ಯೆರೆಮೀಯ 30:21 - ಕನ್ನಡ ಸತ್ಯವೇದವು J.V. (BSI)21 ಅವರಲ್ಲೇ ಒಬ್ಬನು ಅವರಿಗೆ ಪ್ರಭುವಾಗಿರುವನು, ಅವರ ವಂಶದವನೇ ಅವರನ್ನಾಳುವನು; ನಾನು ಅವನನ್ನು ನನ್ನ ಹತ್ತಿರಕ್ಕೆ ಬರಗೊಡಿಸಲಾಗಿ ಅವನು ನನ್ನ ಸನ್ನಿಧಾನಕ್ಕೆ ಸೇರುವನು; ನನ್ನನ್ನು ಸಮೀಪಿಸುವದಕ್ಕೆ ಯಾರು ಧೈರ್ಯಗೊಂಡಾರು? ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಅವರಲ್ಲೇ ಒಬ್ಬನು ಅವರಿಗೆ ಪ್ರಭುವಾಗಿರುವನು, ಅವರ ವಂಶದವನೇ ಅವರನ್ನಾಳುವನು. ನಾನು ಅವನನ್ನು ನನ್ನ ಹತ್ತಿರಕ್ಕೆ ಬರಗೊಡಿಸಲಾಗಿ ಅವನು ನನ್ನ ಸನ್ನಿಧಾನಕ್ಕೆ ಸೇರುವನು. ನನ್ನನ್ನು ಸಮೀಪಿಸುವುದಕ್ಕೆ ಯಾರು ಧೈರ್ಯಗೊಂಡಾರು? ಇದು ಯೆಹೋವನ ನುಡಿ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಅವರಲ್ಲೇ ಒಬ್ಬನು ಅವರಿಗೆ ಪ್ರಭುವಾಗುವನು ಅವರ ವಂಶದವನೇ ಅವರನ್ನು ಆಳುವನು. ಅವನನ್ನು ನಾನು ನನ್ನ ಹತ್ತಿರ ಬರಗೊಡಿಸುವೆನು ಅವನು ನನ್ನ ಸನ್ನಿಧಾನಕ್ಕೆ ಸೇರುವನು. ಇಲ್ಲದಿದ್ದಲ್ಲಿ, ನನ್ನನು ಸಮೀಪಿಸಲು ಧೈರ್ಯಗೊಳ್ಳುವವನಾರು? - ಇದು ಸರ್ವೇಶ್ವರನಾದ ನನ್ನ ನುಡಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಅವರಲ್ಲೇ ಒಬ್ಬನು ಅವರಿಗೆ ನಾಯಕನಾಗಿರುವನು. ಆ ನಾಯಕನು ನನ್ನ ಜನರಿಂದಲೇ ಬರುವನು. ನಾನು ಹೇಳಿದರೆ ಮಾತ್ರ ಜನರು ನನ್ನ ಹತ್ತಿರಕ್ಕೆ ಬರಲು ಸಾಧ್ಯ. ಆದ್ದರಿಂದ ನಾನು ಆ ನಾಯಕನನ್ನು ನನ್ನ ಹತ್ತಿರ ಬರಲು ಹೇಳುವೆನು. ಅವನು ನನಗೆ ತುಂಬಾ ಹತ್ತಿರದವನಾಗುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಅವರ ಪ್ರಮುಖನು ಅವರೊಳಗೆ ಇರುವರು. ಅವರನ್ನು ಆಳುವವನು ಅವರ ಮಧ್ಯದಲ್ಲಿಂದ ಹೊರಡುವನು. ನಾನು ಅವನನ್ನು ಹತ್ತಿರ ಬರಮಾಡುವೆನು. ಅವನು ನನಗೆ ಸಮೀಪಿಸುವನು. ಆದರೆ ನನಗೆ ಸಮೀಪಿಸುವುದಕ್ಕೆ ತನ್ನ ಹೃದಯ ನಿಶ್ಚಯಮಾಡಿಕೊಂಡ ಇವನ್ಯಾರು,’ ಎಂದು ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |
ಆಹಾ, ಒಬ್ಬನು ಸಿಂಹದೋಪಾದಿಯಲ್ಲಿ ಯೋರ್ದನಿನ ದಟ್ಟಡವಿಯಿಂದ [ಕಸ್ದೀಯರಿಗೆ] ನಿತ್ಯನೆಲೆಯಾದ ಗೋಮಾಳಕ್ಕೆ ಏರಿ ಬರುವನು; ಕ್ಷಣಮಾತ್ರದಲ್ಲಿ ನಾನು ಅವರನ್ನು ಅಲ್ಲಿಂದ ಓಡಿಸಿಬಿಡುವೆನು; ನಾನು ಆರಿಸಿಕೊಂಡವನನ್ನೇ ಅದನ್ನು ಕಾಯುವದಕ್ಕೆ ನೇವಿುಸುವೆನು; ನನ್ನ ಸಮಾನನು ಯಾವನು? ನನ್ನನ್ನು ನ್ಯಾಯವಿಚಾರಣೆಗೆ ಯಾವನು ಕರೆದಾನು? ಮಂದೆಯನ್ನು ಕಾಯುವ ಯಾವನು ನನ್ನೆದುರಿಗೆ ನಿಲ್ಲಬಲ್ಲನು?
ಆಹಾ, ಒಬ್ಬನು ಸಿಂಹದೋಪಾದಿಯಲ್ಲಿ ಯೊರ್ದನಿನ ದಟ್ಟಡವಿಯಿಂದ [ಎದೋಮ್ಯರಿಗೆ] ನಿತ್ಯನೆಲೆಯಾದ ಗೋಮಾಳಕ್ಕೆ ಏರಿಬರುವನು; ಕ್ಷಣಮಾತ್ರದಲ್ಲಿ ನಾನು ಅವರನ್ನು ಅಲ್ಲಿಂದ ಓಡಿಸಿಬಿಡುವೆನು; ನಾನು ಆರಿಸಿಕೊಂಡವನನ್ನೇ ಅದನ್ನು ಕಾಯುವದಕ್ಕೆ ನೇವಿುಸುವೆನು; ನನ್ನ ಸಮಾನನು ಯಾವನು? ನನ್ನನ್ನು ನ್ಯಾಯವಿಚಾರಣೆಗೆ ಯಾವನು ಕರೆದಾನು? ಮಂದೆಯನ್ನು ಕಾಯುವ ಯಾವನು ನನ್ನೆದುರಿಗೆ ನಿಲ್ಲಬಲ್ಲನು?