Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 3:7 - ಕನ್ನಡ ಸತ್ಯವೇದವು J.V. (BSI)

7 ಅವಳು ಇವುಗಳನ್ನೆಲ್ಲಾ ನಡಿಸಿದ ಮೇಲೆ ನನ್ನ ಬಳಿಗೆ ಪುನಃ ಬಂದಾಳು ಅಂದುಕೊಂಡೆನು. ಆದರೆ ಬರಲಿಲ್ಲ. ಆಗ ಯೆಹೂದವೆಂಬ ದ್ರೋಹಿಯಾದ ಅವಳ ತಂಗಿಯು ಇದನ್ನು ನೋಡಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವಳು ಇವುಗಳನ್ನೆಲ್ಲಾ ನಡೆಸಿದ ಮೇಲೆ ನನ್ನ ಬಳಿಗೆ ಪುನಃ ಬಂದಾಳು ಅಂದುಕೊಂಡೆನು. ಆದರೆ ಬರಲಿಲ್ಲ. ಆಗ ಯೆಹೂದವೆಂಬ ದ್ರೋಹಿಯಾದ ಅವಳ ತಂಗಿಯು ಇದನ್ನು ನೋಡಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅವಳು ಇಂಥವುಗಳನ್ನೆಲ್ಲ ಮಾಡಿದ ಮೇಲೆ ನನ್ನ ಬಳಿಗೆ ಮರಳಿ ಬಂದೇ ಬರುವಳು ಎಂದುಕೊಂಡಿದ್ದೆ. ಆದರೆ ಬರಲಿಲ್ಲ. ಆಗ ಜುದೇಯವೆಂಬ ದ್ರೋಹಿಯಾದ ಅವಳ ತಂಗಿ ಇದನ್ನು ನೋಡಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ‘ಈ ದುಷ್ಕೃತ್ಯಗಳನ್ನೆಲ್ಲಾ ಮಾಡಿ ಮುಗಿಸಿದ ಮೇಲೆಯೂ ಇಸ್ರೇಲ್ ನನ್ನಲ್ಲಿಗೆ ಬರಬಹುದು’ ಎಂದು ನಾನು ಭಾವಿಸಿದ್ದೆ. ಆದರೆ ಅವಳು ನನ್ನಲ್ಲಿಗೆ ಬರಲಿಲ್ಲ. ಇಸ್ರೇಲಿನ ವಂಚಕಿ ಸಹೋದರಿಯಾದ ಯೆಹೂದ ಎಂಬಾಕೆಯು ಮಾಡಿದ್ದನ್ನು ನೋಡಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅವಳು ಇವುಗಳನ್ನೆಲ್ಲಾ ಮಾಡಿದ ಮೇಲೆ ನಾನು ನನ್ನ ಬಳಿಗೆ ತಿರುಗಿಕೋ ಎಂದೆನು. ಆದರೆ ಅವಳು ತಿರುಗಿಕೊಳ್ಳಲಿಲ್ಲ. ಅವಳ ವಂಚನೆಯುಳ್ಳ ಸಹೋದರಿಯಾದ ಯೆಹೂದಳು ಅದನ್ನು ನೋಡಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 3:7
15 ತಿಳಿವುಗಳ ಹೋಲಿಕೆ  

ನಿನ್ನೆಡಗಡೆಯಲ್ಲಿ ಕುಮಾರ್ತೆಯರೊಂದಿಗೆ ವಾಸಿಸುವ ಸಮಾರ್ಯ ನಿನ್ನ ಅಕ್ಕ, ಬಲಗಡೆಯಲ್ಲಿ ಕುಮಾರ್ತೆಯರೊಂದಿಗೆ ವಾಸಿಸುವ ಸೊದೋಮ್ ನಿನ್ನ ತಂಗಿ.


ಇಸ್ರಾಯೇಲೇ, ನೀನು ಹಿಂದಿರುಗಿ ನಿನ್ನ ದೇವರಾದ ಯೆಹೋವನನ್ನು ಸೇರಿಕೋ; ನಿನ್ನ ಅಪರಾಧದಿಂದಲೇ, ನೀನು ಮುಗ್ಗರಿಸಿ ಬಿದ್ದಿ.


ಇಸ್ರಾಯೇಲ್ ವಂಶದವರೂ ಯೆಹೂದ ವಂಶದವರೂ ನನಗೆ ಕೇವಲ ದ್ರೋಹವನ್ನು ಮಾಡಿರುತ್ತಾರೆ ಎಂದು ಯೆಹೋವನು ಅನ್ನುತ್ತಾನೆ.


ಯೆಹೋವನೇ, ನೀನು ಧರ್ಮಸ್ವರೂಪನಾಗಿರುವದರಿಂದ ನಾನು ನಿನ್ನೊಡನೆ ವ್ಯಾಜ್ಯವಾಡಲಾರೆನು, ಆದರೂ ನಿನ್ನ ಸಂಗಡ ನ್ಯಾಯವನ್ನು ಚರ್ಚಿಸುವೆನು. ದುಷ್ಟರ ನಡತೆಗೆ ಏಕೆ ಸುಫಲವಾಗುತ್ತದೆ? ದ್ರೋಹಿಗಳೆಲ್ಲರೂ ನೆಮ್ಮದಿಯಾಗಿರುವದೇಕೆ?


ಯೆಹೋವನು ತಾನು ಆರಿಸಿಕೊಂಡ ಎರಡು ವಂಶಗಳನ್ನು ನಿರಾಕರಿಸಿಬಿಟ್ಟಿದ್ದಾನೆ ಎಂದು ಈ ಜನರು ಆಡಿಕೊಳ್ಳುವ ಮಾತು ನಿನ್ನ ಲಕ್ಷ್ಯಕ್ಕೆ ಬರಲಿಲ್ಲವೋ? ಇವರು ಜನಾಂಗವೇ ಅಲ್ಲ ಎನ್ನುವಷ್ಟು ನನ್ನ ಜನರನ್ನು ಅಸಡ್ಡೆಮಾಡುತ್ತಾರಲ್ಲಾ.


ಆದರೆ ನೀನು ನಡೆದ ದುರ್ಮಾರ್ಗವು ಅವರು ನಡೆದಂಥದಲ್ಲ, ನಿನ್ನ ಅಸಹ್ಯಕಾರ್ಯಗಳು ಅವರು ನಡಿಸಿದಂಥವುಗಳಲ್ಲ, ಅವರ ದುರ್ನಡತೆಯು ಅತ್ಯಲ್ಪವೆಂದು ಸರ್ವದಾ ಅವರಿಗಿಂತ ಬಹುಕೆಟ್ಟವಳಾಗಿ ನಡೆದುಕೊಂಡಿ.


ನನ್ನ ಕಡೆಯಿಂದ ತಿರಿಗಿಕೊಳ್ಳುವದು ನನ್ನ ಜನರ ಗುಣವೇ; ಅವರನ್ನು ಮೇಲಕ್ಕೆ ಕರೆಯುವವರು ಇದ್ದರೂ ಮೇಲಕ್ಕೆತ್ತುವವರು ಯಾರೂ ಇಲ್ಲ.


ಎರಡು ಮೂರು ಊರಿನವರು ನೀರು ಕುಡಿಯುವದಕ್ಕೆ ಮತ್ತೊಂದು ಊರಿಗೆ ಬಳಲುತ್ತಾ ಹೋಗುತ್ತಿದ್ದರು; ಬಾಯಾರಿಕೆ ತೀರಲಿಲ್ಲ; ಹೀಗೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ ಎಂದು ಯೆಹೋವನು ನುಡಿಯುತ್ತಾನೆ.


ಯೆಹೂದವು ದ್ರೋಹಮಾಡಿದೆ, ಇಸ್ರಾಯೇಲಿನಲ್ಲಿಯೂ ಯೆರೂಸಲೇವಿುನಲ್ಲಿಯೂ ಒಂದು ದುರಾಚಾರವು ನಡೆಯುತ್ತಿದೆ; ಯೆಹೂದವು ಅನ್ಯದೇವತೆಯ ಮಗಳನ್ನು ಮದುವೆಯಾಗಿ ಯೆಹೋವನ ಪ್ರಿಯ ದೇವಾಲಯವನ್ನು ಹೊಲೆಗೆಡಿಸಿದೆ.


ಇವನು ಇಸ್ರಾಯೇಲ್ಯರಂತೆ ನಡೆಯದೆ ತನ್ನ ತಂದೆಯ ದೇವರ ಭಕ್ತನಾಗಿ ಆತನ ಆಜ್ಞೆಗಳನ್ನು ಅನುಸರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು