Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 30:17 - ಕನ್ನಡ ಸತ್ಯವೇದವು J.V. (BSI)

17 ಯೆಹೋವನು ಇಂತೆನ್ನುತ್ತಾನೆ - ಇಗೋ, ಇದು ಚೀಯೋನ್, ಯಾರಿಗೂ ಬೇಡವಾಗಿರುವ ನಗರಿ ಎಂದು ಜನರು ಹೇಳಿ ನಿನ್ನನ್ನು ಭ್ರಷ್ಟಳೆಂದದ್ದನ್ನು ನಾನು ಸಹಿಸಲಾರದೆ ನಿನಗೆ ಗುಣಪಡಿಸಿ ನಿನ್ನ ಬಾಸುಂಡೆಗಳನ್ನು ವಾಸಿಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಯೆಹೋವನು ಇಂತೆನ್ನುತ್ತಾನೆ, “ಇಗೋ, ‘ಇದು ಚೀಯೋನ್, ಯಾರಿಗೂ ಬೇಡವಾಗಿರುವ ನಗರ’ ಎಂದು ಜನರು ಹೇಳಿ, ನಿನ್ನನ್ನು ಭ್ರಷ್ಟಳೆಂದದ್ದನ್ನು ನಾನು ಸಹಿಸಲಾರದೆ, ನಿನ್ನನ್ನು ಗುಣಪಡಿಸಿ ನಿನ್ನ ಬಾಸುಂಡೆಗಳನ್ನು ವಾಸಿಮಾಡುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ‘ಇಗೋ, ಸಿಯೋನ್ ಯಾರಿಗೂ ಬೇಡವಾದವಳು, ಭ್ರಷ್ಟಳಾದಳು’ ಎಂದು ಜನರು ನಿನ್ನನ್ನು ಜರೆವುದು ನನಗೆ ಹಿಡಿಸದು ನಿನ್ನನ್ನು ಗುಣಪಡಿಸುವೆನು ನಿನ್ನ ಗಾಯಗಳನ್ನು ವಾಸಿಮಾಡುವೆನು - ಇದು ಸರ್ವೇಶ್ವರನಾದ ನನ್ನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಇದು ಯೆಹೋವನ ನುಡಿ: “ನಾನು ಪುನಃ ನಿಮಗೆ ಆರೋಗ್ಯವನ್ನು ಕೊಡುವೆನು; ನಿಮ್ಮ ಗಾಯಗಳನ್ನು ವಾಸಿಮಾಡುವೆನು. ಏಕೆಂದರೆ ಚೀಯೋನ್ ಭ್ರಷ್ಟಳಾದಳೆಂದೂ ‘ಯಾರಿಗೂ ಬೇಡವಾದ ನಗರ’ವೆಂದೂ ಬೇರೆಯವರು ಹೇಳಿದರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಚೀಯೋನು ಬೇಡವಾದದ್ದು, ಅದನ್ನು ನೋಡಿಕೊಳ್ಳುವವರು ಯಾರೂ ಇಲ್ಲ, ಎಂದು ಅವರು ನಿನ್ನ ವಿಷಯ ಹೇಳುವುದನ್ನು ನಾನು ಸಹಿಸಲಾರದೆ, ನಿನಗೆ ಕ್ಷೇಮವನ್ನುಂಟು ಮಾಡಿ, ನಿನ್ನ ಗಾಯಗಳನ್ನು ಸ್ವಸ್ಥ ಮಾಡುವೆನು,’ ಎಂಬುದಾಗಿ ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 30:17
36 ತಿಳಿವುಗಳ ಹೋಲಿಕೆ  

ಆತನು [ದೂತನನ್ನೋ ಎಂಬಂತೆ] ತನ್ನ ವಾಕ್ಯವನ್ನು ಕಳುಹಿಸಿ ಅವರನ್ನು ಗುಣಪಡಿಸಿದನು; ಸಮಾಧಿಗೆ ಸೇರದಂತೆ ಮಾಡಿದನು.


ಇಗೋ, ನಾನು ಈ ಪಟ್ಟಣವನ್ನು ಜೀರ್ಣೋದ್ಧಾರಮಾಡಿ ಅದಕ್ಕೆ ಸೌಖ್ಯವನ್ನು ಕೊಟ್ಟು ನಿವಾಸಿಗಳನ್ನು ಗುಣಪಡಿಸುವೆನು; ಸ್ಥೈರ್ಯಸಮಾಧಾನಗಳನ್ನು ಸಮೃದ್ಧಿಯಾಗಿ ಅವರ ಅನುಭವಕ್ಕೆ ತರುವೆನು;


ನಾವು ಪಾಪದ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ನಮ್ಮ ಪಾಪಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತುಕೊಂಡು ಮರಣದ ಕಂಬವನ್ನು ಏರಿದನು; ಆತನ ಬಾಸುಂಡೆಗಳಿಂದ ನಿಮಗೆ ಗುಣವಾಯಿತು.


ಆತನು ನಿನ್ನ ಎಲ್ಲಾ ಅಪರಾಧಗಳನ್ನು ಕ್ಷವಿುಸುವವನೂ ಸಮಸ್ತರೋಗಗಳನ್ನು ವಾಸಿಮಾಡುವವನೂ


ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಶ್ರದ್ಧೆಯಿಂದ ಕೇಳಿ ಆತನ ದೃಷ್ಟಿಗೆ ಸರಿಬೀಳುವದನ್ನು ಮಾಡಿ ಆತನ ಆಜ್ಞೆಗಳಿಗೆ ವಿಧೇಯರಾಗಿದ್ದು ಆತನ ಕಟ್ಟಳೆಗಳನ್ನೆಲ್ಲಾ ಅನುಸರಿಸಿ ನಡೆದರೆ ನಾನು ಐಗುಪ್ತ್ಯರಿಗೆ ಉಂಟುಮಾಡಿದ ವ್ಯಾಧಿಗಳಲ್ಲಿ ಒಂದನ್ನೂ ನಿಮಗೆ ಬರಗೊಡಿಸುವದಿಲ್ಲ. ಯೆಹೋವನೆಂಬ ನಾನೇ ನಿಮಗೆ ಆರೋಗ್ಯದಾಯಕನು.


ನನ್ನ ಪ್ರಾಣವನ್ನು ಉಜ್ಜೀವಿಸಮಾಡಿ ತನ್ನ ಹೆಸರಿಗೆ ತಕ್ಕಂತೆ ನೀತಿಮಾರ್ಗದಲ್ಲಿ ನನ್ನನ್ನು ನಡಿಸುತ್ತಾನೆ.


ಅವರು - ಯೆಹೋವನ ಕಡೆಗೆ ಹಿಂದಿರುಗಿ ಹೋಗೋಣ ಬನ್ನಿರಿ; ನಮ್ಮನ್ನು ಸೀಳಿಬಿಟ್ಟವನು ಆತನೇ, ಆತನೇ ಸ್ವಸ್ಥಮಾಡುವನು; ಹೊಡೆದವನು ಆತನೇ, ಆತನೇ ನಮ್ಮ ಗಾಯಗಳನ್ನು ಕಟ್ಟುವನು.


ನನ್ನ ನಾಮದಲ್ಲಿ ಭಯಭಕ್ತಿಯಿಟ್ಟಿರುವ ನಿಮಗೋ [ದೇವರ] ಧರ್ಮವೆಂಬ ಸೂರ್ಯನು ಸ್ವಸ್ಥತೆಯನ್ನುಂಟುಮಾಡುವ ಕಿರಣಗಳುಳ್ಳವನಾಗಿ ಮೂಡುವನು; ಕೊಟ್ಟಿಗೆಯಿಂದ ಬಿಟ್ಟ ಕರುಗಳಂತೆ ನೀವು ಹೊರಟು ಬಂದು ಕುಣಿದಾಡುವಿರಿ;


ತಪ್ಪಿಸಿಕೊಂಡದ್ದನ್ನು ಹುಡುಕುವೆನು, ಓಡಿಸಿದ್ದನ್ನು ಮಂದೆಗೆ ಸೇರಿಸುವೆನು, ದುರ್ಬಲವಾದದ್ದನ್ನು ಬಲಗೊಳಿಸುವೆನು, ಮುರಿದ ಅಂಗವನ್ನು ಕಟ್ಟುವೆನು; ಬಲಿತ ಕೊಬ್ಬಿದ ಕುರಿಗಳನ್ನೋ ಧ್ವಂಸಮಾಡುವೆನು; ಅವುಗಳಿಗೆ ನ್ಯಾಯದಂಡನೆ ಎಂಬ ಮೇವನ್ನು ತಿನ್ನಿಸುವೆನು.


ಆ ನದಿಯ ಉಭಯ ಪಾರ್ಶ್ವಗಳಲ್ಲಿ ಜೀವವೃಕ್ಷವಿತ್ತು; ಅದು ತಿಂಗಳು ತಿಂಗಳಿಗೆ ಫಲವನ್ನು ಫಲಿಸುತ್ತಾ ಹನ್ನೆರಡು ತರದ ಫಲಗಳನ್ನು ಕೊಡುತ್ತದೆ. ಆ ಮರದ ಎಲೆಗಳು ಜನಾಂಗದವರನ್ನು ವಾಸಿಮಾಡುವದಕ್ಕೆ ಪ್ರಯೋಜನವಾಗಿವೆ.


ಇದಲ್ಲದೆ ಯೆಹೋವನು ತನ್ನ ಜನರ ವ್ರಣವನ್ನು ಕಟ್ಟಿ ಅವರ ಪೆಟ್ಟಿನ ಗಾಯವನ್ನು ಗುಣಮಾಡುವ ದಿವಸದಲ್ಲಿ ಚಂದ್ರನ ಬೆಳಕು ಸೂರ್ಯನ ಬೆಳಕಿನಂತಿರುವದು, ಮತ್ತು ಸೂರ್ಯನ ಬೆಳಕು ಏಳರಷ್ಟು ಹೆಚ್ಚಿ ಏಳು ದಿನಗಳ ಬೆಳಕಿನಂತಾಗುವದು.


ನಿನ್ನ ಭಾಗಕ್ಕೆ ಯಾರೂ ಇಲ್ಲ, ನಿನ್ನ ವ್ರಣಕ್ಕೆ ಔಷಧವಿಲ್ಲ, ನಿನಗೆ ವಾಸಿಯಾಗದು.


ಗಿಲ್ಯಾದಿನಲ್ಲಿ ಔಷಧವಿಲ್ಲವೋ? ಅಲ್ಲಿ ವೈದ್ಯನು ಸಿಕ್ಕನೋ? ನನ್ನ ಪ್ರಜೆಯೆಂಬಾಕೆಗೆ ಏಕೆ ಗುಣವಾಗಲಿಲ್ಲ?


ಭ್ರಷ್ಟರಾದ ಮಕ್ಕಳೇ, ಹಿಂದಿರುಗಿರಿ, ನಿಮ್ಮ ಭ್ರಷ್ಟತ್ವವನ್ನು ಪರಿಹರಿಸುವೆನು [ಎಂದು ಯೆಹೋವನು ಅನ್ನುತ್ತಾನೆ. ಅದಕ್ಕೆ ಜನರು] - ಇಗೋ, ನಿನ್ನ ಬಳಿಗೆ ಬಂದೆವು. ನೀನು ಯೆಹೋವನು, ನಮ್ಮ ದೇವರು.


ಯೆಹೋವನು - ಕುಗ್ಗಿದವರ ಬಾಧೆಯನ್ನು ನೋಡಿದ್ದೇನೆ; ಗತಿಯಿಲ್ಲದವರ ನರಳುವಿಕೆಯು ನನಗೆ ಕೇಳಿಸಿತು. ಈಗ ಎದ್ದು ಬಂದು ಅವರ ಇಷ್ಟಾರ್ಥವನ್ನು ನೆರವೇರಿಸಿ ಅವರನ್ನು ಸುರಕ್ಷಿತವಾಗಿ ಇರಿಸುವೆನು ಎಂದು ಹೇಳುತ್ತಾನೆ.


ಅವನು ಜನಾಂಗಗಳಿಗೆ ಧ್ವಜವನ್ನೆತ್ತಿ ಇಸ್ರಾಯೇಲ್ಯರಲ್ಲಿ ಸೆರೆಗೆ ಒಯ್ಯಲ್ಪಟ್ಟವರನ್ನೂ ಯೆಹೂದದಿಂದ ಚದರಿದವರನ್ನೂ ಭೂವಿುಯ ಚತುರ್ದಿಕ್ಕುಗಳಿಂದಲೂ ಕೂಡಿಸಿಕೊಳ್ಳುವನು.


ಯೆಹೋವನು ತಾನು ಆರಿಸಿಕೊಂಡ ಎರಡು ವಂಶಗಳನ್ನು ನಿರಾಕರಿಸಿಬಿಟ್ಟಿದ್ದಾನೆ ಎಂದು ಈ ಜನರು ಆಡಿಕೊಳ್ಳುವ ಮಾತು ನಿನ್ನ ಲಕ್ಷ್ಯಕ್ಕೆ ಬರಲಿಲ್ಲವೋ? ಇವರು ಜನಾಂಗವೇ ಅಲ್ಲ ಎನ್ನುವಷ್ಟು ನನ್ನ ಜನರನ್ನು ಅಸಡ್ಡೆಮಾಡುತ್ತಾರಲ್ಲಾ.


ಮತ್ತು ನೀನು ಇಸ್ರಾಯೇಲಿನ ಪರ್ವತಗಳನ್ನು ನೋಡಿ - ಆಹಾ, ಹಾಳಾದವು, ನಮಗೆ ತುತ್ತಾಗಿವೆ ಎಂದು ಮಾಡಿದ ದೂಷಣೆಗಳು ಯೆಹೋವನಾದ ನನ್ನ ಕಿವಿಗೆ ಬಿದ್ದಿವೆ ಎಂಬದು ನಿನಗೆ ಗೊತ್ತಾಗುವದು.


ಅವರು ಆ ಜನಾಂಗಗಳೊಳಗೆ ಸೇರಿಕೊಂಡ ಮೇಲೆ ಓಹೋ, ಇವರು ಯೆಹೋವನ ಪ್ರಜೆಗಳು, ಆತನ ದೇಶದಿಂದ ಭ್ರಷ್ಟರಾಗಿ ಬಂದಿದ್ದಾರೆ ಎಂದೆನ್ನಿಸಿಕೊಂಡು ನನ್ನ ಪರಿಶುದ್ಧನಾಮಕ್ಕೆ ಅಪಕೀರ್ತಿಯನ್ನು ತರಲು


ಹಾದುಹೋಗುವವರೆಲ್ಲರೂ ನಿನ್ನನ್ನು ನೋಡಿ ಚಪ್ಪಾಳೆಹೊಡೆಯುತ್ತಾರೆ. ಯೆರೂಸಲೇಮ್ ನಗರಿಯನ್ನು ಕಂಡು - ಆಹಾ, ಪರಿಪೂರ್ಣಸುಂದರಿ, ಸಮಸ್ತಲೋಕ ಸಂತೋಷಿಣಿ ಎನಿಸಿಕೊಳ್ಳುತ್ತಿದ್ದ ಪುರಿಯು ಇದೇಯೋ? ಛೀ ಛೀ ಎಂದು ತಲೆಯಾಡಿಸುತ್ತಾರೆ.


ನನ್ನ ಬಲಗಡೆಗೆ ನೋಡಿ ಪರಾಂಬರಿಸು; ಅಲ್ಲಿ ಸಹಾಯಕರು ಯಾರೂ ಇಲ್ಲ. ಆಶ್ರಯವು ನಾಶವಾಯಿತು; ನನ್ನ ಪ್ರಾಣಕ್ಕೆ ಹಿತಚಿಂತಕರು ಒಬ್ಬರೂ ಇಲ್ಲ.


ಚೀಯೋನಿನ ಯಾವ ನಿವಾಸಿಯೂ ತಾನು ಅಸ್ವಸ್ಥನು ಎಂದು ಹೇಳನು; ಅಲ್ಲಿಯ ಜನರ ಪಾಪವು ಪರಿಹಾರವಾಗುವದು.


ಇಸ್ರಾಯೇಲಿನ ದೇಶಭ್ರಷ್ಟರನ್ನು ಕೂಡಿಸಿಕೊಳ್ಳುವ ಕರ್ತನಾದ ಯೆಹೋವನ ನುಡಿಯೇನಂದರೆ - ನಾನು ಕೂಡಿಸಿದ ಇಸ್ರಾಯೇಲ್ಯರೊಂದಿಗೆ ಇನ್ನೂ ಹಲವರನ್ನು ಕೂಡಿಸುವೆನು ಎಂಬದೇ.


ಇದನ್ನು ಆಚರಿಸುವಾಗ ನಿಮಗೆ ಬೆಳಕು ಉದಯದಂತೆ ಭೇದಿಸಿಕೊಂಡು ಬರುವದು, ನಿಮ್ಮ ಕ್ಷೇಮವು ಬೇಗನೆ ವಿಕಸಿಸುವದು; ನಿಮ್ಮ ಧರ್ಮವು ನಿಮಗೆ ಮುಂಬಲವಾಗಿ ಮುಂದರಿಯುವದು, ಯೆಹೋವನ ಮಹಿಮೆಯು ನಿಮಗೆ ಹಿಂಬಲವಾಗಿರುವದು.


ನಿವಾಸಿಗಳು ಬಿಟ್ಟು ಬಿಟ್ಟ, ದ್ವೇಷಕ್ಕೀಡಾದ, ಯಾರೂ ಹಾದು ಹೋಗದ ನಿನಗೆ ನಾನು ನಿತ್ಯಶ್ರೇಷ್ಠತೆಯನ್ನು ದಯಪಾಲಿಸಿ ನಿನ್ನನ್ನು ತಲತಲಾಂತರಗಳವರಿಗೆ ಉಲ್ಲಾಸಕರವಾಗುವಂತೆ ಮಾಡುವೆನು.


ಯೆಹೋವನೇ, ನನ್ನನ್ನು ಸ್ವಸ್ಥಪಡಿಸು, ಆಗ ಸ್ವಸ್ಥನೇ ಆಗುವೆನು; ನನ್ನನ್ನು ರಕ್ಷಿಸು, ಆಗ ರಕ್ಷಿತನೇ ಆಗುವೆನು; ನೀನೇ ನನಗೆ ಸ್ತುತ್ಯನು.


ನಾನೇ ಎಫ್ರಾಯೀವಿುಗೆ ನಡೆದಾಟವನ್ನು ಕಲಿಸಿದೆನು; ಅದನ್ನು ಕೈಯಲ್ಲಿ ಎತ್ತಿಕೊಂಡೆನು; ತನ್ನನ್ನು ಸ್ವಸ್ಥಮಾಡಿದವನು ನಾನೇ ಎಂದು ಅದಕ್ಕೆ ತಿಳಿಯಲಿಲ್ಲ.


ಗಾಯಮಾಡುವವನೂ ಗಾಯಕಟ್ಟುವವನೂ ಆತನೇ; ಹೊಡೆಯುವ ಕೈಯೇ ವಾಸಿಮಾಡುತ್ತದೆ.


ನೀನು ಬಿಡಲ್ಪಟ್ಟು ಮನನೊಂದ ಹೆಂಡತಿ, ಹೌದು, ತ್ಯಜಿಸಲ್ಪಟ್ಟವಳಾದ ನನ್ನ ಯೌವನಕಾಲದ ಪತ್ನಿ ಎಂದು ಯೆಹೋವನು ನಿನ್ನನ್ನು ಕನಿಕರಿಸಿ ಕರೆದಿದ್ದಾನೆ ಎಂಬದು ನಿನ್ನ ದೇವರ ನುಡಿ.


ಅವರ ಮಾರ್ಗಗಳನ್ನು ನೋಡಿದ್ದೇನೆ, ಅವರನ್ನು ಸ್ವಸ್ಥಮಾಡಿ ನಡಿಸುತ್ತಾ ಅವರಿಗೆ, ಅವರಲ್ಲಿಯೂ ದುಃಖಿತರಿಗೆ, ಆದರಣೆಯನ್ನು ಪ್ರತಿಫಲವಾಗಿ ಕೊಡುವೆನು.


ಯೆಹೋವನು ಮನುಷ್ಯರ ಬಾಯ ಯೋಗ್ಯಫಲವಾಗಿರುವ ಸ್ತೋತ್ರವನ್ನು ಉಂಟುಮಾಡುವವನಾಗಿ - ದೂರದವನಿಗೂ ಸಮೀಪದವನಿಗೂ ಕ್ಷೇಮವಿರಲಿ, ಸುಕ್ಷೇಮವಿರಲಿ, ನಾನು ಅವರನ್ನು ಸ್ವಸ್ಥಮಾಡುವೆನು ಎಂದು ಹೇಳುತ್ತಾನೆ.


ನನ್ನ ಗುಡಾರವು ಹಾಳಾಗಿದೆ, ಹಗ್ಗಗಳು ಹರಿದುಹೋಗಿವೆ, ಮಕ್ಕಳು ನನ್ನೊಳಗಿಂದ ತೊಲಗಿ ಇಲ್ಲವಾಗಿದ್ದಾರೆ; ನನ್ನ ಗುಡಾರವನ್ನು ಹಾಕುವದಕ್ಕೂ ನನ್ನ ಪರದೆಗಳನ್ನು ಬಿಗಿಯುವದಕ್ಕೂ ಇನ್ನು ಯಾರೂ ಇರುವದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು