ಯೆರೆಮೀಯ 30:19 - ಕನ್ನಡ ಸತ್ಯವೇದವು J.V. (BSI)19 ಅವುಗಳೊಳಗಿಂದ ಸ್ತೋತ್ರವೂ ವಿನೋದಪಡುವವರ ಧ್ವನಿಯೂ ಕೇಳಿಸುವವು; ನಾನು ಆ ಜನರನ್ನು ಹೆಚ್ಚಿಸುವೆನು, ಇನ್ನು ಕೊಂಚವಾಗಿರರು, ಅವರನ್ನು ಘನಪಡಿಸುವೆನು, ಇನ್ನು ಹೀನರಾಗಿರರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಅವುಗಳೊಳಗಿಂದ ಸ್ತೋತ್ರವೂ ಮತ್ತು ಸಂತೋಷದಿಂದ ನಲಿಯುವ ಧ್ವನಿಯೂ ಕೇಳಿಸುವವು. ನಾನು ಆ ಜನರನ್ನು ಹೆಚ್ಚಿಸುವೆನು, ಅವರು ಇನ್ನು ಅಲ್ಪರಾಗಿರರು, ಅವರನ್ನು ಘನಪಡಿಸುವೆನು, ಅವರು ಇನ್ನು ಹೀನರಾಗಿರರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಅವುಗಳಿಂದ ಸ್ತುತಿಸ್ತೋತ್ರ ಕೇಳಿಬರುವುದು ಅಲ್ಲಿಂದ ನಲಿವುನಾದ ಕೇಳಿಸುವುದು. ಆ ಜನರನ್ನು ಹೆಚ್ಚಿಸುವೆನು, ಅವರು ಕೊಂಚವಾಗಿರರು. ಅವರನ್ನು ಘನಪಡಿಸುವೆನು, ಅವರು ಹೀನರಾಗಿರರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಆ ಸ್ಥಳಗಳಲ್ಲಿ ಜನರು ಸ್ತೋತ್ರಗೀತೆಗಳನ್ನು ಹಾಡುವರು. ಅಲ್ಲಿ ನಗುವಿನ ಧ್ವನಿಯು ಕೇಳಿಬರುವುದು. ನಾನು ಅವರಿಗೆ ಹಲವಾರು ಮಕ್ಕಳನ್ನು ಕೊಡುವೆನು. ಇಸ್ರೇಲ್ ಮತ್ತು ಯೆಹೂದ ಚಿಕ್ಕವುಗಳಾಗಿರುವದಿಲ್ಲ. ನಾನು ಅವುಗಳಿಗೆ ಗೌರವವನ್ನು ತರುತ್ತೇನೆ. ಯಾರೂ ಅವುಗಳನ್ನು ಕೀಳಾಗಿ ಕಾಣುವದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಅವುಗಳೊಳಗಿಂದ ಕೃತಜ್ಞತಾಸ್ತುತಿಯೂ, ಹರ್ಷಧ್ವನಿಯೂ ಹೊರಡುವುದು. ಅವರನ್ನು ಹೆಚ್ಚು ಮಾಡುವೆನು. ಅವರು ಕೊಂಚವಾಗಿರರು, ಅವರನ್ನು ಘನಪಡಿಸುವೆನು. ಮತ್ತು ಅವರು ತಿರಸ್ಕಾರಕ್ಕೆ ಒಳಗಾಗುವುದಿಲ್ಲ. ಅಧ್ಯಾಯವನ್ನು ನೋಡಿ |