ಯೆರೆಮೀಯ 3:8 - ಕನ್ನಡ ಸತ್ಯವೇದವು J.V. (BSI)8 ಭ್ರಷ್ಟಳಾದ ಇಸ್ರಾಯೇಲು ಹಾದರಮಾಡಿದ ಕಾರಣದಿಂದಲೇ ನಾನು ಅವಳನ್ನು ನಿರಾಕರಿಸಿ ತ್ಯಾಗಪತ್ರ ಕೊಟ್ಟದ್ದನ್ನು ಯೆಹೂದವೆಂಬ ದ್ರೋಹಿಯಾದ ಅವಳ ತಂಗಿಯು ನೋಡಿಯೂ ಅಂಜದೆ ತಾನೂ ಹೋಗಿ ಸೂಳೆತನವನ್ನು ನಡಿಸಿದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಭ್ರಷ್ಟಳಾದ ಇಸ್ರಾಯೇಲ್ ನನಗೆ ವಿಮುಖಳಾಗಿ ವ್ಯಭಿಚಾರ ಮಾಡಿದ ಕಾರಣದಿಂದಲೇ ನಾನು ಅವಳನ್ನು ನಿರಾಕರಿಸಿ, ತ್ಯಾಗಪತ್ರ ಕೊಟ್ಟದ್ದನ್ನು ಯೆಹೂದವೆಂಬ ದ್ರೋಹಿಯಾದ ಅವಳ ತಂಗಿಯು ನೋಡಿಯೂ, ಅಂಜದೆಯೂ ತಾನೂ ಹೋಗಿ ವ್ಯಭಿಚಾರವನ್ನು ನಡೆಸಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಭ್ರಷ್ಟಳಾದ ಇಸ್ರಯೇಲ್ ನನಗೆ ವಿಮುಖಳಾಗಿ ವ್ಯಭಿಚಾರಿಣಿಯಂತೆ ವರ್ತಿಸಿದ ಕಾರಣದಿಂದಲೆ, ನಾನು ಅವಳನ್ನು ನಿರಾಕರಿಸಿ ವಿವಾಹ ವಿಚ್ಛೇದನ ಪತ್ರಕೊಟ್ಟದ್ದನ್ನು ಜುದೇಯವೆಂಬ ದ್ರೋಹಿಯಾದ ಅವಳ ತಂಗಿ ನೋಡಿಯೂ ಅಂಜದೆಹೋದಳು. ತಾನೂ ಹೋಗಿ ವೇಶ್ಯೆಯಂತೆ ವರ್ತಿಸಿದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಇಸ್ರೇಲ್ ಎಂಬಾಕೆಯು ನನಗೆ ವಿಶ್ವಾಸದ್ರೋಹ ಮಾಡಿದ್ದಳು. ನಾನು ಏಕೆ ಹೊರಗೆ ಹಾಕಿದೆ ಎಂಬುದು ಅವಳಿಗೆ ಗೊತ್ತಿತ್ತು. ಅವಳ ಜಾರತನ ಎಂಬ ಪಾಪದ ಬಗ್ಗೆ ನನಗೆ ತಿಳಿದಿದೆ ಎಂದು ಇಸ್ರೇಲಳಿಗೆ ಗೊತ್ತಾಗಿತ್ತು. ಆದರೆ ಅದರಿಂದ ಅವಳ ವಂಚಕಳಾದ ಸೋದರಿಗೆ ಭಯವಾಗಲಿಲ್ಲ. ಯೆಹೂದ ಭಯಪಡಲಿಲ್ಲ. ಆಕೆಯು ಸಹ ವೇಶ್ಯೆಯರಂತೆ ವರ್ತಿಸಿದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಆಗ ನಾನು ಕಂಡದ್ದೇನೆಂದರೆ, ಭ್ರಷ್ಟಳಾದ ಇಸ್ರಾಯೇಲು ವ್ಯಭಿಚಾರ ಮಾಡಿದ ಎಲ್ಲಾ ಕಾರಣಗಳ ನಿಮಿತ್ತ ನಾನು ಅವಳನ್ನು ಬಿಟ್ಟುಬಿಟ್ಟು, ತ್ಯಾಗ ಪತ್ರವನ್ನು ಕೊಟ್ಟಿದ್ದಾಗ್ಯೂ ಅವಳ ವಂಚನೆಯುಳ್ಳ ಸಹೋದರಿಯಾದ ಯೆಹೂದಳು ಭಯಪಡದೆ, ತಾನು ಕೂಡ ಹೋಗಿ ವೇಶ್ಯೆತನ ಮಾಡಿದಳು. ಅಧ್ಯಾಯವನ್ನು ನೋಡಿ |