Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 30:2 - ಕನ್ನಡ ಸತ್ಯವೇದವು J.V. (BSI)

2 ಇಸ್ರಾಯೇಲ್ಯರ ದೇವರಾದ ಯೆಹೋವನು ಇಂತೆನ್ನುತ್ತಾನೆ - ನಾನು ನಿನಗೆ ಹೇಳಿರುವ ಮಾತುಗಳನ್ನೆಲ್ಲಾ ಗ್ರಂಥವಾಗಿ ಬರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ಇಸ್ರಾಯೇಲರ ದೇವರಾದ ಯೆಹೋವನು ಇಂತೆನ್ನುತ್ತಾನೆ, ನಾನು ನಿನಗೆ ಹೇಳಿರುವ ಮಾತುಗಳನ್ನೆಲ್ಲಾ ನೀನು ಗ್ರಂಥವಾಗಿ ಬರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ಇಸ್ರಯೇಲರ ದೇವರಾದ ಸರ್ವೇಶ್ವರ ಹೀಗೆನ್ನುತ್ತಾರೆ - ‘ನಾನು ನಿನಗೆ ಹೇಳಿರುವ ಮಾತುಗಳನ್ನೆಲ್ಲ ಗ್ರಂಥರೂಪವಾಗಿ ಬರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಇಸ್ರೇಲರ ದೇವರಾದ ಯೆಹೋವನು ಹೀಗೆ ಹೇಳಿದನು: “ಯೆರೆಮೀಯನೇ, ನಾನು ನಿನಗೆ ಹೇಳಿದ ಸಂಗತಿಗಳನ್ನು ಒಂದು ಪುಸ್ತಕದಲ್ಲಿ ಬರೆದಿಡು. ಈ ಪುಸ್ತಕವನ್ನು ನೀನೇ ಬರೆಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ನಾನು ನಿನಗೆ ಹೇಳಿದ ವಾಕ್ಯಗಳನ್ನೆಲ್ಲಾ ಒಂದು ಪುಸ್ತಕದಲ್ಲಿ ನೀನು ಬರೆದಿಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 30:2
19 ತಿಳಿವುಗಳ ಹೋಲಿಕೆ  

ಆಗ ಯೆರೆಮೀಯನು ಇನ್ನೊಂದು ಸುರಳಿಯನ್ನು ತೆಗೆದುಕೊಂಡು ನೇರೀಯನ ಮಗನಾಗಿರುವ ಲೇಖಕನಾದ ಬಾರೂಕನಿಗೆ ಕೊಡಲು ಅವನು ಅದರಲ್ಲಿ ಯೆಹೂದದ ಅರಸನಾದ ಯೆಹೋಯಾಕೀಮನು ಬೆಂಕಿಯಲ್ಲಿ ಸುಟ್ಟ ಗ್ರಂಥದ ಎಲ್ಲಾ ಮಾತುಗಳನ್ನಲ್ಲದೆ ಇನ್ನು ಇಂಥಾ ಅನೇಕ ಮಾತುಗಳನ್ನು ಯೆರೆಮೀಯನ ಬಾಯಿಂದ ಬಂದ ಹಾಗೆ ಬರೆದನು.


[ಯೆಹೋವನು ನನಗೆ ಹೀಗೆ ಹೇಳಿದನು] - ನೀನೀಗ ಮನೆಗೆ ಹೋಗಿ ಈ ಮಾತು ಮುಂದಿನ ಕಾಲದಲ್ಲಿ ಶಾಶ್ವತ ಸಾಕ್ಷಿಯಾಗಿರುವಂತೆ ಇವರೆದುರಿಗೆ ಹಲಿಗೆಯ ಮೇಲೆ ಕೆತ್ತು, ಪುಸ್ತಕದಲ್ಲಿ ಬರೆ.


ಆದದರಿಂದ ನೀನು ಕಂಡವುಗಳನ್ನೂ ಈಗ ನಡೆಯುತ್ತಿರುವವುಗಳನ್ನೂ ಮುಂದೆ ಆಗಬೇಕಾದವುಗಳನ್ನೂ ಬರೆ.


ಅದು - ನೀನು ನೋಡುವದನ್ನು ಪುಸ್ತಕದಲ್ಲಿ ಬರೆದು ಎಫೆಸ, ಸ್ಮುರ್ನ, ಪೆರ್ಗಮ, ಥುವತೈರ, ಸಾರ್ದಿಸ್, ಫಿಲದೆಲ್ಫಿಯ, ಲವೊದಿಕೀಯ ಎಂಬೀ ಏಳು ಪಟ್ಟಣಗಳ ಸಭೆಗಳಿಗೆ ಕಳುಹಿಸಬೇಕೆಂದು ನುಡಿಯಿತು.


ಯಾಕಂದರೆ ಯಾವ ಪ್ರವಾದನೆಯೂ ಎಂದೂ ಮನುಷ್ಯರ ಚಿತ್ತದಿಂದ ಉಂಟಾಗಲಿಲ್ಲ; ಮನುಷ್ಯರು ಪವಿತ್ರಾತ್ಮ ಪ್ರೇರಿತರಾಗಿ ದೇವರಿಂದ ಹೊಂದಿದ್ದನ್ನೇ ಮಾತಾಡಿದರು.


ಅವರಿಗೆ ಸಂಭವಿಸಿದ ಈ ಸಂಗತಿಗಳು ನಿದರ್ಶನರೂಪವಾಗಿವೆ; ಮತ್ತು ಯುಗಾಂತ್ಯಕ್ಕೆ ಬಂದಿರುವವರಾದ ನಮಗೆ ಬುದ್ಧಿವಾದಗಳಾಗಿ ಬರೆದವೆ.


ಪೂರ್ವದಲ್ಲಿ ಬರೆದದ್ದೆಲ್ಲಾ ನಮ್ಮನ್ನು ಉಪದೇಶಿಸುವದಕ್ಕಾಗಿ ಬರೆಯಲ್ಪಟ್ಟಿತು. ನಾವು ಓದಿ ಸ್ಥಿರಚಿತ್ತವನ್ನೂ ಆದರಣೆಯನ್ನೂ ಹೊಂದಿ ರಕ್ಷಣೆಯ ನಿರೀಕ್ಷೆಯುಳ್ಳವರಾಗಿರುವಂತೆ ಆ ಗ್ರಂಥಗಳು ಬರೆಯಲ್ಪಟ್ಟವು.


ದಾನಿಯೇಲನೇ, ನೀನು ಈ ಮಾತುಗಳನ್ನು ಮುಚ್ಚಿಡು, ಅವುಗಳನ್ನು ಬರೆಯುವ ಗ್ರಂಥಕ್ಕೆ ಮುದ್ರೆಹಾಕು, ಅಂತ್ಯಕಾಲದವರೆಗೆ ಮರೆಯಾಗಿರಲಿ; ಬಹು ಜನರು ಅತ್ತಿತ್ತ ತಿರುಗುವರು, ತಿಳುವಳಿಕೆಯು ಹೆಚ್ಚುವದು.


ಆಮೇಲೆ ಯೆಹೋವನು ನನಗೆ - ದೊಡ್ಡ ಹಲಿಗೆಯನ್ನು ತೆಗೆದುಕೊಂಡು ಸಾಧಾರಣ ಲಿಪಿಯಿಂದಲೇ ವಿಷಯಸೂಚಕವಾದ ಈ ಪದವನ್ನು ಬರೆ - ಮಹೇರ್ ಶಾಲಾಲ್ ಹಾಷ್ ಬಜ್ [ಅಂದರೆ ಸೂರೆಗೆ ಆತುರ, ಕೊಳ್ಳೆಗೆ ಅವಸರ];


ಆದಕಾರಣ ನೀನು ಈ ಪದ್ಯವನ್ನು ಬರೆದುಕೊಂಡು ಇಸ್ರಾಯೇಲ್ಯರಿಗೆ ಕಲಿಸಿಕೊಡಬೇಕು. ಈ ಪದ್ಯವು ಇಸ್ರಾಯೇಲ್ಯರಿಗೆ ವಿರೋಧವಾಗಿ ನನ್ನ ಪಕ್ಷದಲ್ಲಿ ಸಾಕ್ಷಿಯಾಗಿರುವಂತೆ ಇದನ್ನು ಅವರಿಗೆ ಬಾಯಿ ಪಾಠಮಾಡಿಸು.


ಆಗ ಯೆಹೋವನು ಮೋಶೆಗೆ - ಭೂವಿುಯ ಮೇಲೆ ಅಮಾಲೇಕ್ಯರ ಹೆಸರೇ ಇಲ್ಲದಂತೆ ಮಾಡುವೆನು; ಈ ಮಾತನ್ನು ಜ್ಞಾಪಕಾರ್ಥವಾಗಿ ಪುಸ್ತಕದಲ್ಲಿ ಬರೆ, ಮತ್ತು ಯೆಹೋಶುವನಿಗೆ ಮಂದಟ್ಟು ಮಾಡಿಕೊಡು ಎಂದು ಹೇಳಿದನು.


ನಾನು ಆ ದೇಶದ ವಿಷಯದಲ್ಲಿ ನುಡಿದದ್ದನ್ನೆಲ್ಲಾ (ಅಂದರೆ ಯೆರೆಮೀಯನು ಸಕಲ ಜನಾಂಗಗಳ ವಿಷಯವಾಗಿ ಮಾಡಿರುವ ಈ ಪ್ರವಾದನೆಗಳ ಗ್ರಂಥದಲ್ಲಿ ಬರೆದದ್ದನ್ನೆಲ್ಲಾ) ಅದರ ಮೇಲೆ ಬರಮಾಡುವೆನು.


ಯೆಹೋವನು ಯೆರೆಮೀಯನಿಗೆ ಈ ಮಾತನ್ನು ದಯಪಾಲಿಸಿದನು -


ನೀನು ಇನ್ನೊಂದು ಸುರಳಿಯನ್ನು ತೆಗೆದುಕೊಂಡು ಯೆಹೂದದ ಅರಸನಾದ ಯೆಹೋಯಾಕೀಮನು ಸುಟ್ಟ ಮೊದಲನೆಯ ಸುರಳಿಯಲ್ಲಿದ್ದ ಪೂರ್ವದ ಆ ಮಾತುಗಳನ್ನೆಲ್ಲಾ ಪುನಃ ಬರೆಯಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು