ಯೆರೆಮೀಯ 3:18 - ಕನ್ನಡ ಸತ್ಯವೇದವು J.V. (BSI)18 ಆ ಕಾಲದಲ್ಲಿ ಯೆಹೂದವಂಶವು ಇಸ್ರಾಯೇಲ್ ವಂಶದೊಡನೆ ಜೊತೆಯಾಗಿ ನಡೆಯುವದು, ಎರಡೂ ಕಲೆತು ನಾನು ನಿಮ್ಮ ಪಿತೃಗಳಿಗೆ ಬಾಧ್ಯವಾಗಿ ದಯಪಾಲಿಸಿದ ದೇಶಕ್ಕೆ ಬಡಗಣ ಸೀಮೆಯೊಳಗಿಂದ ಬರುವವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಆ ಕಾಲದಲ್ಲಿ ಯೆಹೂದ ವಂಶವು ಇಸ್ರಾಯೇಲ್ ವಂಶದೊಡನೆ ಜೊತೆಯಾಗಿ ನಡೆಯುವುದು. ಎರಡೂ ಸೇರಿ ನಾನು ನಿಮ್ಮ ಪೂರ್ವಿಕರಿಗೆ ಬಾಧ್ಯವಾಗಿ ದಯಪಾಲಿಸಿದ ದೇಶಕ್ಕೆ ಉತ್ತರ ಸೀಮೆಯನ್ನು ಬಿಟ್ಟು ಬರುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಆ ಕಾಲದಲ್ಲಿ ಜುದೇಯ ವಂಶವು ಇಸ್ರಯೇಲ್ ವಂಶದೊಡನೆ ಜೊತೆಯಾಗಿ ಬಾಳುವುದು. ಈ ಎರಡು ವಂಶಗಳೂ ಉತ್ತರ ಪ್ರಾಂತ್ಯವನ್ನು ಬಿಟ್ಟು ನಾನು ನಿಮ್ಮ ಪೂರ್ವಜರಿಗೆ ಬಾಧ್ಯವಾಗಿ ಕೊಟ್ಟ ನಾಡಿಗೆ ಬರುವುವು.” ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಆ ಕಾಲದಲ್ಲಿ ಯೆಹೂದದ ಜನರು ಇಸ್ರೇಲ್ ಜನರನ್ನು ಕೂಡಿಕೊಳ್ಳುವರು. ಅವೆರಡೂ ಕೂಡಿ ಉತ್ತರದಿಕ್ಕಿನ ಪ್ರದೇಶದಿಂದ ಬರುವರು. ನಾನು ಅವರ ಪೂರ್ವಿಕರಿಗೆ ಕೊಟ್ಟ ಪ್ರದೇಶಕ್ಕೆ ಅವರು ಬರುವರು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಆ ಕಾಲದಲ್ಲಿ ಯೆಹೂದದ ವಂಶವು ಇಸ್ರಾಯೇಲ್ ವಂಶದೊಡನೆ ಜೊತೆಯಾಗಿ ಬಾಳುವುದು. ಈ ಎರಡು ವಂಶಗಳೂ ಉತ್ತರ ಪ್ರಾಂತಗಳನ್ನು ಬಿಟ್ಟು, ನಾನು ನಿಮ್ಮ ಪೂರ್ವಜರಿಗೆ ಬಾಧ್ಯವಾಗಿ ಕೊಟ್ಟ ನಾಡಿಗೆ ಬರುವುವು.” ಅಧ್ಯಾಯವನ್ನು ನೋಡಿ |