಪಾಪಗಳನ್ನೂ ತಮ್ಮ ಪಿತೃಗಳ ಪಾಪಗಳನ್ನೂ ಆತನಿಗೆ ಅರಿಕೆಮಾಡಿದರು.


ಏಲಾ ಮರಗಳ ತೋಪುಗಳಲ್ಲಿಯೂ ಸೊಂಪಾಗಿ ಬೆಳೆದಿರುವ ಪ್ರತಿಯೊಂದು ಮರದ ನೆರಳಿನಲ್ಲಿಯೂ ಮದವೇರಿಸಿಕೊಂಡು ಹೊಳೆ ಕೊರೆದ ಡೊಂಗರಗಳಲ್ಲಿಯೂ ಬೆಟ್ಟದ ಗವಿಗಳಲ್ಲಿಯೂ ಮಕ್ಕಳನ್ನು ಕೊಂದುಹಾಕುವ ನೀವು ದ್ರೋಹದ ಸಂತಾನವೂ ಸುಳ್ಳಿನ ಸಂತತಿಯೂ ಆಗಿದ್ದೀರಿ.


ಯೆಹೋವನು ಈ ಜನರನ್ನು ಕುರಿತು - ಇವರು [ನನ್ನನ್ನು ಪ್ರಯಾಣಿಕನು ಎಂದ] ಹಾಗೆಯೇ ಅಲೆಯುವದಕ್ಕೆ ಇಷ್ಟಪಟ್ಟಿದ್ದಾರೆ, ಕಾಲನ್ನು ಹಿಂದೆಗೆಯಲಿಲ್ಲ; ಆದಕಾರಣ ಯೆಹೋವನಾದ ನಾನು ಇವರನ್ನು ಕಟಾಕ್ಷಿಸೆನು; ಈಗಲೇ ಇವರ ಅಪರಾಧವನ್ನು ಮನಸ್ಸಿಗೆ ತಂದುಕೊಂಡು ಇವರ ಪಾಪಗಳಿಗೆ ದಂಡನೆಯನ್ನು ವಿಧಿಸುವೆನು ಎಂದು ಹೇಳಿದ್ದಾನೆ.


ನನ್ನ ಜನರು ತಮ್ಮ ದೋಷಫಲವನ್ನು ಅನುಭವಿಸಿ ನನ್ನ ಪ್ರಸನ್ನತೆಯನ್ನು ಬೇಡಿಕೊಳ್ಳುವ ತನಕ ನಾನು ನನ್ನ ವಾಸಸ್ಥಾನಕ್ಕೆ ಹಿಂದಿರುಗಿ ಹೋಗಿರುವೆನು; ಅವರು ಇಕ್ಕಟ್ಟಿಗೆ ಸಿಕ್ಕಿದ ಕೂಡಲೇ ನನ್ನನ್ನು ಆಶ್ರಯಿಸುವರು.


ಅವರಾದರೋ ಕೇಳಲಿಲ್ಲ, ಕಿವಿಗೊಡಲಿಲ್ಲ, ಸ್ವಂತ ಆಲೋಚನೆಗಳನ್ನು ಅನುಸರಿಸಿ ತಮ್ಮ ದುಷ್ಟಹೃದಯದ ಹಟದಂತೆ ನಡೆದು ಹಿಂದಿರುಗಿಯೇ ಹೋದರು, ಮುಂದರಿಯಲಿಲ್ಲ.


ನಿಮ್ಮವರಾದರೋ ನನ್ನ ಮಾತನ್ನು ಕೇಳಲಿಲ್ಲ, ಕಿವಿಗೊಡಲಿಲ್ಲ, ನನ್ನ ಆಜ್ಞೆಗೆ ಮಣಿಯಲಿಲ್ಲ; ತಮ್ಮ ಪಿತೃಗಳಿಗಿಂತಲೂ ಕೆಟ್ಟವರಾಗಿ ನಡೆದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು