Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 3:5 - ಕನ್ನಡ ಸತ್ಯವೇದವು J.V. (BSI)

5 ಆತನು ನಿತ್ಯವಾಗಿ ಕೋಪಮಾಡುವನೋ? ಕೊನೆಯ ತನಕ ಇಟ್ಟುಕೊಳ್ಳುವನೋ? ಅಂದುಕೊಳ್ಳುತ್ತಿದ್ದೀ. ಇಗೋ, ನೀನು ಹೀಗೆ ಮಾತಾಡಿದರೇನು? ದುಷ್ಕೃತ್ಯಗಳನ್ನು ನಡಿಸಿ ಕೃತಾರ್ಥಳಾಗಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ‘ಆತನು ನಿತ್ಯ ಕೋಪಮಾಡುವವನೋ? ಕೊನೆಯ ತನಕ ಕೋಪವನ್ನು ಇಟ್ಟುಕೊಳ್ಳುವನೋ?’ ಎಂದು ಅಂದುಕೊಳ್ಳುತ್ತಿದ್ದಿ. ಇಗೋ, ನೀನು ಹೀಗೆ ಮಾತನಾಡಿದರೇನು? ಅನೇಕ ದುಷ್ಕೃತ್ಯಗಳನ್ನು ನಡೆಸಿ ಕೃತಾರ್ಥಳಾಗಿರುವೆ.” ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನಿತ್ಯಕ್ಕೂ ಕೋಪ ಮಾಡಬೇಡಿ; ಕೊನೆಯತನಕ ಸಿಟ್ಟುಗೊಳ್ಳಬೇಡಿ’ ಎಂದು ಕೋರುತ್ತಿರುವೆ. ಹೀಗಲ್ಲ ನೀನು ಹೇಳುತ್ತಿರುವೆಯಾದರೂ ನಿನ್ನಿಂದ ಸಾಧ್ಯವಾಗುವಷ್ಟು ದುಷ್ಕೃತ್ಯಗಳನ್ನು ಮಾಡಿ ಕೃತಾರ್ಥಳಾಗಿರುವೆ!”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಇದಲ್ಲದೆ, ಯೆಹೂದವೇ, ‘ದೇವರು ಯಾವಾಗಲೂ ನನ್ನ ಮೇಲೆ ಕೋಪಿಷ್ಟನಾಗಿರುವುದಿಲ್ಲ. ದೇವರ ಕೋಪವು ಶಾಶ್ವತವಾಗಿರುವುದಿಲ್ಲ’ ಎಂದು ನೀನು ಹೇಳಿದೆಯಲ್ಲಾ. “ಯೆಹೂದ, ನೀನು ಹಾಗೆ ಹೇಳಿದರೂ, ನಿನ್ನಿಂದಾದಷ್ಟು ಕೆಡುಕನ್ನು ಮಾಡುತ್ತಿರುವೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆತನು ನಿತ್ಯ ಕೋಪಮಾಡುವವನೋ? ಕೊನೆಯ ತನಕ ಕೋಪವನ್ನು ಇಟ್ಟುಕೊಳ್ಳುವನೋ? ಇಗೋ, ನೀನು ಹೀಗೆ ಮಾತನಾಡಿದರೇನು? ಆದರೆ ನಿನ್ನಿಂದ ಸಾಧ್ಯವಾಗುವಷ್ಟು ದುಷ್ಕೃತ್ಯಗಳನ್ನು ಮಾಡಿದ್ದಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 3:5
14 ತಿಳಿವುಗಳ ಹೋಲಿಕೆ  

ಕೆಟ್ಟ ಕೆಲಸಕ್ಕೆ ಎರಡು ಕೈಗಳನ್ನು ಹಾಕಿ ಚೆನ್ನಾಗಿ ಮಾಡುತ್ತಾರೆ; ಪ್ರಭುವು [ಧನವನ್ನು] ಕೇಳುತ್ತಾನೆ, ನ್ಯಾಯಾಧಿಪತಿಯು ಲಂಚಕ್ಕೆ [ಕೈಯೊಡ್ಡುತ್ತಾನೆ], ದೊಡ್ಡ ಮನುಷ್ಯನು ತನ್ನ ದುರಾಶೆಯನ್ನು ತಿಳಿಸುತ್ತಾನೆ; ಹೀಗೆ ಕುಯುಕ್ತಿಯನ್ನು ಹೆಣೆಯುತ್ತಾರೆ.


ತಮ್ಮ ಹಾಸಿಗೆಗಳಲ್ಲೇ ಅನ್ಯಾಯವನ್ನು ಯೋಚಿಸಿ ಕೇಡನ್ನು ಕಲ್ಪಿಸುವವರ ಗತಿಯನ್ನು ಏನು ಹೇಳಲಿ! ಉದಯದ ಬೆಳಕಿನಲ್ಲಿ ಅದನ್ನು ನಡಿಸುವರು, ಅದು ಅವರ ಕೈವಶವಷ್ಟೆ.


ಇಗೋ, ಇಸ್ರಾಯೇಲಿನ ಪ್ರಭುಗಳು ತಮ್ಮ ತಮ್ಮ ಶಕ್ತ್ಯನುಸಾರ ನಿನ್ನಲ್ಲಿ ರಕ್ತಸುರಿಸುತ್ತಲೇ ಇದ್ದಾರೆ.


ನೀನು ಹೋಗಿ ಉತ್ತರದಿಕ್ಕಿಗೆ ಈ ಮಾತುಗಳನ್ನು ಸಾರು - ಯೆಹೋವನು ಹೀಗನ್ನುತ್ತಾನೆ, ಭ್ರಷ್ಟಳಾದ ಇಸ್ರಾಯೇಲೇ, ಹಿಂದಿರುಗು; ನಾನು ಕೋಪ ಮುಖದಿಂದ ನಿನ್ನನ್ನು ನೋಡೆನು, ನಾನು ಕರುಣಾಶಾಲಿ, ನಿತ್ಯಕೋಪಿಯಲ್ಲ.


ನಾನು ಸರ್ವದಾ ವ್ಯಾಜ್ಯವಾಡೆನು, ಕಡೆಯ ತನಕ ಕೋಪಿಸಿಕೊಳ್ಳೆನು, ಹೀಗೆ ಮಾಡಿದರೆ ಮನುಷ್ಯಾತ್ಮವೂ ನಾನು ಸೃಷ್ಟಿಸಿದ ಜೀವವೂ ನನ್ನಿಂದ ಕುಂದಿಹೋದಾವು.


ಯೆಹೋವನೇ, ಅತಿರೋಷಗೊಳ್ಳದಿರು, ನಮ್ಮ ಅಧರ್ಮವನ್ನು ಕಡೆಯವರೆಗೂ ಜ್ಞಾಪಕದಲ್ಲಿಡಬೇಡ; ಎಲೈ, ಸ್ವಾಮೀ, ಕಟಾಕ್ಷಿಸು, ನಾವೆಲ್ಲರೂ ನಿನ್ನ ಜನರಾಗಿದ್ದೇವೆ.


ಸದಾಕಾಲವೂ ನಮ್ಮ ಮೇಲೆ ಸಿಟ್ಟುಮಾಡುವಿಯಾ? ತಲತಲಾಂತರಗಳಿಗೂ ಕೋಪವನ್ನು ಬೆಳೆಸುವಿಯೋ?


ಈಗ ನಮ್ಮ ಮೇಲಿರುವ ಆತನ ಕೋಪಾಗ್ನಿಯು ತೊಲಗಿಹೋಗುವಂತೆ ಇಸ್ರಾಯೇಲ್‍ದೇವರಾದ ಯೆಹೋವನೊಡನೆ ಒಡಂಬಡಿಕೆ ಮಾಡಿಕೊಳ್ಳುವದಕ್ಕೆ ಮನಸ್ಸುಳ್ಳವನಾಗಿದ್ದೇನೆ.


ನಿನ್ನ ಪ್ರಜೆಯಾದ ನಾವು ನಿನ್ನಲ್ಲಿ ಆನಂದಿಸುವಂತೆ ನೀನು ನಮ್ಮನ್ನು ಚೈತನ್ಯ ಪಡಿಸುವದಿಲ್ಲವೋ?


ಈ ಯೆರೂಸಲೇವಿುನವರು ಎಂದಿಗೂ ಹಿಂದಿರುಗದಂತೆ ಬಿಟ್ಟುಹೋದದ್ದೇಕೆ? ಮೋಸವನ್ನೇ ಪಟ್ಟಾಗಿ ಹಿಡಿದಿದ್ದಾರೆ, ತಿರಿಗಿ ಬರಲೊಲ್ಲರು.


ನಾನು ಕಿವಿಗೊಟ್ಟು ಕೇಳುವಾಗ ಅವರು ಯಥಾರ್ಥವಾಗಿ ಮಾತಾಡಿಕೊಳ್ಳುತ್ತಿರಲಿಲ್ಲ; ಯಾವನೂ ತನ್ನ ಅಧರ್ಮದ ವಿಷಯವಾಗಿ ಪಶ್ಚಾತ್ತಾಪಪಟ್ಟು - ಆಹಾ, ನಾನು ಎಂಥಾ ಕೆಲಸ ಮಾಡಿದೆ ಎಂದು ಕೊಳ್ಳುತ್ತಿರಲಿಲ್ಲ; ಯುದ್ಧದಲ್ಲಿ ರಭಸವಾಗಿ ಓಡುವ ಕುದುರೆಯಂತೆ ಪ್ರತಿಯೊಬ್ಬನೂ ತನ್ನ ತನ್ನ ಮಾರ್ಗಕ್ಕೇ ತ್ವರೆಪಡುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು