Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 3:25 - ಕನ್ನಡ ಸತ್ಯವೇದವು J.V. (BSI)

25 ನಾವು ತಂದುಕೊಂಡ ಅವಮಾನದಲ್ಲಿ ಬಿದ್ದಿರೋಣ, ನಮ್ಮ ನಾಚಿಕೆಯು ನಮ್ಮನ್ನು ಮುಚ್ಚಿಬಿಡಲಿ; ನಮ್ಮ ದೇವರಾದ ಯೆಹೋವನಿಗೆ ನಾವೂ ನಮ್ಮ ಪಿತೃಗಳೂ ನಮ್ಮ ಚಿಕ್ಕತನದಿಂದ ಈಗಿನವರೆಗೆ ಪಾಪಮಾಡುತ್ತಾ ಬಂದಿದ್ದೇವಷ್ಟೆ; ನಮ್ಮ ದೇವರಾದ ಯೆಹೋವನ ಮಾತನ್ನು ನಾವು ಕೇಳಲೇ ಇಲ್ಲ ಎಂದು ಮೊರೆಯಿಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ನಾವೇ ತಂದುಕೊಂಡ ಅವಮಾನದಲ್ಲಿ ಬಿದ್ದಿರೋಣ, ನಮ್ಮ ನಾಚಿಕೆಯು ನಮ್ಮನ್ನು ಮುಚ್ಚಿಬಿಡಲಿ. ನಾವು ಮತ್ತು ನಮ್ಮ ಪೂರ್ವಿಕರೂ ಬಾಲ್ಯದಿಂದ ಇಂದಿನವರೆಗೂ ನಮ್ಮ ದೇವರಾದ ಯೆಹೋವನಿಗೆ ಪಾಪಮಾಡುತ್ತಾ ಬಂದಿದ್ದೇವಷ್ಟೆ. ನಮ್ಮ ದೇವರಾದ ಯೆಹೋವನ ಮಾತನ್ನು ನಾವು ಕೇಳಲೇ ಇಲ್ಲ” ಎಂದು ಮೊರೆಯಿಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ನಾವೇ ತಂದುಕೊಂಡ ಅವಮಾನವೆಂಬ ಹಾಸಿಗೆಯಲ್ಲಿ ಬಿದ್ದಿರೋಣ. ನಾಚಿಕೆಯೆಂಬ ಹೊದಿಕೆ ನಮ್ಮನ್ನು ಮುಚ್ಚಿಬಿಡಲಿ. ಚಿಕ್ಕತನದಿಂದ ಈವರೆಗು ನಾವೂ ನಮ್ಮ ಪೂರ್ವಜರೂ ನಮ್ಮ ದೇವರಾದ ಸರ್ವೇಶ್ವರ ಸ್ವಾಮಿಗೆ ಇದಿರಾಗಿ ಪಾಪಮಾಡುತ್ತಾ ಬಂದಿರುವುದು ನಿಶ್ಚಯ. ಆ ಸ್ವಾಮಿಯ ಮಾತನ್ನು ಕೇಳದೆಹೋದೆವಲ್ಲಾ!” ಎಂದು ಮೊರೆಯಿಡುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ನಾವು ತಂದುಕೊಂಡ ಅವಮಾನದಲ್ಲಿ ಬಿದ್ದಿರೋಣ. ನಮ್ಮ ನಾಚಿಕೆಯು ಕಂಬಳಿಯು ಹೊದಿಸಿದಂತೆ ನಮ್ಮನ್ನು ಮುಚ್ಚಿಬಿಡಲಿ. ನಾವು ನಮ್ಮ ದೇವರಾದ ಯೆಹೋವನ ವಿಷಯದಲ್ಲಿ ಪಾಪಮಾಡಿದ್ದೇವೆ. ನಾವು ಮತ್ತು ನಮ್ಮ ಪೂರ್ವಿಕರು ಪಾಪಮಾಡಿದ್ದೇವೆ. ನಮ್ಮ ಬಾಲ್ಯದಿಂದ ಇಂದಿನವರೆಗೆ ನಾವು ನಮ್ಮ ದೇವರಾದ ಯೆಹೋವನ ಆಜ್ಞೆಯನ್ನು ಪಾಲಿಸಲಿಲ್ಲ’” ಎಂದು ಮೊರೆಯಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ನಮ್ಮ ನಾಚಿಕೆಯಲ್ಲಿ ಮಲಗಿಕೊಳ್ಳುತ್ತೇವೆ. ನಮ್ಮ ಗಲಭೆ ನಮ್ಮನ್ನು ಮುಚ್ಚಿಕೊಳ್ಳುತ್ತದೆ. ಏಕೆಂದರೆ ನಾವೂ, ನಮ್ಮ ಪೂರ್ವಜರೂ ನಮ್ಮ ಚಿಕ್ಕತನದಿಂದ ಇಂದಿನವರೆಗೂ ನಮ್ಮ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿದ್ದೇವೆ. ನಮ್ಮ ಯೆಹೋವ ದೇವರ ಸ್ವರಕ್ಕೆ ಕಿವಿಗೊಡಲಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 3:25
38 ತಿಳಿವುಗಳ ಹೋಲಿಕೆ  

ನಾನು ನಿನ್ನ ನೆಮ್ಮದಿಯಲ್ಲಿ ನಿನ್ನೊಡನೆ ಮಾತಾಡಿದಾಗ ಕೇಳಲೊಲ್ಲೆನು ಎಂದು ನೀನು ಹೇಳಿದಿ. ನನ್ನ ಮಾತನ್ನು ಕೇಳದಿರುವದು ನಿನಗೆ ಬಾಲ್ಯದಿಂದಲೇ ಅಭ್ಯಾಸ.


ಕಳ್ಳನು ಸಿಕ್ಕಿಬಿದ್ದು ಹೇಗೆ ನಾಚಿಕೆಪಡುವನೋ ಹಾಗೆಯೇ ಇಸ್ರಾಯೇಲ್ ವಂಶವು ನಾಚಿಕೆಪಡುವದು; ಮರಕ್ಕೆ, ನೀನು ನನ್ನ ತಂದೆ ಎಂತಲೂ ಕಲ್ಲಿಗೆ, ಹೆತ್ತ ತಾಯಿ ನೀನು ಎಂತಲೂ ಹೇಳುವ ಪ್ರಜೆಗಳು, ಅವರ ಅರಸರು, ಅಧಿಪತಿಗಳು, ಯಾಜಕರು, ಪ್ರವಾದಿಗಳು, ಇವರೆಲ್ಲರೂ ನಾಚಿಕೆಗೆ ಈಡಾಗುವರು;


ಆದರೆ ನೀವು ಆಗ ಮಾಡಿದ ಕೃತ್ಯಗಳಿಂದ ನಿಮಗುಂಟಾದ ಫಲವೇನು? ಈಗ ಅವುಗಳ ವಿಷಯದಲ್ಲಿ ನಿಮಗೆ ನಾಚಿಕೆಯುಂಟಷ್ಟೆ. ಕಡೆಗೆ ಅವುಗಳಿಂದ ಬರುವದು ಮರಣವಲ್ಲವೇ.


ಧೂಳಿನ ನೆಲದೊಳಗೆ ದೀರ್ಘನಿದ್ರೆಮಾಡುವವರಲ್ಲಿ ಅನೇಕರು ಎಚ್ಚತ್ತು ಕೆಲವರು ನಿತ್ಯಜೀವವನ್ನು, ಕೆಲವರು ನಿಂದನ ನಿತ್ಯತಿರಸ್ಕಾರಗಳನ್ನು ಅನುಭವಿಸುವರು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಾನು ಈ ರಕ್ಷಣಕಾರ್ಯವನ್ನು ಮಾಡುವದು ನಿಮ್ಮ ನಿವಿುತ್ತವಲ್ಲವೆಂದು ನಿಮಗೆ ತಿಳಿದಿರಲಿ; ಇಸ್ರಾಯೇಲ್ ವಂಶದವರೇ, ನಿಮ್ಮ ದುರ್ಮಾರ್ಗಗಳಿಗೆ ಲಜ್ಜೆಗೊಳ್ಳಿರಿ, ನಾಚಿಕೆಪಡಿರಿ.


ಅವರು ಗೋಣಿತಟ್ಟನ್ನು ಸುತ್ತಿಕೊಳ್ಳುವರು, ದಿಗಿಲು ಅವರನ್ನು ಮುಚ್ಚಿಬಿಡುವದು; ಎಲ್ಲರ ಮುಖದಲ್ಲಿಯೂ ನಾಚಿಕೆತೋರುವದು. ಎಲ್ಲರೂ ತಲೆ ಬೋಳಿಸಿಕೊಂಡಿರುವರು.


ಕಿರೀಟವು ನಮ್ಮ ತಲೆಯ ಮೇಲಿಂದ ಬಿದ್ದು ಹೋಗಿದೆ, ಅಯ್ಯೋ, ನಮ್ಮ ಗತಿಯನ್ನು ಏನು ಹೇಳೋಣ! ನಾವು ಪಾಪಮಾಡಿದವರೇ ಸರಿ.


ನಮ್ಮ ಪಿತೃಗಳು ಪಾಪಮಾಡಿ ಇಲ್ಲದೆ ಹೋದರು; ಅವರ ದೋಷಫಲವನ್ನು ನಾವು ಅನುಭವಿಸಬೇಕಾಯಿತು.


ನನ್ನ ಪ್ರಜೆಯೆಂಬ ಯುವತಿಯೇ, ಗೋಣಿತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಬಿದ್ದು ಹೊರಳಾಡು; ಇದ್ದೊಬ್ಬ ಮಗನನ್ನು ಕಳೆದುಕೊಂಡಂತೆ ದುಃಖಪಟ್ಟು ಘೋರಪ್ರಲಾಪಮಾಡು; ಕೊಳ್ಳೆಗಾರನು ತಟ್ಟನೆ ನಮ್ಮ ಮೇಲೆ ಬೀಳುವನಷ್ಟೆ.


ನಿನ್ನ ಕೆಟ್ಟತನವೇ ನಿನ್ನನ್ನು ಶಿಕ್ಷಿಸುವದು, ನಿನ್ನ ದ್ರೋಹಗಳೇ ನಿನ್ನನ್ನು ಖಂಡಿಸುವವು; ನೀನು ನನ್ನ ಭಯವಿಲ್ಲದೆ ನಿನ್ನ ದೇವರಾದ ಯೆಹೋವನೆಂಬ ನನ್ನನ್ನು ತೊರೆದುಬಿಟ್ಟದ್ದು ಕೆಟ್ಟದ್ದಾಗಿಯೂ ವಿಷವಾಗಿಯೂ ಇರುತ್ತದೆಂದು ಗ್ರಹಿಸಿಕೋ, ಕಣ್ಣಾರೆ ನೋಡು ಎಂಬದು ಸೇನಾಧೀಶ್ವರನಾದ ಯೆಹೋವನೆಂಬ ಕರ್ತನ ನುಡಿ.


ನಿನ್ನನ್ನು ದಾರಿಯಲ್ಲಿ ನಡಿಸುತ್ತಿದ್ದ ನಿನ್ನ ದೇವರಾದ ಯೆಹೋವನನ್ನು ತೊರೆದುಬಿಟ್ಟು ಇದನ್ನೆಲ್ಲಾ ನೀನೇ ನಿನ್ನ ಮೇಲೆ ಬರಮಾಡಿಕೊಂಡಿಯಲ್ಲಾ.


ನೀನು ಹೋಗಿ ಯೆರೂಸಲೇವಿುನ ಕಿವಿಗೆ ಮುಟ್ಟುವಂತೆ ಈ ಮಾತುಗಳನ್ನು ಸಾರು - ಯೆಹೋವನು ಹೀಗನ್ನುತ್ತಾನೆ, ನೀನು ಯೌವನದಲ್ಲಿ [ನನ್ನ ಮೇಲೆ] ಇಟ್ಟಿದ್ದ ಪ್ರೀತಿಯನ್ನೂ ವಿವಾಹ ಕಾಲದ ನಿನ್ನ ಪ್ರೇಮವನ್ನೂ ಬೀಜಬಿತ್ತಿಯೇ ಇಲ್ಲದ ಅರಣ್ಯದಲ್ಲಿ ನೀನು ನನ್ನನ್ನು ಹಿಂಬಾಲಿಸಿದ ನಿನ್ನ ಪಾತಿವ್ರತ್ಯವನ್ನೂ ನಿನ್ನ ಹಿತಕ್ಕಾಗಿ ಜ್ಞಾಪಕದಲ್ಲಿಟ್ಟಿದ್ದೇನೆ.


ಓಹೋ, ಬೆಂಕಿಯಿಕ್ಕಿ ಸುತ್ತುಮುತ್ತಲು ಕೊಳ್ಳಿಗಳನ್ನು ಹತ್ತಿಸಿಕೊಂಡಿರುವವರೇ, ನಿಮ್ಮ ಬೆಂಕಿಯ ಬೆಳಕಿನಲ್ಲಿಯೂ ನೀವು ಹತ್ತಿಸಿದ ಕೊಳ್ಳಿಗಳ ನಡುವೆಯೂ ನಡೆದರೂ ನಡೆಯಿರಿ. ಇಗೋ, ನನ್ನ ಹಸ್ತದಿಂದ ನಿಮಗಾಗುವ ಗತಿಯು ಇದೇ, ದುಃಖಕ್ಕೆ ಒಳಗಾಗಿ ಸಾಯುವಿರಿ.


ನೀನು ಕೇಳಿಲ್ಲ, ತಿಳಿದೂ ಇಲ್ಲ, ಪುರಾತನಕಾಲದಿಂದ ನಿನ್ನ ಕಿವಿಯು ತೆರೆದೇ ಇಲ್ಲ; ನೀನು ದೊಡ್ಡ ವಂಚಕನು, ಆಗರ್ಭದ್ರೋಹಿ ಎನಿಸಿಕೊಂಡವನು ಎಂದು ನಾನು ತಿಳಿದುಕೊಂಡಿದ್ದೆನಷ್ಟೆ.


ನನ್ನ ಬೋಧಕರ ಮಾತನ್ನು ಕೇಳದೆ ಹೋದೆನಲ್ಲಾ, ನನ್ನ ಉಪದೇಶಕರ ಕಡೆಗೆ ಕಿವಿಗೊಡಲಿಲ್ಲವಲ್ಲಾ!


ಮಾನಭಂಗವೇ ನನ್ನ ವಿರೋಧಿಗಳಿಗೆ ವಸ್ತ್ರವಾಗಲಿ; ನಾಚಿಕೆಯೇ ಅವರ ಹೊದಿಕೆಯಾಗಲಿ.


ನಮ್ಮ ಪೂರ್ವಿಕರು ಐಗುಪ್ತದಲ್ಲಿ ನಿನ್ನ ಅದ್ಭುತಕ್ರಿಯೆಗಳನ್ನು ಲಕ್ಷಿಸಲಿಲ್ಲ; ನಿನ್ನ ಕೃಪಾತಿಶಯವನ್ನು ಸ್ಮರಿಸಲಿಲ್ಲ. ಕೆಂಪು ಸಮುದ್ರದ ಬಳಿಯಲ್ಲಿ ನಿನಗೆ ತಿರುಗಿಬಿದ್ದರು.


ನೀವು ಈ ದೇಶದ ನಿವಾಸಿಗಳ ಸಂಗಡ ಒಡಂಬಡಿಕೆ ಮಾಡಿಕೊಳ್ಳಬಾರದು; ಅವರ ಯಜ್ಞವೇದಿಗಳನ್ನು ಕೆಡವಿಬಿಡಬೇಕು ಎಂದು ಆಜ್ಞಾಪಿಸಿದೆನು. ಆದರೆ ನೀವು ನನ್ನ ಮಾತನ್ನು ಕೇಳಲಿಲ್ಲ. ಹೀಗೆ ಯಾಕೆ ಮಾಡಿದಿರಿ?


ನಮ್ಮ ಪಿತೃಗಳಂತೆ ನಾವೂ ಪಾಪಿಗಳು; ಅಪರಾಧಮಾಡಿದೆವು; ದುಷ್ಟತನವನ್ನು ನಡಿಸಿದೆವು.


ಇದೊಂದನ್ನು ಮಾಡು, ನೀನು ಕಂಡಕಡೆಯೆಲ್ಲ ತಿರುಗುತ್ತಾ ಸೊಂಪಾಗಿ ಬೆಳೆದಿರುವ ಪ್ರತಿಯೊಂದು ಮರದ ಕೆಳಗೆ ಅನ್ಯರನ್ನು ಸೇರಿ ನನ್ನ ಮಾತನ್ನು ಕೇಳದೆ ನಿನ್ನ ದೇವರಾದ ಯೆಹೋವನೆಂಬ ನನಗೆ ದ್ರೋಹಮಾಡಿದ್ದೀ ಎಂಬದಕ್ಕೆ ಒಪ್ಪಿಕೋ.


[ಆ ಕಾಲದಲ್ಲಿ ಜನರು ಹೀಗನ್ನುವರು - ] ಸುಮ್ಮನೆ ಕೂತಿರುವದೇಕೆ? ಕೂಡಿಕೊಳ್ಳಿರಿ, ಕೋಟೆಕೊತ್ತಲಗಳ ಪಟ್ಟಣಗಳಲ್ಲಿ ಸೇರಿ ಅಲ್ಲೇ ನಾಶವಾಗೋಣ; ನಾವು ನಮ್ಮ ದೇವರಾದ ಯೆಹೋವನಿಗೆ ಪಾಪಮಾಡಿದ್ದರಿಂದ ಆತನು ನಮ್ಮನ್ನು ನಾಶನಕ್ಕೆ ಗುರಿಮಾಡಿ ಕಹಿಯಾದ ನೀರನ್ನು ಕುಡಿಸಿದ್ದಾನಷ್ಟೆ.


ಯೆಹೋವನೇ, ನಮ್ಮ ಅಪರಾಧಗಳು ನಮಗೆ ವಿರುದ್ಧವಾಗಿ ಸಾಕ್ಷಿಕೊಟ್ಟರೂ ನಿನ್ನ ಹೆಸರಿನ ನಿವಿುತ್ತ ಕಾರ್ಯವನ್ನು ಸಾಧಿಸು; ನಮ್ಮ ದ್ರೋಹಗಳು ಬಹಳ, ನಿನಗೆ ಪಾಪವನ್ನು ಮಾಡಿದ್ದೇವೆ.


ಯೆಹೋವನೇ, ನಮ್ಮ ದುಷ್ಟತನವನ್ನೂ ನಮ್ಮ ಪಿತೃಗಳ ದುರಾಚಾರವನ್ನೂ ತಿಳಿದುಕೊಂಡಿದ್ದೇವೆ; ನಿನಗೇ ಪಾಪಮಾಡಿದ್ದೇವಲ್ಲ.


ನಾನು ಶ್ರಮದುಃಖಗಳನ್ನು ನೋಡುವದಕ್ಕೂ ನನ್ನ ಆಯುಸ್ಸು ಅವಮಾನದಿಂದ ಕ್ಷಯಿಸುವದಕ್ಕೂ ಗರ್ಭದಿಂದ ಏಕೆ ಹೊರಟುಬಂದೆನು?


ತಿರುಗಿಸಲ್ಪಟ್ಟ ಮೇಲೆಯೇ ಪಶ್ಚಾತ್ತಾಪಪಟ್ಟೆನು; ತಿಳುವಳಿಕೆಯನ್ನು ಹೊಂದಿದ ಮೇಲೆಯೇ ತೊಡೆಯನ್ನು ಬಡಿದುಕೊಂಡೆನು; ನನ್ನ ಯೌವನದ ಅವಮಾನವು ನನ್ನ ಮೇಲೆ ಹೊತ್ತ ಕಾರಣ ಲಜ್ಜೆಗೊಂಡೆನು, ಹೌದು, ತುಂಬಾ ನಾಚಿಕೆಪಟ್ಟೆನು.


ಆತನು ನನಗೆ ಹೀಗೆ ಹೇಳಿದನು - ನರಪುತ್ರನೇ, ನನಗೆ ವಿರುದ್ಧವಾಗಿ ತಿರುಗಿಬಿದ್ದು ದ್ರೋಹಮಾಡಿದ ಜನಾಂಗದವರಾದ ಇಸ್ರಾಯೇಲ್ಯರ ಬಳಿಗೆ ನಿನ್ನನ್ನು ಕಳುಹಿಸುವೆನು; ಈ ದಿನದವರೆಗೆ ಅವರೂ ಅವರ ಪಿತೃಗಳೂ ನನಗೆ ಅಪರಾಧಮಾಡುತ್ತಲೇ ಇದ್ದಾರೆ.


ಶಿಕ್ಷೆಯನ್ನು ತ್ಯಜಿಸುವವನಿಗೆ ಬಡತನ ಮತ್ತು ಅವಮಾನ; ಗದರಿಕೆಯನ್ನು ಗಮನಿಸುವವನಿಗೆ ಮಾನ.


ಅವರು ನನಗೆ ಕೇಡುಮಾಡುತ್ತಾರೋ, ಅವಮಾನವು ತಮ್ಮ ಮುಖವನ್ನು ಮುಚ್ಚುವಷ್ಟರ ಮಟ್ಟಿಗೆ ತಮಗೇ ಕೇಡುಮಾಡಿಕೊಳ್ಳುತ್ತಾರಲ್ಲಾ ಎಂದು ಯೆಹೋವನು ಅನ್ನುತ್ತಾನೆ.


ಅವರು ತ್ವರೆಪಟ್ಟು ನಮ್ಮ ನೇತ್ರಗಳಿಂದ ಧಾರೆ ಹೊರಡುವಂತೆಯೂ ನಮ್ಮ ರೆಪ್ಪೆಗಳೊಳಗಿಂದ ನೀರುಕ್ಕುವಂತೆಯೂ ನಮಗೋಸ್ಕರ ಗೋಳೆತ್ತಲಿ.


ಯೆಹೂದದವರೇ, ನಿಮ್ಮ ಪಟ್ಟಣಗಳೆಷ್ಟೋ ನಿಮ್ಮ ದೇವರುಗಳೂ ಅಷ್ಟು; ಯೆರೂಸಲೇವಿುನ ಬೀದಿಗಳೆಷ್ಟೋ ತುಚ್ಫದೇವತೆಯಾದ ಬಾಳನಿಗೆ ಹೋಮಮಾಡುವದಕ್ಕಾಗಿ ನೀವು ಮಾಡಿಕೊಂಡಿರುವ ಬಲಿಪೀಠಗಳೂ ಅಷ್ಟು.


ಗೋದಿಯನ್ನು ಬಿತ್ತಿ ಮುಳ್ಳನ್ನು ಕೊಯ್ದಿದ್ದಾರೆ; ಕ್ಷೇಮ ಕೆಡುವಷ್ಟು ಪ್ರಯಾಸಪಟ್ಟರೂ ಯಾವ ಲಾಭವನ್ನೂ ಹೊಂದಲಿಲ್ಲ; ಯೆಹೋವನ ರೋಷಾಗ್ನಿಯ ನಿವಿುತ್ತ ನಿಮ್ಮ ಬೆಳೆಯ ವಿಷಯವಾಗಿ ನಿಮಗೆ ನಾಚಿಕೆಯಾಗುವದು.


ಅವರು ನನಗೆ ಯಾಜಕಸೇವೆಮಾಡುವದಕ್ಕೆ ನನ್ನ ಸನ್ನಿಧಿಗೆ ಸೇರಕೂಡದು; ನನ್ನ ಅತಿಪವಿತ್ರವಾದ ಪರಿಶುದ್ಧವಸ್ತುಗಳಲ್ಲಿ ಯಾವದನ್ನೂ ಸಮೀಪಿಸಬಾರದು; ತಮಗಾದ ಅವಮಾನವನ್ನೂ ತಾವು ನಡಿಸಿದ ದುರಾಚಾರಗಳ ಫಲವನ್ನೂ ಅನುಭವಿಸುವರು.


ಕಾಡಿನಲ್ಲಿ ದ್ರಾಕ್ಷೆಯ ಹಣ್ಣು ಸಿಕ್ಕಿದಂತೆ ಇಸ್ರಾಯೇಲು ನನಗೆ ಸಿಕ್ಕಿತು; ಹೊಸದಾಗಿ ಫಲಕ್ಕೆ ಬಂದ ಅಂಜೂರದ ಗಿಡದಲ್ಲಿ ಮೊದಲು ಮಾಗಿದ ಹಣ್ಣನ್ನು ಕಂಡ ಹಾಗೆ ನಿಮ್ಮ ಪಿತೃಗಳನ್ನು ಕಂಡೆನು; ಆದರೆ ಅವರು ಬಾಳ್‍ಪೆಗೋರಿಗೆ ಬಂದು ಬಾಳ್‍ದೇವತೆಯ ಭಕ್ತರಾಗಿ ದೀಕ್ಷೆಗೊಂಡು ತಾವು ಪ್ರೀತಿಸಿದ ದೇವತೆಯ ಹಾಗೆ ಅಸಹ್ಯರಾದರು.


ಯೆಹೋವನಾದ ನನಗೆ ಜನರು ಪಾಪಮಾಡಿದ ಕಾರಣ ಕುರುಡರಂತೆ ನಡೆಯುವ ಹಾಗೆ ಅವರನ್ನು ಸಂಕಟಪಡಿಸುವೆನು; ಅವರ ರಕ್ತವು ದೂಳಿನಂತೆ ಚೆಲ್ಲಿಹೋಗುವದು, ಅವರ ಮಾಂಸವು ಮಲದ ಹಾಗೆ ಬಿದ್ದಿರುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು