ಯೆರೆಮೀಯ 30:10 - ಕನ್ನಡ ಸತ್ಯವೇದವು J.V. (BSI)10 ಯೆಹೋವನು ಇಂತೆನ್ನುತ್ತಾನೆ - ನನ್ನ ಸೇವಕ ಯಾಕೋಬೇ, ಭಯಪಡಬೇಡ! ಇಸ್ರಾಯೇಲೇ, ಅಂಜಬೇಡ! ಇಗೋ ನಾನು ನಿನ್ನನ್ನು ದೂರದೇಶದಿಂದ ಉದ್ಧರಿಸುವೆನು, ನಿನ್ನ ಸಂತಾನವನ್ನು ಸೆರೆಹೋದ ಸೀಮೆಯಿಂದ ರಕ್ಷಿಸುವೆನು; ಯಾಕೋಬು ಹಿಂದಿರುಗಿ ನೆಮ್ಮದಿಯಾಗಿಯೂ ಹಾಯಾಗಿಯೂ ಇರುವದು; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಯೆಹೋವನು ಇಂತೆನ್ನುತ್ತಾನೆ, “ನನ್ನ ಸೇವಕನಾದ ಯಾಕೋಬೇ, ಭಯಪಡಬೇಡ! ಇಸ್ರಾಯೇಲೇ, ಅಂಜಬೇಡ! ಇಗೋ ನಾನು ನಿನ್ನನ್ನು ದೂರದೇಶದಿಂದ ಉದ್ಧರಿಸುವೆನು, ನಿನ್ನ ಸಂತಾನವನ್ನು ಸೆರೆಹೋದ ಸೀಮೆಯಿಂದ ರಕ್ಷಿಸುವೆನು. ಯಾಕೋಬನು ಹಿಂದಿರುಗಿ ನೆಮ್ಮದಿಯಾಗಿಯೂ, ಹಾಯಾಗಿಯೂ ಇರುವುದು; ಯಾರೂ ಅದನ್ನು ಹೆದರಿಸರು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 “ನನ್ನ ದಾಸ ಯಕೋಬನೇ, ಅಂಜಬೇಡ! ಇಸ್ರಯೇಲೇ, ಭಯಪಡಬೇಡ” ಎನ್ನುತ್ತಾರೆ ಸರ್ವೇಶ್ವರ. “ದೂರ ನಾಡಿನಿಂದ ನಿನ್ನನ್ನು ಮುಕ್ತನನ್ನಾಗಿಸುವೆನು ನಿನ್ನ ಸಂತಾನ ಸೆರೆಹೋದ ಸೀಮೆಯಿಂದ ನಿನ್ನನ್ನು ಉದ್ಧರಿಸುವೆನು. ಹಿಂದಿರುಗಿ, ಹಾಯಾಗಿ ನೆಮ್ಮದಿಯಿಂದಿರುವುದು ಯಕೋಬು ಯಾರಿಂದಲೂ ಅದನ್ನು ಹೆದರಿಸಲಾಗದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಯೆಹೋವನು ಹೀಗೆಂದನು: “ನನ್ನ ಸೇವಕನಾದ ಯಾಕೋಬನೇ, ಭಯಪಡಬೇಡ! ಇಸ್ರೇಲೇ, ಅಂಜಬೇಡ, ನಾನು ನಿಮ್ಮನ್ನು ಆ ದೂರಪ್ರದೇಶದಿಂದ ರಕ್ಷಿಸುವೆನು. ಆ ದೂರದೇಶದಲ್ಲಿ ನೀವು ಬಂಧಿಗಳಾಗಿದ್ದೀರಿ, ಆದರೆ ನಾನು ನಿಮ್ಮ ವಂಶದವರನ್ನು ರಕ್ಷಿಸುತ್ತೇನೆ. ಅವರನ್ನು ಆ ನಾಡಿನಿಂದ ಮತ್ತೆ ಕರೆದುತರುತ್ತೇನೆ. ಯಾಕೋಬು ಮತ್ತೆ ನೆಮ್ಮದಿಯಿಂದ ಇರುವುದು. ಜನರು ಯಾಕೋಬನನ್ನು ಪೀಡಿಸುವದಿಲ್ಲ; ನನ್ನ ಜನರನ್ನು ಹೆದರಿಸುವ ಶತ್ರುಗಳಿರುವದಿಲ್ಲ.” ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 “ ‘ಆದ್ದರಿಂದ ನನ್ನ ಸೇವಕನಾದ ಯಾಕೋಬನೇ ಭಯಪಡಬೇಡ, ಇಸ್ರಾಯೇಲೇ ಹೆದರಬೇಡ,’ ಎಂದು ಯೆಹೋವ ದೇವರು ಹೇಳುತ್ತಾರೆ. ‘ಏಕೆಂದರೆ ಇಗೋ, ನಾನು ನಿನ್ನನ್ನು ದೂರದಿಂದಲೇ ನಿನ್ನ ಸಂತಾನವನ್ನು ಸೆರೆ ಒಯ್ದ ದೇಶದಿಂದಲೂ ರಕ್ಷಿಸುತ್ತೇನೆ. ಯಾಕೋಬನು ತಿರುಗಿಬಂದು ವಿಶ್ರಾಂತಿಯಲ್ಲಿರುವನು. ಹೆದರಿಸುವವನಿಲ್ಲದೆ ಸುರಕ್ಷಿತವಾಗಿರುವನು. ಅಧ್ಯಾಯವನ್ನು ನೋಡಿ |