ಯೆರೆಮೀಯ 3:19 - ಕನ್ನಡ ಸತ್ಯವೇದವು J.V. (BSI)19 ನಾನು ಎಷ್ಟೋ ಸಂತೋಷದಿಂದ ಗಂಡು ಮಕ್ಕಳೊಳಗೆ ನಿನ್ನನ್ನೂ ಎಣಿಸಿ ನಿನಗೆ ಮನೋಹರವಾದ ದೇಶವನ್ನು ಅಂದರೆ ಸಮಸ್ತಜನಾಂಗಗಳ ಬಾಧ್ಯಗಳಲ್ಲಿ ರಮಣೀಯವಾದದ್ದನ್ನು ಕೊಡುವೆನು; ನೀನು ನನ್ನ ಅನುಸರಣೆಯನ್ನು ಬಿಟ್ಟು ಓರೆಯಾಗದೆ ನನ್ನನ್ನು ತಂದೆಯೆನ್ನುವಿ ಅಂದುಕೊಂಡೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 “ಇಸ್ರಾಯೇಲೇ, ನಾನು ಎಷ್ಟೋ ಸಂತೋಷದಿಂದ ಗಂಡು ಮಕ್ಕಳೊಳಗೆ ನಿನ್ನನ್ನೂ ಆರಿಸಿಕೊಂಡು, ನಿನಗೆ ಮನೋಹರವಾದ ದೇಶವನ್ನು ಅಂದರೆ ಸಮಸ್ತ ಜನಾಂಗಗಳ ಬಾಧ್ಯತೆಗಳಲ್ಲಿ ರಮಣೀಯವಾದದ್ದನ್ನು ಕೊಡುವೆನು; ನೀನು ನನ್ನ ಅನುಸರಣೆಯನ್ನು ಬಿಟ್ಟು ಓರೆಯಾಗದೆ ನನ್ನನ್ನು ‘ತಂದೆ’ ಎನ್ನುವಿ ಅಂದುಕೊಂಡೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ : “ಎಲೈ ಇಸ್ರಯೇಲ್, ನಾನು ಎಷ್ಟೋ ಆದರದಿಂದ ನಿನ್ನನ್ನು ನನ್ನ ಪುತ್ರನೆಂದು ಭಾವಿಸಿ, ನಿನಗೆ ಮನೋಹರವಾದ ನಾಡನ್ನು, ಅಂದರೆ, ಸಮಸ್ತ ರಾಷ್ಟ್ರಗಳಲ್ಲಿ ರಮಣೀಯವಾದ ಸೊತ್ತನ್ನು ಕೊಡಬೇಕು ಎಂದುಕೊಂಡಿದ್ದೆ. ನೀನು ನನ್ನನ್ನು ‘ತಂದೆ’ ಎಂದು ಸನ್ಮಾನಿಸಿ, ನನ್ನನ್ನು ತಪ್ಪದೆ ಹಿಂಬಾಲಿಸಿ ಬರುವೆಯೆಂದಿದ್ದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಯೆಹೋವನಾದ ನಾನು ಹೀಗೆಂದುಕೊಂಡೆ: “ನಾನು ಸಂತೋಷದಿಂದ ನಿಮ್ಮನ್ನು ಮಕ್ಕಳಂತೆ ನೋಡಿಕೊಳ್ಳುವೆನು. ಬೇರೆ ಎಲ್ಲಾ ಜನಾಂಗಗಳ ಪ್ರದೇಶಕ್ಕಿಂತ ಅತಿ ಸುಂದರವಾದ ಪ್ರದೇಶವನ್ನು ನಿಮಗೆ ಕೊಡುವುದಕ್ಕೆ ನಾನು ಸಂತೋಷಪಡುವೆನು. ನೀವು ನನ್ನನ್ನು ‘ತಂದೆ’ ಎಂದು ಕರೆಯುವಿರೆಂದು ನಾನು ಭಾವಿಸಿದ್ದೆ. ನೀವು ಯಾವಾಗಲೂ ನನ್ನ ಹಿಂಬಾಲಕರಾಗಿರುವಿರೆಂದು ಭಾವಿಸಿದ್ದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಯೆಹೋವ ದೇವರು ಹೇಳುವುದೇನೆಂದರೆ: “ಎಲೈ ಇಸ್ರಾಯೇಲ್, ನಾನು ಎಷ್ಟೋ ಸಂತೋಷದಿಂದ ನಿನ್ನನ್ನು ನನ್ನ ಪುತ್ರನೆಂದು ಭಾವಿಸಿ, ನಿನಗೆ ಮನೋಹರವಾದ ನಾಡನ್ನು ಎಂದರೆ, ಸಮಸ್ತ ರಾಷ್ಟ್ರಗಳಲ್ಲಿ ರಮಣೀಯವಾದ ಸೊತ್ತನ್ನು ಕೊಡಬೇಕು ಎಂದುಕೊಂಡಿದ್ದೆ. ನೀನು ನನ್ನನ್ನು, ‘ತಂದೆ,’ ಎಂದು ಸನ್ಮಾನಿಸಿ, ನನ್ನನ್ನು ತಪ್ಪದೆ ಹಿಂಬಾಲಿಸಿ ಬರುವೆ ಎಂದಿದ್ದೆ. ಅಧ್ಯಾಯವನ್ನು ನೋಡಿ |