ಯೆರೆಮೀಯ 3:6 - ಕನ್ನಡ ಸತ್ಯವೇದವು J.V. (BSI)6 ಮತ್ತೆ ಅರಸನಾದ ಯೋಷೀಯನ ಕಾಲದಲ್ಲಿ ಯೆಹೋವನು ನನಗೆ ಹೀಗೆ ಹೇಳಿದನು - ಭ್ರಷ್ಟಳಾದ ಇಸ್ರಾಯೇಲು ಮಾಡಿದ್ದನ್ನು ನೋಡಿದಿಯಾ? ಅವಳು ಎತ್ತರವಾದ ಎಲ್ಲಾ ಗುಡ್ಡಗಳನ್ನು ಹತ್ತಿ ಸೊಂಪಾಗಿ ಬೆಳೆದಿರುವ ಎಲ್ಲಾ ಮರಗಳ ಕೆಳಗೆ ಹೋಗಿ ಸೂಳೆಯಾಗಿ ನಡೆದಳಷ್ಟೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಅರಸನಾದ ಯೋಷೀಯನ ಕಾಲದಲ್ಲಿ ಯೆಹೋವನು ನನಗೆ ಹೀಗೆ ಹೇಳಿದನು, “ಭ್ರಷ್ಟಳಾದ ಇಸ್ರಾಯೇಲ್ ಮಾಡಿದ್ದನ್ನು ನೋಡಿದೆಯಾ? ಅವಳು ಎತ್ತರವಾದ ಎಲ್ಲಾ ಗುಡ್ಡಗಳನ್ನು ಹತ್ತಿ, ಸೊಂಪಾಗಿ ಬೆಳೆದಿರುವ ಎಲ್ಲಾ ಮರಗಳ ಕೆಳಗೆ ಹೋಗಿ ವ್ಯಭಿಚಾರಿಯಾಗಿ ನಡೆದಳಷ್ಟೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಅರಸ ಯೋಷೀಯನ ಕಾಲದಲ್ಲಿ ಸರ್ವೇಶ್ವರ ಸ್ವಾಮಿ ನನಗೆ ಹೀಗೆಂದು ಹೇಳಿದರು - “ಭ್ರಷ್ಟಳಾದ ಇಸ್ರಯೇಲ್ ಮಾಡಿದ್ದನ್ನು ನೋಡಿದೆಯಾ? ಅವಳು ನನ್ನನ್ನು ತೊರೆದುಬಿಟ್ಟು ಎತ್ತರವಾದ ಗುಡ್ಡಗಳನ್ನೆಲ್ಲ ಹತ್ತಿ, ಹುಲುಸಾಗಿ ಬೆಳೆದ ಎಲ್ಲ ಮರಗಳ ಕೆಳಗೆ ಹೋಗಿ ವೇಶ್ಯೆಯಂತೆ ವರ್ತಿಸುತ್ತಿದ್ದಾಳೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಯೆಹೂದ ಪ್ರದೇಶವನ್ನು ಯೋಷೀಯನು ಆಳುತ್ತಿದ್ದಾಗ ಯೆಹೋವನು ನನ್ನೊಂದಿಗೆ ಮಾತನಾಡಿ, “ಯೆರೆಮೀಯನೇ, ಇಸ್ರೇಲ್ ಎಂಬಾಕೆಯು ಮಾಡಿದ ದುಷ್ಕೃತ್ಯಗಳನ್ನು ನೀನು ನೋಡಿದಿಯಾ? ಅವಳು ನನಗೆ ಹೇಗೆ ವಂಚಿಸಿದಳು ನೋಡಿದಿಯಾ? ಅವಳು ಪ್ರತಿಯೊಂದು ಬೆಟ್ಟದ ಮೇಲೆಯೂ ಸೊಂಪಾಗಿ ಬೆಳೆದ ಪ್ರತಿಯೊಂದು ಮರದ ಕೆಳಗೂ ವಿಗ್ರಹಗಳ ಜೊತೆ ಜಾರತನ ಮಾಡಿದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಯೆಹೋವ ದೇವರು ಅರಸನಾದ ಯೋಷೀಯನ ದಿವಸಗಳಲ್ಲಿ ನನಗೆ ಹೇಳಿದ್ದೇನೆಂದರೆ: “ಭ್ರಷ್ಟಳಾದ ಇಸ್ರಾಯೇಲು ಮಾಡಿದ್ದನ್ನು ನೀನು ನೋಡಿದೆಯೋ? ಅವಳು ಒಂದೊಂದು ಎತ್ತರವಾದ ಬೆಟ್ಟದ ಮೇಲೆಯೂ, ಒಂದೊಂದು ಹಸುರಾದ ಮರದ ಕೆಳಗೆಯೂ ಹೋಗಿ, ಅಲ್ಲಿ ವೇಶ್ಯೆತನ ಮಾಡಿದ್ದಾಳೆ. ಅಧ್ಯಾಯವನ್ನು ನೋಡಿ |