Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 30:23 - ಕನ್ನಡ ಸತ್ಯವೇದವು J.V. (BSI)

23 ಆಹಾ, ಯೆಹೋವನ ರೋಷವೆಂಬ ಬಿರುಗಾಳಿಯು, ಬಡಿದುಕೊಂಡು ಹೋಗುವ ಗಾಳಿಯು, ಹೊರಟಿದೆ; ಅದು ದುಷ್ಟರ ತಲೆಯ ಮೇಲೆ ಹೊಡೆಯುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆಹಾ, ಯೆಹೋವನ ರೋಷವೆಂಬ ಬಿರುಗಾಳಿಯು, ಬಡಿದುಕೊಂಡು ಹೋಗುವ ಗಾಳಿಯು ಹೊರಟಿದೆ; ಅದು ದುಷ್ಟರ ತಲೆಯ ಮೇಲೆ ಹೊಡೆಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಇಗೋ, ಹೊರಟಿದೆ ಬಡಿದುಕೊಂಡು ಹೋಗುವ ಗಾಳಿ ಸರ್ವೇಶ್ವರನ ರೋಷವೆಂಬ ಬಿರುಗಾಳಿ ದುರುಳರ ತಲೆಯ ಮೇಲೆ ಬಡಿದೋಡುವ ಸುಂಟರ ಗಾಳಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಯೆಹೋವನು ಬಹಳ ಕೋಪ ತಾಳಿದ್ದನು. ಅವನು ಜನರನ್ನು ಶಿಕ್ಷಿಸಿದನು. ಆ ಶಿಕ್ಷೆಯು ಒಂದು ಬಿರುಗಾಳಿಯಂತೆ ಬಂದಿತು. ಆ ಶಿಕ್ಷೆಯು ದುಷ್ಟಜನರ ಮೇಲೆ ತೂಫಾನಿನಂತೆ ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಇಗೋ, ಯೆಹೋವ ದೇವರ ಬಿರುಗಾಳಿ ರೌದ್ರವಾಗಿ ಹೊರಡುತ್ತದೆ. ಅದು ಬಡಿದುಕೊಂಡು ಹೋಗುವ ಬಿರುಗಾಳಿಯೇ. ಬಾಧೆಯು ದುಷ್ಟರ ತಲೆಯ ಮೇಲೆ ಬೀಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 30:23
7 ತಿಳಿವುಗಳ ಹೋಲಿಕೆ  

ಯೆಹೋವನು ಸ್ವಜನರಿಗಾಗಿ ಅವರ ಮೇಲ್ಗಡೆ ಕಾಣಿಸಿಕೊಳ್ಳುವನು; ಆತನ ಬಾಣವು ಸಿಡಿಲಿನಂತೆ ಹಾರುವದು; ಕರ್ತನಾದ ಯೆಹೋವನು ತುತೂರಿಯನ್ನೂದಿ ದಕ್ಷಿಣಪ್ರಾಂತದ ಬಿರುಗಾಳಿಗಳೊಡನೆ ನುಗ್ಗುವನು.


ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ - ಆಹಾ, ಕೇಡು ಜನಾಂಗದಿಂದ ಜನಾಂಗಕ್ಕೆ ಹರಡುವದು; ದೊಡ್ಡ ಬಿರುಗಾಳಿಯು ಲೋಕದ ಕಟ್ಟಕಡೆಯಿಂದ ಎದ್ದುಬರುವದು.


ನಿಮ್ಮ ಅಪಾಯದಲ್ಲಿ ನಾನೂ ನಗುವೆನು; ನಿಮ್ಮ ಆಪತ್ತಿನಲ್ಲಿ ಪರಿಹಾಸ್ಯಮಾಡುವೆನು.


ಇನ್ನೂ ಬೇಯದಿರುವಾಗಲೇ ಒಲೆಗಿಕ್ಕಿದ ಮುಳ್ಳಿನ ಕೊಂಪೆಯನ್ನು ಬಿರುಗಾಳಿಯು ಹಾರಿಸಿಬಿಡುವಂತೆ ದೇವರ ಉಗ್ರಕೋಪವು ಅವರನ್ನು ನಿಶ್ಶೇಷಮಾಡಲಿ.


ಹಾದುಹೋಗುವವರೇ, ನಿಮ್ಮಲ್ಲಿ ಯಾರಿಗೂ ನನ್ನ ಚಿಂತೆ ಇಲ್ಲವೋ? ಯೆಹೋವನು ಅತಿರೋಷಗೊಂಡು ನನ್ನನ್ನು ಬಾಧಿಸಿ ನನಗೆ ಉಂಟುಮಾಡಿದ ವ್ಯಥೆಯನ್ನು ನೀವು ನೋಡಿ ಇಂಥಾ ವ್ಯಥೆಯು ಇನ್ನೆಲ್ಲಾದರೂ ಉಂಟೋ ಯೋಚಿಸಿರಿ.


ಆ ಕಾಲದಲ್ಲಿ ಈ ಜನರಿಗೂ ಯೆರೂಸಲೇವಿುಗೂ ಈ ಮಾತಾಗುವದು - ಬಿಸಿಗಾಳಿಯು ಅರಣ್ಯದ ಬೋಳು ಗುಡ್ಡಗಳಿಂದ ನನ್ನ ಪ್ರಜೆಯೆಂಬ ಯುವತಿಯ ಮೇಲೆ ಬೀಸುತ್ತದೆ; ಅದು ತೂರುವದಕ್ಕೂ ಶೋಧಿಸುವದಕ್ಕೂ ಆಗದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು