Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 3:2 - ಕನ್ನಡ ಸತ್ಯವೇದವು J.V. (BSI)

2 ಕಣ್ಣೆತ್ತಿ ಬೋಳುಗುಡ್ಡಗಳನ್ನು ನೋಡು, ಯಾವದರಲ್ಲಿ ನಿನ್ನನ್ನು ಕೆಡಿಸಲಿಲ್ಲ? ಅರಬಿಯನು ಅಡವಿಯಲ್ಲಿ ಹೊಂಚುಹಾಕುವ ಹಾಗೆ ನೀನು ದಾರಿಯ ಮಗ್ಗುಲಲ್ಲಿ ಅವರಿಗಾಗಿ ಹೊಂಚುತ್ತಾ ಕೂತಿದ್ದೀ; ನಿನ್ನ ಸೂಳೆತನದಿಂದಲೂ ನಿನ್ನ ಕೆಟ್ಟತನದಿಂದಲೂ ದೇಶವನ್ನು ಅಪವಿತ್ರಮಾಡಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಕಣ್ಣೆತ್ತಿ ಬೋಳು ಗುಡ್ಡಗಳನ್ನು ನೋಡು, ಯಾವುದರಲ್ಲಿ ನಿನ್ನನ್ನು ನೀನು ಕೆಡಿಸಿಕೊಳ್ಳಲಿಲ್ಲ? ಅರಬಿಯನು ಅಡವಿಯಲ್ಲಿ ಹೊಂಚುಹಾಕುವ ಹಾಗೆ ನೀನು ದಾರಿಯ ಮಗ್ಗುಲಲ್ಲಿ ಅವರಿಗಾಗಿ ಹೊಂಚು ಹಾಕುತ್ತಾ ಕುಳಿತಿದ್ದಿ; ನಿನ್ನ ವ್ಯಭಿಚಾರದಿಂದಲೂ, ನಿನ್ನ ಕೆಟ್ಟತನದಿಂದಲೂ ದೇಶವನ್ನು ಅಪವಿತ್ರಮಾಡಿದ್ದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಕಣ್ಣೆತ್ತಿ ಬೋಳು ಬೆಟ್ಟಗಳನ್ನು ನೋಡು, ಯಾವುದರಲ್ಲಿ ತಾನೆ ನೀನು ವೇಶ್ಯೆಯಾಗಿ ವರ್ತಿಸಲಿಲ್ಲ? ಅರಬೀಯನು ಅಡವಿಯಲ್ಲಿ ಹೊಂಚುಹಾಕುವ ಹಾಗೆ ನೀನು ದಾರಿಯ ಮಗ್ಗುಲಲ್ಲಿ ಅವರಿಗಾಗಿ ಹೊಂಚುಹಾಕುತ್ತಾ ಕುಳಿತಿದ್ದೆ. ನಿನ್ನ ವೇಶ್ಯೆತನದಿಂದಲೂ ನಿನ್ನ ಕೆಟ್ಟತನದಿಂದಲೂ ನಾಡನ್ನು ಅಪವಿತ್ರಮಾಡಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ಯೆಹೂದವೇ, ತಲೆಯೆತ್ತಿ ಬೋಳುಗುಡ್ಡಗಳ ಕಡೆಗೆ ನೋಡು. ನೀನು ಕಾಮಕೇಳಿ ಆಡದ ಸ್ಥಳ ಯಾವುದಾದರೂ ಇದೆಯೇ? ಅರಬೀಯನಂತೆ ನೀನು ಮಾರ್ಗದ ಮಗ್ಗುಲಲ್ಲಿ ಪ್ರಿಯತಮರಿಗಾಗಿ ಎದುರುನೋಡುತ್ತಾ ಕುಳಿತಿರುವೆ. ನೀನು ಭೂಮಿಯನ್ನು ಅಪವಿತ್ರಗೊಳಿಸಿದೆ; ಹೇಗೆಂದರೆ, ನೀನು ಅನೇಕ ಕೆಟ್ಟಕೆಲಸಗಳನ್ನು ಮಾಡಿದೆ. ನನಗೆ ವಿಶ್ವಾಸದ್ರೋಹ ಮಾಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ನಿನ್ನ ಕಣ್ಣುಗಳನ್ನು ಉನ್ನತ ಸ್ಥಳಗಳ ಮೇಲೆ ಎತ್ತು. ಯಾವುದರಲ್ಲಿ ನಿನ್ನನ್ನು ನೀನು ಕೆಡಿಸಿಕೊಳ್ಳಲಿಲ್ಲ? ಮರುಭೂಮಿಯಲ್ಲಿ ಅರಬೀಯನ ಹಾಗೆ ದಾರಿಗಳಲ್ಲಿ ಅವರಿಗೋಸ್ಕರ ಕೂತುಕೊಂಡಿದ್ದೀ. ಹೀಗೆ ನಿನ್ನ ವೇಶ್ಯೆತನಗಳಿಂದಲೂ, ನಿನ್ನ ಕೆಟ್ಟತನಗಳಿಂದಲೂ ದೇಶವನ್ನು ಅಪವಿತ್ರ ಮಾಡಿದ್ದೀಯೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 3:2
22 ತಿಳಿವುಗಳ ಹೋಲಿಕೆ  

ಬಹುಕಾಲದಿಂದ ನೀನು ನಿನ್ನ ನೊಗವನ್ನು ಮುರಿದು ಕಣ್ಣಿಗಳನ್ನು ಕಿತ್ತು ನಾನು ಸೇವೆ ಮಾಡುವದಿಲ್ಲವೆಂದು ಅಂದುಕೊಳ್ಳುತ್ತಿದ್ದೀ; ಎತ್ತರವಾದ ಎಲ್ಲಾ ಗುಡ್ಡಗಳ ಮೇಲೂ ಸೊಂಪಾಗಿ ಬೆಳೆದಿರುವ ಎಲ್ಲಾ ಮರಗಳ ಕೆಳಗೂ ನೀನು ಅಡ್ಡಬಿದ್ದು ಸೂಳೆಯಾಗಿ ನಡೆದಿದ್ದೀ.


ನಾನು ನಿಮ್ಮನ್ನು ಫಲವತ್ತಾದ ಸೀಮೆಗೆ ಕರತಂದು ಅದರ ಫಲವನ್ನೂ ಸಾರವನ್ನೂ ಅನುಭವಿಸುವ ಹಾಗೆ ಮಾಡಿದೆನು; ಆದರೆ ನೀವು ಪ್ರವೇಶಿಸಿ ಆ ನನ್ನ ದೇಶವನ್ನು ಹೊಲೆಮಾಡಿ ನನ್ನ ಸ್ವಾಸ್ತ್ಯವನ್ನು ಅಸಹ್ಯಪಡಿಸಿದಿರಿ.


ಆಗ ಆಕೆ - ಶೇಲಹನು ಪ್ರಾಯಸ್ಥನಾದಾಗ್ಯೂ ನನ್ನನ್ನು ಅವನಿಗೆ ಮದುವೆ ಮಾಡಿಸಲಿಲ್ಲವಲ್ಲಾ ಅಂದುಕೊಂಡು ತನ್ನ ವಿಧವಾವಸ್ತ್ರಗಳನ್ನು ತೆಗೆದಿಟ್ಟು ಮುಸುಕನ್ನು ಹಾಕಿಕೊಂಡು [ವೇಶ್ಯಾಸ್ತ್ರೀಯಂತೆ] ಅಲಂಕೃತಳಾಗಿ ತಿಮ್ನಾವೂರಿನ ದಾರಿಯಲ್ಲಿರುವ ಏನಯಿಮೂರಿನ ಬಾಗಿಲ ಬಳಿಯಲ್ಲಿ ಕೂತುಕೊಂಡಳು.


ಯೆಹೋವನು ಹೀಗನ್ನುತ್ತಾನೆ - ಗಂಡನು ತ್ಯಜಿಸಿದವಳು ಅವನಿಂದ ಹೊರಟು ಮತ್ತೊಬ್ಬನವಳಾದ ಮೇಲೆ ಅವಳನ್ನು ಆ ಗಂಡನು ತಿರಿಗಿ ಸೇರಿಸಿಕೊಂಡಾನೇ? ಸೇರಿಸಿಕೊಂಡರೆ ಆ ದೇಶವು ಕೇವಲ ಅಪವಿತ್ರವಾಗಿ ಹೋಗುವದಲ್ಲವೆ! ಹೀಗಿರಲು ಬಹುಮಂದಿ ವಿುಂಡರೊಡನೆ ಸೂಳೆತನ ಮಾಡಿದ ನೀನು ನನ್ನ ಬಳಿಗೆ ತಿರಿಗಿ ಬರುತ್ತೀಯಾ?


ನೀವು ಸ್ವಾಧೀನಮಾಡಿಕೊಳ್ಳುವ ದೇಶದ ಜನಾಂಗಗಳು ದೊಡ್ಡ ಬೆಟ್ಟಗಳ ಮೇಲೆಯೂ ದಿನ್ನೆಗಳ ಮೇಲೆಯೂ ಹರಡಿಕೊಂಡ ಮರಗಳ ಕೆಳಗೆಯೂ ತಮ್ಮ ದೇವರುಗಳನ್ನು ಆರಾಧಿಸುತ್ತಾರಷ್ಟೆ; ಆ ಸ್ಥಳಗಳನ್ನೆಲ್ಲಾ ನೀವು ಅಗತ್ಯವಾಗಿ ನಾಶಮಾಡಬೇಕು.


ಅವನು ಪಾತಾಳದೊಳಗೆ ಯಾತನೆಪಡುತ್ತಾ ಇರುವಲ್ಲಿ ಕಣ್ಣೆತ್ತಿ ದೂರದಿಂದ ಅಬ್ರಹಾಮನನ್ನೂ ಇವನ ಎದೆಗೆ ಒರಗಿಕೊಂಡಿದ್ದ ಲಾಜರನನ್ನೂ ನೋಡಿ -


ನೀನು ಪೂಜಾಸ್ಥಾನಗಳನ್ನು ಕಟ್ಟಿಕೊಂಡು ನಿನ್ನ ಚಿತ್ರವಿಚಿತ್ರ ವಸ್ತ್ರಗಳಿಂದ ಅವುಗಳನ್ನು ಅಲಂಕರಿಸಿ ಅಲ್ಲಿ ವ್ಯಭಿಚಾರನಡಿಸಿದಿ. (ಇದು ನಡೆಯತಕ್ಕದ್ದಲ್ಲ. ಆಗಬಾರದಾಗಿತ್ತು.)


[ಯೆರೂಸಲೇಮೇ,] ತಲೆಯನ್ನು ಬೋಳಿಸಿಕೊಂಡು ಕೂದಲನ್ನು ಬಿಸಾಟುಬಿಟ್ಟು ಬೋಳುಗುಡ್ಡಗಳಲ್ಲಿ ಶೋಕಗೀತವನ್ನು ಹಾಡು; ಯೆಹೋವನು ತನ್ನ ಕೋಪಕ್ಕೆ ಗುರಿಯಾದ ಈ ವಂಶವನ್ನು ನಿರಾಕರಿಸಿ ತ್ಯಜಿಸಿದ್ದಾನೆ.


ಆಹಾ, ಬೋಳುಗುಡ್ಡಗಳಲ್ಲಿ ಒಂದು ಶಬ್ದ! ತಾವು ಡೊಂಕುದಾರಿಯನ್ನು ಹಿಡಿದು ತಮ್ಮ ದೇವರಾದ ಯೆಹೋವನನ್ನು ಮರೆತು ಬಿಟ್ಟಿದ್ದೇವೆಂದು ಇಸ್ರಾಯೇಲ್ಯರು ಕಣ್ಣೀರು ಸುರಿಸಿ ದೇವರ ಕೃಪೆಯನ್ನು ಬೇಡುತ್ತಿದ್ದಾರಲ್ಲಾ.


ಕಲ್ಲು ಮರಗಳೊಡನೆ ಹಾದರಮಾಡಿ ಲಘುವೆಂದು ಭಾವಿಸಿಕೊಂಡ ತನ್ನ ಸೂಳೆತನದಿಂದ ದೇಶವನ್ನು ಅಪವಿತ್ರಪಡಿಸಿದಳು.


ನನಗೆ ಮುಡಚಟ್ಟಾಗಲಿಲ್ಲ, ಅನ್ಯದೇವತೆಗಳನ್ನು ನಾನು ಹಿಂಬಾಲಿಸಲಿಲ್ಲವೆಂದು ಹೇಗೆ ಹೇಳುತ್ತೀ? ಆ ತಗ್ಗಿನಲ್ಲಿನ ನಿನ್ನ ನಡತೆಯನ್ನು ನೋಡು, ನೀನು ಮಾಡಿದ ಕೆಲಸವನ್ನು ಮನಸ್ಸಿಗೆ ತಂದುಕೋ, ತನ್ನ ಜಾಡೆಗಳನ್ನು ತಾರುಮಾರು ಮಾಡುವ ವೇಗವಾದ ಹೆಣ್ಣು ಒಂಟೆಯಂತಿದ್ದೀ.


ಹೌದು, ಕಳ್ಳನಂತೆ ಹೊಂಚುಹಾಕುತ್ತಾಳೆ, ಜನರಲ್ಲಿ ದ್ರೋಹಿಗಳನ್ನು ಹೆಚ್ಚಿಸುತ್ತಾಳೆ.


(ಇವಳು ಕೂಗಾಟದವಳು, ಹಟಮಾರಿ, ಮನೆಯಲ್ಲಿ ನಿಲ್ಲತಕ್ಕವಳೇ ಅಲ್ಲ;


ಇಸ್ರಾಯೇಲ್ಯರ ಅರಸನಾದ ಸೊಲೊಮೋನನು ಚೀದೋನ್ಯರ ಅಷ್ಟೋರೆತ್, ಮೋವಾಬ್ಯರ ಕೆಮೋಷ್, ಅಮ್ಮೋನಿಯರ ವಿುಲ್ಕೋಮ್ ಎಂಬ ಅಸಹ್ಯವಿಗ್ರಹಗಳಿಗೋಸ್ಕರ ಯೆರೂಸಲೇವಿುನ ಎದುರಿನಲ್ಲಿಯೂ ವಿಘ್ನಪರ್ವತದ ದಕ್ಷಿಣದಿಕ್ಕಿನಲ್ಲಿಯೂ ಸ್ಥಾಪಿಸಿದ ಪೂಜಾಸ್ಥಳಗಳನ್ನು ಇವನು ಹೊಲೆಮಾಡಿದನು.


ಅವನಿಗೆ ರಾಜವಂಶದವರಾದ ಏಳುನೂರು ಮಂದಿ ಪತ್ನಿಯರಲ್ಲದೆ ಮುನ್ನೂರು ಮಂದಿ ಉಪಪತ್ನಿಯರಿದ್ದರು. ಈ ಸ್ತ್ರೀಯರು ಅವನ ಮನಸ್ಸನ್ನು ಕೆಡಿಸಿಬಿಟ್ಟರು.


ನಾನು ಪ್ರಮಾಣಪೂರ್ವಕವಾಗಿ ಅವರಿಗೆ ವಾಗ್ದಾನಮಾಡಿದ ದೇಶಕ್ಕೆ ಅವರನ್ನು ಸೇರಿಸಿದ ಮೇಲೆ ಅವರು ಎತ್ತರವಾದ ಎಲ್ಲಾ ಗುಡ್ಡಗಳನ್ನೂ ಸೊಂಪಾಗಿ ಬೆಳೆದಿರುವ ಎಲ್ಲಾ ಮರಗಳನ್ನೂ ನೋಡಿ ಅಲ್ಲಿ ಯಜ್ಞಪಶುಗಳನ್ನು ವಧಿಸಿ ನನ್ನನ್ನು ರೇಗಿಸುವ ನೈವೇದ್ಯವನ್ನವರ್ಪಿಸಿ ಸುಗಂಧಹೋಮಮಾಡಿ ಪಾನದ್ರವ್ಯವನ್ನು ಸುರಿದು ಒಪ್ಪಿಸುತ್ತಿದ್ದರು.


ಕಾನಾನ್ಯರ ಮೂರ್ತಿಗಳ ಅರ್ಪಣೆಗೋಸ್ಕರ ತಮ್ಮ ಮಕ್ಕಳ ನಿರಪರಾಧರಕ್ತವನ್ನು ಸುರಿಸಿದರು; ಇಂಥ ಕೊಲೆಗಳಿಂದ ದೇಶವನ್ನು ಹೊಲೆಮಾಡಿದರು.


ಇದೊಂದನ್ನು ಮಾಡು, ನೀನು ಕಂಡಕಡೆಯೆಲ್ಲ ತಿರುಗುತ್ತಾ ಸೊಂಪಾಗಿ ಬೆಳೆದಿರುವ ಪ್ರತಿಯೊಂದು ಮರದ ಕೆಳಗೆ ಅನ್ಯರನ್ನು ಸೇರಿ ನನ್ನ ಮಾತನ್ನು ಕೇಳದೆ ನಿನ್ನ ದೇವರಾದ ಯೆಹೋವನೆಂಬ ನನಗೆ ದ್ರೋಹಮಾಡಿದ್ದೀ ಎಂಬದಕ್ಕೆ ಒಪ್ಪಿಕೋ.


ಕೊಳ್ಳೆಗಾರರು ಅರಣ್ಯದ ಎಲ್ಲಾ ಬೋಳುಗುಡ್ಡಗಳಲ್ಲಿಯೂ ಕಂಡುಬಂದಿದ್ದಾರೆ; ಯೆಹೋವನ ಖಡ್ಗವು ದೇಶದ ಒಂದು ಕಡೆಯಿಂದ ಇನ್ನೊಂದು ಕಡೆಯವರೆಗೆ ನುಂಗಿಬಿಡುತ್ತಿದೆ; ಯಾರಿಗೂ ನೆಮ್ಮದಿಯಿಲ್ಲ.


ಅವರ ತಾಯಿಯು ಸೂಳೆತನ ಮಾಡಿದ್ದಾಳೆ, ಹೆತ್ತವಳು ನಾಚಿಕೆಗೇಡಿಯಾಗಿ ನಡೆದಿದ್ದಾಳೆ; ನನಗೆ ಬೇಕಾದ ಅನ್ನಪಾನಗಳನ್ನೂ ಉಣ್ಣೆನಾರುಗಳನ್ನೂ ತೈಲವನ್ನೂ ಪಾಯಸ ಪಾನಕಗಳನ್ನೂ ನನಗೆ ಕೊಡುವ ನನ್ನ ವಿುಂಡರ ಹಿಂದೆ ಹೋಗುವೆನು ಅಂದುಕೊಂಡಿದ್ದಾಳೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು