ಯೆರೆಮೀಯ 30:16 - ಕನ್ನಡ ಸತ್ಯವೇದವು J.V. (BSI)16 ಹೀಗಿರಲು ನಿನ್ನನ್ನು ನುಂಗುವವರೆಲ್ಲರು ನುಂಗಲ್ಪಡುವರು; ನಿನ್ನ ಶತ್ರುಗಳೆಲ್ಲಾ ಒಬ್ಬನೂ ತಪ್ಪದೆ ಸೆರೆಗೆ ಹೋಗುವರು, ನಿನ್ನನ್ನು ಸೂರೆಮಾಡುವವರು ಸೂರೆಯಾಗುವರು, ನಿನ್ನನ್ನು ಕೊಳ್ಳೆ ಹೊಡೆಯುವವರನ್ನು ಕೊಳ್ಳೆಗೆ ಈಡುಮಾಡುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಹೀಗಿರಲು ನಿನ್ನನ್ನು ನುಂಗುವವರೆಲ್ಲರು ನುಂಗಲ್ಪಡುವರು; ನಿನ್ನ ಶತ್ರುಗಳಲ್ಲಿ ಒಬ್ಬನೂ ತಪ್ಪದೆ ಸೆರೆಗೆ ಹೋಗುವರು. ನಿನ್ನನ್ನು ಸೂರೆಮಾಡುವವರು ಸೂರೆಯಾಗುವರು, ನಿನ್ನನ್ನು ಕೊಳ್ಳೆ ಹೊಡೆಯುವವರನ್ನು ಕೊಳ್ಳೆಗೆ ಈಡುಮಾಡುವೆನು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಆದರೂ ನಿನ್ನನ್ನು ಕಬಳಿಸುವವರನ್ನು ಕಬಳಿಸಲಾಗುವುದು ನಿನ್ನ ಶತ್ರುಗಳೆಲ್ಲ ತಪ್ಪದೆ ಸೆರೆಹೋಗುವರು ನಿನ್ನನ್ನು ಸೂರೆಮಾಡುವವರು ಸೂರೆಯಾಗುವರು ನಿನ್ನನ್ನು ಕೊಳ್ಳೆಹೊಡೆಯುವವರು ಕೊಳ್ಳೆಗೆ ಈಡಾಗುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಆ ಜನಾಂಗಗಳು ನಿಮ್ಮನ್ನು ನಾಶಗೊಳಿಸಿದವು. ಆದರೆ ಈಗ ಆ ಜನಾಂಗಗಳನ್ನು ನಾಶಪಡಿಸಲಾಗಿದೆ. ಇಸ್ರೇಲೇ, ಯೆಹೂದವೇ, ನಿಮ್ಮ ಶತ್ರುಗಳು ಬಂಧಿಗಳಾಗುತ್ತಾರೆ. ಅವರು ನಿಮ್ಮ ವಸ್ತುಗಳನ್ನು ಕದ್ದುಕೊಂಡಿದ್ದಾರೆ. ಆದರೆ ಬೇರೆಯವರು ಅವರ ವಸ್ತುಗಳನ್ನು ಕದಿಯುವರು. ಅವರು ಯುದ್ಧದಲ್ಲಿ ನಿಮ್ಮ ವಸ್ತುಗಳನ್ನು ತೆಗೆದುಕೊಂಡರು. ಆದರೆ ಬೇರೆಯವರು ಯುದ್ಧದಲ್ಲಿ ಅವರ ವಸ್ತುಗಳನ್ನು ತೆಗೆದುಕೊಳ್ಳುವರು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 “ ‘ಆದರೂ ನಿನ್ನನ್ನು ನುಂಗಿಬಿಡುವವರನ್ನು ನುಂಗಿಬಿಡಲಾಗುವುದು. ನಿನ್ನ ವಿರೋಧಿಗಳಲ್ಲಿ ಪ್ರತಿಯೊಬ್ಬನೂ ಸೆರೆಹೋಗುವನು. ನಿನ್ನನ್ನು ಸೂರೆಮಾಡುವವರು ಸೂರೆಯಾಗುವರು. ನಿನಗೆ ಬಲೆ ಬೀಸುವವರೆಲ್ಲರನ್ನು ನಾನು ಬಲೆಗೆ ಒಪ್ಪಿಸುವೆನು. ಅಧ್ಯಾಯವನ್ನು ನೋಡಿ |